Yuvavahini

ಕೂಳೂರು

ಉರ್ವ ಮಾರಿಗುಡಿ ಕ್ಷೇತ್ರದಲ್ಲಿ ಸ್ವಯಂ ಸೇವೆ

ಮಂಗಳೂರು :ಉರ್ವ ಮಾರಿಗುಡಿ ಕ್ಷೇತ್ರ ಇದರ ಪುನರ್ ಪ್ರತಿಷ್ಠೆ ಬ್ರಹ್ಮ ಕಲಶೋತ್ಸವ ಸಂದರ್ಭ ದಿನಾಂಕ 14/02/2024 ಬುಧವಾರದಂದು ಮಧ್ಯಾಹ್ನ 12.00 ರಿಂದ 3.00 ಗಂಟೆಯವರೆಗೆ ಯುವವಾಹಿನಿ (ರಿ.) ಕೂಳೂರು ಘಟಕದ ಸದಸ್ಯರು ಅನ್ನದಾನ ಸೇವೆಯಲ್ಲಿ ಭಾಗಿಯಾದರು. ಈ ಸಂಧರ್ಭದಲ್ಲಿ ಘಟಕದ ಅಧ್ಯಕ್ಷರಾದ ಇಂದಿರಾ ಸುರೇಶ್, ನಿಕಟ ಪೂರ್ವ ಅಧ್ಯಕ್ಷರಾದ ಯಶವಂತ್ ಪೂಜಾರಿ, ಮಾಜಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ ಎಸ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಪದಾಧಿಕಾರಿಗಳು ಮತ್ತು ಸುಮಾರು 30 ಸದಸ್ಯರು ಅನ್ನ […]

Read More

ಯುವವಾಹಿನಿ (ರಿ.) ಕೂಳೂರು ಘಟಕ ಸ್ನೇಹ ಸಮ್ಮಿಲನ 2024

ಯುವವಾಹಿನಿ (ರಿ.) ಕೂಳೂರು ಘಟಕದ ಮೂರು ಧ್ಯೇಯಗಳಲ್ಲಿ ಒಂದಾದ ಸಂಪರ್ಕ ಇದರ ನೆಲೆಯಲ್ಲಿ ಯುವವಾಹಿನಿ ಸದಸ್ಯರ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ದಿನಾಂಕ 11-02-2024 ಆದಿತ್ಯವಾರದಂದು ಸ್ನೇಹ ಸಮ್ಮಿಲನ 2024 ಕಾರ್ಯಕ್ರಮವನ್ನು Relax leisure park ಬ್ರಹ್ಮಾವರದಲ್ಲಿ ಆಯೋಜಿಸಲಾಗಿತ್ತು. ಬೆಳಿಗ್ಗೆ 7.45 ಗಂಟೆಗೆ ಸರಿಯಾಗಿ ನಮ್ಮ ಬಸ್ಸಿನ ಸಾರಥಿ ನಮ್ಮನ್ನೆಲ್ಲ ಕೂರಿಸಿಕೊಂಡು ಕೂಳೂರಿನಿಂದ ಹೊರಟು 9.30 ಗೆ ರೆಸಾರ್ಟ್ ತಲುಪಿದೆವು. ಅಲ್ಲಿ ಬೆಳಗ್ಗಿನ ಉಪಹಾರ ಮುಗಿಸಿ ಅಲ್ಲಿಂದ ಬೋಟ್ ಮೂಲಕ island ತಲುಪಿದೆವು. ಬೋಟ್ ನಲ್ಲಿ […]

Read More

ವಿದ್ಯಾ ನಿಧಿ ಸ್ವೀಕರಿಸಿದ ಮಕ್ಕಳು ಮುಂದಿನ ದಿನಗಳಲ್ಲಿ ವಿದ್ಯಾ ನಿಧಿ ಕೊಡುವಂತಹ ಮನಸುಳ್ಳವರಾಗಿ ಬೆಳೆಯಬೇಕು : ಡಾ.ಉಜ್ವಲ್ ಯು ಸುವರ್ಣ, ಎಂ.ಬಿ.ಬಿ.ಎಸ್, ಎಂ.ಎಸ್ (ಆರ್ಥೋ)

ಕೂಳೂರು : ವಿದ್ಯಾನಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು ಉದ್ಯೋಗ ಪಡೆದ ನಂತರ ವಿದ್ಯಾನಿಧಿ ನೀಡುವ ಮನೋಭಾವ ಬೆಳೆಸಿಕೊಂಡು, ಮುಂಬರುವ ದಿನಗಳಲ್ಲಿ ವಿದ್ಯಾ ನಿಧಿ ವಿತರಿಸುವಂತಾಗಲಿ ಎಂದು ಡಾ.ಉಜ್ವಲ್ ಯು.ಸುವರ್ಣ ಎಂದು ಹಾರೈಸಿದರು. ಅವರು ದಿನಾಂಕ 21-01-2024 ರಂದು ಕೂಳೂರು ಫಲ್ಗುಣಿ ಸಭಾಂಗಣ ನಡೆದ ಯುವವಾಹಿನಿ (ರಿ.) ಕೂಳೂರು ಘಟಕದ ಪದಗ್ರಹಣ ಹಾಗೂ ವಿದ್ಯಾನಿಧಿ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಯಶವಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ರವಿಶಂಕರ್ […]

