Yuvavahini

ಪುತ್ತೂರು

ಪುತ್ತೂರು ಯುವವಾಹಿನಿ ಆಶ್ರಯದಲ್ಲಿ ರಕ್ತದಾನ ಶಿಬಿರ

ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಇದರ ಸಹಯೋಗದೊಂದಿಗೆ ದಿನಾಂಕ 22.04.2017 ನೇ ಶನಿವಾರ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಸಭಾಭವನದಲ್ಲಿ ರಕ್ತದಾನ ಶಿಬಿರ ಜರುಗಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಶಿಬಿರ ಉದ್ಘಾಟಿಸಿ ಮಾತನಾಡಿ ಮನುಷ್ಯನ ಶರೀರದಲ್ಲಿ ಹರಿಯುವ ರಕ್ತ ಒಂದೇ, ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ ಎಂದು ತಿಳಿಸಿದರು. ಯುವವಾಹಿನಿ […]

Read More

ಪುತ್ತೂರು ಯುವವಾಹಿನಿ :- ಶಿವಭಕ್ತ ವೀರಮಣಿ – ಯಕ್ಷಗಾನ ತಾಳಮದ್ದಳೆ

ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾ ವರ್ದತ್ಯುತ್ಸವದ ಪ್ರಯುಕ್ತ  ದಿನಾಂಕ 26.03.2017 ಬೆಳಗ್ಗೆ 10.00 ರಿಂದ ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ  ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಶಿವಭಕ್ತ ವೀರಮಣಿ – ಯಕ್ಷಗಾನ ತಾಳಮದ್ದಳೆ  ಜರುಗಿತು. ಪುತ್ತೂರು ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಸಮಾರಂಭ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಯುವವಾಹಿನಿ ಅದ್ಯಕ್ಷ ಜಯಂತ ಪೂಜಾರಿ, ಕಾರ್ಯದರ್ಶಿ ಉದಯ ಕೊಲಾಡಿ, ಶಶಿಧರ ಕಿನ್ನಿಮಜಲು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಗೆಜ್ಜೆಗಿರಿ ವಾಹನ ಜಾಥಾಕ್ಕೆ ಚಾಲನೆ

ದೇಯಿ ಬೈದ್ಯೆತಿ ಕೋಟಿ ಚಿನ್ನಯ್ಯ ಮೂಲ ಸ್ಥಾನ ಗೆಜ್ಜೆಗಿರಿ ನನ್ನ ಬಿತ್ತಿಲ್­ನಲ್ಲಿ 2017 ರ ಫೆಬ್ರವರಿ 19 ರಂದು ಶಿಲಾನ್ಯಾಸ ಕಾರ್ಯಕ್ರಮ ಪೂರ್ವಭಾವಿಯಾಗಿ ಅಂದು ಬೆಳಿಗ್ಗೆ ಪುತ್ತೂರಿನಿಂದ ಆರಂಭಗೊಂಡ ವಾಹನ ಜಾಥಾವನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಉದ್ಘಾಟಿಸಿದರು. ಉಡುಪಿ, ದಕ್ಷಿಣ ಕನ್ನಡ, ಹಾಗೂ ಕಾಸರಗೋಡು ಭಾಗಗಳಿಂದ ಬಂದಿದ್ದ ವಾಹನ ಜಾಥಾ ಪುತ್ತೂರು ದರ್ಬೆ ಬೈಪಾಸ್ ಜಂಕ್ಷನ್ ಇಲ್ಲಿ ಸಮಾವೇಶಗೊಂಡಿತು. ಅಲ್ಲಿಂದ ಒಟ್ಟಾಗಿ ಗೆಜ್ಜೆಗಿರಿಗೆ ತೆರಳುವ ವಾಹನ ಜಾಥಾಕ್ಕೆ ಚಾಲನೆ ನೀಡಲಾಯಿತು. ಐದು ಶತಮಾನಗಳ ಇತಿಹಾಸದ […]

