Yuvavahini

ಬೆಳ್ತಂಗಡಿ

ತುಳುನಾಡ ತುಡರ್ ಪರ್ಬ ಪ್ರೀತಿ ಬಾಂಧವ್ಯದ ಸಂಕೇತ

ಬೆಳ್ತಂಗಡಿ ನ 07 : ಯುವವಾಹಿನಿ.(ರಿ.)ಬೆಳ್ತಂಗಡಿ ‌ಘಟಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಭಜನಾ‌ ಮಂಡಳಿ (ರಿ.)ಪಣಕಜೆ, ಶ್ರೀ ಕೃಷ್ಣಾ ಮಹಿಳಾ‌ ಮಂಡಳಿ, ಧ್ವನಿ ನ್ಯೂಸ್ ಬೆಳ್ತಂಗಡಿ ಇದರ ‌ಸಹಯೋಗದಲ್ಲಿ ನವೆಂಬರ್ 7 ರಂದು ಶ್ರೀ ಕೃಷ್ಣಾ ಭಜನಾ ಮಂದಿರ ಪಣಕಜೆಯಲ್ಲಿ ತುಳುನಾಡ ತುಡರ್‌ ಪರ್ಬ-2026 ಎಂಟನೇ ವರ್ಷದ ಸಾರ್ವಜನಿಕ ದೀಪಾವಳಿ ಆಚರಣೆಯನ್ನು ಹಮ್ಮಿಕೊಳ್ಳಲಾಯಿತು. ಜೊತೆಯಲ್ಲಿ ” ತುಳುನಾಡ ತುಡರ್ ಪರ್ಬ *ಕವಿ ಗೋಷ್ಠಿ ಸಾರ್ವಜನಿಕ ಗೂಡು ದೀಪ ಸ್ಪರ್ಧೆ, ರಂಗೋಲಿ ಸ್ಪರ್ಧೆ ಯನ್ನು ಆಯೋಜಿಸಲಾಗಿತ್ತು.ಸಾವಿರದ‌ ಒಂದು […]

Read More

ಶ್ರೇಷ್ಠ ಕಿರುಚಿತ್ರ ಪ್ರಶಸ್ತಿ ಯುವವಾಹಿನಿ ಕೂಳೂರು ಘಟಕದ ‘ಬದ್‌ಕ್ ಮಾಯೆ’ಗೆ

ಉಡುಪಿ ನ 01 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ ನವೆಂಬರ್ 1ರಂದು ಉಡುಪಿಯ ಯಕ್ಷಕಲಾರಂಗದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಅಂತರ್‌ಘಟಕ ಕಿರುಚಿತ್ರ ಸ್ಪರ್ಧೆ ‘ಯುವಸಿನಿದನಿ–2026’ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಪರ್ಧೆಯಲ್ಲಿ ಯುವವಾಹಿನಿ ಕೂಳೂರು ಘಟಕದ ‘ಬದ್‌ಕ್ ಮಾಯೆ’ ಕಿರುಚಿತ್ರವು ಪ್ರಥಮ ಸ್ಥಾನ ಪಡೆದು ಶ್ರೇಷ್ಠ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬಜಪೆ ಘಟಕದ ‘ಬದಲಾವಣೆ’ ದ್ವಿತೀಯ ಹಾಗೂ ಬೆಳ್ತಂಗಡಿ ಘಟಕದ ‘ಮೈಮೆ’ ಕಿರುಚಿತ್ರ ತೃತೀಯ ಸ್ಥಾನ ಗಳಿಸಿತು. […]

