ಬಂಟ್ವಾಳ

ಗೌರವ ಅಭಿನಂದನೆ

ಬಂಟ್ವಾಳ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷರು, ಸಮಾಜ ಸೇವಕರಾದ ಪಚ್ಚಿನಡ್ಕ ಸೇಸಪ್ಪ ಕೊಟ್ಯಾನ್ ಇವರನ್ನು ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರರುಗಳು, ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಶ್ರೀ ಕ್ಷೇತ್ರ ಪೊಳಲಿಗೆ ಪಾದಯಾತ್ರೆ

ಬಂಟ್ವಾಳ :- ಯುವವಾಹಿನಿ ಬಂಟ್ವಾಳ ತಾಲೂಕು ಘಟಕ ಹಾಗೂ ಬಂಟ್ವಾಳ ತಾಲ್ಲೂಕು ಬಿಲ್ಲವ ಸಂಘದ ನೇತ್ರತ್ವದಲ್ಲಿ ದಿನಾಂಕ 30 ಅಕ್ಟೋಬರ್ 2022 ರಂದು ಲೋಕಕಲ್ಯಾಣಾರ್ಥವಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಬಿ.ಸಿ ರೋಡ್ ನಿಂದ ಪೋಳಲಿ ಶ್ರೀ ರಾಜರಾಜೇಶ್ವರಿ ಕ್ಷೇತ್ರಕ್ಕೆ ಪಾದಯಾತ್ರೆ ‌ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಹಾಗೂ ಘಟಕದ ಮಾಜಿ ಅಧ್ಯಕ್ಷರು, ಘಟಕದ ಅಧ್ಯಕ್ಷರು ,ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 200 ಮಂದಿ ಭಕ್ತಾದಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Read More

ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ : ರಮೇಶ್ ತುಂಬೆ

ನಾರಾಯಣಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜ ಅರ್ಥದಲ್ಲಿ ಅನುಷ್ಟಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ. ಓರ್ವ ಸಾಧಕನ‌ ನೆಲೆ ಮತ್ತು ಬೆಲೆಗಳೆರಡೂ ಮಹತ್ವ ಪಡೆದುಕೊಳ್ಳುವುದು ಆತನಿದ್ದ ಕಾಲಕ್ಕಿಂತಲೂ ಆತನಿಲ್ಲದ ಕಾಲದಲ್ಲಿ ಅದು ಕಾರ್ಯೋನ್ಮುಖ ಗೊಳ್ಳುವುದರಲ್ಲಿ. ತಾನಿಲ್ಲದ ಕಾಲದಲ್ಲಿ ತನ್ನಿರುವನ್ನು ಉಳಿಸಬೇಕಾದರೆ ಅವನ ಜೀವನ ಕ್ರಮ ಮತ್ತು ಸಾಧನೆಗಳು ಕಾಲಾತೀತವಾಗಿರಬೇಕು. ಈ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳು ವರ್ತಮಾನಕ್ಕೂ ಭವಿಷ್ಯದ ಎಲ್ಲಾ ತಲೆಮಾರುಗಳಿಗೂ ಪ್ರಸ್ತುತವೆನಿಸುವ ಸಾರ್ವಕಾಲಿಕ ದಾರ್ಶನಿಕರು. ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ […]

Read More

ವೈಜ್ಞಾನಿಕ ಕಾರಣಗಳ ಮೂಲಕ ಸಂಸ್ಕೃತಿ ಸಂಸ್ಕಾರದ ಬಗ್ಗೆ ಯುವಜನತೆಗೆ ತಿಳಿಸಿದಾಗ ಯಶಸ್ಸು ಸಾಧ್ಯ : ಡಾ.ಅರುಣ್ ಉಳ್ಳಾಲ್

ಬಂಟ್ವಾಳ : ವಿದೇಶಿ ಸಂಸ್ಕೃತಿ ಬಗ್ಗೆ ಆಕರ್ಷಣೆಗೆ ಒಳಗಾಗುವ ಯುವ ಜನತೆಗೆ ವೈಜ್ಞಾನಿಕ ಕಾರಣಗಳನ್ನು ನೀಡಿ ನಮ್ಮ ಸಂಸ್ಕೃತಿ ಸಂಸ್ಕಾರಗಳ ಬಗ್ಗೆ ಮನವರಿಕೆ ಮಾಡಿದಾಗ ಯುವ ಪೀಳಿಗೆ ನಮ್ಮ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಹಾದಿ ಸುಗಮವಾಗಲಿದೆ ಎಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ಸಂಶೋಧಕ, ಉಪನ್ಯಾಸಕ ಡಾ.ಅರುಣ್ ಉಳ್ಳಾಲ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 15.08.2022 ರಂದು ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನಲ್ಲಿ ಜರುಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ […]

