ಬೆಳ್ತಂಗಡಿ:ಶ್ರೀ ರಾಮ ಕ್ಷೇತ್ರ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ದಿನಾಂಕ 10/04/2024 ರಂದು ನಡೆದ ಜಾತ್ರಾ ಮಹೋತ್ಸವ ಹಾಗೂ ಶ್ರೀ ರಾಮ ತಾರಕ ಭಜನೋತ್ಸವ ಕಾರ್ಯಕ್ರಮದಲ್ಲಿ ಸಂಜೆ 4.00 ರಿಂದ 7.00 ಗಂಟೆವರೆಗೆ ನಡೆದ ಭಜನೆಯಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಸದಸ್ಯರು ಭಾಗಿಯಾಗಿದ್ದರು.
ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಮಾಜಿ ಅಧ್ಯಕ್ಷರು, ಸಲಹೆಗಾರರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಾಗವಹಿಸಿದ ಎಲ್ಲ ಸದಸ್ಯರಿಗೆ ಅರ್ಚಕರು ಪ್ರಸಾದ ನೀಡಿ ಗೌರವಿಸಿದರು.