Yuvavahini

ಉಡುಪಿ

ಉಡುಪಿಯಲ್ಲಿ ಹೊಸ ಇತಿಹಾಸ ಬರೆದ ಯುವವಾಹಿನಿ ; ಅಭೂತಪೂರ್ವ ಯಶಸ್ಸು ಕಂಡ 29 ನೇ ವಾರ್ಷಿಕ ಸಮಾವೇಶ

ಸೂರ್ಯ ನಸುನಗುತ್ತಾ ಮೂಡಿ ತುಸು ಹೊತ್ತು ಕಳೆದಿತ್ತಷ್ಟೇ, ಪೂರ್ವ ದಿಗಂತದಲ್ಲಿ ಕೆಂಬಣ್ಣ ಇನ್ನೂ ಮಾಸಿರಲಿಲ್ಲ, ಕರಗಿದ ಮೋಡ ಇಬ್ಬನಿಯಾಗಿ ಹಸಿರೆಲೆಯ ಮೇಲೆ ಇನ್ನೂ ಜಿನುಗುತ್ತಲೇ ಇತ್ತು. ಹಾಡು ಹಕ್ಕಿಗಳ ಕೂಗು ಕೇಳುತ್ತಲೇ ಇನ್ನೂ ನಿಂತಿರಲಿಲ್ಲ. ಆದರೆ ಉಡುಪಿಯ ಪುರಭವನ ಅಷ್ಟರಲ್ಲಿಯೇ ತುಂಬಿ ತುಳುಕುತ್ತಿದ್ದವು. ಬೆಳ್ತಂಗಡಿ, ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳ ಮತ್ತು ಮಂಗಳೂರು ಹೀಗೆ ದೂರದೂರಿನಿಂದ ಬಂದಿದ್ದ ಯುವವಾಹಿನಿಯ ಬಂಧುಗಳು ಅದಾಗಲೇ ಪುರಭವನಕ್ಕೆ ರಂಗು ತಂದಿದ್ದರು. ಯುವವಾಹಿನಿಯ 29 ವರುಷಗಳ ಭವ್ಯ ಇತಿಹಾಸದಲ್ಲಿ ಇದೇ ಮೊದಲಬಾರಿಗೆ ನಿಗದಿತ ಸಮಯದಲ್ಲಿ ಸದಸ್ಯರು […]

Read More

ಶ್ರೀಮತಿ ಎಂ. ಜಾನಕಿ ಬ್ರಹ್ಮಾವರರವರಿಗೆ 2016 ರ ಸಾಲಿನ ವಿಶುಕುಮಾರ್ ಪ್ರಶಸ್ತಿ

ಕನ್ನಡ ಸಾಹಿತ್ಯ ಲೋಕದಲ್ಲಿ ಶ್ರೇಷ್ಠ ಕತೆಗಾರ, ಕಾದಂಬರಿಕಾರರಾಗಿ, ನಟರಾಗಿ, ನಾಟಕಕಾರರಾಗಿ, ಬರಹಗಾರರಾಗಿ, ಕನ್ನಡ, ತುಳು ಚಲನಚಿತ್ರಗಳ ನಿರ್ದೇಶಕರಾಗಿ, ರಾಜಕಾರಣಿಯಾಗಿ ಹೆಸರು ಮಾಡಿ ತಮ್ಮ ಅಲ್ಪ ಆಯುಷ್ಯದಲ್ಲಿಯೇ ಸಂದುಹೋದ ನಮ್ಮ ನಾಡಿನ ನಡೆ ನುಡಿಯ ಧೀಮಂತ ಸಾಹಿತಿ ದಿ| ವಿಶುಕುಮಾರ್‌ರವರ ಸ್ಮರಣಾರ್ಥ ಯುವವಾಹಿನಿಯ ವಿಶುಕುಮಾರ್ ದತ್ತಿನಿಧಿ ಸಂಚಾಲನಾ ಸಮಿತಿಯು ಕಳೆದ 14 ವರ್ಷಗಳಿಂದ ಸಾಹಿತ್ಯದ ವಿವಿಧ ಕ್ಷೇತ್ರಗಳಲ್ಲಿ ದುಡಿದ, ಗಣನೀಯ ಸಾಧನೆ ಮಾಡಿದ ಮಹನೀಯರನ್ನು ಗುರುತಿಸಿ ವಿಶುಕುಮಾರ್ ಪ್ರಶಸ್ತಿ ನೀಡುತ್ತಾ ಬಂದಿರುತ್ತದೆ. 2016ರ ಸಾಲಿನ ವಿಶುಕುಮಾರ್ ಪ್ರಶಸ್ತಿಯು ದ್ವಿಭಾಷಾ ಕವಿ, […]