Read More

ಸ್ವಾತಂತ್ರ್ಯ ಹೋರಾಟಗಾರರ ಜತೆಗೆ ಸ್ವಾತಂತ್ರ್ಯ ನಂತರ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸೋಣ : ಶ್ರೀನಿವಾಸ ಪೂಜಾರಿ ಮೆಲ್ಕಾರ್

ಬಂಟ್ಬಾಳ : ಸ್ವಾತಂತ್ರ್ಯ ಹೋರಾಟಗಾರರ ಜತೆಗೆ ಸ್ವಾತಂತ್ರ್ಯ ನಂತರ ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ಸ್ಮರಿಸೋಣ ಹಾಗೂ ಅಜಾದಿ ಕಾ ಅಮೃತ್ ಮಹೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಎಂಬ ಘೋಷ ವಾಕ್ಯದ ಮೂಲಕ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ದಾರ್ಶನಿಕ ಬ್ರಹ್ಮಶ್ರೀ ನಾರಾಯಣಗುರುಗಳ ಮಂದಿರದ ಆವರಣದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದ ಯುವವಾಹಿನಿ ಸಂಘಟನೆ ಕಾರ್ಯ ಶ್ಲಾಘನೀಯ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹಾಗೂ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯ […]

Read More

ಆರೋಗ್ಯ ಮಾನವನ ಶ್ರೇಷ್ಠ ಸಂಪತ್ತು : ಪಲ್ಲವಿ ಕಾರಂತ್

ಬಂಟ್ವಾಳ : ಆರೋಗ್ಯ ಮಾನವನ ಅತ್ಯಂತ ಶ್ರೇಷ್ಠ ಸಂಪತ್ತು, ಆಯುರ್ವೇದ ಔಷಧಿಗಳು ನಿಧಾನವಾದ ಪರಿಣಾಮ ಎಂಬುದು ಸತ್ಯಕ್ಕೆ ದೂರವಾದ ಮಾತು, ಋಷಿಮನಿಗಳ ಕಾಲದಿಂದಲೂ ನಾವು ಕೇಳಿ ತಿಳಿದುಕೊಂಡ ಹಾಗೂ ಯಾವುದೇ ಅಡ್ಡ ಪರಿಣಾಮಗಳು ಇಲ್ಲದ, ಆಯುರ್ವೇದ ಚಿಕಿತ್ಸೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ರೊಟರಿ ಕ್ಲಬ್ ಬಿ.ಸಿ.ರೋಡ್ ಸಿಟಿ ಇದರ ಅಧ್ಯಕ್ಷೆ ಪಲ್ಲವಿ ಕಾರಂತ್ ತಿಳಿಸಿದರು. ಅವರು ದಿನಾಂಕ 10 ಆಗಸ್ಟ್ 2022 ರಂದು ಬಂಟ್ವಾಳ ತಾಲೂಕಿನ ಪಚ್ಚಿನಡ್ಕದಲ್ಲಿ ಯುವವಾಹಿನಿ ಬಂಟ್ವಾಳ ಘಟಕ, ಓಂ ಫ್ರೇಂಡ್ಸ್ ಪಚ್ಚಿನಡ್ಕ ಹಾಗೂ ರೋಟರಿ […]

Read More

ಸೇಸಪ್ಪ ಕೋಟ್ಯಾನ್ ದಂಪತಿಗಳಿಗೆ ಅಭಿನಂದನೆ

ಬಂಟ್ವಾಳ : ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಕೆ.ಸೇಸಪ್ಪ ಕೋಟ್ಯಾನ್ ದಂಪತಿಗಳನ್ನು ಅಭಿನಂದಿಸಲಾಯಿತು. ಸಾರ್ಥಕ ಐವತ್ತು ವರುಷಗಳ ಶುಭಯಾನದ ಸವಿನೆನಪಿನ ಸಲುವಾಗಿ ಕೆ.ಸೇಸಪ್ಪ ಕೋಟ್ಯಾನ್, ಚಂದ್ರಾವತಿ ದಂಪತಿಗಳಿಗೆ ಯುವವಾಹಿನಿ ಬಂಟ್ವಾಳ ಘಟಕದ ಪರವಾಗಿ ಅಭಿಮಾನದ ಸಿಂಚನ ಸಮರ್ಪಿಸಲಾಯಿತು. ದಿನಾಂಕ‌ 10.07.2022 ರಂದು ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ಘಟಕದ ಪದಗ್ರಹಣ ಸಮಾರಂಭದಲ್ಲಿ ಅಭಿನಂದಿಸಲಾಯಿತು. ಸೂರ್ಯನಂತೆ ಜಗವ ಬೆಳಗದಿದ್ದರೂ ಹಣತೆಯಾಗಿ ಅಲ್ಪ ಕತ್ತಲೆ ಕಳೆದರೂ […]

