Yuvavahini

ಕೂಳೂರು

ಶ್ರೇಷ್ಠ ಕಿರುಚಿತ್ರ ಪ್ರಶಸ್ತಿ ಯುವವಾಹಿನಿ ಕೂಳೂರು ಘಟಕದ ‘ಬದ್‌ಕ್ ಮಾಯೆ’ಗೆ

ಉಡುಪಿ ನ 01 : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ ನವೆಂಬರ್ 1ರಂದು ಉಡುಪಿಯ ಯಕ್ಷಕಲಾರಂಗದಲ್ಲಿ ನಡೆದ ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಆಯೋಜಿಸಲಾಗಿದ್ದ ಅಂತರ್‌ಘಟಕ ಕಿರುಚಿತ್ರ ಸ್ಪರ್ಧೆ ‘ಯುವಸಿನಿದನಿ–2026’ ಯಶಸ್ವಿಯಾಗಿ ಸಂಪನ್ನಗೊಂಡಿತು. ಸ್ಪರ್ಧೆಯಲ್ಲಿ ಯುವವಾಹಿನಿ ಕೂಳೂರು ಘಟಕದ ‘ಬದ್‌ಕ್ ಮಾಯೆ’ ಕಿರುಚಿತ್ರವು ಪ್ರಥಮ ಸ್ಥಾನ ಪಡೆದು ಶ್ರೇಷ್ಠ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಬಜಪೆ ಘಟಕದ ‘ಬದಲಾವಣೆ’ ದ್ವಿತೀಯ ಹಾಗೂ ಬೆಳ್ತಂಗಡಿ ಘಟಕದ ‘ಮೈಮೆ’ ಕಿರುಚಿತ್ರ ತೃತೀಯ ಸ್ಥಾನ ಗಳಿಸಿತು. […]

Read More

ಶಿವಗಿರಿ ಸೇರಿದಂತೆ ಪ್ರಮುಖ ಪುಣ್ಯಕ್ಷೇತ್ರಗಳ ಆಧ್ಯಾತ್ಮಿಕ ಯಾತ್ರೆ ಸಂಪನ್ನ

53 ಮಂದಿ ಸದಸ್ಯರಿಂದ ನಾರಾಯಣ ಗುರುಗಳ ಜನ್ಮಸ್ಥಳ, ಶಿವಗಿರಿ ಮಠ ಸೇರಿದಂತೆ ವಿವಿಧ ಪುಣ್ಯಕ್ಷೇತ್ರಗಳ ದರ್ಶನ ಮಂಗಳೂರು ಅ 26 : ಬ್ರಹ್ಮಶ್ರೀ ನಾರಾಯಣ ಗುರುದೇವರ ತತ್ವಾದರ್ಶಗಳನ್ನು ಅರಿತು, ಅವರ ಜೀವನ ಸಂದೇಶವನ್ನು ಅನುಭವಿಸುವ ಉದ್ದೇಶದಿಂದ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾದ ಶಿವಗಿರಿ–ರಾಮೇಶ್ವರ ಸೇರಿದಂತೆ ಪ್ರಮುಖ ಪುಣ್ಯಕ್ಷೇತ್ರಗಳ ಆಧ್ಯಾತ್ಮಿಕ ಯಾತ್ರೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಘಟಕದ ಸದಸ್ಯರು ಸೇರಿದಂತೆ ಒಟ್ಟು 53 ಮಂದಿ ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಅಕ್ಟೋಬರ್ 24ರಂದು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ […]

Read More

ಕ್ಯಾನ್ಸರ್ ಪೀಡಿತ ಕುಟುಂಬಕ್ಕೆ ಧನಸಹಾಯ

ಕೂಳೂರು ಅ 10: ಯುವವಾಹಿನಿ (ರಿ.) ಕೂಳೂರು ಘಟಕದ 31ನೇ ಸೇವಾನಿಧಿ ಯೋಜನೆಯ ಅಂಗವಾಗಿ ಮಾರಕ ಕ್ಯಾನ್ಸರ್ ರೋಗದಿಂದ ತೀವ್ರ ತೊಂದರೆಗೀಡಾಗಿರುವ ಮಾಲೆಮಾರ್ ನಿವಾಸಿ ಮಹೇಶ್ ಪೂಜಾರಿ ಅವರ ಕುಟುಂಬಕ್ಕೆ ₹20,700 ಧನಸಹಾಯ ನೀಡಲಾಯಿತು. ಅಕ್ಟೋಬರ್ 10ರ ಶನಿವಾರ ಫಲಾನುಭವಿಯ ಸ್ವಗೃಹದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷೆ ಗೀತಾ ವಸಂತ್ ಅವರು ಧನಸಹಾಯದ ಮೊತ್ತವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು. ಸಮಾಜದಲ್ಲಿ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೆರವಾಗುವ ಉದ್ದೇಶದಿಂದ ಯುವವಾಹಿನಿ ಕೂಳೂರು ಘಟಕವು ಸೇವಾನಿಧಿ ಯೋಜನೆಯ ಮೂಲಕ ಮಾನವೀಯ […]

