Yuvavahini

ಬಂಟ್ವಾಳ

ನಾರಾಯಣಗುರುಗಳ ಅದ್ವೈತ ತತ್ವ ಮಾನವ ಸಮಾನತೆಯ ಸಂದೇಶ : ಹರೀಶ್ ಎಸ್ ಕೋಟ್ಯಾನ್

ಬಂಟ್ವಾಳ ಸೆ 25 : “ನಾರಾಯಣಗುರುಗಳು ಪ್ರತಿಪಾದಿಸಿದ ಅದ್ವೈತ ತತ್ವ ಕೇವಲ ವಿಚಾರದ ಮಟ್ಟದಲ್ಲಿ ಉಳಿಯದೆ, ‘ಮಾನವರು ಸಮಾನರು’ ಎಂಬ ಮಾನವೀಯ ಸಂದೇಶದ ರೂಪದಲ್ಲಿ ಸಮಾಜದಲ್ಲಿ ಅನುಷ್ಠಾನಗೊಂಡಿತು. ಮಾನವ ವಿಚಾರದಲ್ಲಿ ಅತ್ಯುನ್ನತ ಮೌಲ್ಯಗಳನ್ನು ಪ್ರತಿಪಾದಿಸುವುದೇ ಧರ್ಮಗಳ ಮೂಲ ಆಶಯವಾಗಿದೆ. ಹಿಂದುಳಿದ ಸಮಾಜದಲ್ಲಿ ಆತ್ಮವಿಶ್ವಾಸ ಹಾಗೂ ಹೋರಾಟದ ಕಿಚ್ಚನ್ನು ಮೂಡಿಸಿ, ಸಾಮಾಜಿಕ ಪರಿವರ್ತನೆಗೆ ದಾರಿ ತೋರಿದ ಮಹಾನ್ ಚಿಂತಕರೇ ನಾರಾಯಣಗುರುಗಳು” ಎಂದು ಉಪನ್ಯಾಸಕ ಹರೀಶ್ ಎಸ್. ಕೋಟ್ಯಾನ್ ತಿಳಿಸಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಸದಸ್ಯರಾದ ಪ್ರಕಾಶ್ […]

Read More

“ಸಮಾನತೆಯ ಸಮಾಜದ ಕನಸು ಕಂಡವರು ನಾರಾಯಣಗುರುಗಳು” : ಅರ್ಚನಾ ಎಂ. ಬಂಗೇರ

ಕಟ್ಟೆಮಾರ್, ಸೆ. 18: ಅಸಮಾನತೆ, ಅಜ್ಞಾನ, ಮೂಢನಂಬಿಕೆ ಹಾಗೂ ಸಾಮಾಜಿಕ ಅನ್ಯಾಯಗಳಿಂದ ಮನುಷ್ಯನಿಗೆ ಮುಕ್ತಿ ದೊರೆಯುವುದೇ ನಿಜವಾದ ಸ್ವಾತಂತ್ರ್ಯ ಎಂಬ ವಿಶಾಲ ಚಿಂತನೆಗೆ ಶ್ರೀ ನಾರಾಯಣಗುರುಗಳು ತಮ್ಮ ಜೀವನದ ಮೂಲಕ ದಾರಿ ತೋರಿಸಿದರು ಎಂದು ಬರಹಗಾರ್ತಿ ಅರ್ಚನಾ ಎಂ. ಬಂಗೇರ ಹೇಳಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ, ಮನೋಜ್ ಕಟ್ಟೆಮಾರ್ ಅವರ ಸಾನಿಧ್ಯದಲ್ಲಿ ನಡೆದ ‘ಗುರುತತ್ವವಾಹಿನಿ’ ಮಾಲಿಕೆ–78ರಲ್ಲಿ ಗುರುಸಂದೇಶ ನೀಡಿದ ಅವರು, ನಾರಾಯಣಗುರುಗಳ ಚಿಂತನೆಗಳು ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ಪರಿವರ್ತನೆಗೆ ದಾರಿದೀಪವಾಗಿವೆ ಎಂದರು. ಶಿಕ್ಷಣದಿಂದ […]

