Yuvavahini

ಉಪ್ಪಿನಂಗಡಿ

ಕುದ್ರೋಳಿ ಕ್ಷೇತ್ರದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಡಳಿತ ಕಛೇರಿ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು ಅ 22 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೂತನ ಆಡಳಿತ ಕಛೇರಿಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಬಿಡುಗಡೆಗೊಳಿಸಲಾಯಿತು. ಮಂಗಳೂರು ದಸರಾ ಮಹೋತ್ಸವ–2026ರ ಯಶಸ್ಸಿಗಾಗಿ ಕ್ಷೇತ್ರದಲ್ಲಿ ನಡೆದ ಗುರುಪೂಜಾ ಕಾರ್ಯಕ್ರಮದ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆ ಜರುಗಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಜೈರಾಜ್ ಎಚ್. ಸೋಮಸುಂದರಂ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) […]

Read More

ಅನ್ನದಾನ ಸೇವೆಗೆ ಯುವವಾಹಿನಿಯಿಂದ ₹5 ಲಕ್ಷ ದೇಣಿಗೆ

ಮಂಗಳೂರು, ಅ. 21: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ನಡೆದ ಮಂಗಳೂರು ದಸರಾ ಮಹೋತ್ಸವದ ಅನ್ನದಾನ ಸೇವೆಗಾಗಿ ಯುವವಾಹಿನಿ ಸಂಸ್ಥೆಯ ವತಿಯಿಂದ ₹5,00,000 (ಐದು ಲಕ್ಷ ರೂಪಾಯಿ) ದೇಣಿಗೆಯನ್ನು ಸಮರ್ಪಿಸಲಾಯಿತು. ಯುವವಾಹಿನಿ ಸಂಸ್ಥೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಅನ್ನದಾನ ಸೇವೆಗಾಗಿ ಇಷ್ಟೊಂದು ಬೃಹತ್ ಮೊತ್ತದ ದೇಣಿಗೆಯನ್ನು ಸಂಗ್ರಹಿಸಿ ಸಮರ್ಪಿಸಿರುವುದು ವಿಶೇಷವಾಗಿದೆ. ಸಂಸ್ಥೆಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು-ಕುಳಾಯಿ, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರಿ, ಕಟಪಾಡಿ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಉಡುಪಿ, ಮುಲ್ಕಿ, […]

Read More

ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂಸೇವೆ; ಅನ್ನದಾನಕ್ಕೆ ₹30,000 ದೇಣಿಗೆ

ಮಂಗಳೂರು, ಅ. 21: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ಯಶಸ್ವಿಯಾಗಿ ನೆರವೇರಿಸಲಾಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ 110 ಸದಸ್ಯರ ಸಹಕಾರದೊಂದಿಗೆ ಕ್ಷೇತ್ರದಲ್ಲಿ ಸ್ವಯಂಸೇವೆ ಸಲ್ಲಿಸಿ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹30,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ […]

Read More

ನಾರಾಯಣ ಗುರುಗಳ ಸಂದೇಶಗಳು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ದಾರಿದೀಪ : ಧನ್ಯಕುಮಾರ್ ರೈ

ಉಪ್ಪಿನಂಗಡಿ ಅಗಸ್ಟ್ 30 : ಮಾನವ ಕುಲಕ್ಕೆ ಜ್ಞಾನದ ಬೆಳಕನ್ನು ಪಸರಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯನ್ನು ವಿವಿಧ ಸಮಾಜಗಳ ಮುಖಂಡರ ಸಹಭಾಗಿತ್ವದೊಂದಿಗೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಆಗಸ್ಟ್ 30ರಂದು ಉಪ್ಪಿನಂಗಡಿಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವ ಮಾನವ ಕುಲವನ್ನು ಗೌರವಿಸುವ ಹಾಗೂ ಸಮಾನತೆಯ ಸಂದೇಶ ಸಾರಿದ […]