Read More

ಸೇವಾ ಕಾರ್ಯದ ಮೂಲಕ ನಾರಾಯಣ ಗುರು ತತ್ವಕ್ಕೆ ನಮನ

ಮಂಗಳೂರು, ಸೆ. 27: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುದೇವರ 172ನೇ ಜನ್ಮದಿನಾಚರಣೆಯ ಅಂಗವಾಗಿ ದೇರಳಕಟ್ಟೆಯ ಸೇವಾಭಾವ ಚಾರಿಟೇಬಲ್ ಟ್ರಸ್ಟ್‌ಗೆ ದ್ವಿತೀಯ ಬಾರಿಗೆ ಭೇಟಿ ನೀಡಿ, ಆಶ್ರಮದ ಹಿರಿಯರಿಗೆ ದಿನದ ಊಟದ ವ್ಯವಸ್ಥೆ ಕಲ್ಪಿಸಲಾಯಿತು.ನಾರಾಯಣ ಗುರುದೇವರ ಸಮಾನತೆ, ಮಾನವೀಯತೆ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನೂ ಒಳಗೊಂಡ ಸೇವಾ ತತ್ವವನ್ನು ಕಾರ್ಯರೂಪಕ್ಕೆ ತರುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಗುರುಚರಣಗಳಿಗೆ ಸಮರ್ಪಿಸಲಾಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷೆ ಗೀತಾ ವಸಂತ್, ಕಾರ್ಯದರ್ಶಿ ವಂದೀಪ್, ನಾರಾಯಣಗುರು ತತ್ವ […]

Read More

ಕೇರಳದ ಪ್ರಸಿದ್ಧ ಕ್ಷೇತ್ರಗಳಿಗೆ ಆಧ್ಯಾತ್ಮಿಕ ಪ್ರವಾಸ

ಕೂಳೂರು ಸೆ 20 : “ಜೀವ ಜಡರೂಪ ಪ್ರಪಂಚವನದಾವುದೋ | ಆವರಿಸಿಕೊಂಡು ಮೊಳನೆರೆದುಮಿಹುದಂತೆ || ಭಾವಕೊಳಪಡದಂತೆ ಅಳತೆಗಳವಡದಂತೆ | ಆ ವಿಶೇಷಕೆ ನಮಿಸೊ – ಮಂಕುತಿಮ್ಮ ||” ಎಂಬ ಡಿ.ವಿ. ಗುಂಡಪ್ಪ (ಡಿ.ವಿ.ಜಿ.) ಅವರ ಮಂಕುತಿಮ್ಮನ ಕಗ್ಗದ ಸಾಲುಗಳು ಜೀವನದ ಅಗಾಧತೆಯತ್ತ ನಮ್ಮನ್ನು ಕರೆದೊಯ್ಯುತ್ತವೆ. ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸೆಪ್ಟೆಂಬರ್ 20ರಂದು ಕೇರಳ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ “ಕ್ಷೇತ್ರ ದರ್ಶನ – 2026” ಆಧ್ಯಾತ್ಮಿಕ ಹಾಗೂ ಸ್ಮರಣೀಯ ಪ್ರವಾಸವನ್ನು ಆಯೋಜಿಸಲಾಯಿತು. ಬೆಳಗ್ಗೆ 5 […]

Read More

ಯುವವಾಹಿನಿ (ರಿ.) ಕೂಳೂರು ಘಟಕದಿಂದ 67ನೇ ಮನೆ ಮನೆ ಭಜನೆ

ಕೂಳೂರು ಸೆ 18 : ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 67ನೇ ಮನೆ ಮನೆ ಭಜನೆ ಕಾರ್ಯಕ್ರಮವು ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ ಭಾಸ್ಕರ್ ಅವರ ಉರುಂದಾಡಿಯ ನಿವಾಸದಲ್ಲಿ ಸೆ. 18ರಂದು ನಡೆಯಿತು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಾಗವಹಿಸಿ ಭಜನಾ ಸಂಕೀರ್ತನೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಹರಿಣಾಕ್ಷಿ ಭಾಸ್ಕರ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷೆ ಗೀತಾವಸಂತ್ ಅವರು ಶಾಲು ಹೊದಿಸಿ, ಫಲಪುಷ್ಪ ಹಾಗೂ ಸ್ಮರಣಿಕೆಯೊಂದಿಗೆ ಗೌರವಿಸಿದರು. ಬಳಿಕ ಪ್ರಸಾದ […]

