
10-10-2026, 9:00 PM
ಬಜಪೆ, ಅ. 10: ಪರಮಪೂಜ್ಯ ದೈವೈಕ್ಯ ಶ್ರೀ ಶ್ರೀ ಶ್ರೀ ನಿರಂಜನ ಸ್ವಾಮೀಜಿಯವರ ಶುಭಾಶೀರ್ವಾದದೊಂದಿಗೆ ಶ್ರೀ ಕ್ಷೇತ್ರ ಸುಂಕದಕಟ್ಟೆ ಬಜಪೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಮಹೋತ್ಸವದ ಪೂರ್ವಸಿದ್ಧತಾ ಕಾರ್ಯಗಳಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ಸ್ವಯಂಪ್ರೇರಿತರಾಗಿ ಪಾಲ್ಗೊಂಡು ಸೇವೆ ಸಲ್ಲಿಸಿದರು. ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿರುವ ನವರಾತ್ರಿ ಮಹೋತ್ಸವದ ಅಂಗವಾಗಿ ಅಕ್ಟೋಬರ್ 10ರಂದು ದೇವಸ್ಥಾನದಲ್ಲಿ ವಿವಿಧ ಪೂರ್ವಸಿದ್ಧತಾ ಕಾರ್ಯಗಳನ್ನು ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಸದಸ್ಯರು ಲಡ್ಡು ಪ್ರಸಾದದ ಪ್ಯಾಕೆಟ್ಗಳನ್ನು ಸಿದ್ಧಪಡಿಸುವುದು, […]
Read More

04-10-2026, 7:00 PM
ಮೂಡುಬಿದಿರೆ ಅ 4 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ (ರಿ.) ಬಜಪೆ ಘಟಕವು ಗಮನಾರ್ಹ ಸಾಧನೆ ಮಾಡಿದ್ದು, ಪ್ರತಿಷ್ಠಿತ ‘ಅತ್ಯುತ್ತಮ ಶಿಸ್ತಿನ ಘಟಕ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಕ್ರೀಡೋತ್ಸವದಲ್ಲಿ ಬಜಪೆ ಘಟಕದ ಸದಸ್ಯರು ವಿವಿಧ ಗುಂಪು ಹಾಗೂ ವೈಯಕ್ತಿಕ ಕ್ರೀಡಾ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿ, ವೈಯಕ್ತಿಕ ವಿಭಾಗದ ಹಲವು ಸ್ಪರ್ಧೆಗಳಲ್ಲಿ ಬಹುಮಾನಗಳನ್ನು ಗಳಿಸುವ ಮೂಲಕ ಘಟಕದ ಕೀರ್ತಿಯನ್ನು ಹೆಚ್ಚಿಸಿದರು. ಕ್ರೀಡಾ ಪ್ರತಿಭೆಯೊಂದಿಗೆ ಶಿಸ್ತು, ಸಮಯಪಾಲನೆ, […]
Read More

26-09-2026, 11:00 AM
ಬಜಪೆ, ಸೆ. 26: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ವತಿಯಿಂದ ಯುವವಾಹಿನಿ (ರಿ.) ಬಜಪೆ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಇವರ ಸಹಯೋಗದಲ್ಲಿ ರಾಮಕೃಷ್ಣ ಮಿಷನ್, ಮಂಗಳೂರು ಪ್ರತಿನಿಧಿಗಳಿಂದ ವಿಶೇಷವಾಗಿ ಮಹಿಳೆಯರಿಗಾಗಿ “ಪರಿಸರ ಹಾನಿ ಕುರಿತು ಜಾಗೃತಿ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ರಂಜನ್ ಬೆಳ್ಳಿಪಾಡಿ ಮಾತನಾಡಿ, ದೈನಂದಿನ ಬದುಕಿನಲ್ಲಿ ಪರಿಸರ ಸ್ನೇಹಿ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಅಗತ್ಯವನ್ನು […]
Read More

14-09-2026, 7:00 PM
ಬಜಪೆ ಸೆ 14 : ವಿಜಯ ವಿಠ್ಠಲ ಭಜನಾ ಮಂದಿರ, ಬಜಪೆಯಲ್ಲಿ ಸೆಪ್ಟೆಂಬರ್ 14ರಿಂದ 16ರವರೆಗೆ 58ನೇ ಸಾರ್ವಜನಿಕ ಗಣೇಶೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಗಣೇಶ ಚತುರ್ಥಿಯ ದಿನವಾದ ಸೆಪ್ಟೆಂಬರ್ 14ರಂದು ಮಂದಿರದಲ್ಲಿ ಕಣಿಶೋತ್ಸವ, ಶ್ರೀ ವಿಜಯ ಗಣಪತಿ ಪ್ರತಿಷ್ಠೆ, ಗಣಹೋಮ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿದವು. ಮಧ್ಯಾಹ್ನದ ಬಳಿಕ ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭರತನಾಟ್ಯ, ಸಂಗೀತ ಕಾರ್ಯಕ್ರಮ, ಯಕ್ಷಗಾನ ಹಾಗೂ ಭಜನಾ ಸಂಕೀರ್ತನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಭಕ್ತರ ಗಮನ ಸೆಳೆದವು. […]
Read More