Read More

ಸ್ನೇಹ, ಸೌಹಾರ್ದತೆ ಬೆಸೆದ “ಸ್ನೇಹ ಮಿಲನ–2026”

ಉಪ್ಪಿನಂಗಡಿ ಅಗಸ್ಟ್ 16: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಆಗಸ್ಟ್ 16ರಂದು ಆಯೋಜಿಸಲಾದ “ಸ್ನೇಹ ಮಿಲನ–2026” ಒಂದು ದಿನದ ಸ್ನೇಹ ಪ್ರವಾಸವು ಸದಸ್ಯರ ಉತ್ಸಾಹ, ಸಂತಸ ಹಾಗೂ ಸೌಹಾರ್ದತೆಯೊಂದಿಗೆ ಯಶಸ್ವಿಯಾಗಿ ನಡೆಯಿತು. ಪ್ರವಾಸಕ್ಕೆ ಮುನ್ನ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬೆಳಿಗ್ಗೆ 6 ಗಂಟೆಗೆ ಪ್ರವಾಸಕ್ಕೆ ಚಾಲನೆ ನೀಡಲಾಯಿತು. ಸಕಲೇಶಪುರದ ಜಪ್ಪದಕಲ್ಲು ರೆಸಾರ್ಟ್‌ಗೆ ತೆರಳಿದ ಸದಸ್ಯರು ದಿನವಿಡೀ ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಪ್ರವಾಸದಲ್ಲಿ ಒಟ್ಟು 37 […]

Read More

ಯುವ ಸಮುದಾಯದ ಬಲವರ್ಧನೆಗೆ “ಯುವ ಬಾಂಧವ್ಯ” ಸಹಕಾರಿ: ಸುನೀಲ್ ಕುಮಾರ್ ದಡ್ಡು

ಉಪ್ಪಿನಂಗಡಿ ಜುಲೈ 26: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ಮಹತ್ವಾಕಾಂಕ್ಷಿ ಸರಣಿ ಕಾರ್ಯಕ್ರಮ “ಯುವ ಬಾಂಧವ್ಯ–2026”ರ ಜುಲೈ ತಿಂಗಳ ಕಾರ್ಯಕ್ರಮವು ಜುಲೈ 26ರಂದು ಘಟಕದ ಸಂಘಟನಾ ಕಾರ್ಯದರ್ಶಿ ವಿಜಯ ಶಿಲ್ಪಿ ಅವರ ಮನೆಯಲ್ಲಿ ನಡೆಯಿತು. ಗುರುಸ್ತುತಿಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷ ಮನೋಜ್ ಎನ್. ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಅವರು ಘಟಕದ ಕಾರ್ಯಚಟುವಟಿಕೆಗಳ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ ಸಭೆಗೆ ಎಲ್ಲರನ್ನು ಸ್ವಾಗತಿಸಿದರು. ಕಾರ್ಯದರ್ಶಿ ರಮೇಶ್ ಎಸ್. ಸಾಂತ್ಯ ಅವರು ಗತ ಕಾರ್ಯಕ್ರಮಗಳ ವರದಿ ಮಂಡಿಸಿದರೆ, ಕೋಶಾಧಿಕಾರಿ ಸದಾಶಿವ […]

Read More

ವೈದ್ಯರಿಗೆ ಯುವವಾಹಿನಿಯಿಂದ ಗೌರವಾರ್ಪಣೆ

ಉಪ್ಪಿನಂಗಡಿ, ಜುಲೈ 16: ವಿಶ್ವ ವೈದ್ಯರ ದಿನಾಚರಣೆ-2026ರ ಅಂಗವಾಗಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಾ. ರಾಜಾರಾಮ್ ಕೆ.ಬಿ., ಡಾ. ರಮ್ಯಾ ರಾಜಾರಾಮ್, ಡಾ. ಎಂ.ಆರ್. ಶೆಣೈ, ಡಾ. ಕೆ.ಜಿ. ಭಟ್, ಡಾ. ಎಂ.ಎನ್. ಭಟ್, ಡಾ. ರಘು, ಡಾ. ಸದಾನಂದ ಕುಂದರ್, ಡಾ. ಆಶಿತ್ ಎಂ.ವಿ., ಡಾ. ಶ್ವೇತಾ ಆಶಿತ್, […]

