Yuvavahini

ಮಂಗಳೂರು ಮಹಿಳಾ

ಮಹಿಳೆಯರಿಗೆ ಜವಾಬ್ದಾರಿ ನೀಡಿದರೆ ಸಾಧನೆ ಸಾಧ್ಯ: ಗೀತಾಂಜಲಿ ಸುವರ್ಣ

ಮಂಗಳೂರು ಅ‌ 26 : ಮಹಿಳೆಯರಿಗೆ ಜವಾಬ್ದಾರಿ ನೀಡಿದರೆ ಅವರು ಯಾವುದೇ ಕ್ಷೇತ್ರದಲ್ಲೂ ಸಾಧನೆ ಮಾಡಬಲ್ಲರು ಎಂಬುದಕ್ಕೆ ಯುವವಾಹಿನಿ ಮಹಿಳಾ ಘಟಕವೇ ಸಾಕ್ಷಿಯಾಗಿದೆ. ಮಹಿಳೆಯರು ತಮ್ಮ ಮಕ್ಕಳನ್ನು ಸಂಘ-ಸಂಸ್ಥೆಗಳೊಂದಿಗೆ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಿ, ಸಮಾಜಮುಖಿ ಚಟುವಟಿಕೆಗಳಲ್ಲಿ ಭಾಗವಹಿಸಲು ಉತ್ತೇಜನ ನೀಡಬೇಕು ಎಂದು ರಾಷ್ಟ್ರೀಯ ಬಿಲ್ಲವ ಮಹಿಳಾ ಮಂಡಳಿ, ಕಟಪಾಡಿಯ ಅಧ್ಯಕ್ಷೆ ಗೀತಾಂಜಲಿ ಸುವರ್ಣ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಅಕ್ಟೋಬರ್ 26ರಂದು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ಉದ್ಘಾಟಿಸಿ […]

Read More

ಅಧ್ಯಕ್ಷರಾಗಿ ದೀಪಿಕಾ ಮನೋಜ್

ಮಂಗಳೂರು ಅ 26 :ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2026–27ನೇ ಸಾಲಿನ ಅಧ್ಯಕ್ಷರಾಗಿ ದೀಪಿಕಾ ಮನೋಜ್ ಆಯ್ಕೆಯಾಗಿದ್ದಾರೆ ನೂತನ ಕಾರ್ಯಕಾರಿ ಸಮಿತಿ ಅಧ್ಯಕ್ಷರು : ದೀಪಿಕಾ ಮನೋಜ್ಪ್ರಥಮ ಉಪಾಧ್ಯಕ್ಷರು: ಸೋನಿಯಾ ರಾಜ್ದ್ವಿತೀಯ ಉಪಾಧ್ಯಕ್ಷರು : ಜಯಲಕ್ಷ್ಮಿಕಾರ್ಯದರ್ಶಿ : ಪ್ರಿಯಾ ಸುರೇಶ್ಜೊತೆ ಕಾರ್ಯದರ್ಶಿ: ಸುಪ್ರಿಯ ಸಚಿನ್ಕೋಶಾಧಿಕಾರಿ : ರೂಪ ಜನಾರ್ಧನ್ ನಿರ್ದೇಶಕರುವ್ಯಕ್ತಿತ್ವ ವಿಕಸನ ನಿರ್ದೇಶಕರು : ಸರಿತಾ ಯಶವಂತ್ಕ್ರೀಡಾ ನಿರ್ದೇಶಕರು : ಲಲಿತಾ ವಿ.ಎಸ್.ಆರೋಗ್ಯ ನಿರ್ದೇಶಕರು : ಸುಜಾತ ಕೋಟ್ಯಾನ್ಸಮಾಜ ಸೇವಾ ನಿರ್ದೇಶಕರು : ಲಲಿತ ಪೂಜಾರಿಕಲೆ […]

Read More

ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂಸೇವೆ; ಅನ್ನದಾನಕ್ಕೆ ₹20,000 ದೇಣಿಗೆ

ಮಂಗಳೂರು, ಅ. 17: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನೆರವೇರಿಸಲಾಯಿತು. ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹20,000 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಪಡ್ಪು ಅವರಿಗೆ ಹಸ್ತಾಂತರಿಸಲಾಯಿತು. ಧಾರ್ಮಿಕ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ ಮಂಗಳೂರು ಮಹಿಳಾ ಘಟಕವು ಮಂಗಳೂರು […]