12-09-2026, 2:00 PM
ಬಜಪೆ ಸೆ 12 : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸೆ. 12ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆಯಲ್ಲಿ ಆಚರಿಸಲಾಯಿತು. ಬೋಧನಾ ವೃತ್ತಿ ಅತ್ಯಂತ ಶ್ರೇಷ್ಠ ವೃತ್ತಿಗಳಲ್ಲಿ ಒಂದೆಂದು ಪರಿಗಣಿಸಿರುವ ನಮ್ಮ ದೇಶದಲ್ಲಿ, ಶಿಕ್ಷಕರು ಕೇವಲ ಅಕ್ಷರ ಜ್ಞಾನವನ್ನು ನೀಡುವವರಲ್ಲ; ವಿದ್ಯಾರ್ಥಿಗಳ ಬದುಕಿನಲ್ಲಿ ಅಜ್ಞಾನದ ಕತ್ತಲೆಯನ್ನು ದೂರ ಮಾಡಿ ಜ್ಞಾನದ ಬೆಳಕನ್ನು ಬೆಳಗಿಸುವವರು. ಮಕ್ಕಳಲ್ಲಿರುವ ಪ್ರತಿಭೆ ಮತ್ತು ಆಸಕ್ತಿಯನ್ನು ಗುರುತಿಸಿ ಬೆಳೆಸುವುದರ ಜೊತೆಗೆ, ಅವರ ತಪ್ಪುಗಳನ್ನು ತಿದ್ದಿ, ಜೀವನಕ್ಕೆ ಸೂಕ್ತವಾದ ಗುರಿಯನ್ನು […]
Read More

28-08-2026, 8:00 PM
ಬಜಪೆ ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಬಜಪೆ ಗುರುಮಂದಿರದಲ್ಲಿ ಆಗಸ್ಟ್ 28ರಂದು ವಿವಿಧ ಧಾರ್ಮಿಕ ಹಾಗೂ ಸೇವಾ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಗುರುಜಯಂತಿಯ ಅಂಗವಾಗಿ ಗಣಹೋಮ, ಸತ್ಯನಾರಾಯಣ ಪೂಜೆ, ಭಜನಾ ಸಂಕೀರ್ತನೆ, ಗುರುದೇವರಿಗೆ ವಿಶೇಷ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ಗುರುಪೂಜೆ ಹಾಗೂ ಮಹಾಮಂಗಳಾರತಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಮಧ್ಯಾಹ್ನದಿಂದ ರಾತ್ರಿ ವರೆಗೆ ನಿರಂತರವಾಗಿ ಅನ್ನಸಂತರ್ಪಣೆ ಸೇವೆ ನಡೆಯಿತು. ಅನ್ನಸಂತರ್ಪಣೆಯ ವ್ಯವಸ್ಥೆಯಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಎಲ್ಲಾ […]
Read More

28-08-2026, 8:00 PM
ಬಜಪೆ: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.), ಬಜಪೆ–ಕರಂಬಾರು ವತಿಯಿಂದ ಆಗಸ್ಟ್ 28ರಂದು ಸಂಜೆ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಯುವವಾಹಿನಿ ಬಜಪೆ ಘಟಕದ ಮಹಿಳಾ ಹಾಗೂ ಪುರುಷ ಸದಸ್ಯರು ವಿಭಿನ್ನ ಶೈಲಿಯ ನೃತ್ಯಗಳನ್ನು ಪ್ರದರ್ಶಿಸಿ ಸಭಿಕರ ಗಮನ ಸೆಳೆದರು. ಬಳಿಕ ಘಟಕದ ಸದಸ್ಯರಾದ ನಿತೇಶ್ ಪೂಜಾರಿ ಅವರ ನಿರ್ದೇಶನದಲ್ಲಿ ‘ರಿಕ್ಷಾ ಡ್ರೈವರ್’ ಎಂಬ […]
Read More

