23-06-2024, 3:03 PM
ಬಂಟ್ವಾಳ: ಯುವವಾಹಿನಿ ಯುವಕರ ಸಾಧನೆಗಳ ಹಿಂದಿನ ಶಕ್ತಿಯಾಗಿದೆ, ಎಂದು ಸಿದ್ದಕಟ್ಟೆ ಸರಕಾರಿ ಪ್ರೌಢಶಾಲಾ ಶಿಕ್ಷಕ ಮಹೇಶ್ ಕರ್ಕೇರ ಹೇಳಿದರು. ಅವರು ಭಾನುವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಗಾಣದಪಡ್ಪು ಬಿ.ಸಿ ರೋಡ್ ಇಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಬಂಟ್ವಾಳ ತಾಲೂಕು ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ನಮ್ಮಲ್ಲಿ ಗುರು ಪರಂಪರೆಯ ಮೂಲಕ ಸಂಸ್ಕಾರ, ಸಂಸ್ಕೃತಿಯು ಅನುಷ್ಠಾನಗೊಳ್ಳುವ ಅಗತ್ಯವಿದೆ, ಶಿಕ್ಷಣದ ಮಹತ್ವದ ಕಡೆ ಸಂಘಟನೆಗಳ ಗಮನ […]
Read More
03-05-2024, 4:33 PM
ಬಂಟ್ವಾಳ: ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ಹಾಗೂ ಕನಪ್ಪಾಡಿ ಕೋಟ್ಯಾನ್ ಕುಟುಂಬಸ್ಥರು ದಿನಾಂಕ 03-05-2024 ಶುಕ್ರವಾರ ಬೆಳ್ತಂಗಡಿ ತಾಲೂಕಿನ ಗುಂಡೂರಿಯಲ್ಲಿರುವ ಗುರುಚೈತನ್ಯ ಸೇವಾಶ್ರಮಕ್ಕೆ ಬೇಟಿ, ಆಶ್ರಮವಾಸಿಗಳ ಯೋಗಕ್ಷೇಮ ವಿಚಾರಿಸಿದರು. ಆನಾರೋಗ್ಯ ಪೀಡಿತರು ಅನಾಥರನ್ನು ತಮ್ಮ ಮನೆ ಮಕ್ಕಳಂತೆ ಆರೈಕೆ ಮಾಡಿ, ಸರ್ವಸ್ವವನ್ನೂ ಆಶ್ರಮವಾಸಿಗಳಿಗೆ ತ್ಯಾಗ ಮಾಡಿದ ಆಶ್ರಮದ ಮುಖ್ಯಸ್ಥರಾದ ಹೊನ್ನಯ್ಯ ಕುಲಾಲ್ ಇವರನ್ನು ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಅಭಿನಂದಿಸಲಾಯಿತು. ತಾವು ದುಡಿದ ಒಂದು ಪಾಲನ್ನು ಸಮಾಜಕ್ಜೆ ಅರ್ಪಿಸುವ ಉದ್ದೇಶದಿಂದ ಇಂದು ನಡೆದ ಆಶ್ರಮ […]
Read More
18-02-2024, 9:31 AM
ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಿಂದ ಲೋಕ ಕಲ್ಯಾಣನಾರ್ಥ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ನಡೆಸಲಾಯಿತು. ದಿನಾಂಕ 18.02.2024ರ ಬೆಳಗ್ಗೆ 5.00 ಗಂಟೆಗೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ವೃತ್ತದಿಂದ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ, ಕಾರ್ಯದರ್ಶಿ ನಿಕೇಶ್ ಕೋಟ್ಯಾನ್, ಕಾರ್ಯಕ್ರಮ ಸಂಚಾಲಕರಾದ ಕಿರಣ್‌ರಾಜ್ ಪೂಂಜರೆಕೋಡಿ, ಮಾಜಿ ಅಧ್ಯಕ್ಷರು, ಸೇರಿ ಒಟ್ಟು 48 ಸದಸ್ಯರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
Read More
16-02-2024, 3:47 PM
ಬಂಟ್ವಾಳ : ಬಿ.ಸಿ.ರೋಡ್ ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಇಂದು ನಡೆದ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಹೊರೆಕಾಣಿಕೆ ನೀಡಿ, ಘಟಕದ ಸದಸ್ಯರು ಭವ್ಯ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ದೇವಳದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಕಾರಂತ್ ಇವರು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ ಇವರನ್ನು ದೇವಳದ ವತಿಯಿಂದ ಗೌರವಿಸಲಾಯಿತು.
