Yuvavahini

ಬೆಳ್ತಂಗಡಿ

ಸ್ಪಂದನ ಸೇವಾ ಯೋಜನೆ : ಸಾಂತ್ವನ ನಿಧಿ ವಿತರಣೆ

ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಸ್ಪಂದನ ಸೇವಾ ಯೋಜನೆಯಿಂದ ಎರಡು ಕಿಡ್ನಿ ವೈಪಲ್ಯಗೊಂಡಿರುವ ಮತ್ತು ಶ್ರವಣ  ಮತ್ತು ದೃಷ್ಟಿಯನ್ನು  ಸಂಪೂರ್ಣ  ಕಳೆದುಕೊಂಡಿರುವ ಗುರುವಾಯನಕೆರೆ ನಿವಾಸಿ ಜಯರಾಮ್ ಶೆಟ್ಟಿ ಯವರಿಗೆ ರೂಪಾಯಿ 10000.00 ಸಾಂತ್ವನ ನಿಧಿಯನ್ನು ಘಟಕದ ಅಧ್ಯಕ್ಷರಾದ ಹರೀಶ್ ಸುವರ್ಣ ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮೂಂಡೂರು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ನಿರ್ದೇಶಕರಾದ ಪ್ರಶಾಂತ್ ಮಚ್ಚಿನ ಗೆಳೆಯರ ಬಳಗ(ರಿ.)ಗುರುವಾಯನಕೆರೆಯ ಕಾರ್ಯದರ್ಶಿ ಮಂಜುನಾಥ್, ಚಿದಾನಂದ ಬಂಗೇರ ಗುರುವಾಯನಕೆರೆ ಉಪಸ್ಥಿತರಿದ್ದರು.

Read More

ಕುಣಿತ ಭಜನೆ ತರಬೇತಿ ಪ್ರಾರಂಭ

  ದಿನಾಂಕ 1/11/2019ರ ಶುಕ್ರವಾರ ಸಂಜೆ ಘಟಕದ ಆಶ್ರಯದಲ್ಲಿ ಕುಣಿತ ಭಜನಾ ತರಗತಿಯನ್ನು ಘಟಕದ ಸಲಹೆಗಾರರು ರಘುನಾಥ ಶಾಂತಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಹರೀಶ್ ಸುವರ್ಣ ವಹಿಸಿದರು. ಘಟಕದ ಕಾರ್ಯದರ್ಶಿ ವಿಜಯ್ ಕುಮಾರ್ , ಯುವವಾಹಿನಿ ಮಹಿಳಾ ಸಂಚಲನ ಸಮಿತಿಯ ಸಂಚಾಲಕಿ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ,ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಜೀತೆಶ್ ಬೆಳ್ತಂಗಡಿ, ತರಬೇತುದಾರ ವಾಸು ಮುಂಡಾಜೆ ಉಪಸ್ಥಿತರಿದ್ದರು. ಗುರುರಾಜ ಗುರಿಪಳ್ಳ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಮಚ್ಚಿನ ನಿರೂಪಿಸಿ ,ವಂದಿಸಿದರು.

Read More

ತುಳುನಾಡ ತುಡರ್ ಪರ್ಬ : ಸಾಮೂಹಿಕ ದೀಪವಾಳಿ ಆಚರಣೆ

  ಯುವವಾಹಿನಿ (ರಿ) ಬೆಳ್ತಂಗಡಿ ಘಟಕ ದಿಂದ ತುಳುನಾಡ ತುಡರ್ ಪರ್ಬ ಸಾಮೂಹಿಕ ದೀಪವಾಳಿ ಆಚರಣೆ. ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ, ಗೆಳೆಯರ ಬಳಗ ಗುರುವಾಯನಕೆರೆ,ಶಾರದಾಂಬ ಭಜನಾ ಮಂಡಳಿ ಗುರುವಾಯನಕೆರೆ,ಶ್ರೀ ಗುರು ಮಿತ್ರ ಸಮೂಹ ಬೆಳ್ತಂಗಡಿ, ವಿದ್ಯಾ ನಿಕೇತನ ನ್ರತ್ಯ ಶಾಲೆ ಗುರುವಾಯನಕೆರೆ ಇವರ ಸಹಕಾರದಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ್ ಪರ್ಬ ಸಾಮೂಹಿಕ ದೀಪಾವಳಿ ಆಚರಣೆ ಅ 26ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. […]

