Yuvavahini

ಪುತ್ತೂರು

ರಕ್ತದಾನ ಶಿಬಿರ

ರಕ್ತದಾನ ಶ್ರೇಷ್ಠ ದಾನಗಳಲ್ಲಿ ಒಂದಾಗಿದೆ . ನಾವು ದಾನ ಮಾಡುವ ರಕ್ತದಿಂದ ಜೀವ ಉಳಿಸಬಹುದಾಗಿದೆ ;ರಕ್ತದಾನದಿಂದ ಆರೋಗ್ಯವೂ ಉಲ್ಲಾಸಮಯವಾಗಿರುತ್ತದೆ . ಯುವವಾಹಿನಿ ಪುತ್ತೂರು ಘಟಕವು ಇಂತಹ ಶಿಬಿರಗಳನ್ನು ನಿರಂತರವಾಗಿ ನಡೆಸುತ್ತಾ ವರ್ಷ 365 ದಿನಗಳಲ್ಲಿ ಕೂಡ ರಕ್ತದ ಅವಶ್ಯಕತೆ ಇದ್ದವರಿಗೆ ಸೂಕ್ತವಾಗಿ ಸ್ಪಂದಿಸುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರು ಹಾಗೂ ರೋಟರಿ ಕ್ಲಬ್ ಪುತ್ತೂರು ಪೂರ್ವ ಇದರ ಅಧ್ಯಕ್ಷರಾದ ಜಯಂತ ನಡುಬೈಲ್ ತಿಳಿಸಿದರು ದಿನಾಂಕ 01.10.2017 ರಂದು ಯುವವಾಹಿನಿ (ರಿ ) ಪುತ್ತೂರು ಘಟಕದ ಆಶ್ರಯದಲ್ಲಿ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಪುತ್ತೂರು ಎಂಡೋ ಪಾಲನಾ ಕೇಂದ್ರಕ್ಕೆ ಕೊಡುಗೆ

ಯುವವಾಹಿನಿ (ರಿ) ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುವರ್ಯರ ಪುಣ್ಯ ತಿಥಿಯ ಪ್ರಯುಕ್ತ ದಿನಾಂಕ 27.09.2017 ರಂದು ಪುತ್ತೂರು ಕೊಯಿಲ ಎಂಡೋ ಪಾಲನಾ ಕೇಂದ್ರಕ್ಜೆ ಬೇಟಿ ನೀಡಿ ಎಂಡೋ ಸಂತ್ರಸ್ತರಿಗೆ ವಿಶೇಷ ರೀತಿಯ 10 ಜೊತೆ ಶೂ ಹಾಗೂ ಊಟೋಪಚಾರದ ಕೊಡುಗೆ ನೀಡಿದ್ದಾರೆ. ಯುವವಾಹಿನಿ ಪುತ್ತೂರು ಘಟಕದ ಕಾರ್ಯದರ್ಶಿ ಸತ್ಯಜಿತ್ ಅಮ್ಮುಂಜ, ಜತೆ ಕಾರ್ಯದರ್ಶಿ ರವೀಂದ್ರ ಸಂಪ್ಯ, ಉಪಾಧ್ಯಕ್ಷರಾದ ಹರೀಶ್ ಶಾಂತಿ, ಮಾಜಿ ಅಧ್ಯಕ್ಷರಾದ ಬಿ.ಟಿ.ಮಹೇಶ್ ಚಂದ್ರ ಸಾಲ್ಯಾನ್, ಪ್ರಭಾಕರ ಸಾಲ್ಯಾನ್, ನಿರ್ದೇಶಕರಾದ ಸುರೇಶ್ ಸಂಪ್ಯ, ಹರೀಶ್ […]