Read More

ರಮ್ಯಾ ಸುಜೀರ್ ಇವರಿಗೆ ಯುವವಾಹಿನಿ ಯುವ ಸಾಹಿತ್ಯ ಪುರಸ್ಕಾರ – 2016

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಸುಜೀರು ದೈಯಡ್ಕ ಮನೆ, ತಿಮ್ಮಪ್ಪ ಪೂಜಾರಿ ಹಾಗೂ ಶ್ರೀಮತಿ ಪುಷ್ಪಾರವರ ಸುಪುತ್ರಿಯಾದ ರಮ್ಯ ಸುಜೀರ್‌ರವರು ತನ್ನ ವಿದ್ಯಾಭ್ಯಾಸದ ಜೊತೆಯಲ್ಲಿಯೇ ಸಾಹಿತ್ಯದ ಬಗ್ಗೆ ಆಸಕ್ತಿ ಹೊಂದಿದವರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರುತ್ತಾರೆ. ತುಳು ಅಧ್ಯಯನ ವನ್ನು ಐಚ್ಛಿಕ ವಿಷಯವಾಗಿ ತೆಗೆದುಕೊಂಡಿದ್ದಾರೆ. ಸಂತ ಅಲೋಶಿಯಸ್ ಕಾಲೇಜಿನಲ್ಲಿ ಬಿ.ಎ. ಬಿ.ಎಡ್. ಪದವಿಯನ್ನು ಪಡೆದಿರುತ್ತಾರೆ. ಸೈಂಟ್ ಜೋನ್ಸ್ ಪದವಿ ಪೂರ್ವ ಕಾಲೇಜು ಗಂಡಸಿ ಹಾಸನ ಇಲ್ಲಿ 1 ವರ್ಷ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಸೈಂಟ್ ಆನ್ಸ್ ಆಂಗ್ಲಮಾಧ್ಯಮ ಪ್ರೌಢಶಾಲೆ […]

Read More

ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ – 2016

ಮಾನವ ಸಂಪನ್ಮೂಲ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕೂಡಾ ತನ್ನ ಆಸಕ್ತಿಯ ಕ್ಷೇತ್ರ ಛಾಯಾಗ್ರಹಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 4 ಚಿನ್ನದ ಪದಕ ಸಹಿತ 7 ಪ್ರಶಸ್ತಿಗಳನ್ನು ಗಳಿಸಿ ಸಾಧನೆಗೆ ಇದಿರಿಲ್ಲ ಎಂಬಂತಹ ವಿಶೇಷ ಸ್ಥಾನಮಾನ ಗಳಿಸಿದ ಖ್ಯಾತ ಸಾಮಾಜಿಕ ಧುರೀಣ ಶ್ರೀ ಹರಿಕೃಷ್ಣ ಬಂಟ್ವಾಳ್, ಶಶಿಕಲಾ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್‌ರವರನ್ನು ಯುವ ಸಾಧನಾ ಪುರಸ್ಕಾರಕ್ಕೆ ಆಯ್ಕೆ ಮಾಡಲು ಯುವವಾಹಿನಿ ಸಂಸ್ಥೆ ಅತ್ಯಂತ ಹೆಮ್ಮೆ ಪಡುತ್ತದೆ. ಓರ್ವ ಹವ್ಯಾಸಿ ವಿಶೇಷ ಛಾಯಾಗ್ರಹಣ ಕ್ಷೇತ್ರದಲ್ಲಿ […]

Read More

ಮನಿಷಾ ಬಿ. ಪೂಜಾರಿ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಬಿಲ್ಲವ ಸಮಾಜದ ಶೈಕ್ಷಣಿಕ ಪ್ರಗತಿಗೆ ಯುವವಾಹಿನಿಯು ಶ್ರಮಿಸುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿದ್ದ ಪ್ರತಿಭೆಯೊಂದು ಕಿರಿ ವಯಸ್ಸಿನಲ್ಲಿ ಹಿರಿಯರು ಮಾಡಲಾಗದ ಸಾಧನೆಗೈದಿದ್ದಾರೆ. ಸಮಾಜ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅವರು ಬೇರಾರೂ ಅಲ್ಲ. ಪಿ.ಬಾಲಕೃಷ್ಣ ಪೂಜಾರಿ-ಮಲ್ಲಿಕಾ ಬಿ. ಪೂಜಾರಿ ದಂಪತಿಗಳ ಸುಪುತ್ರಿ ಮನಿಷಾ ಬಿ. ಪೂಜಾರಿ. ಕಾಲೇಜು ವಿದ್ಯಾಭ್ಯಾಸ ಹಂತದಿಂದ ಕಲಿಕೆಯ ಮುಂಚೂಣಿಯಲ್ಲಿದ್ದು ಪಿ.ಯು.ಸಿ ಪರೀಕ್ಷೆಯಲ್ಲಿ ಕಾಲೇಜಿಗೆ ದ್ವಿತೀಯ ಶ್ರೇಷ್ಠರಾಗಿ ಸಾಧನೆಗೈದ ಇವರು ತನ್ನ ಕಲಿಕೆಯಾದ್ಯಂತ ಅತ್ಯುನ್ನತ ಶ್ರೇಣಿಯ ಗಳಿಕೆ ಸಾಧಿಸಿರುವುದು ಉಲ್ಲೇಖನೀಯ. ಬಿ.ಕಾಂ ಪದವಿಯಲ್ಲಿ MGM College ಉಡುಪಿಯ […]