Read More

ನಾರಾಯಣ ಗುರು ಜಯಂತಿ : ಗುರುನಮನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮದಿನದ ಪ್ರಯುಕ್ತ ಗುರುನಮನ ಕಾರ್ಯಕ್ರಮ ಸೆಪ್ಟೆಂಬರ್ 13 ರಂದು ಶಾರದಾ ಮಂಟಪ ಗುರುವಾಯನಕೆರೆ ಜರಗಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶದಂತೆ ಯುವವಾಹಿನಿ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಎಲ್ಲರಿಗೂ […]

Read More

ಪ್ರಥಮ ಹೆಜ್ಜೆ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ : ಗೀತಾ ಪಿ

ಬೆಳ್ತಂಗಡಿ : ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು. ಸಮಾಜದಲ್ಲಿ ಅವಕಾಶ ವಂಚಿತ ಕಟ್ಟ ಕಡೆಯ ವ್ಯಕ್ತಿಯನ್ನು ಹುಡುಕಿ ಸಾಧನೆ ಮಾಡಲು ಇಂತಹ ಸಂಘಟನೆಗಳ ಮೂಲಕ ಪ್ರೋತ್ಸಾಹ ನೀಡಬೇಕು ಇಂದಿನ ಪ್ರಥಮ ಹೆಜ್ಜೆಯೆ ಪ್ರೋತ್ಸಾಹದ ಸಾವಿರ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ ಎಂದು ಮಂಗಳೂರಿನ ಅಬಕಾರಿ ನಿರೀಕ್ಷಕರು ಗೀತಾ ಪಿ ಹೇಳಿದರು. ಅವರು ದಿನಾಂಕ 28/07/2019ನೇ ಭಾನುವಾರ ಬೆಳ್ತಂಗಡಿ ಸುವರ್ಣ ಅರ್ಕೆಡ್ ನಲ್ಲಿ ನಡೆದ ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಪ್ರಥಮ ಹೆಜ್ಜೆ ಇಡುವ […]

Read More

ಪ್ರೇರಣಾ ನಮ್ಮಿಂದ ನಮಗಾಗಿ

ಬೆಳ್ತಂಗಡಿ : ಯುವವಾಹಿನ (ರಿ) ಬೆಳ್ತಂಗಡಿ ಘಟಕದ ಮಹಿಳಾ ಸದಸ್ಯರಿಗೆ ಮತ್ತು ಘಟಕದ ಕಾರ್ಯಕರ್ತರಿಗಾಗಿ ಪ್ರೇರಣಾ ನಮ್ಮಿಂದ ನಮಗಾಗಿ ಎಂಬ ಕಾರ್ಯಕ್ರಮವನ್ನು ದಿನಾಂಕ:23/06/2019 ರಂದು ಮಧ್ಯಾಹ್ನ ಗಂಟೆ 2.30 ಕ್ಕೆ ಸುವರ್ಣ ಆರ್ಕೇಡ್ ಬೆಳ್ತಂಗಡಿಯಲ್ಲಿ ನಡೆಯಿತು.ಮಹಿಳಾ ಸಮಿತಿಯ ಪ್ರಧಾನ ಸಂಚಾಲಕರು ಸುಜತಾ ಅಣ್ಣಿ ಪೂಜಾರಿ ಅವರ ಸ್ವಾಗತ ಭಾಷಣದೊಂದಿಗೆ ಪ್ರೇರಣೆಯ ಉದ್ಘಾಟನೆಯನ್ನು ಶ್ರೀಮತಿ ಸೇವಂತಿ (ಸಮೂಹ ಸಂಪನ್ಮೂಲ ವ್ಯಕ್ತಿ C R P ಪರೊಡಿತ್ತಾಯ ಕಟ್ಟೆ ಬಜಿರೆ )ಇವರು ದೀಪ ಬೆಳಗಿಸಿ ಹೆಣ್ಣು ಸಮಾಜದ ಪ್ರೇರಣಾ ಶಕ್ತಿಯಾಗಿ […]