Read More

ಮನೆಮನೆಗೆ ನಾರಾಯಣಗುರು ಸಂದೇಶ ತಲುಪಿಸುತ್ತಿರುವ ಯುವವಾಹಿನಿ ಕಾರ್ಯ ಶ್ಲಾಘನೀಯ : ಗಿರೀಶ್ ಪೆರ್ವ

ದಡ್ಡಲಕಾಡು ಸೆ 09 : ನಾರಾಯಣಗುರುಗಳ ಸಂದೇಶಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಸಮಾಜದಲ್ಲಿ ಗುರುತತ್ವದ ಅರಿವು ಮೂಡಿಸುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾಗಿದೆ. ದಾಸ ಪರಂಪರೆಯ ಭಜನಾ ಸಂಕೀರ್ತನೆಯ ಮೂಲಕ ಗುರುತತ್ವವಾಹಿನಿ ಕಾರ್ಯಕ್ರಮವು ಅದ್ಭುತ ಯಶಸ್ಸು ಕಂಡಿದೆ ಎಂದು ಸಜಿಪಮೂಡ ಈಶ್ವರಮಂಗಲ ಸದಾಶಿವ ದೇವಸ್ಥಾನದ ಅಧ್ಯಕ್ಷ ಗಿರೀಶ್ ಪೆರ್ವ ಹೇಳಿದರು.ಅವರು ಸೆಪ್ಟೆಂಬರ್ 9ರಂದು ದಡ್ಡಲಕಾಡು ದೇವೀನಗರದ ಚೈತ್ರಾ ವಿಠ್ಠಲ ಪೂಜಾರಿ ಅವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ–77ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ […]

Read More

ನಾರಾಯಣಗುರುಗಳು ಮನುಕುಲದ ದಿವ್ಯಜ್ಯೋತಿಯಾದರು : ರೇಣುಕಾ ಕಣಿಯೂರು

ಸಜಿಪ, ಸೆಪ್ಟೆಂಬರ್ 1 : ಬ್ರಹ್ಮಶ್ರೀ ನಾರಾಯಣಗುರುಗಳು ಅಜ್ಞಾನ, ಅಸಮಾನತೆ ಹಾಗೂ ಸಾಮಾಜಿಕ ಅನಿಷ್ಟಗಳ ವಿರುದ್ಧ ಹೋರಾಡಿ, ಜ್ಞಾನ, ಸಮಾನತೆ ಮತ್ತು ಮಾನವೀಯತೆಯ ಬೆಳಕನ್ನು ಸಮಾಜಕ್ಕೆ ನೀಡಿದ ಮನುಕುಲದ ದಿವ್ಯಜ್ಯೋತಿಯಾಗಿದ್ದಾರೆ ಎಂದು ಬರಹಗಾರ್ತಿ ಹಾಗೂ ನಿರೂಪಕಿ ರೇಣುಕಾ ಕಣಿಯೂರು ಹೇಳಿದರು. ಸಜಿಪ ದೇರಾಜೆಯ ಗಾಯತ್ರಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ‘ಗುರುತತ್ವವಾಹಿನಿ’ 76ನೇ ಮಾಲಿಕೆಯಲ್ಲಿ ಗುರುಸಂದೇಶ ನೀಡಿದ ಅವರು, ನಾರಾಯಣಗುರುಗಳು ಶಿಕ್ಷಣವೇ ಸಾಮಾಜಿಕ ಪ್ರಗತಿಯ ಪ್ರಮುಖ ಸಾಧನವೆಂದು ಸಾರಿದ್ದರು. ಜ್ಞಾನ, […]

Read More

“ಜ್ಞಾನದ ಬೆಳಕು ಜಗತ್ತಿನ ಬೆಳಕು” — ನಾರಾಯಣ ಗುರುಗಳ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಕುಸುಮಾಕರ ಕುಂಪಲ

ಸಜಿಪ, ಆಗಸ್ಟ್ 27 : “ಜ್ಞಾನದ ಬೆಳಕು ಜಗತ್ತಿನ ಬೆಳಕು” ಎಂದು ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಶಿಕ್ಷಣದ ಮೂಲಕ ಅಜ್ಞಾನ, ಅಂಧಕಾರ ಹಾಗೂ ಅಸಮಾನತೆಯನ್ನು ದೂರಮಾಡುವ ಮಾರ್ಗವನ್ನು ಸಮಾಜಕ್ಕೆ ತೋರಿಸಿಕೊಟ್ಟರು. ಜ್ಞಾನದಿಂದ ವ್ಯಕ್ತಿಯ ಉನ್ನತಿಯೊಂದಿಗೆ ಸಮಾಜದ ಪ್ರಗತಿಯೂ ಸಾಧ್ಯವಾಗುತ್ತದೆ. ಆದ್ದರಿಂದ ನಾರಾಯಣ ಗುರುಗಳ ಜ್ಞಾನ ಮತ್ತು ಸಮಾನತೆಯ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಮಾಜಿ ಅಧ್ಯಕ್ಷ ಕುಸುಮಾಕರ ಕುಂಪಲ ತಿಳಿಸಿದರು. ಅವರು ಸಜಿಪ ಬ್ರಹ್ಮಶ್ರೀ ನಾರಾಯಣಗುರು ಜ್ಞಾನ ಮಂದಿರದಲ್ಲಿ […]

