Yuvavahini

ಕೂಳೂರು

ಕೂಳೂರು: ಮಕ್ಕಳ ದಿನಾಚರಣೆ ; ಪರೀಕ್ಷಾ ಪೂರ್ವ ಸಿದ್ಧತಾ ಕಾರ್ಯಾಗಾರ

ದಿನಾಂಕ 16-11-2016 ರಂದು ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಮೊದಲಿಗೆ ಕೂಳೂರು ಘಟಕದ ಅಧ್ಯಕ್ಷ ಸುಜಿತ್‌ರಾಜ್ ಐ.ರವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಕ್ಕಳ ದಿನಾಚರಣೆಯ ಮಹತ್ವದ ಬಗ್ಗೆ ಶ್ರೀಮತಿ ಐ. ಸುಶೀಲಾ ಇವರು ಮಾಹಿತಿ ನೀಡಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳ ಭಾವಚಿತ್ರ ಸ್ಪರ್ಧೆಯು ಶ್ರೀಮತಿ ರೇಣುಕಾ ಪ್ರಸಾದ್ ಹಾಗೂ ಶ್ರೀಮತಿ ಪ್ರಿಯಾ ಇವರ ಸಂಚಾಲಕತ್ವದಲ್ಲಿ ಸಾಂಪ್ರದಾಯಿಕ ಸಾಮಾನ್ಯ ಹಾಗೂ ಆಧುನಿಕ ಈ ರೀತಿ ಮೂರು ವಿಭಾಗದಲ್ಲಿ ನೆರವೇರಿತು. ವಿಜೇತರಿಗೆ ಬಹುಮಾನ […]

Read More

ಕೂಳೂರು: ನಮ್ಮ ಮನೆ ಹಬ್ಬ ದೀಪಾವಳಿ

ದಿನಾಂಕ 30-10-2106 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ನಮ್ಮ ಮನೆ ಹಬ್ಬ ದೀಪಾವಳಿ ಎಂಬ ವಿನೂತನ ಕಾರ್ಯಕ್ರಮ ಜರಗಿತು. ಈ ಕಾರ್ಯಕ್ರಮವು ಘಟಕದ ಸದಸ್ಯ ಭಾಸ್ಕರ್ ಕೋಟ್ಯಾನ್‌ರವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ ಘಟಕದ ಅಧ್ಯಕ್ಷ ಐ. ಸುಜಿತ್‌ರಾಜ್ ಹಾಗೂ ಸರ್ವಸದಸ್ಯರ ಉಪಸ್ಥಿತಿಯೊಂದಿಗೆ ಬಹಳ ವಿಜೃಂಭಣೆಯಿಂದ ನೆರವೇರಿತು. ಭಾಸ್ಕರ್ ಕೋಟ್ಯಾನ್‌ರವರ ಹೆತ್ತವರಾದ ಸದಾಶಿವ ಅಮೀನ್ ಮತ್ತು ಶ್ರೀಮತಿ ಜಾನಕಿ ಇವರ ಉಪಸ್ಥಿತಿಯಲ್ಲಿ ದೀಪವನ್ನು ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನಿತೇಶ್ ಎಕ್ಕಾರ್ ಇವರು ದೀಪಾವಳಿ ಹಬ್ಬದ […]

Read More

ಸಾರ್ವಜನಿಕ ಸಂವಹನ ತರಬೇತಿ ಶಿಬಿರ

ದಿನಾಂಕ 23-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಘಟಕದ ಸದಸ್ಯರಿಗಾಗಿ ಒಂದು ದಿನದ ಸಾರ್ವಜನಿಕ ಸಂವಹನ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 9 ಗಂಟೆಯಿಂದ 2.30 ರ ತನಕ ಜರಗಿದ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಜೇಸೀ ಅಂತಾರಾಷ್ಟ್ರೀಯ ತರಬೇತುದಾರ ರಾಮಚಂದ್ರ ರಾವ್‌ರವರು ಸದಸ್ಯರು ಸಭೆಯಲ್ಲಿ ಮಾತನಾಡುವಾಗ ಯಾವ ರೀತಿ ಪೂರ್ವ ತಯಾರಿ ಮಾಡಬೇಕು, ಯಾವೊಂದು ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳಬೇಕೆಂಬ ವಿಷಯವನ್ನು ತಿಳಿಸಿದರು. ನಂತರ ೨೫ ಮಂದಿಯ ಗುಂಪನ್ನು ಎರಡು ತಂಡಗಳಾಗಿ ವಿಂಗಡಿಸಿ […]

Read More

ಕತ್ತಲಿನಿಂದ ಬೆಳಕಿಗೆ ಕೂಳೂರು ಘಟಕದ ವಿನೂತನ ಕಾರ್ಯಕ್ರಮ

ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು. ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು, ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀಗುರು ವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇದ್ದಾವೆ. ಅಂಥವರನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲಾ ಸಾಮಾಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]

Read More

ಆರೋಗ್ಯ ಮಾಹಿತಿ ಶಿಬಿರ

ದಿನಾಂಕ 5-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿಯವರು ಭಾಗವಹಿಸಿ ಮೂತ್ರರೋಗಗಳ ಬಗ್ಗೆ, ಕಿಡ್ನಿ ವಿಫಲತೆಯ ಕಾರಣಗಳು ಹಾಗೂ ಮೂತ್ರರೋಗವನ್ನು ಯಾವ ರೀತಿಯಲ್ಲಿ ತಡೆಗಟ್ಟಬಹುದು ಎಂಬ ಸಂಪೂರ್ಣ ಅರಿವನ್ನು ಸಭೆಗೆ ನೀಡಿದರು. ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿಯವರನ್ನು ಸಭೆಯಲ್ಲಿ ವಂದಿಸಲಾಯಿತು. ಆರೋಗ್ಯ […]

Read More

ಕೂಳೂರಿನಲ್ಲಿ ಚಿಗುರೊಡೆದ ಯುವವಾಹಿನಿಯ 23ನೇ ಘಟಕ

ದಿ. 11-09-2016 ರಂದು ಕೂಳೂರು ಬ್ರಹ್ಮಶ್ರಿ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ ಕೂಳೂರು ಘಟಕದ ಉದ್ಘಾಟನಾ ಸಮಾರಂಭ ಹಾಗೂ ಪದಗ್ರಹಣ ಕಾರ್ಯಕ್ರಮ ಜರಗಿತು. ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವಾಧ್ಯಕ್ಷ ರಾಘವೇಂದ್ರ ಕೂಳೂರು ನೂತನ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಘಟಕದ ಸರ್ವರಿಗೂ ಶುಭ ಹಾರೈಸಿದರು. ನೂತನ ಪದಾಧಿಕಾರಿಗಳ ಘೋಷಣೆಯನ್ನು ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಕೆ. ಪೂಜಾರಿ ಇವರು ನೆರವೇರಿಸಿಕೊಟ್ಟರು. ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ನೂತನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!