
01-11-2026, 3:00 PM
ಉಡುಪಿ ನ 01 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ ನವೆಂಬರ್ 1ರಂದು ಉಡುಪಿಯ ಯಕ್ಷಕಲಾರಂಗದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಅಂತರ್ಘಟಕ ಕಿರುಚಿತ್ರ ಸ್ಪರ್ಧೆ ‘ಯುವಸಿನಿದನಿ–2026’ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಪರ್ಧೆಯಲ್ಲಿ ಯುವವಾಹಿನಿ ಕೂಳೂರು ಘಟಕದ ‘ಬದ್ಕ್ ಮಾಯೆ’ ಕಿರುಚಿತ್ರವು ಪ್ರಥಮ ಸ್ಥಾನ ಪಡೆದು ಶ್ರೇಷ್ಠ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬಜಪೆ ಘಟಕದ ‘ಬದಲಾವಣೆ’ ದ್ವಿತೀಯ ಹಾಗೂ ಬೆಳ್ತಂಗಡಿ ಘಟಕದ ‘ಮೈಮೆ’ ಕಿರುಚಿತ್ರ ತೃತೀಯ ಸ್ಥಾನ ಗಳಿಸಿತು. […]
Read More

29-10-2026, 9:00 PM
ನಗ್ರಿ, ಅ. 29: ಶ್ರೀ ನಾರಾಯಣಗುರುಗಳು ಶಿಕ್ಷಣವನ್ನು ಸಾಮಾಜಿಕ ಪರಿವರ್ತನೆ, ಸ್ವಾಭಿಮಾನ ಮತ್ತು ಸಮಾನತೆಯ ಪ್ರಮುಖ ಸಾಧನವಾಗಿ ಪ್ರತಿಪಾದಿಸಿದರು. ಜಾತಿ-ಧರ್ಮದ ಭೇದಭಾವಗಳನ್ನು ಮೀರಿ ಮನುಷ್ಯರೆಲ್ಲರೂ ಸಮಾನರು ಎಂಬ ಮಾನವೀಯ ಸಂದೇಶವನ್ನು ಸಾರಿದ ಅವರು, ಜ್ಞಾನದ ಮೂಲಕ ಅಜ್ಞಾನ ಮತ್ತು ಸಾಮಾಜಿಕ ಅಸಮಾನತೆಗಳನ್ನು ನಿವಾರಿಸಲು ಕರೆ ನೀಡಿದರು ಎಂದು ನಿರೂಪಕ ರಾಜೇಶ್ ಬಲ್ಯ ತಿಳಿಸಿದರು. ಶಿಕ್ಷಣ ಮತ್ತು ಮಾನವೀಯ ಮೌಲ್ಯಗಳು ಒಂದಕ್ಕೊಂದು ಪೂರಕವಾದಾಗ ಮಾತ್ರ ಸಮಾನತೆ, ಸಹಬಾಳ್ವೆ ಹಾಗೂ ಸಾಮಾಜಿಕ ನ್ಯಾಯ ನೆಲೆಸಲು ಸಾಧ್ಯ. ನಾರಾಯಣಗುರುಗಳ ಚಿಂತನೆಗಳು ಇಂದಿನ […]
Read More

23-10-2026, 9:00 PM
ವಾಮದಪದವು ಅ 23 : ನಾರಾಯಣಗುರುಗಳು ಸರ್ವೇಶ್ವರನ ಅವತಾರ ಪುರುಷರಾಗಿ ಮಾನವಕುಲದ ಉದ್ಧಾರಕ್ಕಾಗಿ ಜನಿಸಿದ ಮಹಾನ್ ದಾರ್ಶನಿಕರು. ಮನುಷ್ಯನಲ್ಲಿರುವ ದೈವತ್ವವನ್ನು ಗುರುತಿಸಿ, ಜಾತಿ-ಮತಗಳ ಭೇದವಿಲ್ಲದೆ ಎಲ್ಲರೂ ಸಮಾನರು ಎಂಬ ಸತ್ಯವನ್ನು ಜಗತ್ತಿಗೆ ಸಾರಿದ ಮಹಾನ್ ಸಂತ ನಾರಾಯಣಗುರುಗಳು ಎಂದು ವಾಮದಪದವು ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಿವರಾಜ್ ಗಟ್ಟಿ ಹೇಳಿದರು. ನಾರಾಯಣಗುರುಗಳ ಆಧ್ಯಾತ್ಮಿಕ ಚಿಂತನೆ ಮತ್ತು ಸಮಾಜ ಸುಧಾರಣೆಯ ಕಾರ್ಯಗಳನ್ನು ವಿವರಿಸಿದ ಅವರು, ದೇವರನ್ನು ದೇವಾಲಯಗಳಲ್ಲಿ ಮಾತ್ರ ಹುಡುಕದೆ, ಪ್ರತಿಯೊಬ್ಬ ಮನುಷ್ಯನಲ್ಲಿಯೂ ದೈವತ್ವವನ್ನು ಕಾಣುವ ವಿಶಾಲ ದೃಷ್ಟಿಕೋನವನ್ನು […]
Read More

20-10-2026, 8:00 PM
ಮಂಗಳೂರು, ಅ. 20: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕ್ರಮದ ಸಂಚಾಲಕರ ಸಂಪೂರ್ಣ ಸಹಕಾರದೊಂದಿಗೆ ಸದಸ್ಯರು ಕ್ಷೇತ್ರದಲ್ಲಿ ಸ್ವಯಂಸೇವೆ ಸಲ್ಲಿಸಿ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹75,001 (ಎಪ್ಪತ್ತೈದು ಸಾವಿರದ ಒಂದು ರೂಪಾಯಿ) ಮೊತ್ತದ ದೇಣಿಗೆಯನ್ನು […]
Read More