Read More

ಯುವವಾಹಿನಿ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ : ಉದಯ ಅಮೀನ್ ಮಟ್ಟು

 ನಾಯಕತ್ವ ಬೆಳವಣಿಗೆ, ಪ್ರತಿಭೆಗೆ ವೇದಿಕೆ ನೀಡುವ ಯುವವಾಹಿನಿ ಯುವಕರ ವ್ಯಕ್ತಿತ್ವ ರೂಪಿಸುವ ಪ್ರೇರಕ ಶಕ್ತಿ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ತಿಳಿಸಿದರು.ಅವರು ದಿನಾಂಕ 10.07.2022 ರಂದು ಬಂಟ್ವಾಳ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ನಡೆದ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2022-23 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ.ಸೇಸಪ್ಪ ಕೋಟ್ಯಾನ್ ದೀಪ ಬೆಳಗುವುದರ ಮೂಲಕ […]

Read More

ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆ

ಬಂಟ್ವಾಳ : ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾಗಿ ಗಣೇಶ್ ಪೂಂಜರೆಕೋಡಿ ಆಯ್ಕೆಯಾಗಿದ್ದಾರೆ. ದಿನಾಂಕ 10.07.2022 ರಂದು ಬೆಂಜನಪದವು ಶುಭಲಕ್ಷೀ ಸಭಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ 21 ಸದಸ್ಯರ ತಂಡವು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ನಾಗೇಶ್ ಪೂಜಾರಿ ನೈಬೇಲು, ಉಪಾಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಕುದನೆ, ದಿನೇಶ್ ಸುವರ್ಣ ರಾಯಿ, ಕೋಶಾಧಿಕಾರಿಯಾಗಿ ಧನುಷ್ ಮದ್ವ, ಜತೆ ಕಾರ್ಯದರ್ಶಿಯಾಗಿ ಲೋಹಿತ್ ಕನಪಾದೆ, ನಾರಾಯಣಗುರು ತತ್ವ ಪ್ರಚಾರ ಅನುಷ್ಟಾನ ನಿರ್ದೇಶಕರಾಗಿ ನಾಗೇಶ್ ಪೂಜಾರಿ ಏಲಾಬೆ, ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ಮಧುಸೂದನ್ ಮದ್ವ, […]

Read More

ವಿಶುಕುಮಾರ್ ಮತ್ತು ತುಕಾರಾಮ್ ಪೂಜಾರಿ

ನಮಗೆಲ್ಲರಿಗೂ ತಿಳಿದಿರುವಂತೆ ವಿಶುಕುಮಾರ್ ಓರ್ವ ಧೀಮಂತ ವ್ಯಕ್ತಿ. ಆಡು ಮುಟ್ಟದ ಸೊಪ್ಪಿಲ್ಲ. ವಿಶುಕುಮಾರ್ ಕೈಯಾಡಿಸದ ಕ್ಷೇತ್ರವಿಲ್ಲ. ಕಲೆ, ಸಾಹಿತ್ಯ, ಸಂಸ್ಕೃತಿ ಈ ಎಲ್ಲಾ ಕ್ಷೇತ್ರಗಳಲ್ಲಿ ಕೈಯಾಡಿಸಿ ಛಾಪನ್ನು ಒತ್ತಿದವರು. ಕೋಟಿ ಚೆನ್ನಯ, ಕರಾವಳಿ ಯಂತಹ ಅದ್ಭುತ ಸಿನೆಮಾ ನಿರ್ಮಾಣ ಮಾಡಿದವರು. ಒಂದರ್ಥದಲ್ಲಿ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟವರು. ಅವರ ನಾಟಕ ಡೊಂಕು ಬಾಲದ ನಾಯಕರು ಭ್ರಷ್ಟರಿಗೆ ನುಂಗಲಾರದ ತುತ್ತಾಗಿ ಮೈಪರಚಿಕೊಂಡದ್ದು ಇಂದು ಇತಿಹಾಸ. ನನ್ನ ಅಭಿಪ್ರಾಯದಂತೆ ನಮ್ಮ ಸಮಾಜದಲ್ಲಿ ಕತೆ, ಕವನ, ಕಾದಂಬರಿಗಳು ಮಾತ್ರ ಸಾಹಿತ್ಯದ ಪ್ರಕಾರಗಳು ಎನ್ನುವ ತಪ್ಪು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 17-11-2024
ಸ್ಥಳ : ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!