Read More

ಬೃಹತ್ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ

102 ಯೂನಿಟ್ ರಕ್ತ ಸಂಗ್ರಹ | 150ಕ್ಕೂ ಅಧಿಕ ಮಂದಿಗೆ ಆರೋಗ್ಯ ತಪಾಸಣೆ | 62 ಮಂದಿಗೆ ಉಚಿತ ಕನ್ನಡಕ | 20 ಮಂದಿಗೆ ಉಚಿತ ನೇತ್ರ ಶಸ್ತ್ರಚಿಕಿತ್ಸೆ ಬೆಳ್ತಂಗಡಿ ಅ 25 : ರಕ್ತದಾನ, ಆರೋಗ್ಯ ತಪಾಸಣೆ ಹಾಗೂ ಅಗತ್ಯವಿರುವವರಿಗೆ ವೈದ್ಯಕೀಯ ನೆರವು ಒದಗಿಸುವ ಮೂಲಕ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಬೃಹತ್ ರಕ್ತದಾನ ಹಾಗೂ ವೈದ್ಯಕೀಯ ಶಿಬಿರವು ಅಕ್ಟೋಬರ್ 25ರಂದು ಗುರುವಾಯನಕೆರೆಯ N.E.T. […]

Read More

ಕುದ್ರೋಳಿ ಕ್ಷೇತ್ರದಲ್ಲಿ ಸ್ವಯಂಸೇವೆ; ಅನ್ನದಾನಕ್ಕೆ ದೇಣಿಗೆ

ಮಂಗಳೂರು, ಅ. 19: ಮಂಗಳೂರು ದಸರಾ ಮಹೋತ್ಸವ–2026ರ ಅಂಗವಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಸ್ವಯಂಸೇವಾ ಕಾರ್ಯವನ್ನು ನೆರವೇರಿಸಲಾಯಿತು. ಕಾರ್ಯಕ್ರಮದ ಸಂಚಾಲಕರಾದ ವಿಜೀತ್ ಮುಂಡಾಜೆ ಮತ್ತು ವಿತೇಶ್ ಕೋಟ್ಯಾನ್ ಅವರ ಸಂಪೂರ್ಣ ಸಹಕಾರದೊಂದಿಗೆ ಘಟಕದ ಸದಸ್ಯರು ಸ್ವಯಂಸೇವೆ ಹಾಗೂ ಅನ್ನದಾನ ಸೇವೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ಸದಸ್ಯರ ಸಹಕಾರದೊಂದಿಗೆ ಸಂಗ್ರಹಿಸಿದ ₹7,500 ಮೊತ್ತದ ದೇಣಿಗೆಯನ್ನು ಯುವವಾಹಿನಿ (ರಿ.) ಕೇಂದ್ರ […]

Read More

‘ಗುರುನಮನ’

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಗುರು ಜಯಂತಿಯ ಪ್ರಯುಕ್ತ ಆಗಸ್ಟ್ 28ರಂದು ‘ಗುರುನಮನ’ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಘಟಕದ ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗೌರವ ಸಲಹೆಗಾರರು, ಮಾಜಿ ಅಧ್ಯಕ್ಷರು, ನಿರ್ದೇಶಕರು, ಪದಾಧಿಕಾರಿಗಳು ಹಾಗೂ ಸದಸ್ಯರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಗುರು ಜಯಂತಿಯ ವಿಶೇಷ ಅಂಗವಾಗಿ ‘ಗುರು ಚಿಂತನ’ ಶೀರ್ಷಿಕೆಯಡಿಯಲ್ಲಿ ಆಯೋಜಿಸಲಾಗಿರುವ ಆನ್‌ಲೈನ್ ಭಾಷಣ ಸ್ಪರ್ಧೆಯ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು. […]

Read More

ಸಾಂತ್ವನ ನಿಧಿ ಹಸ್ತಾಂತರಿಸಿ ಆರೋಗ್ಯ ವಿಚಾರಣೆ

ಧರ್ಮಸ್ಥಳ ಅಗಸ್ಟ್ 24: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಮಹಿಳಾ ನಿರ್ದೇಶಕರಾದ ಶ್ರೀಮತಿ ವೇದ ಪ್ರಭಾಕರ್ ಅವರ ಪತಿಯವರು ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ದಿನಾಂಕ 24.08.2026ರಂದು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ನೈತಿಕ ಸ್ಥೈರ್ಯ ನೀಡುವ ಉದ್ದೇಶದಿಂದ, ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ₹10,000/- (ಹತ್ತು ಸಾವಿರ ರೂಪಾಯಿ) ಸಾಂತ್ವನ […]

