16-07-2026, 8:30 PM
ಬಂಟ್ವಾಳ, ಜುಲೈ 16: “ಶ್ರೀ ನಾರಾಯಣಗುರುಗಳ ಸಂದೇಶಗಳು ಇಂದಿನ ಸಮಾಜ ಮತ್ತು ಜೀವನ ಮೌಲ್ಯಗಳಿಗೆ ಅತ್ಯಂತ ಪ್ರಸ್ತುತವಾಗಿವೆ. ಸಮಾನತೆ, ಮಾನವೀಯತೆ, ಶಿಕ್ಷಣ ಹಾಗೂ ಸೌಹಾರ್ದತೆಯ ಕುರಿತು ಗುರುದೇವರು ನೀಡಿದ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ,” ಎಂದು ಶಿಕ್ಷಕಿ ತ್ರಿವೇಣಿ ರಮೇಶ್ ಹೇಳಿದರು. ಅವರು ದಿನಾಂಕ 16-07-2026 ರಂದು ನರಹರಿನಗರ, ಕಲ್ಲಡ್ಕದ ಶೇಖರ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಗುರುತತ್ವವಾಹಿನಿ ಮಾಲಿಕೆ–71ರ ಭಜನಾ […]
Read More
16-07-2026, 1:00 PM
ಬಂಟ್ವಾಳ, ಜುಲೈ 16: ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಯುವವಾಹಿನಿ (ರಿ.) ಬಂಟ್ವಾಳ ಘಟಕವು ತನ್ನ ನೂತನ ಕಾರ್ಯಕಾರಿ ಸಮಿತಿಯ ವಿಶೇಷ ಯೋಜನೆಯಾಗಿ “ಮನೆ ಮನೆ ಹಸಿರು ಅಭಿಯಾನ”ಕ್ಕೆ ಚಾಲನೆ ನೀಡಿದೆ. ಘಟಕದ ಜಂಟಿ ಸಭೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿದ್ದು, ಯುವವಾಹಿನಿಯ “ಹಸಿರುಯಾನ” ಯೋಜನೆಯಡಿ ಘಟಕದ ವ್ಯಾಪ್ತಿಯ ಪ್ರತಿಯೊಂದು ಸದಸ್ಯರ ಮನೆಯಲ್ಲಿ ಕನಿಷ್ಠ ಒಂದು ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸುವ ಸಂಕಲ್ಪ ಕೈಗೊಳ್ಳಲಾಯಿತು. ಅಭಿಯಾನಕ್ಕೆ ಯುವವಾಹಿನಿ (ರಿ.) ಬಂಟ್ವಾಳ […]
Read More
09-07-2026, 8:00 PM
ಕಲ್ಲಡ್ಕ, ಜುಲೈ 9: “ಪ್ರಕೃತಿಯ ನಾಶ ಜಗತ್ತಿನ ಸರ್ವನಾಶ” ಎಂಬುದು ಬ್ರಹ್ಮಶ್ರೀ ನಾರಾಯಣ ಗುರುಗಳ ಪರಿಸರ ಸಂರಕ್ಷಣೆಯ ಸಂದೇಶದ ಸಾರವಾಗಿದ್ದು, ಪ್ರಕೃತಿಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹೇಳಿದರು. ಅವರು ಜುಲೈ 9ರಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ‘ಗುರುತತ್ವವಾಹಿನಿ’ 70ನೇ ಮಾಲಿಕೆ ಕಾರ್ಯಕ್ರಮದಲ್ಲಿ, ವೀರಕಂಭ ಗ್ರಾಮದ ಗೋಳಿಮಾರು ಜನಾರ್ದನ ಪೂಜಾರಿಯವರ ನೂತನ ಗೃಹ “ಬ್ರಹ್ಮಶ್ರೀ” ನಿವಾಸದಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು. […]
Read More
21-06-2026, 1:00 PM
ಬಂಟ್ವಾಳ : ಯುವವಾಹಿನಿ ಸಂಸ್ಥೆಯ ಶಿಸ್ತು, ಸಂಘಟನಾ ಸಾಮರ್ಥ್ಯ ಹಾಗೂ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿಜಕ್ಕೂ ಅನುಕರಣೀಯವಾಗಿವೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ಹೇಳಿದರು. ಅವರು ಜೂನ್ 21 ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ 2026-27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕಳೆದ 38 ವರ್ಷಗಳಿಂದ ಯುವವಾಹಿನಿ ಯುವಜನರನ್ನು ಒಗ್ಗೂಡಿಸಿ ಶಿಕ್ಷಣ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ […]
Read More
07-06-2026, 11:00 AM
