Yuvavahini

ಹಳೆಯಂಗಡಿ

ಆರೋಗ್ಯ ಮಾಹಿತಿ ಕಾರ್ಯಗಾರ

ದಿನಾಂಕ 03.12.2017  ರಂದು  ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಸಿಕ ಸಭೆಯು, ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹದಲ್ಲಿ ಏರ್ಪಡಿಸಲಾಯಿತು. ಸಭೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಕಾರ್ಯದರ್ಶಿಯಾದ ರಾಜೇಶ್ ಸುವರ್ಣ, ಸಲಹೆಗಾರರಾದ ಲಕ್ಷ್ಮಣ ಸಾಲ್ಯಾನ್ ಹಾಗೂ ಸುನೀಲ್ ಕೆ. ಅಂಚನ್ , ನವೀನ್ ಚಂದ್ರರವರು ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರು ಘಟಕಕ್ಕೆ ಸಲಹೆ ನೀಡಿದರು. ಸಭೆಯಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷರು ಗಣೇಶ್ ಬಂಗೇರ, ಯುವವಾಹಿನಿ ನಿಕಟ ಪೂರ್ವ ಅಧ್ಯಕ್ಷರಾದ ದೀಪಕ್ ನಾನಿಲ್ ಉಪಸ್ಥಿತರಿದ್ದರು. ಅಂದಿನ […]

Read More

ಮಕ್ಕಳ ದಿನಾಚರಣೆ

ಹಳೆಯಂಗಡಿ: ನವಂಬರ್ ೧೪ ರಂದು ಮಕ್ಕಳ ದಿನಾಚರಣೆಯನ್ನು ಸ್ಥಳೀಯ U.B.M.C   ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಚಿತ್ರಕಲೆ ಮತ್ತು ಸಂಗೀತ ಸ್ಪರ್ಧೆಯನ್ನು ಯುವವಾಹಿನಿ (ರಿ) ಹಳೆಯಂಗಡಿ ಘಟಕ ಮತ್ತು ಲಯನ್ಸ್ & ಲಿಯೋ ಕ್ಲಬ್ ಹಳೆಯಂಗಡಿ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಯಿತು. ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ವಾಸು ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್ ಸುವರ್ಣರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಯಶೋಧರ್ ಸಾಲ್ಯಾನ್, […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ರಕ್ತದಾನದಿಂದ ಹಲವರ ಜೀವ ಉಳಿಸಲು ಸಾಧ್ಯ: ಸೆಬಾಸ್ಟಿನ್ ಜತ್ತನ್

ರಕ್ತದಾನ ಅತ್ಯಂತ ಶ್ರೇಷ್ಠ ದಾನ. ರಕ್ತದಾನ ಮೂಲಕ ಅನೇಕರ ಜೀವ ಉಳಿಸುವುದರೊಂದಿಗೆ ದಾನಿಯೂ ಉತ್ತಮ ಆರೋಗ್ಯ ಗಳಿಸಲು ಸಾಧ್ಯ ಎಂದು ಹಳೆಯಂಗಡಿ ಸಿಎಸ್‌ಐ ಅಮ್ಮನ್ ಮೆಮೋರಿಯಲ್ ಚರ್ಚ್ ಸಭಾಪಾಲಕ ಸೆಬೆಸ್ಟಿನ್ ಜತ್ತನ್ ಹೇಳಿದರು. ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಲಿಯೋ ಮತ್ತು ಲಯನ್ಸ್ ಕ್ಲಬ್ ಹಳೆಯಂಗಡಿ, , ಜೋರ್ಜ್ ಎ.ಬೆರ್ನಾಡ್ ಮೆಮೋರಿಯಲ್ ಟ್ರಸ್ಟ್ ಹಳೆಯಂಗಡಿ, ಹೆಲ್ತ್ ಕೇರ್ ಡಯಾಗ್ನಾಸ್ಟಿಕ್ ಸೆಂಟರ್ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು , ರೆಡ್ ರಿಬ್ಬನ್ ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಆರೋಗ್ಯದ ಕಾಳಜಿ ವಹಿಸಿ: ರಮೇಶ್ ಬಂಗೇರ

ಆರೋಗ್ಯದ ಬಗ್ಗೆ ಕಾಳಜಿ ವಹಿಸಿದಲ್ಲಿ ದೇಹದ ಸಮತೋಲನದಿಂದ ದಿನಪೂರ್ತಿ ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯ. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಸೂಕ್ತ ವೈದ್ಯರಲ್ಲಿ ನಡೆಸಿಕೊಂಡು ರೋಗ ಬರುವ ಮೊದಲೇ ಆರೋಗ್ಯದ ಬಗ್ಗೆ ತಿಳಿದುಕೊಳ್ಳಿರಿ ಎಂದು ಲಯನ್ಸ್ ಕ್ಲಬ್‌ನ ಜಿಲ್ಲಾ ಸಮಿತಿಯ ಅಧಿಕಾರಿ ರಮೇಶ್ ಬಂಗೇರ ಹೇಳಿದರು. ಅವರು ದಿನಾಂಕ 24.09.2017 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಯುವವಾಹಿನಿ ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘ,ಲಯನ್ಸ್, ಲಿಯೋ ಮತ್ತು ಪೂಜಾ ಫ಼್ರೆಂಡ್ಸ್‌ನ ಹಾಗೂ ಮುಕ್ಕದ […]

