
ಗುರು ಸನ್ಮತಿ : ತಿಳುವಳಿಕೆಯ ತಿರುಳು
19-01-2026, 8:53 AM


08-01-2026, 9:00 PM
ಉಡುಪಿ: ವಿವಿಧ ರೂಪದ ಸಾಮಾಜಿಕ ಕಟ್ಟುಪಾಡುಗಳ ಕಾರಣದಿಂದ ಗಂಭೀರ ಶೋಷಣೆಗೆ ಗುರಿಯಾಗಿದ್ದ ಸಮಾಜಕ್ಕೆ ಬೆಳಕು ತೋರಿದ ಮಹಾನ್ ಚಿಂತಕ ನಾರಾಯಣ ಗುರು ಆಗಿದ್ದಾರೆ. ಸಮಾನ ಮನಸ್ಕ ಅನುಯಾಯಿಗಳ ಮೂಲಕ ತ್ಯಾಗ ಹಾಗೂ ಸೇವೆಯ ಮೌನ ಕ್ರಾಂತಿಯನ್ನು ಸಂಘಟಿಸಿದ ಗುರುಗಳಲ್ಲಿ ಬದ್ದತೆಯ ಅನನ್ಯ ಆದರ್ಶಗಳು ಅಡಗಿವೆ ಎಂದು ರಂಗನಿರ್ದೇಶಕ ವಿದ್ದು ಉಚ್ಚಿಲ್ ತಿಳಿಸಿದರು. ಪ್ರಸ್ತುತ ಶ್ರೇಣೀಕೃತ ಸಾಮಾಜಿಕ ವ್ಯವಸ್ಥೆಯಡಿ ಸಾಮಾನ್ಯರ ಬದುಕನ್ನು ದುಸ್ತರಗೊಳಿಸುತ್ತಿರುವ ಎಲ್ಲಾ ತರದ ಸಾಮಾಜಿಕ ಬಂಧನಗಳಿಂದ ಬಿಡುಗಡೆಯು ಗುರುತತ್ವಗಳ ಪಾಲನೆಯಿಂದ ಮಾತ್ರ ಸಾಧ್ಯವಿದೆ ಎಂದು ಅವರು […]

19-10-2025, 11:00 AM
ಬ್ರಹ್ಮಾವರ: ಯುವವಾಹಿನಿ (ರಿ.) ಉಡುಪಿ ಘಟಕದ ಮಹತ್ವಾಕಾಂಕ್ಷೆಯ ‘ತಲೆಗೊಂದು ಸೂರು’ ಯೋಜನೆಯಡಿ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದ ಅಂಜಾಲು ನಿವಾಸಿ ಸುಮಿತ್ರಾ ಪೂಜಾರಿ ಅವರಿಗೆ 19.10.2025ರಂದು ನೂತನವಾಗಿ ನಿರ್ಮಿಸಿದ ಮನೆ ‘ಶ್ರೀ ಗುರು ನಿಲಯ’ವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರವನ್ನು ನೀಡಿ, ಮನೆ ಹಸ್ತಾಂತರ ಕಾರ್ಯಕ್ರಮವನ್ನು ಗೌರವಪೂರ್ಣವಾಗಿ ನೆರವೇರಿಸಲಾಯಿತು. ಸಮಾಜಸೇವೆಯ ಪರಂಪರೆಯನ್ನು ಮುಂದುವರಿಸುತ್ತಿರುವ ಯುವವಾಹಿನಿ ಉಡುಪಿ ಘಟಕವು ಇದುವರೆಗೆ ಒಟ್ಟು 7 ಮನೆಗಳನ್ನು ನಿರ್ಮಿಸಿ, 3 ಮನೆಗಳನ್ನು ಸಂಪೂರ್ಣ ದುರಸ್ತಿ ಮಾಡಿ ಫಲಾನುಭವಿಗಳಿಗೆ ಹಸ್ತಾಂತರಿಸಿರುವುದು […]