ಬಂಟ್ವಾಳ : ಯುವವಾಹಿನಿ(ರಿ) ಬಂಟ್ವಾಳ ಘಟಕದ 2026-27ನೇ ಸಾಲಿನ ಅಧ್ಯಕ್ಷರಾಗಿ ಕಿರಣ್‌ರಾಜ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ಜೂನ್ 7ರಂದು ಬಿ.ಸಿ.ರೋಡ್‌ನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಘಟಕದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅವರು ನೂತನ ಕಾರ್ಯಕಾರಿ ಸಮಿತಿಯ ಸದಸ್ಯರ ಪಟ್ಟಿಯನ್ನು ಪ್ರಕಟಿಸಿದರು. 2026-27ನೇ ಸಾಲಿನ ಕಾರ್ಯಕಾರಿ ಸಮಿತಿಗೆ ಪ್ರಥಮ ಉಪಾಧ್ಯಕ್ಷರಾಗಿ ನಿಕೇಶ್ ಕೋಟ್ಯಾನ್, ದ್ವಿತೀಯ ಉಪಾಧ್ಯಕ್ಷರಾಗಿ ಹರೀಶ್ ಸಾಲ್ಯಾನ್ ಅಜೆಕಲ, ಕಾರ್ಯದರ್ಶಿಯಾಗಿ ಗೀತಾ ಜಗದೀಶ್, ಜತೆ ಕಾರ್ಯದರ್ಶಿಯಾಗಿ ಧನುಷ್ ಮಧ್ವ […]
Read More
28-05-2026, 8:00 PM
ಕಲ್ಲಡ್ಕ: “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಸಂದೇಶದ ಮೂಲಕ ಸಂಸ್ಕಾರಯುತ ಶಿಕ್ಷಣ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳು ಇಂದಿಗೂ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು. ಅವರು ಕಲ್ಲಡ್ಕ ಪೂರ್ಲಿಪಾಡಿಯ ಚಂದ್ರಶೇಖರ್ ಸಾಲಿಯಾನ್ ಅವರ ನಿವಾಸದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ–69’ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು.ಬ್ರಹ್ಮಶ್ರೀ ನಾರಾಯಣ ಗುರುಗಳು ಆಧ್ಯಾತ್ಮಿಕ […]
Read More
17-05-2026, 7:00 PM
ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಮೇ 17, 2026ರಂದು ಮಂಗಳೂರಿನ ತಣ್ಣೀರುಬಾವಿ ಟ್ರೀ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವವಾಹಿನಿ ಕುಟುಂಬದ ‘ಸ್ನೇಹ ಮಿಲನ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಅವರು ಆಗಮಿಸಿದ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಬಂಟ್ವಾಳ ಘಟಕದ ಯುವವಾಹಿನಿ ಕುಟುಂಬದ ಒಟ್ಟು 94 ಸದಸ್ಯರು ಈ ಪ್ರಕೃತಿಯ ಮಡಿಲಲ್ಲಿ ನಡೆದ ಸ್ನೇಹಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಸಂಭ್ರಮದ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳುಬೆಳಗಿನ […]
Read More
15-05-2026, 10:00 AM
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಸನ್ಮಾನ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಯುವವಾಹಿನಿ ಸಂಸ್ಥೆಯ ನಿಯೋಗ ಇತ್ತೀಚೆಗೆ ಭೇಟಿಯಾಗಿ, ಸಂಸ್ಥೆಯ ವತಿಯಿಂದ ಗೌರವಪೂರ್ವಕ ಕೃತಜ್ಞತಾ ಪತ್ರವನ್ನು ಹಸ್ತಾಂತರಿಸಿದರು. ಯುವವಾಹಿನಿ ಸಂಸ್ಥೆಯು ಅತ್ಯಂತ ಯಶಸ್ವಿಯಾಗಿ ಆಯೋಜಿಸಿದ್ದ ‘ಡೆನ್ನಾನ ಡೆನ್ನನ’ ಸಾಂಸ್ಕೃತಿಕ ಹಬ್ಬದಲ್ಲಿ ಸಂಸದರು ಸಕ್ರಿಯವಾಗಿ ಭಾಗವಹಿಸಿ, ಕಾರ್ಯಕ್ರಮದ ಯಶಸ್ಸಿಗೆ ಆರ್ಥಿಕ ಸಹಕಾರವನ್ನು ನೀಡಿದ್ದರು. ಅವರ ಈ ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಈ ಭೇಟಿಯನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ಸಂದರ್ಭದಲ್ಲಿ ಸಂಸ್ಥೆಯ ಹೆಮ್ಮೆಯ ನಡೆ […]
Read More
19-04-2026, 9:00 PM
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ ಟ್ರೋಫಿಯೊಂದಿಗೆ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು.
Read More