Read More
12-02-2024, 12:59 PM
ಬಂಟ್ವಾಳ: ಬ್ರಹ್ಮಕಲಶೋತ್ಸವದ ಸುಸಂದರ್ಭದಲ್ಲಿ ಬಿ.ಸಿ.ರೋಡ್ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ದಿನಾಂಕ 11.02.2024 ರಂದು ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ, ಕಾರ್ಯದರ್ಶಿ ನಿಕೇಶ್ ಕೋಟ್ಯಾನ್, ಮಾಜಿ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.
Read More
08-02-2024, 12:36 PM
ತುಂಬೆ : ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ತುಂಬೆ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶಾಭಿಷೇಕದ ಶುಭ ಸಂಧರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರು ದಿನಾಂಕ 08.02.2024 ರಂದು ದೇವಸ್ಥಾನದ ಆವರಣದಲ್ಲಿ ಶ್ರಮದಾನ ಮಾಡಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಟ್ರಸ್ಟೀ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಇವರು ಘಟಕದ ಅಧ್ಯಕ್ಷರನ್ನು ಗೌರವಿಸಿದರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ಹರೀಶ್ ಕೋಟ್ಯಾನ್ ಕುದನೆ, ಕಾರ್ಯದರ್ಶಿ ನಿಕೇಶ್ ಕೋಟ್ಯಾನ್ ಕಲ್ಲಡ್ಕ, ಸಲಹೆಗಾರರಾದ ಟಿ. ಶಂಕರ ಸುವರ್ಣ, ಮಾಜಿ ಅಧ್ಯಕ್ಷರು, ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿ […]
Read More
24-12-2023, 5:25 PM
ಬಂಟ್ವಾಳ : ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ಸಂಘಟನಾ ಕ್ಷೇತ್ರದ ಸಾಧಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಧಾರ್ಮಿಕ ಕ್ಷೇತ್ರದ ಸಾಧಕ ಮನೋಜ್ ಕಟ್ಟೆಮಾರ್, ಸಾಂಸ್ಕೃತಿಕ ಕ್ಷೇತ್ರದ ಸಾಧಕಿ ಅಕ್ಷತಾ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘಟನಾ ಕ್ಷೇತ್ರದ ಸಾಧಕರು ಶ್ರೀನಿವಾಸ ಪೂಜಾರಿ ಮೆಲ್ಕಾರ್ ಗುರುಜ್ಯೋತಿ ಶಾಮಿಯಾನ ಸಂಸ್ಥೆಯನ್ನು ಹುಟ್ಟಿ ಹಾಕಿ ಸತತ 25 ವರ್ಷಗಳಿಂದ ಮುನ್ನಡೆಸಿಕೊಂಡು ಬರುವುದರ ಜೊತೆಗೆ ಬಂಟ್ವಾಳ ಯುವಸಂಗಮದ ಸ್ಥಾಪಕ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿವಿಧ ಹುದ್ದೆ ಅಲಂಕರಿಸಿ ಸರ್ಕಾರಿ ಶಾಲಾಮಕ್ಕಳಿಗೆ […]
