01-11-2017, 7:08 AM
ಮಕ್ಕಳಲ್ಲಿ ಕಲಿಕೆಯ ಜೊತೆಗೆ ಆವರಲ್ಲಿನ ಆಂತರಿಕ ಪ್ರತಿಭೆಗಳು ಅನಾವರಣಗೊಂಡಾಗ ಅವರು ಸಹ ಭವಿಷ್ಯದಲ್ಲಿ ಕಲಾವಿದರಾಗಿ ಅಥವ ಅಸಾಧಾರಣ ಪ್ರತಿಭೆಗಳಾಗಿ ಬೆಳಗಲು ಸಾಧ್ಯವಿದೆ. ಮಕ್ಕಳಲ್ಲಿ ಎಂದಿಗೂ ಅನಾಥ ಪ್ರಜ್ಞೆಯನ್ನು ಮೂಡಿಸಬೇಡಿ, ಅವರನ್ನು ಸಮಾಜದ ಆಸ್ತಿಯನ್ನಾಗಿ ಅವರನ್ನು ರೂಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಿ, ಮೂಲ್ಕಿ ಯುವವಾಹಿನಿ ಘಟಕದ ಪ್ರತಿಯೊಂದು ಕಾರ್ಯಕ್ರಮವೂ ಸಹ ಮಾದರಿ ಕಾರ್ಯಕ್ರಮವಾಗಿರುತ್ತದೆ ಎಂದು ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದಿಂದ ಮೂಲ್ಕಿ ಸಿಎಸ್ಐ ಬಾಲಿಕಾಶ್ರಮದಲ್ಲಿ ದಿನಾಂಕ 01.11.2017 ರಂದು […]
Read More
18-10-2017, 5:13 PM
ಪರಿಶುದ್ಧ ಮನಸ್ಸಿನೊಂದಿಗೆ ಸತ್ಕಾರ್ಯಗಳಿಗೆ ವಿನಿಯೋಗಿಸುವಾಗ ಮಾನವ ಜನ್ಮ ಸಾರ್ಥಕವಾಗುತ್ತದೆ. ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸ, ಶಾಂತಿಯನ್ನು ಬಲಪಡಿಸುವಲ್ಲಿ ಆರಾಧನಾ ಕೇಂದ್ರಗಳು ದಾರಿದೀಪವಾಗಬೇಕು ಹಾಗೂ ಮಾನವ ಬದುಕಿನ ವಿಕಸನಕ್ಕೆ ಸಂಸ್ಕಾರ ,ಸಂಸ್ಕೃತಿಯ ಮಾರ್ಗದರ್ಶನ ನೀಡುವ ಕೇಂದ್ರಗಳಾಗಬೇಕು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಬಿ.ಎ.ಮಹಮ್ಮದ್ ಹನೀಫ್ ತಿಳಿಸಿದರು. ಅವರು ದಿನಾಂಕ 18.10.2017 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ತುಳುವೆರೆ ತುಡಾರ ಪರ್ಬ ಸಮಾರಂಭದ ಮುಖ್ಯ […]
Read More
30-09-2017, 3:15 AM
ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]
Read More
21-09-2017, 1:01 PM
ಯುವವಾಹಿನಿ (ರಿ) ಮುಲ್ಕಿ ಘಟಕದ ಸದಸ್ಯರು ದಿನಾಂಕ 21.09.2017ರಂದು ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಥಮ ದಿನ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ ಯೋಗೀಶ್ ಕೋಟ್ಯಾನ್, ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ,ನಿಕಟ ಪೂರ್ವ ಅಧ್ಯಕ್ಷರಾದ ಚೇತನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು
Read More
05-09-2017, 10:51 AM
ದೇಶದ ಸುಭದ್ರ ಭವಿಷ್ಯ ಮತ್ತು ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ ಎಂದು ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಗೋಪಿನಾಥ್ ಪಡಂಗ ತಿಳಿಸಿದರು ಅವರು ದಿನಾಂಕ 05.09.2017ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ ಶ್ರೀ ನಾರಾಯಣಗುರು ಪದವಿಪೂರ್ವ ಕಾಲೇಜಿನ ಸಹಯೋಗದೊಂದಿಗೆ ಮುಲ್ಕಿ ರುಕ್ಕುರಾಮ್ ಸಭಾಗೃಹದಲ್ಲಿ ಜರುಗಿದ ಶಿಕ್ಷಕರ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಹಿರಿಯ ಶಿಕ್ಷಕರಾದ ಗಂಗಾಧರ್ ಪೂಜಾರಿ ಹಾಗೂ ವೀಣಾ ಸಿ.ಶೆಟ್ಟಿಗಾರ್ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ […]
