Yuvavahini

ಪಣಂಬೂರು-ಕುಳಾಯಿ

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಅಧ್ಯಕ್ಷರಾಗಿ ಉದಯ ಆರ್ ಆಯ್ಕೆ

                  ಯುವವಾಹಿನಿ (ರಿ) ಪಣಂಬೂರು ಘಟಕದ 2017-18ನೇ ಸಾಲಿನ ಅಧ್ಯಕ್ಷರಾಗಿ ಉದಯ ಆರ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ : ನರೇಶ್ ಉಪಾಧ್ಯಕ್ಷರು : ಕೇಶವ ಕುಲಾಯಿ ಕೋಶಾಧಿಕಾರಿ : ರೇವತಿ ರವಿಚಂದ್ರ, ಜತೆ ಕಾರ್ಯದರ್ಶಿ : ಗಾಯತ್ರಿ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು : ರವಿ ವ್ಯಕ್ತಿತ್ವ ವಿಕಸನ ನಿರ್ದೇಶಕರು : ಸುರೇಶ್ ಕ್ರೀಡಾ ಮತ್ತು ಆರೋಗ್ಯ ನಿರ್ದೇಶಕರು : ನಿತಿನ್ ಮಹಿಳಾ ಸಂಘಟನಾ ನಿರ್ದೇಶಕರು […]

Read More

ಯುವವಾಹಿನಿ ಪಣಂಬೂರು ಘಟಕದ ಪದಗ್ರಹಣ

ಯುವವಾಹಿನಿ (ರಿ) ಪಣಂಬೂರು ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 22.07.2017 ರಂದು ಪಣಂಬೂರು NMPT ಕ್ರೀಯೇಶನ್ ಕ್ಲಬ್ ನಲ್ಲಿ ಜರುಗಿತು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಕುಳಾಯಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ಮಹಾನಗರ ಪಾಲಿಕಾ ಕಾರ್ಪೊರೇಟರ್ ಶ್ರೀಮತಿ ಪ್ರತಿಭಾ ಕುಳಾಯಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರವಿಚಂದ್ರ ನೂತನ ಪದಾಧಿಕಾರಿಗಳನ್ನು ಪರಿಚಯಿಸಿದರು. ಯುವವಾಹಿನಿ ಪಣಂಬೂರು ಘಟಕದ 2017-18 […]

Read More

ಪಣಂಬೂರು ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಪಣಂಬೂರು ಘಟಕದ ಸದಸ್ಯರು ದಿನಾಂಕ 22.04.2017 ರಿಂದ. 24.04.2017 ರ ವರಗೆ  ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು 50 ಸದಸ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು  

Read More

ಪಣಂಬೂರು ಯುವವಾಹಿನಿಯಿಂದ ಆರೋಗ್ಯ ಮಾಹಿತಿ ಶಿಬಿರ

ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಕಿಡ್ನಿ ವೈಫಲ್ಯ, ಕಿಡ್ನಿ ಸಂಬಂಧಿ ರೋಗಗಳು ಹಾಗೂ ತಡೆಗಟ್ಟುವರೇ ಮುಂಜಾಗ್ರತಾ ಕ್ರಮಗಳು – ಇದರ ಬಗ್ಗೆ ಆರೋಗ್ಯ ಮಾಹಿತಿ ಶಿಬಿರವು ದಿನಾಂಕ 03/04/2017 ಸೋಮವಾರ ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ಜರುಗಿತು. ನಿರಂತರ. ಒತ್ತಡದಿಂದ ಕೂಡಿದ ಕೆಲಸ ಕಾರ್ಯಗಳು, ಆಧುನಿಕ ಜೀವನ ಕ್ರಮದಿಂದ ಶರೀರಕ್ಕೆ ಸಿಗದ ಸರಿಯಾದ ವ್ಯಾಯಾಮ ಹಾಗೂ ಆಹಾರ ಸೇವನಾ ಕ್ರಮ, ಇಂತಹ ಕಾರಣಗಳಿಂದ ಕಿಡ್ನಿ ವೈಫಲ್ಯ, ಕಿಡ್ನಿಯಲ್ಲಿ ಕಲ್ಲು ಇಂತಹ ಸಮಸ್ಯೆಗಳು […]

Read More

’ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ’ ವಿಚಾರ ಕಮ್ಮಟ

ದಿನಾಂಕ 11-12-2016 ರಂದು ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಯುವವಾಹಿನಿ ಕೂಳೂರು ಘಟಕದ ಸಹಯೋಗದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶಗಳ ಅನುಷ್ಠಾನದಲ್ಲಿ ಬಿಲ್ಲವ ಸಮಾಜ ಎಂಬ ವಿಚಾರ ಕಮ್ಮಟ ನಡೆಯಿತು. ಕುಳಾಯಿ ಸಂಘದ ಅಧ್ಯಕ್ಷ ಎಂ.ಟಿ. ಸಾಲ್ಯಾನ್ ದೀಪ ಬೆಳಗಿಸಿ ಕಮ್ಮಟವನ್ನು ಉದ್ಘಾಟಿಸಿದರು. ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಕೆ. ವಿಶ್ವನಾಥ್‌ರವರು ಪಣಂಬೂರು ಹಾಗೂ ಕೂಳೂರು ಘಟಕದ ಬೆಳವಣಿಗೆಯನ್ನು ತಿಳಿಸುತ್ತಾ ಕಾರ್ಯಕ್ರಮದ ಬಗ್ಗೆ ಪ್ರಸ್ತಾವನೆ ಗೈದರು. ಯುವವಾಹಿನಿ (ರಿ) ಕೇಂದ್ರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!