Read More

ಪುತ್ತೂರು: ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ

ದಿನಾಂಕ 22-1-2017 ರಂದು ಯುವವಾಹಿನಿ (ರಿ) ಪುತ್ತೂರು ಘಟಕದ ನೇತೃತ್ವದಲ್ಲಿ ಕೇಂದ್ರ ಸಮಿತಿಯ ಸಹಯೋಗದಲ್ಲಿ ನರಿಮೊಗರು ಗ್ರಾಮ ಸಮಿತಿ ಉದ್ಘಾಟನಾ ಸಮಾರಂಭ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಪುತ್ತೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲುರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಪುತ್ತೂರಿನ ಯುವಕರನ್ನೊಳಗೊಂಡ ಯುವವಾಹಿನಿಯು ಇಂದು ಮನೆ ಮಾತಾಗಿದ್ದರೆ ಅದು ಯುವವಾಹಿನಿ ಸದಸ್ಯರಲ್ಲಿನ ಸ್ವಾರ್ಥ ರಹಿತ ಸ್ವಾಭಿಮಾನಿ ಬದುಕಿನಿಂದ ಮಾತ್ರ ಸಾಧ್ಯವಾಗಿದೆ ಎಂದು ತಿಳಿಸಿದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ […]

Read More

ಪುತ್ತೂರು ಯುವವಾಹಿನಿಯ ಸಮಾಜಮುಖಿ ಕಾರ್ಯ

ಪುತ್ತೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿಯ 161 ನೇ ಜನ್ಮದಿನಾಚರಣೆಯ ಪ್ರಯುಕ್ತ ಪುತ್ತೂರಿನ ಸರಕಾರಿ ಆಸ್ಪತ್ರೆಗೆ ಉಚಿತವಾಗಿ 6 ಫ್ಯಾನ್‌ಗಳನ್ನು 16-09-2016 ರಂದು ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಲಾಯಿತು. ದಿನಾಂಕ 3-11-2016 ರಂದು ಪುತ್ತೂರು ಘಟಕದ ವತಿಯಿಂದ ಅಪಘಾತದಲ್ಲಿ ಕಾಲು ಮುರಿತಕ್ಕೊಳಗಾದ ಯಕ್ಷಿತ್‌ನ ಮನೆಗೆ ತೆರಳಿ ರೂ. 5,000/-ದ ಮೊತ್ತದ ಚೆಕ್ಕನ್ನು ವಿತರಿಸುತ್ತಿರುವುದು. ಈ ಸಂದರ್ಭದಲ್ಲಿ ಅಧ್ಯಕ್ಷ ಜಯಂತ ಪೂಜಾರಿ ಕೆಂಗುಡೇಲು, ನಿಕಟಪೂರ್ವ ಅಧ್ಯಕ್ಷ ಶಶಿಧರ ಕಿನ್ನಿಮಜಲು, ಕಾರ್ಯದರ್ಶಿ ಉದಯ ಕೋಲಾಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ಮಹೇಶ್ಚಂದ್ರ ಸಾಲ್ಯಾನ್, […]

Read More

ಪುತ್ತೂರು ಯುವವಾಹಿನಿಯಿಂದ ಸಹಾಯ ಹಸ್ತ

ಯುವವಾಹಿನಿ ಪುತ್ತೂರು ಘಟಕದ ವತಿಯಿಂದ ಕೋಲಾಡಿ ಬಟನ್ಸ್ ಮಾಲಕ ಉದಯ ಕುಮಾರ್‌ರವರು ಕೊಡುಗೆಯಾಗಿ ನೀಡಿದ ಸುಮಾರು 18,000 ರೂ. ವೆಚ್ಚದ ಟೆಬಲ್‌ಗಳನ್ನು ಪುತ್ತೂರು ಬಿಲ್ಲವ ಸಂಘಕ್ಕೆ ಹಸ್ತಾಂತರಿಸಲಾಯಿತು.

Read More

ಪುತ್ತೂರು ಘಟಕದ ಪದಗ್ರಹಣ ಕಾರ್ಯಕ್ರಮ

ವಿದ್ಯೆ, ಉದ್ಯೋಗ ಮತ್ತು ಸಂಪರ್ಕವೆಂಬ ನಾರಾಯಣ ಗುರುಗಳ ತತ್ವದಂತೆ ಯುವವಾಹಿನಿ ಸದಸ್ಯರು ಕೆಲಸ ಮಾಡುತ್ತಿದ್ದು ಜನರ ಅನಿಸಿಕೆ ಹಾಗೂ ನಿರೀಕ್ಷೆಯನ್ನು ಹುಸಿಗೊಳಿಸಲಿಲ್ಲ. ಯುವವಾಹಿನಿ ಯಂತೆ ಪ್ರತಿಯೊಂದು ಸಂಘಟನೆಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಂಘಟನೆಗಳಿಗೆ ನಿಜವಾದ ಅರ್ಥ ಹಾಗೂ ಬೆಲೆ ಸಿಗುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಸಂತೋಷ್ ಕುಮಾರ್‌ರವರು ಹೇಳಿದರು. ಅವರು ಜು. 24 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2016-17 ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!