Read More

ಬಾಲ್ಯದಲ್ಲಿಯೇ ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಸಂತ ನಾರಾಯಣ ಗುರು :ಸತ್ಯಾನಂದ ತೀರ್ಥ ಸ್ವಾಮೀಜಿ

ಬೆಳ್ತಂಗಡಿ:ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಹೇಳಿದರು ಅವರು ಜೂ 6 ರಂದು ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಗುರು ಸಂದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು . ಕೇರಳದ ತೀಯಾ ಸಮಾಜ ದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ಜನಿಸಿದ […]

Read More

ಗುರುಪೂಜೆ, ನಾರಾಯಣಗುರು ತತ್ವ ಪ್ರಚಾರ

ಉಜಿರೆ: ಸಮಾಜದ ಉದ್ಧಾರಕ್ಕಾಗಿ ಜನ್ಮತಾಳಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದ ಮತ್ತು ಶೋಷಿತ ವರ್ಗದವರಿಗೆ ಮಾನವ ರೂಪದಲ್ಲಿ ಬಂದ ದೇವರು ಇವರು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ ಹೇಳಿದರು. ಅವರು ಜೂ.5 ರಂದು ಯುವವಾಹಿನಿ ಬೆಳ್ತಂಗಡಿ ಘಟಕದ ಉಜಿರೆ ಸಂಚಲನ ಸಮಿತಿ ಆಶ್ರಯದಲ್ಲಿ ಎಸ್.ಕೆ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ತತ್ವ ಪ್ರಚಾರದ ಮೂಲಕ ಆಶೀರ್ವಚನ ನೀಡಿದರು. […]

Read More

ಸ್ಪೂರ್ತಿ…. ಇದು ಯುವವಾಹಿನಿಯ ಮಾರ್ಗದರ್ಶಿಯೆಡೆಗೆ

ಬೆಳ್ತಂಗಡಿ :ತಳ ಮಟ್ಟದಲ್ಲಿ ಇರುವ ಯುವ ಸಮುದಾಯವನ್ನು ಮೇಲೆತ್ತುವ ಕೆಲಸವಾಗಬೇಕು ಎಂದು ಯುವವಾಹಿನಿ(ರಿ) ಬೆಳ್ತಂಗಡಿ ಘಟಕದ ಸಲಹೆಗಾರರು ರಮಾನಂದ ಸಾಲಿಯನ್ ಮೂಂಡುರು ಹೇಳಿದರು. ಅವರು ಮಾ.08 ರಂದು ಸುವರ್ಣ ಆರ್ಕೇಡ್ ನಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ನಡೆದ ಸ್ಪೂರ್ತಿ…. ಇದು ಯುವವಾಹಿನಿಯ ಮಾರ್ಗದರ್ಶಿಯೆಡೆಗೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.ಘಟಕವು ಬೆಳ್ತಂಗಡಿಯಲ್ಲಿ ನೋಂದವರ ಪರವಾಗಿ ಹಾಗೂ ಅಶಕ್ತರಿಗೆ ಸಂಜೀವಿನಿಯಾಗಿ ಕೆಲಸ ಮಾಡುತ್ತಿದ್ದು ಹೋರಾಟದ ಮೂಲಕ ಕಳೆದ 5 […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!