Read More

ಮಂಗಳೂರು ದಸರಾ ಭಜನಾ ಸೇವೆ

ಮಂಗಳೂರು, ಅ. 16: ಮಂಗಳೂರು ದಸರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಾರದಾ ಮಾತೆಯ ಸನ್ನಿಧಿಯಲ್ಲಿ ಭಜನಾ ಸೇವೆ ಭಕ್ತಿಭಾವದಿಂದ ನೆರವೇರಿತು. ಅಕ್ಟೋಬರ್ 16ರಂದು ಬೆಳಿಗ್ಗೆ 10ರಿಂದ 11 ಗಂಟೆಯವರೆಗೆ ನಡೆದ ಭಜನಾ ಸೇವೆಯಲ್ಲಿ ಘಟಕದ ಸದಸ್ಯರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡು ಶಾರದಾ ಮಾತೆಯ ನಾಮಸ್ಮರಣೆ ಹಾಗೂ ಸುಮಧುರ ಭಜನೆಗಳನ್ನು ಹಾಡಿದರು. ಸದಸ್ಯರ ಭಕ್ತಿಪೂರ್ಣ ಗಾಯನವು ಭಕ್ತರ ಮನಸೂರೆಗೊಂಡಿತು. ಭಜನಾ ಸಂಕೀರ್ತನೆಯಿಂದ ಕ್ಷೇತ್ರದ ಪರಿಸರದಲ್ಲಿ ಭಕ್ತಿಮಯ ವಾತಾವರಣ […]

Read More

ಭಜನಾ ಸೇವೆ

ಯುವವಾಹಿನಿ (ರಿ.), ಮಂಗಳೂರು ಮಹಿಳಾ ಘಟಕದ ವತಿಯಿಂದ ನವರಾತ್ರಿಯ ಅಂಗವಾಗಿ ದಿನಾಂಕ 15-10-2026, ಗುರುವಾರದಂದು ಸಂಜೆ 7:00 ರಿಂದ 9:00 ಗಂಟೆಯವರೆಗೆ ಶ್ರೀ ನವದುರ್ಗಾಂಬಿಕಾ ದೇವಸ್ಥಾನ, ನೆಕ್ಕಿಲದಲ್ಲಿ ಭಜನಾ ಸೇವೆ ನಡೆಯಿತು. ಸುಮಧುರ ಭಜನೆಗಳನ್ನು ಹಾಡಿ, ಭಕ್ತಿಭಾವದಿಂದ ದೇವಿಯ ಆರಾಧನೆಯನ್ನು ನೆರವೇರಿಸಲಾಯಿತು. ನಂತರ ಮಹಾಪೂಜೆಯಲ್ಲಿ ಭಾಗವಹಿಸಿ, ದೇವಿಯ ಆಶೀರ್ವಾದವನ್ನು ಪಡೆಯಲಾಯಿತು.

Read More

ನವರಾತ್ರಿ ಸಂಭ್ರಮದಲ್ಲಿ ಭಕ್ತಿರಸದ ಕಂಪು ಹರಿಸಿದ ಭಜನಾ ಕಾರ್ಯಕ್ರಮ

ಮಂಗಳೂರು, ಅ. 14: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ಅಕ್ಟೋಬರ್ 14ರಂದು ಕೊಂಚಾಡಿಯ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ 9ರಿಂದ 10.30ರವರೆಗೆ ನಡೆದ ಭಜನಾ ಕಾರ್ಯಕ್ರಮದಲ್ಲಿ ಘಟಕದ ಸದಸ್ಯೆಯರು ಭಕ್ತಿಭಾವದಿಂದ ಪಾಲ್ಗೊಂಡು, ದೇವಿಯ ಸ್ತುತಿಗೀತೆಗಳನ್ನು ಹಾಡುವ ಮೂಲಕ ಭಕ್ತಿರಸವನ್ನು ಪಸರಿಸಿದರು. ಸಾಮೂಹಿಕ ಭಜನೆಯ ಮೂಲಕ ಆಧ್ಯಾತ್ಮಿಕ ವಾತಾವರಣ ನಿರ್ಮಾಣಗೊಂಡಿತು. ಭಕ್ತಿಪೂರ್ವಕವಾಗಿ ನಡೆದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸದಸ್ಯೆಯರು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾದರು.

Read More

ಕೈಬರಹದ ಮೂಲಕ ಸ್ವಯಂ ಅರಿವು ಮತ್ತು ವ್ಯಕ್ತಿತ್ವದ ಅರಿವು”