Read More
24-12-2023, 5:22 PM
ಬಂಟ್ವಾಳ: ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ನಾರ್ದನ್ ಸ್ಕೈ ಪ್ರಾಪಟೀಸ್ ನಿರ್ದೇಶಕಿ ಕೃತಿನ್ ಅಮೀನ್ ಇವರು ಯುವಸಿಂಚನ ವಾರ್ಷಿಕ ವಿಶೇಷಾಂಕದ ಅನಾವರಣ ಮಾಡಿದರು. ಸಮಾವೇಶದ ಜನಸ್ತೋಮದ ನಡುವಣ ಬಂಟ್ವಾಳ ಅತಿಥ್ಯ ಘಟಕದ ಸಹಯೋಗದ ಸದಸ್ಯರ ಭವ್ಯ ಸ್ವಾಗತದೊಂದಿಗೆ ವಾದ್ಯ ಕೊಂಬುಗಳ ಅಬ್ಬರದ ನಿನಾದಗಳು, ಜ್ಯೋತಿ ರೂಪಕವಾಗಿ ಬೆಳಗುತ್ತಿದ್ದ ಜೋಡಿ ದೀಪಗಳು, ಪೂರ್ಣ ಕಳಸ ಹಾಗೇ ವಿವಿಧ ಹೂಗಳಿಂದ ತುಂಬಿದ್ದ ಬೃಹತ್ ಹರಿವಾಣದೊಳಗೆ ಸಜ್ಜಾಗಿದ್ದ ವರ್ಣಮಯ ಯುವಸಿಂಚನ ಹೊತ್ತಗೆಯನ್ನು ಸಮವಸ್ತ್ರಧಾರಿ ನಾರಿಮಣಿಗಳ […]
Read More
24-12-2023, 12:04 PM
ಬಂಟ್ವಾಳ : ದಿನಾಂಕ 24 ಡಿಸೆಂಬರ್ 2023 ರಂದು ಬೆಂಜನಪದವು ಶುಭಲಕ್ಷ್ಮೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಸುಸಂದರ್ಭದಲ್ಲಿ ಸಜಿಪ ಮುನ್ನೂರು ಮೂರ್ತೆದಾರ ಸೇವಾ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ 2023 ಮಡಿಲೇರಿಸುವ ಶುಭ ಘಳಿಗೆ ಓದಗಿಬಂತು. ಹಿಂದುಳಿದ ವರ್ಗಗಳ ಹಾಗೂ ಮೂರ್ತೆದಾರರ ಆರ್ಥಿಕ ಬೆಳವಣಿಗೆ, ಮಹಿಳಾ ಸಬಲೀಕರಣ ಹಾಗೂ ಸಮಾಜದ ಅಶಕ್ತ ಕುಟುಂಬಗಳನ್ನು ಗುರುತಿಸಿ, ಅನಾರೋಗ್ಯ ಪೀಡಿತರಿಗೆ ಆರ್ಥಿಕ ನೆರವು, ವಿದ್ಯಾ ನಿಧಿ ದತ್ತುಸ್ವೀಕಾರ, ಹೀಗೆ ಹತ್ತು ಹಲವು ಮಜಲುಗಳ […]
Read More
24-12-2023, 11:27 AM
ಬಂಟ್ವಾಳ : ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದ ಅನನ್ಯ ಸೇವೆ ಹಾಗೂ ಕಂಕನಾಡಿ ಗರಡಿ ಕ್ಷೇತ್ರ ಅಧ್ಯಕ್ಷರಾಗಿ ನಿಸ್ವಾರ್ಥವಾಗಿ ಸಲ್ಲಿಸಿದ ಸೇವೆಯು ಗರಡಿಯ ಮೂಲ ಬೆಳವಣಿಗೆಗೆ ಕಾರಿಣಿಕರ್ತರೆಂದು ಗುರುತಿಸಿ ಬಂಟ್ವಾಳದ ಬೆಂಜನಪದವು ಶುಭಲಕ್ಷೀ ಅಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ 2023 ನೇ ಸಾಲಿನ ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಾರಂಭದ ಉದ್ಘಾಟಕರಾದ ಪದ್ಮರಾಜ್.ಆರ್, ಕೇಂದ್ರ ಸಮಿತಿ ಅಧ್ಯಕ್ಷರು ರಾಜೇಶ್.ಬಿ, ನಾರ್ದನ್ ಸ್ಲೈ ನಿರ್ದೇಶಕರಾದ ಕೃತೀನ್ ಅಮೀನ್, ರಾಣಿ ಅಬ್ಬಕ್ಕ […]
Read More