Read More

ನಾಳಿನ ಸದೃಢ ಸಮಾಜಕ್ಕೆ, ಇಂದು ಸನ್ನದ್ಧರಾಗೋಣ : ಕವಿತಾ ಸನಿಲ್

ನಾಳಿನ ಸದೃಢ ಸಮಾಜಕ್ಕೆ ಇಂದು ಸನ್ನದ್ಧರಾದಲ್ಲಿ ಮಾತ್ರ ಯುವ ಸಮುದಾಯವನ್ನು ಸಂಸ್ಕøತಿ ಸಂಸ್ಕಾರಗಳ ಮೂಲಕ ಅದರ ಬಗ್ಗೆ ತಿಳುವಳಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಮಂಗಳೂರು ಮೇಯರ್ ಕವಿತಾ ಸನಿಲ್ ಹೇಳಿದರು. ಹಳೆಯಂಗಡಿಯ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಆಟಿ ಆನಿ-ಇನಿ-ಎಲ್ಲೆ ಕಾರ್ಯಕ್ರಮವನ್ನು ಬತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಅಧ್ಯಕ್ಷತೆಯನ್ನು […]

Read More

ಹಳೆಯಂಗಡಿ ಯುವವಾಹಿನಿಯಿಂದ ಉಚಿತ ಪುಸ್ತಕ ವಿತರಣೆ

  ಮಕ್ಕಳನ್ನು ಸಮಾಜದ ಆಸ್ತಿಯನ್ನಾಗಿಸಲು ಅವರಿಗೆ ಸೂಕ್ತವಾದ ಶಿಕ್ಷಣ ನೀಡುವಂತಹ ವಾತಾವರಣ ನಿರ್ಮಾಣ ಆಗಬೇಕು. ಗುರುಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಹೆತ್ತವರು ಮನೆಯಿಂದ ಆರಂಭಿಸಿದಲ್ಲಿ ಮಾತ್ರ ಅವರ ಬದುಕಿನಲ್ಲಿ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಳ್ಳಲು ಸಾಧ್ಯವಿದೆ. ಯುವ ಜನರಿಗೆ ಸೂಕ್ತ ಮಾರ್ಗದರ್ಶನ ನೀಡಿ ಸ್ವಾವಲಂಬಿಗಳನ್ನಾಗಿ ಮಾಡಿರಿ ಎಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾನಿಲ್ ಹೇಳಿದರು. ಅವರು ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ದಿನಾಂಕ 11.06.2017 ರಂದು ಜರುಗಿದ ಉಚಿತ […]

Read More

ಹಳೆಯಂಗಡಿ ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭ

ವಿದ್ಯೆ ಉದ್ಯೋಗ ಸಂಪರ್ಕ ಎಂಬ ಮೂರು ಮುಖ್ಯ ಉದ್ದೇಶಗಳೊಂದಿಗೆ ಹಳೆಯಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯವಾದುದು ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅದ್ಯಕ್ಷ ಪದ್ಮನಾಭ ಮರೋಳಿ ತಿಳಿಸಿದರು. ಅವರು ದಿನಾಂಕ 16.04.2017 ನೇ ಆದಿತ್ಯವಾರ ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣಗುರು ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2017-18 ನೇ ಸಾಲಿನ ನೂತನ ಪದಾದಿಕಾರಿಗಳ ಪದಪ್ರಧಾನ ನೆರವೇರಿಸಿ ಮಾತನಾಡಿದರು. ಕಟೀಲು ಮೇಳದ ಸುಪ್ರಸಿದ್ಧ ಯಕ್ಷಗಾನ ಕಲಾವಿದ ರಾಮಚಂದ್ರ ಮುಕ್ಕ ಇವರು ಯಕ್ಷಗಾನ ತರಬೇತಿ ತರಗತಿಯನ್ನು ಉದ್ಘಾಟಿಸಿ, ಜಿಲ್ಲೆಯ […]

Read More

ಹಳೆಯಂಗಡಿ-ಕೊಪ್ಪಳ ರಸ್ತೆಗೆ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ನಾಮಕರಣ

ದಿ. 16-9-2016 ರ ಗುರುಜಯಂತಿಯಂದು ಹಳೆಯಂಗಡಿ ಘಟಕದ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಹಳೆಯಂಗಡಿ ಪರಿಸರದ ಹಳೆಯಂಗಡಿ-ಕೊಪ್ಪಳ ಸಂಪರ್ಕ ರಸ್ತೆಯನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ಎಂಬ ನಾಮಕರಣದಲ್ಲಿ ಶಾಸಕ ಅಭಯಚಂದ್ರ ಜೈನ್‌ರವರಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿ, ಹಳೆಯಂಗಡಿ ಪರಿಸರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಹೆಸರು ಸದಾ ರಾರಾಜಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿರುತ್ತೇವೆ.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!