Read More

ಮಂಜ ಬೈದ್ಯರ ಹೆಸರನ್ನು ಉಪ್ಪಿನಂಗಡಿ ಸರ್ಕಲ್‌ಗೆ ನಾಮಕರಣ ಮಾಡಲು ಯುವವಾಹಿನಿ ಮನವಿ

ಉಪ್ಪಿನಂಗಡಿ, ಜುಲೈ 16: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಭೇಟಿ ಮಾಡಿ, ಉಪ್ಪಿನಂಗಡಿ ಸರ್ಕಲ್‌ಗೆ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯ ಅವರ ಹೆಸರನ್ನು ನಾಮಕರಣ ಮಾಡುವುದರ ಜೊತೆಗೆ, ಅವರ ಪ್ರತಿಮೆಯನ್ನು ನಿರ್ಮಿಸಿ ಮುಂದಿನ ಪೀಳಿಗೆಗೆ ಅವರ ದೇಶಸೇವೆ ಹಾಗೂ ತ್ಯಾಗವನ್ನು ಶಾಶ್ವತವಾಗಿ ಪರಿಚಯಿಸುವಂತೆ ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು ವಿಷಯವನ್ನು ಸಕಾರಾತ್ಮಕವಾಗಿ ಪರಿಗಣಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ […]

Read More

ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

ಉಪ್ಪಿನಂಗಡಿ, ಜು. 12: ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಉಪ್ಪಿನಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರವನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಮಾಜದ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಉಪಯುಕ್ತವಾಗಿದ್ದು, […]

Read More

ಅಧ್ಯಕ್ಷರ ಮಾತು : ಅಶೋಕ್ ಕುಮಾರ್ ಪಡ್ಪು

ಯುವವಾಹಿನಿ ಕುಟುಂಬದ ಅತ್ಮೀಯ ಸದಸ್ಯರೆ, ‘ಯುವಸಿಂಚನ’ದ ಚೊಚ್ಚಲ ಸಂಚಿಕೆಗೆ ನೀವು ತೋರಿದ ಅತೀವ ಪ್ರೀತಿ, ಪ್ರೋತ್ಸಾಹ ಮತ್ತು ಮೆಚ್ಚುಗೆಯ ಮಾತುಗಳು ನಮ್ಮಲ್ಲಿ ಹೊಸ ಚೈತನ್ಯವನ್ನು ತುಂಬಿವೆ. ಅದೇ ಲವಲವಿಕೆ ಮತ್ತು ಆತ್ಮವಿಶ್ವಾಸದೊಂದಿಗೆ, ಮಲೆನಾಡ ಮಳೆಯ ಸಿಂಚನದಂತೆ ಹಿತ ನೀಡುವ ಈ ದ್ವಿತೀಯ ಸಂಚಿಕೆಯನ್ನು ನಿಮ್ಮ ಕೈಗಿಡಲು ಹೆಮ್ಮೆ ಎನಿಸುತ್ತಿದೆ. ಯುವವಾಹಿನಿಯ ಪಯಣವು ಕೇವಲ ಕಾರ್ಯಕ್ರಮಗಳ ಸರಮಾಲೆಯಲ್ಲ; ಅದು ವ್ಯಕ್ತಿತ್ವವನ್ನು ಪಳಗಿಸುವ, ಸಮಾಜವನ್ನು ಭಾವನಾತ್ಮಕವಾಗಿ ಬೆಸೆಯುವ ಮತ್ತು ಹೊಸ ಭರವಸೆಯ ಹಾದಿಗಳನ್ನು ಸೃಷ್ಟಿಸುವ ಒಂದು ನಿರಂತರ ಜ್ಞಾನಯಜ್ಞ. ಬಂಟ್ವಾಳ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!