Read More

ರಕ್ಷಿತ್ ಆರ್. ಕೋಟ್ಯಾನ್ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಕಟಪಾಡಿ ಶ್ರೀ ರಮೇಶ್ ಕೋಟ್ಯಾನ್ ಹಾಗೂ ಇಂದಿರಾ ಆರ್. ಕೋಟ್ಯಾನ್ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ರಕ್ಷಿತ್ ಆರ್. ಕೋಟ್ಯಾನ್ ಓರ್ವ ಸತತ ಪರಿಶ್ರಮದ ಮೂಲಕ ದೇಹದಾರ್ಡ್ಯತೆಯ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಯುವಕ. ಶಿರ್ವದ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿ ಪ್ರಸ್ತುತ ಜಿಲ್ಲೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜು, ಮೂಡಬಿದ್ರಿಯಲ್ಲಿ ತಮ್ಮ ಪದವಿ ಶಿಕ್ಷಣವನ್ನು ಮುಂದುವರಿಸುತ್ತಿರುವ ರಕ್ಷಿತ್ ಶಿಕ್ಷಣದೊಂದಿಗೆ ಕ್ರೀಡಾ ಸಾಧನೆಯ ಮೇರು ಶಿಖರದತ್ತ ಧಾವಿಸುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರ. […]

Read More

ಅಕ್ಷತಾ ಇವರಿಗೆ ಯುವವಾಹಿನಿ ಯುವ ಸಾಧನಾ ಪುರಸ್ಕಾರ – 2016

ಪ್ರತಿಭೆಗೆ ಸರಹದ್ದುಗಳಿಲ್ಲ-ಕಾರ್ಯಕ್ಷೇತ್ರಗಳೆಂಬ ಇತಿಮಿತಿ ಇರುವುದಿಲ್ಲ ಎಂಬ ಮಾತಿಗೆ ಸ್ಪಷ್ಟ ನಿದರ್ಶನ-ಬಜಪೆಯ ಶ್ರೀ ಪಿ.ಮೋಹನ್ ಕುಮಾರ್ ಹಾಗೂ ಕನಕಾ ಎಂ ದಂಪತಿಗಳ ಸುಪುತ್ರಿ ಕು| ಅಕ್ಷತಾ. ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ವಾಣಿಜ್ಯ ಕ್ಷೇತ್ರದತ್ತ ಮುಖ ಮಾಡಿದ ಈಕೆ ಬಿ.ಕಾಂ ಪದವಿಯನ್ನು ಮುಗಿಸಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ (ಮಾನವ ಸಂಪನ್ಮೂಲ) ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಕಲೆಯಲ್ಲಿ ದಿ| ವಿ.ಪಿ.ಕಾರಂತ, ಶ್ರೀ ಪಿ. ಮೋಹನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ವೈವಿಧ್ಯಮಯ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಕರ್ನಾಟಕ ಸಂಗೀತದತ್ತ ಒಲವು […]

Read More

ಸ್ವಪ್ರಯತ್ನವೇ ಜೀವಾಳ – ಶಶಾಂತ್ ಬಿ.