Read More
15-08-2017, 1:35 PM
ಯುವವಾಹಿನಿ (ರಿ) ಮುಲ್ಕಿ ಘಟಕ ಇದರ ವತಿಯಿಂದ ಯೂನಿಯನ್ ಕ್ಲಬ್ ಮುಲ್ಕಿಯಲ್ಲಿ 71ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬಿಲ್ಲವ ಸಮಾಜ ಸೇವಾ ಸಂಘ (ರಿ) ಮುಲ್ಕಿ ಇದರ ಉಪಾಧ್ಯಕ್ಷರಾದ ಶ್ರೀ ರಮೇಶ್ ಅಮೀನ್ ಕೊಕ್ಕರ್ಕಲ್ ಧ್ವಜಾರೋಹಣ ನೆರವೇರಿಸಿದರು.ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್ ಕುಬೆವೂರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀ ಸತೀಶ್ ಕಿಲ್ಪಾಡಿ ಧನ್ಯವಾದ ನೀಡಿದರು. ತದನಂತರ ಸರಕಾರಿ ಹಿರಿಯ ಪ್ರಾರ್ಥಮಿಕ ಶಾಲೆ ಮುಲ್ಕಿಯಲ್ಲಿ, ಯುವವಾಹಿನಿ (ರಿ) ಮುಲ್ಕಿ ಘಟಕದ ಅಧ್ಯಕ್ಷರಾದ […]
Read More
23-07-2017, 12:29 PM
ತುಳುನಾಡಿನ ಜನರ ಎಲ್ಲ ಆಚರಣೆ ಮತ್ತು ಆಹಾರ ಪದ್ಧತಿಗಳು ಕೇವಲ ಒಂದು ಸಮುದಾಯಕ್ಕೆ ಮೀಸಲಾಗಿರುವ ವಿಷಯವಲ್ಲ. ಅದು ಸರ್ವಕಾಲಿಕ ಸತ್ಯವನ್ನು ಒಳಗೊಂಡ ಒಂದು ಪವಿತ್ರ ಸಂಸ್ಕøತಿ ಎಂದು ಮಂಗಳೂರು ಆಕಾಶವಾಣಿಯ ಹಿರಿಯ ಕಾರ್ಯಕ್ರಮ ನಿರ್ವಾಹಕರಾದ ಡಾ| ಸದಾನಂದ ಪೆರ್ಲ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಬಿಲ್ಲವ ಸಮಾಜ ಸೇವಾಸಂಘದಲ್ಲಿ ಜರಗಿದ 15ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆಟಿ ಕೆಟ್ಟ ದಿನಗಳ ಒಂದು ಮಾಸ ಎಂದು ಪ್ರತಿಬಿಂಬಿಸಲಾಗುತ್ತಿದೆ. ಆಟಿ ತಿಂಗಳು ಅತ್ಯಂತ ಶ್ರೇಷ್ಠ ತಿಂಗಳು […]
Read More
07-07-2017, 5:18 AM
ಯುವವಾಹಿನಿ (ರಿ) ಮೂಲ್ಕಿ ಘಟಕ ಆಶ್ರಯದಲ್ಲಿ ಮೂಲ್ಕಿ ವಿಜಯಾ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಹಾಗೂ ಈವಗ್ರೀನ್ ಇದರ ಜಂಟಿ ಸಹಯೋಗದಲ್ಲಿ ದಿನಾಂಕ 07-07-2017ರಂದು ಮೂಲ್ಕಿ ವಿಜಯ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಮರೋಳಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.. ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲ ಇದರ ಆಡಳಿತಾಧಿಕಾರಿಯಾದ ಡಾll ಹೆಚ್. ಶಾಂತರಾಮ್ ಕಾರ್ಯಕ್ರಮವನ್ನು ಉಧ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮೂಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾll […]
Read More
05-05-2017, 10:15 AM
ದಿನಾಂಕ 30.04.2017 ರಿಂದ 05.05.2017 ರವರಗೆ ಮೂಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಲೋಕಕಲ್ಯಾಣರ್ಥವಾಗಿ ಜರುಗಿದ ಶ್ರೀ ಶತಚಂಡಿಕಾದ್ವರದಲ್ಲಿ ಹೊರೆ ಕಾಣಿಕೆಯನ್ನು ಮೂಲ್ಕಿ ಯುವವಾಹಿನಿ ವತಿಯಿಂದ ಸಮರ್ಪಿಸಲಾಯಿತು. ಹಾಗೂ ಆರು ದಿನಗಳ ಕಾಲ ಜರುಗಿದ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ವಿಯಾಗಲು ಯುವವಾಹಿನಿ ಸದಸ್ಯರು ಸಹಕಾರ ನೀಡಿದರು ಮೂಲ್ಕಿ ಯುವವಾಹಿನಿ ಅದ್ಯಕ್ಷ ಚೇತನ್ ಕುಮಾರ್, ಪದಾದಿಕಾರಿಗಳು,ಮಾಜಿ ಅಧ್ಯಕ್ಷರುಗಳು ಸದಸ್ಯರು ಉಪಸ್ಥಿತರಿದ್ದರು
Read More