29-11-2024, 2:58 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ಪದಗ್ರಹಣ ಸಮಾರಂಭವು 24-11-2024 ರಂದು ಘಟಕದ ಸಭಾಂಗಣದಲ್ಲಿ ನೆರವೇರಿತು. ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳ ಪಟ್ಟಿಯನ್ನು ಚುನಾವಣಾಧಿಕಾರಿ ಆದ ಶ್ರೀ ಮಹಾಬಲ ಅಮೀನ್ವಾಚಿಸಿದರು. ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್ ಕೆ ಪೂಜಾರಿಯವರು ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದಯಾನಂದ ಕರ್ಕೇರಾ ಹಾಗೂತಂಡದವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ಹೆಚ್ ಹೊಳೆಯಪ್ಪ. ವಾಣಿಜ್ಯ ತೆರಿಗೆಗಳ ಉಪ ಆಯುಕ್ತರು, ಉಡುಪಿ, ಇವರು ಶುಭ ಹಾರೈಸಿದರು. ಬಿಲ್ಲವ ಸೇವಾ […]

23-11-2024, 5:44 AM
ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕದ ಅತ್ಯಂತ ಪ್ರಶಂಸನೀಯ ಯೋಜನೆಗಳಲ್ಲಿ ಒಂದಾದ ತಲೆಗೊಂದು ಸೂರು ಯೋಜನೆಯಡಿ ನಿರ್ಮಾಣಗೊಂಡ ಅಂದಾಜು ಹತ್ತು ಲಕ್ಷ ವೆಚ್ಚದ ಮನೆಯನ್ನು ದಿನಾಂಕ 23-11-2024 ರಂದು ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್.ಕೆ.ಪೂಜಾರಿಯವರ ಗೌರವ ಉಪಸ್ಥಿತಿಯಲ್ಲಿ ಫಲಾಕಾಂಕ್ಷಿಗೆ ಹಸ್ತಾಂತರಿಸಲಾಯಿತು. ಉದ್ಯಾವರ ಸಂಪಿಗೆ ನಗರದ ನಿವಾಸಿ, ಇಬ್ಬರು ಹೆಣ್ಣು ಮಕ್ಕಳ ತಾಯಿ ಶ್ರೀಮತಿ ಲತಾ ಸುರೇಶ್ ಈ ಬಾರಿಯ ಫಲಾಕಾಂಕ್ಷಿ. ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಶ್ರೀ ಪ್ರವೀಣ್.ಎಂ.ಪೂಜಾರಿಯವರು ಗಣ್ಯಾತಿ ಗಣ್ಯರ, ದಾನಿಗಳ, ಯುವವಾಹಿನಿ ಕೇಂದ್ರ […]

28-10-2024, 5:24 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿಜಿಲೆನ್ಸ್ ಜಾಗೃತಿ ದಿನದ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಉಡುಪಿ ಟೆಂಪಲ್ ಸಿಟಿ ಲಿಜನ್ ಇವರ ಜಂಟಿ ಆಶ್ರಯದಲ್ಲಿ ದಿನಾಂಕ 28-10-2024 ರಂದು ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಸ.ಪ.ಪೂ. ಕಾಲೇಜು ಉದ್ಯಾವರದಲ್ಲಿ ಸೈಬರ್ ಕ್ರೈಂ ಮತ್ತು ಲೋಕಾಯುಕ್ತ ಕಾಯಿದೆ ಮಾಹಿತಿ ಕಾರ್ಯಾಗಾರವು ನಡೆಯಿತು. ಪ್ರೌಢ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಮೂಕಾಂಬಿಕಾ ಎಲ್ಲರನ್ನೂ ಸ್ವಾಗತಿಸಿದರು. ಘಟಕದ ಅಧ್ಯಕ್ಷೆ ಶ್ರೀಮತಿ ಅಮಿತಾಂಜಲಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವವಾಹಿನಿ (ರಿ) […]

20-10-2024, 10:10 AM
ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕವು ಸ್ಥಳೀಯ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ದಿನಾಂಕ 20-10-2024 ರಂದು ಆದಿತ್ಯವಾರ ಒಂದು ದಿನದ ಉಚಿತ ಆರೋಗ್ಯ ತಪಾಸಣಾ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಬೈಲೂರು ಶ್ರೀ ವಾಸುದೇವ ಕೃಪಾ ವಿದ್ಯಾ ಮಂದಿರ ಶಾಲೆಯಲ್ಲಿ ಆಯೋಜಿಸಿತ್ತು. ಉಡುಪಿಯ ಖ್ಯಾತ ವಕೀಲರಾದ ಮಟ್ಟಾರ್ ರತ್ನಾಕರ್ ಹೆಗ್ಡೆಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಲೂರು ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಾರಾಯಣ […]