Read More

ಆಟಿದ ನೆಂಪು ಮೂಲಕ ತುಳುನಾಡಿನ ಸಂಸ್ಕೃತಿ, ಆಹಾರ ಪದ್ಧತಿಯ ಅನಾವರಣ

ಬೆಳ್ತಂಗಡಿ, ಆಗಸ್ಟ್ 15: ತುಳುನಾಡಿನ ಸಮೃದ್ಧ ಸಂಸ್ಕೃತಿ, ಆಚಾರ-ವಿಚಾರ ಹಾಗೂ ಅನನ್ಯ ಆಹಾರ ಪದ್ಧತಿಯನ್ನು ಪರಿಚಯಿಸುವ ‘ಆಟಿದ ನೆಂಪು’ ಕಾರ್ಯಕ್ರಮವು ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ಸಂಭ್ರಮದಿಂದ ನಡೆಯಿತು. ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಬಿಲ್ಲವ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜಿತಾ ವಿ. ಬಂಗೇರ ಅವರು ಸಾಂಪ್ರದಾಯಿಕ ಲಾಟನ್ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ಆಟಿ ತಿಂಗಳ ಆಚರಣೆಗಳು, ಸಂಪ್ರದಾಯಗಳು ಹಾಗೂ ಅವುಗಳ ಧಾರ್ಮಿಕ ಮತ್ತು […]

Read More

ನಾಯಕತ್ವ ಗುಣಗಳು ಸಂಘಟನೆಯ ಯಶಸ್ಸಿನ ಭದ್ರ ಬುನಾದಿ : ರಾಜೇಶ್ ಎಸ್. ಬಲ್ಯ

ಬೆಳ್ತಂಗಡಿ, ಜು. 26 : ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿಗಳ ಕುರಿತು ಅರಿವು ಮೂಡಿಸಿ, ಸಂಘಟನೆಯನ್ನು ಪರಿಣಾಮಕಾರಿಯಾಗಿ ಮುನ್ನಡೆಸುವ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವು ಭಾನುವಾರ ಯಶಸ್ವಿಯಾಗಿ ನಡೆಯಿತು. ಘಟಕದ ಅಧ್ಯಕ್ಷೆ ಲೀಲಾವತಿ ಪಣಕಜೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಮೂಡಿಕೊಡಿ ಉದ್ಘಾಟಿಸಿದರು. ಅವರು ಮಾತನಾಡಿ, ಸಂಘಟನೆಯ ಬೆಳವಣಿಗೆಯಲ್ಲಿ ತರಬೇತಿ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿ, ನೂತನ ಕಾರ್ಯಕಾರಿ ಸಮಿತಿಯ […]

Read More

ಪದಗ್ರಹಣ ಸಮಾರಂಭ

ಬೆಳ್ತಂಗಡಿ, ಜುಲೈ 16: “ಯುವವಾಹಿನಿಯು ಕೇವಲ ಒಂದು ಸಂಘಟನೆಯಲ್ಲ; ಸಮಾಜವನ್ನು ಬೆಸೆಯುವ ಮಹತ್ವದ ಶಕ್ತಿಯಾಗಿದೆ” ಎಂದು ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹೇಳಿದರು. ಅವರು ಬೆಳ್ತಂಗಡಿಯ ಶ್ರೀ ಗುರು ಸಾನಿಧ್ಯ ಸಭಾಂಗಣದಲ್ಲಿ ನಡೆದ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ 2026–27ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯೆ, ಉದ್ಯೋಗ ಮತ್ತು ಸಂಪರ್ಕ ಎಂಬ ಧ್ಯೇಯಗಳೊಂದಿಗೆ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಯುವವಾಹಿನಿ, ಉತ್ತಮ ನಾಯಕರನ್ನು ಸಮಾಜಕ್ಕೆ ನೀಡುವ ಮೂಲಕ ಮಾದರಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!