Read More

ನಾರಾಯಣಗುರುಗಳ ಸಮಾನತೆ ಹಾಗೂ ಮಾನವ ಧರ್ಮದ ಸಂದೇಶ ಜಗತ್ತಿನ ಅಸ್ಪೃಶ್ಯತೆ ನಿವಾರಣೆಗೆ ದಾರಿದೀಪ: ಗಣೇಶ್ ಪೂಂಜರೆಕೋಡಿ

ಬಂಟ್ವಾಳ ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣಗುರುಗಳು ಸಾರಿದ ಸಮಾನತೆ ಹಾಗೂ ಮಾನವ ಧರ್ಮದ ಪರಿಪಾಲನೆಯ ಮೂಲಕ ಸಮಾಜದಲ್ಲಿದ್ದ ಅಸ್ಪೃಶ್ಯತೆ ಮತ್ತು ಜಾತಿಭೇದಗಳನ್ನು ಹೋಗಲಾಡಿಸುವ ಮಹತ್ವದ ಕಾರ್ಯವನ್ನು ಮಾಡಿದರು ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಗಣೇಶ್ ಪೂಂಜರೆಕೋಡಿ ಹೇಳಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಆಯೋಜಿಸಲಾದ ‘ಗುರುಸ್ಮರಣೆ’ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡಿ ಅವರು ಮಾತನಾಡಿದರು. ನಾರಾಯಣಗುರುಗಳ ತತ್ವ, ಆದರ್ಶ ಹಾಗೂ ಮಾನವೀಯ ಸಂದೇಶಗಳು ಇಂದಿಗೂ […]

Read More

ಸಂಘಟನೆಯಿಲ್ಲದೆ ಸಮುದಾಯದ ಪ್ರಗತಿ ಅಸಾಧ್ಯ: ಬೇಬಿ ಕುಂದರ್

ಬಿ.ಸಿ.ರೋಡು : ನಾರಾಯಣ ಗುರುಗಳು ಯಾವುದೇ ಸಮುದಾಯಕ್ಕೆ ಸೀಮಿತವಾಗಿರಲಿಲ್ಲ. ಜಾತಿ-ಭೇದಗಳನ್ನು ಮೀರಿ ಎಲ್ಲರನ್ನೂ ಒಗ್ಗೂಡಿಸುವುದು ಅವರ ಆಶಯವಾಗಿತ್ತು. ಸಂಘಟನೆಯಿಲ್ಲದೆ ಯಾವುದೇ ಸಮುದಾಯದ ಪ್ರಗತಿ ಸಾಧ್ಯವಿಲ್ಲ ಎಂಬುದು ನಾರಾಯಣ ಗುರುಗಳ ಸಂದೇಶವಾಗಿತ್ತು ಎಂದು ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬೇಬಿ ಕುಂದರ್ ಹೇಳಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ನಡೆದ ಗುರುತತ್ವವಾಹಿನಿ ಮಾಲಿಕೆ 74 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಘಟನೆ ಹಾಗೂ ಸಾಮೂಹಿಕ ಪ್ರಯತ್ನಗಳ ಮೂಲಕ ಸಮಾಜದ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಪ್ರಗತಿಗೆ ಮತ್ತಷ್ಟು ವೇಗ […]