10-08-2026, 9:00 PM
ಬಜಪೆ, ಆಗಸ್ಟ್ 10: ಶ್ರೀ ನಾರಾಯಣ ಗುರುಗಳ ತತ್ವ, ಆದರ್ಶ ಹಾಗೂ ಸಂದೇಶಗಳನ್ನು ಸಮಾಜಕ್ಕೆ ತಲುಪಿಸುವಲ್ಲಿ ಯುವವಾಹಿನಿ (ರಿ.) ಕೈಗೊಂಡಿರುವ ಮನೆ ಮನೆ ಭಜನಾ ಸಂಕೀರ್ತನೆಯ ಕಾರ್ಯ ಶ್ಲಾಘನೀಯ ಎಂದು ಹಿರಿಯ ಭಜಕ ಯಾದವ ಸುವರ್ಣ ಹೇಳಿದರು. ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಆಯೋಜಿಸಲಾದ ಮನೆ ಮನೆ ಭಜನಾ ಸಂಕೀರ್ತನೆಯು ಆ.10ರಂದು ಸಂಜೆ 6.30ರಿಂದ 7.30ರವರೆಗೆ ಸುಂಕದಕಟ್ಟೆ, ಬಜಪೆಯ ನಾರಾಯಣ ಸುವರ್ಣ ಅವರ ‘ಪ್ರಕೃತಿ ನಿಲಯ’ದಲ್ಲಿ ಭಕ್ತಿ ಹಾಗೂ ಶ್ರದ್ಧೆಯಿಂದ ನಡೆಯಿತು. ಭಜನಾ ಸಂಕೀರ್ತನೆಯ ಬಳಿಕ […]
Read More

07-08-2026, 2:00 PM
ಬಜಪೆ, ಆಗಸ್ಟ್ 7: ನಶಿಸುತ್ತಿರುವ ಸಾಂಪ್ರದಾಯಿಕ ಕೃಷಿ ಪದ್ಧತಿಗೆ ಉತ್ತೇಜನ ನೀಡುವುದರೊಂದಿಗೆ ಕೃಷಿಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆಯೋಜಿಸಿರುವ ಸಸ್ಯೋತ್ಸವ ಹಾಗೂ ಹಲಸು ಆಹಾರ ಮೇಳ ಶ್ಲಾಘನೀಯ ಕಾರ್ಯಕ್ರಮವಾಗಿದೆ ಎಂದು ಬಜಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಹೇಳಿದರು. ಯುವವಾಹಿನಿ (ರಿ.) ಬಜಪೆ ಘಟಕ ಹಾಗೂ ರೋಟರಿ ಕ್ಲಬ್ ಬಜಪೆ ಸಹಯೋಗದಲ್ಲಿ ರೈತ ಕುಡ್ಲ ಪ್ರತಿಷ್ಠಾನದ ನೇತೃತ್ವದಲ್ಲಿ ಬಜಪೆಯ ಬಿ. ಸಂಜೀವ ಶೆಟ್ಟಿ ಸಭಾಂಗಣದಲ್ಲಿ ಆಗಸ್ಟ್ 7ರಿಂದ 9ರವರೆಗೆ ನಡೆಯುವ ‘ಸಸ್ಯೋತ್ಸವ ಹಾಗೂ ಹಲಸು ಆಹಾರ […]
Read More

29-07-2026, 8:00 PM
ಬಜಪೆ, ಜುಲೈ 29: ಗುರು ಪೂರ್ಣಿಮೆಯ ಪವಿತ್ರ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಇಲ್ಲಿ ಜುಲೈ 29ರಂದು ಸಂಜೆ 4.30ರಿಂದ 6.00 ಗಂಟೆಯವರೆಗೆ ಯುವವಾಹಿನಿ (ರಿ.) ಬಜಪೆ ಘಟಕದ ಸದಸ್ಯರಿಂದ ವಿಶೇಷ ಭಜನಾ ಸಂಕೀರ್ತನೆ ಕಾರ್ಯಕ್ರಮ ಭಕ್ತಿಭಾವದಿಂದ ನಡೆಯಿತು. ಭಜನಾ ಸಂಕೀರ್ತನೆಯ ಮೂಲಕ ಶ್ರೀ ನಾರಾಯಣ ಗುರುಗಳ ತತ್ವ-ಆದರ್ಶಗಳನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗುರು ಸ್ಮರಣೆಯಲ್ಲಿ ತೊಡಗಿದರು. ಭಜನಾ ಸಂಕೀರ್ತನೆಯ ಬಳಿಕ ಗುರುವರ್ಯರಿಗೆ ವಿಶೇಷ ಗುರುಪೂಜೆ […]
Read More