Yuvavahini

ಪಡುಬಿದ್ರೆ

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ತುಳುನಾಡ : ಆರಾಧನೆ-ಆಶಯ-ಸ್ವರೂಪ

ಆಧುನೀಕರಣ ಪ್ರಭಾವದಿಂದ ತಂತ್ರಜ್ಞಾನದ ಒಳಿತುಗಳಂತೆ ಕೆಡುಕುಗಳು ಉಂಟಾಗಿ ಯುವ ಸಮುದಾಯದ ಮೇಲೆ ಅದರ ಪರಿಣಾಮ ಪ್ರಖರವಾಗಿದೆ. ಹೆತ್ತವರು ಉತ್ತಮವಾಗಿ ಶಿಶು ಆರೈಕೆಯೊಂದಿಗೆ ಮಕ್ಕಳ ಮೇಲೆ ಯಾವುದೇ ಕೆಟ್ಟ ಪ್ರಭಾವ ಆಗದಂತೆ ನೋಡಬೇಕಾಗಿದೆ. ಈ ನಿಟ್ಟಿನಲ್ಲಿ ನಾರಾಯಣಗುರುವರ್ಯರಂತ ಮಹನೀಯರ ತತ್ವಾದರ್ಶಗಳನ್ನು ತಿಳಿಸಬೇಕಾದ ಅನಿವಾರ್ಯತೆ ಇದೆ ಎಂದು ಕೇಂಜ, ಕುತ್ಯಾರು ಬ್ರಹ್ಮಬೈದರ್ಕಳ ಗರಡಿಯ ಗಡಿ ಪ್ರಧಾನರಾದ ಬಗ್ಗ ಪೂಜಾರಿ ಉಮೇಶ್ ಕೋಟ್ಯಾನ್ ತಿಳಿಸಿದರು. ಅವರು ಪಡುಬಿದ್ರಿ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ […]

Read More

ಯುವವಾಹಿನಿ ಪಡುಬಿದ್ರೆ ಘಟಕದ ಅಧ್ಯಕ್ಷರಾಗಿ ಸಂತೋಷ್ ಅಧಿಕಾರ ಸ್ವೀಕಾರ

  ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ಸಂತೋಷ್ ಕುಮಾರ್ ನಂದಿಕೂರು ಆಯ್ಕೆಯಾಗಿದ್ದಾರೆ. ದಿನಾಂಕ 18.06.2017 ನೇ ಆದಿತ್ಯವಾರ ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಸಂತೋಷ್ ಕುಮಾರ್ ನಂದಿಕೂರು ನೇತ್ರತ್ವದ 13 ಜನರ ತಂಡವು ಪ್ರತಿಜ್ಷಾ ವಿಧಿ ಸ್ವೀಕರಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಪ್ರತಿಜ್ಷಾ ವಿಧಿ ಬೋಧಿಸಿದರು.ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ಪಡುಬಿದ್ರೆ ನಾರಾಯಣಗುರು ಮಹಿಳಾ ಮಂಡಳಿ […]

Read More

ಯುವಕರನ್ನು ಒಗ್ಗೂಡಿಸುವ ಕಾರ್ಯ ಯುವವಾಹಿನಿಯಿಂದ ಮಾತ್ರ ಸಾಧ್ಯ :- ಸುಧೀರ್ ಕುಮಾರ್

ಕ್ರ್ರೀಯಾಶೀಲ ಯುವಕರ ತಂಡ ಪಡುಬಿದ್ರೆ ಯುವವಾಹಿನಿಯು ಈ ಪರಿಸರದಲ್ಲಿ ನಿರಂತರ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬಂದಿದೆ. ಯುವಕರನ್ನು ಒಗ್ಗೂಡಿಸುವ ಕಾರ್ಯ ಅದು ಯುವವಾಹಿನಿಯಿಂದ ಮಾತ್ರ ಸಾಧ್ಯ ಎಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧೀರ್ ಕುಮಾರ್ ತಿಳಿಸಿದರು. ಅವರು ದಿನಾಂಕ 18.06.2017 ರಂದು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಸಭಾಭವನದಲ್ಲಿ ಯುವವಾಹಿನಿ (ರಿ) ಪಡುಬಿದ್ರೆ ಘಟಕದ 2017-18 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ ಪಡುಬಿದ್ರೆ ಘಟಕದ ಮಾಜಿ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.

Read More

ಪಡುಬಿದ್ರೆ: ಮಕ್ಕಳ ಹಬ್ಬ ಮತ್ತು ಕಲಾಭೂಷಣ ಪ್ರಶಸ್ತಿ ಪ್ರದಾನ

ವಿದ್ಯೆಯು ಮಗುವಿಗೆ ಜ್ಞಾನ ಸಂಪಾದನೆಯ ಜೊತೆಗೆ ಬದುಕುವ ಕಲೆಯನ್ನು ಕಲಿಸುವ ಕಲೆಯಾಗಬೇಕು. ಅದೇ ರೀತಿ ಇಂದು ಮಕ್ಕಳಿಗೆ ಮೌಲ್ಯ ಶಿಕ್ಷಣದ ಅನಿವಾರ್ಯವಿದೆ. ಇದರ ಜೊತೆಗೆ ಕಲಿತ ಶಾಲೆ, ಶಿಕ್ಷಕರು, ತಾಯಿನಾಡಿನ ಬಗೆಗೆ ಗೌರವಾದರಣೆಯನ್ನು ಹೊಂದಬೇಕಾಗಿದೆ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಪದ್ಮನಾಭ ಮರೋಳಿ ಹೇಳಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪಡುಬಿದ್ರಿ ಇಲ್ಲಿ ನಡೆದ ಮಕ್ಕಳ ಹಬ್ಬ-2016 […]

Read More

ಪಡುಬಿದ್ರಿ ಘಟಕದ ವತಿಯಿಂದ ವಿಚಾರಗೋಷ್ಠಿ ಕಾರ್ಯಕ್ರಮ

ತುಳುನಾಡಿನ ಪರಂಪರೆ, ದೈವಾರಾಧನೆಯ ಬಗ್ಗೆ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 88 ನೇ ಪುಣ್ಯತಿಥಿಯ ಅಂಗವಾಗಿ ಪಡುಬಿದ್ರಿ ಬಿಲ್ಲವ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ ಘಟಕವು ಜಂಟಿಯಾಗಿ ನಡೆಸಿದ ಕೊಡಿಯಡಿತ ಸತ್ಯೊಲು ಎಂಬ ವಿಚಾರಗೋಷ್ಟಿಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಉದ್ಘಾಟಿಸಿ ಶುಭಹಾರೈಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಮಾತನಾಡಿ ಪುರಾತನ ಕಾಲದಲ್ಲಿ ಕೂಡು ಕುಟುಂಬದಲ್ಲಿ ಮಹಿಳೆಯರೇ ದೈವಗಳಿಗೆ ದೀಪವಿಡುವ ಪರಿಕ್ರಮವಿದ್ದು ಕಾಲಾನಂತರ ಮಹಿಳೆಯರನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!