Read More

ಆಟಿಯ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ “ಆಟಿಡೊಂಜಿ ಕೂಟ”ದ ಸಮಾರೋಪ

ಬಂಟ್ವಾಳ ಅಗಸ್ಟ್ 16: ಯುವವಾಹಿನಿ (ರಿ.) ಬಂಟ್ವಾಳ ಘಟಕದ ಪ್ರತಿಷ್ಠಿತ“ಆಟಿ ಡೊಂಜಿ ಕೂಟ” ದ ಸಮಾರೋಪ ಸಮಾರಂಭವು ಜನಪದ ನೃತ್ಯ ವೈಭವ, ಚೆನ್ನಮಣೆ ಸ್ಪರ್ಧೆ ಹಾಗೂ ಪ್ರತಿಭಾ ಪುರಸ್ಕಾರಗಳೊಂದಿಗೆ ಸಂಭ್ರಮದಿಂದ ನಡೆಯಿತು. ಸಮಾರೋಪದ ಅಂಗವಾಗಿ ನಡೆದ ಜನಪದ ನೃತ್ಯ ವೈಭವ ಪ್ರೇಕ್ಷಕರ ಗಮನ ಸೆಳೆಯಿತು. ಬಂಟ್ವಾಳ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ತಂಡಗಳು ವೈವಿಧ್ಯಮಯ ಜನಪದ ನೃತ್ಯ ಪ್ರದರ್ಶನಗಳ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಸ್ಪರ್ಧೆಯಲ್ಲಿ ಬೈದಶ್ರೀ ಬಿಲ್ಲವ ಸಂಘ, ಬಡೆಕೊಟ್ಟು–ಮಣಿನಾಲ್ಕೂರು ತಂಡ ಪ್ರಥಮ ಸ್ಥಾನ, ಬ್ರಹ್ಮಶ್ರೀ […]

Read More

ಯುವವಾಹಿನಿ ಯುವಕರ ಕಣ್ಮಣಿ : ಪ್ರಕಾಶ್ ಕುಂಪಲ

ಬಂಟ್ವಾಳ, ಆಗಸ್ಟ್ 16: “ಯುವವಾಹಿನಿ ಕೇವಲ ಒಂದು ಸಂಘಟನೆಯಲ್ಲ; ಅದು ಯುವಶಕ್ತಿಯನ್ನು ಸಮಾಜಸೇವೆಯ ಶಕ್ತಿಯಾಗಿ ಪರಿವರ್ತಿಸುತ್ತಿರುವ ಒಂದು ಚಳವಳಿ. ಯುವಕರನ್ನು ಒಗ್ಗೂಡಿಸಿ ಶಿಕ್ಷಣ, ಆರೋಗ್ಯ, ಸಮಾಜಸೇವೆ, ಸಂಸ್ಕೃತಿ ಹಾಗೂ ಮಾನವೀಯ ಮೌಲ್ಯಗಳ ಮೂಲಕ ಸಮಾಜದ ಅಭಿವೃದ್ಧಿಗೆ ನಿರಂತರವಾಗಿ ಕೊಡುಗೆ ನೀಡುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯವಾಗಿದೆ. ಯುವವಾಹಿನಿ ಯುವ ಜನಾಂಗದ ಕಣ್ಮಣಿಯಾಗಿ, ಸಮಾಜದ ಆಶಾಕಿರಣವಾಗಿ ಬೆಳೆದು ನಿಂತಿದೆ” ಎಂದು ಉದ್ಯಮಿ ಪ್ರಕಾಶ್ ಕುಂಪಲ ಹೇಳಿದರು. ಅವರು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಬಿ.ಸಿ.ರೋಡ್‌ನ ನಾರಾಯಣಗುರು ಸಭಾಭವನದಲ್ಲಿ ನಡೆದ […]

Read More

ಕೃಷಿಕರು ಹಾಗೂ ಸೈನಿಕರ ಸೇವೆ ದೇಶದ ಶಕ್ತಿ – ಜಯಪ್ರಕಾಶ್ ಜೆ. ಎಸ್.

ಬಂಟ್ವಾಳ, ಆಗಸ್ಟ್ 15: ಸ್ವಾತಂತ್ರ್ಯವೆಂದರೆ ಕೇವಲ ಪರಕೀಯ ಆಡಳಿತದಿಂದ ಮುಕ್ತಿ ಹೊಂದುವುದಲ್ಲ. ನಮ್ಮ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದು, ದೇಶದ ಕಾನೂನು ಮತ್ತು ಸಂವಿಧಾನವನ್ನು ಗೌರವಿಸುವುದು, ಪರಿಸರವನ್ನು ಕಾಪಾಡುವುದು, ಸಾಮಾಜಿಕ ಸಾಮರಸ್ಯವನ್ನು ಬೆಳೆಸುವುದು ಹಾಗೂ ಮುಂದಿನ ಪೀಳಿಗೆಗೆ ಉತ್ತಮ ಭಾರತವನ್ನು ನಿರ್ಮಿಸುವುದೇ ನಿಜವಾದ ದೇಶಭಕ್ತಿ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷರಾದ ಜಯಪ್ರಕಾಶ್ ಜೆ. ಎಸ್. ಹೇಳಿದರು. ಅವರು ಆಗಸ್ಟ್ 15ರಂದು ಯುವವಾಹಿನಿ (ರಿ.) ಬಂಟ್ವಾಳ ಘಟಕ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!