12-10-2026, 1:00 PM
ಬಂಟ್ವಾಳ, ಅ. 12: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ದಸರಾ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 12ರಂದು ಬಿ.ಸಿ. ರೋಡ್ನ ಅನ್ನಪೂರ್ಣ ದೇವಸ್ಥಾನದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು. ಈ ಸೇವಾ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿ ಸೇವಾ ಮನೋಭಾವ ಮೆರೆದರು.
Read More

11-10-2026, 9:00 PM
ನೇರಳಕಟ್ಟೆ: ಸಮಾಜದ ಪ್ರಗತಿಗೆ ಶಿಕ್ಷಣವೇ ಪ್ರಮುಖ ಸಾಧನವೆಂದು ಅರಿತಿದ್ದ ಬ್ರಹ್ಮಶ್ರೀ ನಾರಾಯಣಗುರುಗಳು, ವಿದ್ಯೆಗೆ ವಿಶೇಷ ಆದ್ಯತೆ ನೀಡುವ ಮೂಲಕ ಸಾಮಾಜಿಕ ಪರಿವರ್ತನೆಗೆ ಅಡಿಪಾಯ ಹಾಕಿದರು ಎಂದು ಶಿಕ್ಷಕ ಸಂತೋಷ್ ಎಸ್. ಸನಿಲ್ ಹೇಳಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ‘ಗುರುತತ್ವವಾಹಿನಿ’ ಮಾಲಿಕೆ 82ರಲ್ಲಿ ಅವರು ಗುರುಸಂದೇಶ ನೀಡಿದರು. ಸಮಾಜದಲ್ಲಿ ನೆಲೆಸಿದ್ದ ಅಜ್ಞಾನ, ಅಸಮಾನತೆ ಹಾಗೂ ಮೂಢನಂಬಿಕೆಗಳನ್ನು ದೂರಗೊಳಿಸಿ, ಜನರು ಸ್ವಾಭಿಮಾನದಿಂದ ಬದುಕಬೇಕಾದರೆ ಶಿಕ್ಷಣ ಅತ್ಯಗತ್ಯ ಎಂಬುದನ್ನು ನಾರಾಯಣಗುರುಗಳು ತಮ್ಮ ಕಾರ್ಯಗಳ ಮೂಲಕ ತೋರಿಸಿಕೊಟ್ಟರು. ಶಿಕ್ಷಣವು […]
Read More

11-10-2026, 2:00 PM
ಬಂಟ್ವಾಳ ಅ 11 : ವ್ಯಕ್ತಿತ್ವ ವಿಕಸನ ಶಿಬಿರಗಳು ಯುವಜನರಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಶಿಸ್ತು ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಶಿಬಿರಗಳ ಮೂಲಕ ಯುವಜನರು ತಮ್ಮಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿಕೊಂಡು ಸಮಾಜಕ್ಕೆ ಮಾದರಿಯಾಗುವ ನಾಯಕರಾಗಿ ರೂಪುಗೊಳ್ಳಲು ಸಾಧ್ಯ ಎಂದು ಯುವವಾಹಿನಿ ರಜತ ವರ್ಷದ ಅಧ್ಯಕ್ಷರು ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಹೇಳಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ […]
Read More

08-10-2026, 8:10 PM
ಬಂಟ್ವಾಳ, ಅ. 08: ಪ್ರಸ್ತುತ ಸಮಾಜದಲ್ಲಿ ಎದುರಾಗುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಹಾಗೂ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಹೇಳಿದರು. ಸಮಾಜದ ಅಭಿವೃದ್ಧಿಗೆ ಶಿಕ್ಷಣ ಮತ್ತು ಸಂಘಟನೆ ಪ್ರಮುಖ ಆಧಾರಸ್ತಂಭಗಳಾಗಿವೆ. ಶಿಕ್ಷಣದಿಂದ ಜ್ಞಾನ, ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಸಂಘಟನೆಯ ಮೂಲಕ ಸಮಾಜದ ಜನರನ್ನು ಒಗ್ಗೂಡಿಸಿ, ಪರಸ್ಪರ ಸಹಕಾರದೊಂದಿಗೆ ಪ್ರಗತಿಯತ್ತ […]
Read More

01-10-2026, 8:30 PM
ತೆಂಕ ಕಜೆಕಾರು ಅ 01 : ಸಮಾಜದ ಪ್ರಗತಿಗೆ ಜ್ಞಾನ ಮತ್ತು ವಿವೇಕ ಅತ್ಯಂತ ಅಗತ್ಯ. ಅಂಧಶ್ರದ್ಧೆ ಹಾಗೂ ಮೂಢನಂಬಿಕೆಗಳಿಂದ ದೂರವಾಗಿ ವಿಚಾರಶೀಲತೆಯನ್ನು ಬೆಳೆಸಿಕೊಂಡಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಲೋಹಿತ್ ಕನಪಾದೆ (ಆಪ್ತ ಸಮಾಲೋಚಕರು ಮನೋರೋಗ ವಿಭಾಗ ಆಳ್ವಾಸ್ ಮೂಡಬಿದ್ರೆ )ತಿಳಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿದ್ದ ಅಜ್ಞಾನ, ಅಸಮಾನತೆ ಹಾಗೂ ಅನಿಷ್ಟ ಆಚರಣೆಗಳ ವಿರುದ್ಧ ಜಾಗೃತಿ ಮೂಡಿಸಿ, ಶಿಕ್ಷಣ ಮತ್ತು ಜ್ಞಾನಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಅವರ ಚಿಂತನೆ ಮನುಷ್ಯನನ್ನು ವಿಚಾರಶೀಲನನ್ನಾಗಿ […]
Read More