Read More

ದೇಯಿ ಬೈದೇತಿ ಮೂರ್ತಿಗೆ ಅಪಮಾನ ಪ್ರಕರಣ

ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಮುಡಿಪಿನಡ್ಕ ಎಂಬಲ್ಲಿರುವ ದೇಯಿ ಬೈದೇತಿ ಔಷದಿ ವನದಲ್ಲಿ ಹಿಂದೂ ಸಮಾಜದ ವಿಶೇಷವಾಗಿ ಬಿಲ್ಲವ ಸಮಾಜದ ಆರಾಧ್ಯ ತಾಯಿ ದೇಯಿ ಬೈದೇತಿ ಮೂರ್ತಿಗೆ ಅಪಮಾನ ಮಾಡಿದ ಹೇಯ ಕೃತ್ಯದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಯುವವಾಹಿನಿ ಪುತ್ತೂರು ಘಟಕ ಅಗ್ರಹಿಸಿದೆ. ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ ಪೋಲೀಸ್ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಯುವವಾಹಿನಿ ಪುತ್ತೂರು ಘಟಕವು ಅಭಿನಂದನೆ ಸಲ್ಲಿಸಿದೆ. ಕೃತ್ಯದಲ್ಲಿ ಭಾಗಿಯಾದ ಎಲ್ಲಾ ಆರೋಪಿಗಳನ್ನು ಕೂಡಲೇ ಬಂಧಿಸಿ […]

Read More

ನಗರಸಭಾ ಪೌರಕಾರ್ಮಿಕರಿಗೆ ಸಮವಸ್ತ್ರ ವಿತರಣೆ

ಯುವವಾಹಿನಿ (ರಿ) ಪುತ್ತೂರು ಘಟಕದ ಆಶ್ರಯದಲ್ಲಿ ದಿನಾಂಕ 06.09.2017 ರಂದು ಬ್ರಹ್ಮಶ್ರೀ ನಾರಾಯಣಗುರುಗಳ 163 ನೇ ಜನ್ಮದಿನಾಚರಣೆ ಪ್ರಯುಕ್ತ ಪುತ್ತೂರು ನಗರಸಭೆಯ 23 ಮಂದಿ ಪೌರಕಾರ್ಮಿಕರಿಗೆ ಒಟ್ಟು 23,000/- ರೂಪಾಯಿ ವೆಚ್ಚದಲ್ಲಿ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರು ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು, ಪುತ್ತೂರು ನಗರಸಭೆಯ ಅಧ್ಯಕ್ಷರಾದ ಜಯಂತಿ ಬಲ್ನಾಡ್, ಪೌರಾಯುಕ್ತರಾದ ರೂಪಾ ಶೆಟ್ಟಿ, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಶ್ವೇತಾಕಿರಣ್, ರಾಮಚಂದ್ರ, ಚಂದ್ರಕಾಂತ್ ಶಾಂತಿವನ, ಕೇಶವ ಪೂಜಾರಿ […]

Read More

ಮನೆ ನಿರ್ಮಾಣಕ್ಕೆ ಮುಹೂರ್ತ

ಯುವವಾಹಿನಿ (ರಿ) ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ಗ್ರಾಮದ ಬಡ ಕುಟುಂಬದ ಶ್ರೀಮತಿ ಸುಂದರಿ ಇವರಿಗೆ ಸುಮಾರು ನಾಲ್ಕುವರೆ ಲಕ್ಷ ರೂಪಾಯಿ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡುವ ಸಮಾಜಮುಖಿ ಯೋಜನೆಗೆ ದಿನಾಂಕ 03.09.2017 ರಂದು ಶುಭ ಮುಹೂರ್ತ ನಡೆಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಪುತ್ತೂರು ಘಟಕದ ಅಧ್ಯಕ್ಷರಾದ ಉದಯ ಕೊಲಾಡಿ, ಯುವವಾಹಿನಿ (ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಜಯಂತ ನಡುಬೈಲು, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲೀಲಾವತಿ, ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷರಾದ ಸೋಮಶೇಖರ್, […]