ಮಂಗಳೂರು ಸೆ 09: ಭವಿಷ್ಯವನ್ನು ಆಯ್ಕೆಮಾಡುವ ಮೊದಲು ನಮ್ಮನ್ನು ನಾವು ಅರಿತುಕೊಳ್ಳುವುದು ಅತ್ಯಂತ ಮುಖ್ಯ. ನಮ್ಮ ಆಸಕ್ತಿ ಮತ್ತು ವೃತ್ತಿಯನ್ನು ಸಮನ್ವಯಗೊಳಿಸಿ ಸಾಗಬೇಕಾದರೆ ಜೀವನದಲ್ಲಿ ತೃಪ್ತಿ ಅಗತ್ಯ. ಇಂದಿನ ದಿನಗಳಲ್ಲಿ ಶಿಕ್ಷಣ ಹಾಗೂ ಬುದ್ಧಿವಂತಿಕೆ ಇದ್ದರೂ ಅನೇಕರು ಅತಿಯಾದ ಚಿಂತನೆಗೆ ಒಳಗಾಗುತ್ತಿದ್ದಾರೆ. ಜನರನ್ನು ಅರ್ಥಮಾಡಿಕೊಳ್ಳುವ ನಿಟ್ಟಿನಲ್ಲಿ ಜೀವನ ಮಾರ್ಗದರ್ಶನದ ಕ್ಷೇತ್ರಕ್ಕೆ ಬಂದಾಗ ಕೈಬರಹ ವಿಶ್ಲೇಷಣೆ ಸಹಾಯಕವಾಯಿತು ಎಂದು ಸಂಪನ್ಮೂಲ ವ್ಯಕ್ತಿ ಅಶ್ವಿನಿ ಜಿ. ಎನ್. ತಿಳಿಸಿದರು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಶ್ರೀ ಗೋಕರ್ಣನಾಥೇಶ್ವರ […]

Read More

ಭಕ್ತಿಭಾವದ ಗುರುಪೂಜೆ

ಮಂಗಳೂರು ಅಗಸ್ಟ್ 29 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಗಸ್ಟ್ 29ರಂದು ಬೆಳಿಗ್ಗೆ 10 ಗಂಟೆಗೆ ಯುವವಾಹಿನಿ ಸಭಾಂಗಣದಲ್ಲಿ ಗುರುಪೂಜೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಯೋಜಿಸಲಾಯಿತು. ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮಹೇಶ್ ಅವರು ದೀಪ ಬೆಳಗಿಸಿ, ಗುರುಸ್ತುತಿಯೊಂದಿಗೆ ಗುರುಪೂಜೆಗೆ ಚಾಲನೆ ನೀಡಿದರು. ಬಳಿಕ ಮಹಿಳಾ ಘಟಕದ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಎಸ್.ಎನ್.ಡಿ.ಪಿ., ಕೃಷ್ಣ ಭಜನಾ ಮಂದಿರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]

Read More

ಭಜನಾ ಸೇವೆ

ಮಂಗಳೂರು: ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಉರ್ವಾ ಹೊಗೆಬೈಲ್, ಮಂಗಳೂರು ಇವರ ವತಿಯಿಂದ ಆಯೋಜಿಸಲಾಗಿರುವ 48 ದಿನಗಳ ಸಂಧ್ಯಾ ಭಜನಾ ಸೇವೆಯ ಅಂಗವಾಗಿ, ದಿನಾಂಕ 15-08-2026ರಂದು ಸಂಜೆ 6.30ರಿಂದ 8.00 ಗಂಟೆಯವರೆಗೆ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಭಜನಾ ಸೇವೆ ನಡೆಯಿತು. ಮಹಿಳಾ ಘಟಕದ ಸದಸ್ಯೆಯರು ಭಕ್ತಿಭಾವದಿಂದ ವಿವಿಧ ಭಜನೆಗಳನ್ನು ಹಾಡಿ, ಶ್ರೀ ದೇವಿಯ ಸನ್ನಿಧಿಯಲ್ಲಿ ಭಜನಾ ಸೇವೆಯನ್ನು ಸಲ್ಲಿಸಿದರು. ಭಜನೆಯ ಬಳಿಕ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಯಿಂದ ಪೂಜೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಘಟಕದ […]

Read More

ಸ್ನೇಹ, ಆತ್ಮೀಯತೆ ಹಾಗೂ ಒಗ್ಗಟ್ಟಿನ ಸಂಭ್ರಮಕ್ಕೆ ಸಾಕ್ಷಿಯಾದ ‘ಸ್ನೇಹ ಮಿಲನ’

ಮಂಗಳೂರು, ಆಗಸ್ಟ್ 08: ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಆಯೋಜಿಸಲಾದ ‘ಸ್ನೇಹ ಮಿಲನ’ ಕಾರ್ಯಕ್ರಮವು ಉರ್ವಸ್ಟೋರ್‌ನ ಯುವವಾಹಿನಿ ಸಭಾಂಗಣದಲ್ಲಿ ಸಂಭ್ರಮ ಹಾಗೂ ಆತ್ಮೀಯತೆಯಿಂದ ನಡೆಯಿತು. ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್ ಅವರು ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ, ಗುರುಸ್ತುತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷೆಯರು ಯುವವಾಹಿನಿ ಹಾಗೂ ಮಂಗಳೂರು ಮಹಿಳಾ ಘಟಕದೊಂದಿಗಿನ ತಮ್ಮ ಒಡನಾಟ ಮತ್ತು ಅನುಭವಗಳನ್ನು ಹಂಚಿಕೊಂಡರು. ಘಟಕದ ಬೆಳವಣಿಗೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!