ಬಂಟ್ವಾಳ ಕಸ್ಬಾ ಗ್ರಾಮದ ಭೋಜ ಪೂಜಾರಿ ಮತ್ತು ವನಿತಾ ದಂಪತಿಗಳ ಸುಪುತ್ರ ಶಶಾಂತ್ ಬಿ. ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ. ಗಣಿತ ಮತ್ತು ಸಂಸ್ಕೃತದಲ್ಲಿ 100 ಅಂಕಗಳನ್ನು ಪಡೆದು 625 ಕ್ಕೆ 614 (98.24%) ಅಂಕ ಗಳಿಸಿರುವುದು ಶ್ಲಾಘನೀಯ. ಬಿಡುವಿನ ವೇಳೆಯಲ್ಲಿ ತಾನೇ ದುಡಿದು ಶಾಲಾ ಶುಲ್ಕವನ್ನು ಭರಿಸಿ ಹೆತ್ತವರಿಗೆ ಹೊರೆಯಾಗದೆ ಎಲ್ಲರ ಪ್ರೀತಿ ಸಂಪಾದಿಸಿದ್ದಾರೆ. ತಾನೇ ನಾಟಕ ರಚಿಸಿ, ಅಭಿನಯಿಸಿದ ಉತ್ತಮ ರಂಗ ಕಲಾವಿದ. ಶಾಲಾ ದಿನಗಳಲ್ಲೇ ನಾಯಕತ್ವ ಗುಣ […]

Read More

ಕಲಿಕೆಯಲ್ಲಿ ನಿಧಿಯೇ ಸರಿ – ಕು| ನಿಧಿಶ್ರೀ ಯು. ಪೂಜಾರಿ

ಶ್ರೀಮತಿ ಭಾರತಿ ಹಾಗೂ ಶ್ರೀ ಉಮಾನಾಥ ದಂಪತಿಗಳಿಗೆ ಉತ್ತಮ ಹೆಮ್ಮೆ ಪಡತಕ್ಕೆ ಸಾಧನೆಯ ಕುವರಿ ನಿಧಿಶ್ರೀಯ ಬಗ್ಗೆ ಮತ್ತು ಅವಳ ಸಾಧನೆಯ ಬಗ್ಗೆ ಅರಿವಿರಲಿಕ್ಕಿಲ್ಲ ತಮ್ಮ ಜೀವನದ ಹಾದಿಯಲ್ಲಿ ತಮ್ಮ ಮಗಳು ಒಂದುದಿನ ಸ್ವಪ್ರತಿಭೆಯಿಂದ ಜನ ಮನ್ನಣೆಯನ್ನು ಗಳಿಸಿ ಕೊಡಲಿದ್ದಾಳೆ ಎಂಬ ಅರಿವಿರಲಿಕ್ಕಿಲ್ಲ. ಕಾರಣ ಅವರಿದ್ದದ್ದು 62 ತೋಕೂರು ಜೋಕಟ್ಟೆ ಎಂಬ ಸಣ್ಣ ಊರಿನಲ್ಲಿ. ಸಾಮಾನ್ಯವಾಗಿ ಅತ್ಯಂತ ಗ್ರಾಮೀಣ ಪ್ರದೇಶದಲ್ಲಿ ಬೆಳೆದವರಿಗೆ ಬದುಕಿನ ಸೂಕ್ಷತೆಗಳ ಅರಿವಿರುತ್ತದೆ. ಜೀವನದ ಕಷ್ಟ ಕಾರ್ಪಣ್ಯಗಳ ಸರಿಯಾದ ದೃಷ್ಟಿಕೋನ ಇರುತ್ತದೆ ಇವರ ಬಾಳಿನಲ್ಲೂ ನಡೆದದ್ದು […]

Read More

ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ

ಯುವವಾಹಿನಿ (ರಿ) ಉಡುಪಿ ಘಟಕದ ಇದರ ನೇತೃತ್ವದಲ್ಲಿ ವಿದ್ಯಾನಿಧಿ ವಿತರಣಾ ಕಾರ್ಯಕ್ರಮವನ್ನು ತಾ. 17-7-2016 ರಂದು ಶ್ರೀ ಜಗನ್ನಾಥ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ರಾಜೇಂದ್ರ ಕುಮಾರ್ ಉಪಾಧ್ಯಕ್ಷರು ತಾಲೂಕು ಪಂಚಾಯತ್ ಉಡುಪಿ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದರು. ಯುವವಾಹಿನಿ(ರಿ) ಮಂಗಳೂರು ಕೇಂದ್ರ ಸಮಿತಿಯ ಅಧ್ಯಕ್ಷರಾದ ಸಂತೋಷ್ ಕುಮಾರ್, ಯುವ ಉದ್ಯಮಿಗಳಾದ ಜಗನ್ನಾಥ ಪೂಜಾರಿ ಮತ್ತು ಲ|ಶಾಲಿನಿ ಡಿ.ಬಂಗೇರ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸುಮಾರು 19 ಮಕ್ಕಳಿಗೆ ರೂ. 65000 ದಷ್ಟು ವಿದ್ಯಾನಿಧಿಯನ್ನು ವಿತರಿಸಲಾಯಿತು. ವಿದ್ಯಾನಿಧಿ ಸಂಚಾಲಕರಾದ ರಘುನಾಥ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!