Read More

ಸವಲತ್ತುಗಳನ್ನು ಪಡೆಯುವಲ್ಲಿ ವಿದ್ಯಾರ್ಥಿಗಳು ಶಕ್ತರಾಗಬೇಕು-ಜಯಂತ್

ಕಲಿಯಲು ಮನಸ್ಸಿದ್ದರೂ ಬಡತನವು ಬಿಡುವುದಿಲ್ಲ. ಎಲ್ಲಾ ಸಮುದಾಯದಲ್ಲೂ ಆರ್ಥಿಕವಾಗಿ ಹಿಂದುಳಿದ ಕುಟುಂಬವನ್ನು ಕಾಣಬಹುದು. ಈ ಸಂದರ್ಭದಲ್ಲಿ ಖಾಸಗಿ ಸಂಘ-ಸಂಸ್ಥೆಗಳಿಂದ ಅಥವಾ ಸರಕಾರದಿಂದ ಕೊಡಲ್ಪಡುವ ಸವಲತ್ತುಗಳನ್ನು ಪಡೆಯಲು ವಿದ್ಯಾರ್ಥಿಗಳು ಹಿಂಜರಿಯದೆ ಮುಂದೆ ಬಂದು ವಿದ್ಯಾಭ್ಯಾಸವನ್ನು ಮುಂದುವರೆಸಿ ಸಮಾಜದ ಉತ್ತಮ ಸ್ಥಾನದಲ್ಲಿ ನಿಲ್ಲುವಂತಾಗಬೇಕು ಎಂದು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ್ ನಡುಬೈಲುರವರು ಹೇಳಿದರು. ದಿನಾಂಕ:13.08.2017 ರಂದು ಯುವವಾಹಿನಿ(ರಿ) ಪುತ್ತೂರು ಘಟಕದ ಆಶ್ರಯದಲ್ಲಿಬೆಳಿಗ್ಗೆ ಬಪ್ಪಳಿಗೆ-ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಶೈಕ್ಷಣಿಕ ಸವಲತ್ತುಗಳ […]

Read More

ಯುವ ಪ್ರತಿಭೆಯನ್ನು ಗುರುತಿಸಿ, ನಾಯಕತ್ವ ಮೂಡಿಸಿ-ಯಶವಂತ ಪೂಜಾರಿ

ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಗ್ರಾಮವಾರು ಯುವವಾಹಿನಿ ಸಂಘವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ನಿಯೋಜಿತ ಅಧ್ಯಕ್ಷ  ಯಶವಂತ ಪೂಜಾರಿರವರು ಹೇಳಿದರು. ಅವರು ದಿನಾಂಕ: 30.07.2017  ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2017-18ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]

Read More

ಪುತ್ತೂರು ಯುವವಾಹಿನಿಯ 2016-17ನೇ ಸಾಲಿನ ಮಹಾಸಭೆ

ನಿರಂತರ ಸಂಪರ್ಕ ಹಾಗೂ ನಿರಂತರ ಸಭೆಗಳನ್ನು ನಡೆಸುವ ಮೂಲಕ ಸಂಘಟನೆಯನ್ನು ಯಶಸ್ವಿಯಾಗಿ ಮುನ್ನಡೆಸಬಹುದು ಎಂದು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರೇಮನಾಥ್ ಕೆ.ಬಂಟ್ವಾಳ್ ತಿಳಿಸಿದರು.ಅವರು ದಿನಾಂಕ 25.06.2017 ನೇ ಆದಿತ್ಯವಾರ ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಪುತ್ತೂರು ಘಟಕದ 2016-17 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಪುತ್ತೂರು ಘಟಕದ ಅಧ್ಯಕ್ಷರಾದ ಜಯಂತ ಪೂಜಾರಿ ಕೆಂಗುಡೇಲು ಮಾತನಾಡಿ ಯುವವಾಹಿನಿ ಹಾಗೂ ಬಿಲ್ಲವ ಸಂಘದ ಮೂಲಕ […]

Read More

ಪುತ್ತೂರು ಯುವವಾಹಿನಿಯ ಕುಟುಂಬ ಸಮ್ಮಿಲನ

ಯುವವಾಹಿನಿ ಪುತ್ತೂರು ಘಟಕದ ಕುಟುಂಬ ಸದಸ್ಯರ ಕುಟುಂಬ ಸಮ್ಮಿಲನ ಕಾರ್ಯಕ್ರಮ ಜರುಗಿತು. ದಿನಾಂಕ 23.05.2017ನೇ ಮಂಗಳವಾರದಂದು ಮೈಸೂರಿನ GRS ಪಾರ್ಕ್ ನಲ್ಲಿ ಜರುಗಿದ ಕುಟುಂಬ ಸಮ್ಮಿಲನದಲ್ಲಿ  45 ಜನರು ಪಾಲ್ಗೊಂಡಿದ್ದರು

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!