ಯುವವಾಹಿನಿ (ರಿ) ಕೂಳೂರು ಘಟಕ

ಹಳ್ಳಿಡೊಂಜಿ ದಿನ

ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 08.09.19 ರಂದು ಹಳ್ಳಿಡೊಂಜಿ ದಿನ ಕಾರ್ಯಕ್ರಮವು ಘಟಕದ ಸದಸ್ಯರಾದ *ಪ್ರಸಾದ್ ಈದು ಬಟ್ಟೇಣಿ ಇವರ ಊರು ಈದು ಬಟ್ಟೇಣಿ, ಕಾರ್ಕಳ* ಇಲ್ಲಿ ನಡೆಯಿತು.

ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಘಟಕದ 50 ಸದಸ್ಯರು ಕೂಳೂರಿನಿಂದ ಹೊರಟು 10.30 ಕ್ಕೆ ಶಿರ್ತಾಡಿ ತಲುಪಿ ಘಟಕದ ಸದಸ್ಯರಾದ *ಜಯ ಬಂಗೇರ* ಅವರ ಮನೆಯಲ್ಲಿ ಉಪಹಾರ ಮುಗಿಸಿ ನಂತರ ಅಲ್ಲಿಂದ ಹೊಸ್ಮಾರು ಆಶ್ರಮಕ್ಕೆ ಭೇಟಿ ನೀಡಿ, *ಶ್ರೀ ಶ್ರೀ ಶ್ರೀ ವಿಖ್ಯಾತನಂದ ಸ್ವಾಮೀಜಿಯವರ ದರ್ಶನ ಪಡೆದು ಆಶ್ರಮಕ್ಕೆ 350kg ಅಕ್ಕಿ ಕೊಡಲಾಯಿತು*. ನಂತರ ಅಲ್ಲಿಂದ ಹೊರಟು 11.00 ಗೆ ಸರಿಯಾಗಿ ಈದು ಬಟ್ಟೇಣಿಗೆ ತಲುಪಿದೆವು.
ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಸಾದ್ ರವರ ತಂದೆ ರವಿ ಕೋಟ್ಯಾನ್, ಗದ್ದೆ ಮಾಲಕರಾದ ಶೇಖರ್ ಪೂಜಾರಿ ಹಾಗೂ ಹಿರಿಯ ಸ್ಥಳೀಯರಾದ ಶಾಂತಪ್ಪ ಪೂಜಾರಿ ಒಟ್ಟಾಗಿ ಭತ್ತದ ಕಲಶಕ್ಕೆ ತೆಂಗಿನ ಕೊಂಬು ಇಟ್ಟು ಹಾಗೂ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರಾದ ಭಾಸ್ಕರ ಕೋಟ್ಯಾನ್, ನಿಕಟ ಪೂರ್ವ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್, ಸಂಘಟನಾ ಕಾರ್ಯದರ್ಶಿ ನಿಶಿತ್, ಜೊತೆ ಕಾರ್ಯದರ್ಶಿ ರೋಹಿತ್, ಕೋಶಾಧಿಕಾರಿ ಇಂದಿರಾ, ಕಾರ್ಯಕ್ರಮದ ಸಂಚಾಲಕರಾದ ಪ್ರಸಾದ್ ಈದು ಬಟ್ಟೇಣಿ ಹಾಗೂ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು. ಉದ್ಘಾಟನೆಯ ನಂತರ ಅಧ್ಯಕ್ಷರು ಸದಸ್ಯರ 2 ತಂಡಗಳನ್ನು ರಚಿಸಿ ಕೋಟಿ ಚೆನ್ನಯ್ಯ ಎಂದು ನಾಮಕರಣ ಮಾಡಿದರು. ನಂತರ ಈ ತಂಡಗಳ ನಡುವೆ ವಾಲಿಬಾಲ್, ತ್ರೋ ಬಾಲ್, ಹಗ್ಗ ಜಗ್ಗಾಟ ಹೀಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅಲ್ಲದೆ ಅಲ್ಲಿನ ಸ್ಥಳೀಯ ಮಕ್ಕಳಿಗೂ ವಿವಿಧ ಬಗೆಯ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಮಧ್ಯಾಹ್ನ ಊಟ ಮುಗಿಸಿ ನಂತರ ಬಹುಮಾನ ವಿತರಿಸಲಾಯಿತು.
ಊಟೋಪಚಾರದ ವ್ಯವಸ್ಥೆಯನ್ನು ಸಂಚಾಲಕರಾದ ಪ್ರಸಾದ್ ಈದು ರವರ ಕುಟುಂಬಸ್ಥರು ಮಾಡಿದ್ದರು. ಅಧ್ಯಕ್ಷರು ವಂದಿಸಿದರು. ಪ್ರತೀಶ್ ಗೌರೀಶ್ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆ

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ಮಹಿಳಾ ದಿನಾಚರಣೆಯನ್ನು ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಬಹಳ ಅರ್ಥಪೂರ್ಣಾವಾಗಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ...

Sunday, 06-04-2025

ಯುವವಾಹಿನಿ (ರಿ) ಮಂಗಳೂರು ಘಟಕದ ಪದಗ್ರಹಣ ಸಮಾರಂಭ

ಸಮಾಜ ಸೇವೆ ಹಾಗೂ ವೈಯಕ್ತಿಕ ಬದುಕಿನಲ್ಲಿ ಸಮನ್ವಯ ಇದ್ದರೆ ಮಾತ್ರ ಯಶಸ್ಸು ಸಾಧ್ಯ ದಿನಾಂಕ 25-2-2025 : ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ) ಮಂಗಳೂರು ಘಟಕದ 2025-26 ನೇ ಸಾಲಿನ ನೂತನ ಸದಸ್ಯರ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷರಾದ ಶ್ರೀ...

Sunday, 06-04-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!