29-09-2024, 5:08 PM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ವಿದ್ಯಾನಿಧಿ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಸಭಾಂಗಣದಲ್ಲಿ ಘಟಕದ ಅಧ್ಯಕ್ಷರು ಶ್ರೀಮತಿ ಅಮಿತಾಂಜಲಿ ಕಿರಣ್ ರವರ ಅಧ್ಯಕ್ಷತೆಯಲ್ಲಿ ದಿನಾಂಕ 29-09-2024 ರಂದು ಜರಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ಭುವನೇಂದ್ರ ಕಾಲೇಜಿನ ಉಪನ್ಯಾಸಕರು ಶ್ರೀಮತಿ ಸುಲೋಚನಾ ಪಚ್ಚಿನಡ್ಕ ಇವರು ಮಾತನಾಡಿ ವಿದ್ಯಾರ್ಥಿಗಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಮುಂದಿನ ದಿನಗಳಲ್ಲಿ ಸಂಘಟನೆಗಳೊಂದಿಗೆ ಬೆರೆತು ಸಮಾಜಮುಖಿ ಕೆಲಸ ಮಾಡುವಂತೆ ಸಲಹೆ ನೀಡಿದರು. ಹನ್ನೊಂದು […]

15-09-2024, 6:26 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯ 15-09-2024 ರಂದು ಉಡುಪಿಯಲ್ಲಿ ಜರುಗಿತು. ಮುಖ್ಯ ಅತಿಥಿ ಶಿಕ್ಷಣ ತಜ್ಞ ರವೀಂದ್ರ ಪೂಜಾರಿ ಅಡ್ವೆಯವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಹಾಗೂ ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಘಟಕದ ಉಪಾಧ್ಯಕ್ಷರು ದಯಾನಂದ ಉಗ್ಗೆಲ್ಬೆಟ್ಟು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನು ಹಾರ್ದಿಕವಾಗಿ ಸ್ವಾಗತಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಡ್ವೆ ರವೀಂದ್ರ ಪೂಜಾರಿಯವರು “ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳನ್ನು ಗುರುತಿಸಿ ಪಾಠ ಬೋಧನೆಯ ಜೊತೆಗೆ ಜೀವನ ಸಂಗತಿಗಳನ್ನು […]

04-08-2024, 6:31 AM
ಉಡುಪಿ : ಯುವವಾಹಿನಿ (ರಿ) ಉಡುಪಿ ಘಟಕದ ವತಿಯಿಂದ ಘಟಕದ ಸಭಾಂಗಣದಲ್ಲಿ ಗುರು ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಘಟಕದ ಸದಸ್ಯರೂ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಸಂತ ಸಿಸಿಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯಾದ ವಾಸಂತಿ ಅಂಬಲಪಾಡಿಯವರು ಗುರುಪೂರ್ಣಿಮೆಯ ಬಗ್ಗೆ ಬಹಳಷ್ಟು ಮಾಹಿತಿಯನ್ನು ನೀಡಿದರು. ಶಿಕ್ಷಣ ಕ್ಷೇತ್ರದಲ್ಲಿ 41 ವರ್ಷಗಳ ಸುದೀರ್ಘ ಕಾಲ ಸೇವೆಯನ್ನು ಸಲ್ಲಿಸಿ ನಿವೃತ್ತಿ ಹೊಂದಿದ ಘಟಕದ ಹಿರಿಯ ಸದಸ್ಯೆ ಶಿಕ್ಷಕಿ ಹೇಮಲತಾ ಕೃಷ್ಣ ಇವರ ಬಗ್ಗೆ ಮಾಜಿ ಅಧ್ಯಕ್ಷರಾದ ಪ್ರವೀಣ್ ಬೈಲೂರು ಇವರು ಮಾತನಾಡಿದ […]