Read More

ಗುರುಪೂಜೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆ ಸಂಭ್ರಮದಿಂದ ಸಂಪನ್ನ

ಕೂಳೂರು ಸೆ 11 : ಯುವವಾಹಿನಿ (ರಿ.) ಕೂಳೂರು ಘಟಕದ ದಶಮಾನೋತ್ಸವದ ಅಂಗವಾಗಿ ಘಟಕದ ಸಭಾಭವನದ ಫಲ್ಗುಣಿ ಸಭಾಂಗಣದಲ್ಲಿ ಗುರುಪೂಜೆ ಹಾಗೂ ಶ್ರೀ ಸತ್ಯನಾರಾಯಣ ಪೂಜೆಯನ್ನು ಸೆ. 11ರಂದು ಶ್ರದ್ಧಾ–ಭಕ್ತಿಯಿಂದ ಹಾಗೂ ಸಂಭ್ರಮದಿಂದ ನೆರವೇರಿಸಲಾಯಿತು. ಸಂಜೆ 5 ಗಂಟೆಗೆ ಭಜನಾ ಸಂಕೀರ್ತನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿದ್ದು, ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಗುರುಸ್ತುತಿಯನ್ನು ನೆರವೇರಿಸಿದರು. ಸಂಜೆ 6 ಗಂಟೆಗೆ ಘಟಕದ ಅಧ್ಯಕ್ಷರಾದ ಗೀತಾ ವಸಂತ್ ದಂಪತಿ, ಹಿರಿಯರಾದ ಜಾನಕಿ ಅಮ್ಮ ಹಾಗೂ ಮಾರ್ಗದರ್ಶಕರಾದ ಚಂದಪ್ಪ ಸನಿಲ್ ಅವರು ದೀಪ […]

Read More

ಹಿರಿಯ ನಾಗರಿಕರೊಂದಿಗೆ ಗುರುಜಯಂತಿ ಆಚರಣೆ

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮರೋಳಿಯ ‘ಶ್ರೀ ಮಾತಾ ಹಿರಿಯ ನಾಗರಿಕರ ಆರೋಗ್ಯ ಕೇಂದ್ರ’ದಲ್ಲಿ ಸಮಾಜಮುಖಿ ಸೇವಾ ಕಾರ್ಯಕ್ರಮವನ್ನು ಆಯೋಜಿಸಿ, ಗುರುಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಗುರುದೇವರ ಸೇವಾ ಸಂದೇಶವನ್ನು ಸ್ಮರಿಸುತ್ತಾ ಆಯೋಜಿಸಲಾದ ಕಾರ್ಯಕ್ರಮವನ್ನು ಶ್ರೀ ಮಾತಾ ಹಿರಿಯ ನಾಗರಿಕರ ಆರೋಗ್ಯ ಕೇಂದ್ರದ ವ್ಯವಸ್ಥಾಪಕರಾದ ಪವಿತ್ರ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ‘ಮಾತೃ ಸ್ಪರ್ಶ’ ಸಂಪಾದಕರಾದ ಸುಮಂಗಲ ಸಿ. ಕೋಟ್ಯಾನ್ ಪ್ರಾರ್ಥಿಸಿದರು. ಘಟಕದ ಮಾಜಿ ಅಧ್ಯಕ್ಷರಾದ […]

Read More

ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಯುವವಾಹಿನಿ ಕೂಳೂರು ಘಟಕದಿಂದ ಧನಸಹಾಯ

ಮಂಗಳೂರು, ಆಗಸ್ಟ್ 16: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸೇವಾನಿಧಿ ಯೋಜನೆಯಡಿ ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ಎರಡು ಕುಟುಂಬಗಳಿಗೆ ಒಟ್ಟು ₹20,000 ಧನಸಹಾಯ ನೀಡಲಾಯಿತು. 29ನೇ ಸೇವಾನಿಧಿ ಯೋಜನೆಯ ಅಂಗವಾಗಿ ಸಜಿಪ ನಿವಾಸಿ, ಅನಾರೋಗ್ಯದಿಂದ ತೀವ್ರ ತೊಂದರೆಗೀಡಾದ 8 ವರ್ಷದ ತಾಶ್ವಿ ಅವರ ಕುಟುಂಬಕ್ಕೆ ₹10,000 ಹಾಗೂ 30ನೇ ಸೇವಾನಿಧಿ ಯೋಜನೆಯ ಅಂಗವಾಗಿ ಕಾಸರಗೋಡು ಜೋಡುಕಲ್ಲು ನಿವಾಸಿ ದುರ್ಗಾ ಪ್ರಸಾದ್ ಅವರ ಕುಟುಂಬಕ್ಕೆ ₹10,000 ಧನಸಹಾಯ ನೀಡಲಾಯಿತು. ಯುವವಾಹಿನಿ (ರಿ.) ಕೂಳೂರು ಘಟಕದ ಅಧ್ಯಕ್ಷೆ ಗೀತಾ ವಸಂತ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!