ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ : ಹರಿಶ್ಚಂದ್ರ ಅಮೀನ್
22-10-2017, 4:15 PM
ಆಧುನಿಕ ಜೀವನ ಶೈಲಿಯಿಂದ ನಾವು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ತೀರಾ ಅಗತ್ಯ, ಸ್ವಯಂಪ್ರೇರಿತ ರಕ್ತದಾನ ಮಾಡಿದ ಕಟಪಾಡಿ ಯುವವಾಹಿನಿ ಯುವಕರ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ತಿಳಿಸಿದರು. ದಿನಾಂಕ 22.10.2017 ರಂದು ಯುವವಾಹಿನಿ(ರಿ) ಕಟಪಾಡಿ ಘಟಕದ ಆಶ್ರಯದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ, ವೇದವ್ಯಾಸ ಭಜನಾ ಮಂದಿರ ಅಂಬಾಡಿ, ಬಿಲ್ಲವ ಒಕ್ಕೂಟ ಪಡುಏನಗುಡ್ಡೆ, ರಿಕ್ಷಾ ಚಾಲಕ ಮಾಲಕರ ಸಂಘ ಕಟಪಾಡಿ […]