Read More

ವಿದ್ಯಾನಿಧಿಯ ಸದ್ಬಳಕೆಯೊಂದಿಗೆ ಸಮಾಜದ ಸತ್ಪ್ರಜೆಗಳಾಗಿ :- ಉದಯ ಅಮೀನ್ ಮಟ್ಟು ಆಶಯ

ಕೂಳೂರು :- ಸಮಾಜದಲ್ಲಿರುವ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಯುವವಾಹಿನಿ (ರಿ.) ಕೂಳೂರು ಘಟಕ ಕಳೆದ 7 ವರುಷಗಳಿಂದ ವಿದ್ಯಾನಿಧಿ ನೀಡುತ್ತಾ ಬಂದಿದೆ . ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಉನ್ನತ ಅಂಕ ಗಳಿಸಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಕೂಳೂರಿನ ಪಂಪ್ ಹೌಸ್ ಬಳಿ ದಿನಾಂಕ 03 ಡಿಸೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ವಿದ್ಯಾನಿಧಿ […]

Read More

ಅಂಗನವಾಡಿ ಪುಟಾಣಿ ಮಕ್ಕಳ ಜೊತೆ ಮಕ್ಕಳ ದಿನಾಚರಣೆ ಆಚರಣೆ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ಮಂಜೊಟ್ಟಿ ಅಂಗನವಾಡಿ ಕೇಂದ್ರ ಪಂಜಿಮೋಗರು ನಲ್ಲಿ ದಿನಾಂಕ 14 ನವೆಂಬರ್ 2022ರ ಸೋಮವಾರದಂದು ಬೆಳಗ್ಗೆ ಶಾಲಾ ಶಿಕ್ಷಕಿಯಾದ ಪ್ರಮೀಳರವರು ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜಯಂತ್ ಸುವರ್ಣರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜವಹಾರ ಲಾಲ್ ನೆಹರು ರವರ ಜನ್ಮ ದಿನದ ಅಂಗವಾಗಿ ನೆಹರೂರವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಂತರ ಅಂಗನವಾಡಿ […]

Read More

ಜಾಗೃತವಾಗಲಿ ಅಂತಃಸತ್ವ, ದೂರಾಗಲಿ ಅಂಧಕಾರ :- ಕೇಶವ ಬಂಗೇರ

ಕೂಳೂರು :- ದೀಪಾವಳಿಯ ಬೆಳಕು ಅಂತರಾತ್ಮವನ್ನು ಉದ್ದೀಪನಗೊಳಿಸಬೇಕು, ಪಟಾಕಿ ಸದ್ದು ನಿದ್ದೆಯಲ್ಲಿದ್ದವರನ್ನೂ ಬಡಿದೆಬ್ಬಿಸುವಂತೆ ದೀಪಾವಳಿ ಹಬ್ಬ ನಮ್ಮೊಳಗೆ ಅಂತರ್ಗತವಾಗಿರುವ ಅಂತಃಸತ್ವವನ್ನು ಬಡಿದೆಬ್ಬಿಸಬೇಕು ಮತ್ತು ಅಂಧಕಾರವನ್ನು ಹೋಗಲಾಡಿಸಬೇಕು ಎಂದು ಕುದ್ರೋಳಿ ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕ ವತಿಯಿಂದ ದಿನಾಂಕ 29 ಅಕ್ಟೋಬರ್ 2022 ರಂದು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರ ಮನೆ ಪಂಜಿಮೊಗರು ಶ್ರೀರಕ್ಷಾದಲ್ಲಿ ನಡೆದ -ನಮ್ಮ ಮನೆ ಹಬ್ಬ ದೀಪಾವಳಿ ಕಾರ್ಯಕ್ರಮದಲ್ಲಿ […]

Read More

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 25ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02 ಅಕ್ಟೋಬರ್ 2022 ಭಾನುವಾರದಂದು ನಡೆಯಿತು. ಸದಸ್ಯರಾದ ಜಯ ಬಂಗೇರರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ , ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಸಂಘಟನಾ ಕಾರ್ಯದರ್ಶಿ ಸಚಿನ್ ಪೂಜಾರಿ , ಮಹಿಮೂನಾ S.D.M.C.ಅಧ್ಯಕ್ಷರು, […]

Read More

ಮನೆ ಮನೆ ಭಜನೆ

ಕೂಳೂರು :- ಹರಿನಾಮ ಸಂಕೀರ್ತನೆಯೇ ಸಾಕು ಎಲ್ಲರ ಪಾಪಸಂಚಯವನ್ನು ಉಪಶಮನಗೊಳಿಸಲು. ಶೃತಿ, ತಾಳ, ಲಯ ಬದ್ಧವಾಗಿ ಭಜನೆಯ ರೂಪದಲ್ಲಿ ಭಗವಂತನನ್ನು ಸೇವಿಸಬಹುದು ಹಾಗೂ ಆರಾಧಿಸಬಹುದು. ದೇವರ್ಷಿಗಳಾದ ನಾರದರು ಹೇಳುತ್ತಾರೆ ಭಗವನ್ನಾಮವು ಒಂದೇ ನನ್ನ ಪ್ರಾಣ. ಆಧ್ಯಾತ್ಮಿಕ ಅಂಧಕಾರದ ಕಲಿಯುಗದಲ್ಲಿ ಭಗವನ್ನಾಮಹೊರತು ಬೇರೆಯಾವುದೇ ಆಶ್ರಯವಿಲ್ಲ. ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಲಕ್ಷ್ಮೀ ಪೂಜೆಯ […]

Read More

ಬ್ರಹ್ಮಶ್ರೀ ನಾರಾಯಣಗುರುವರ್ಯರ 168ನೇ ಜನ್ಮ ದಿನಾಚರಣೆ

ಕೂಳೂರು :- ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 168 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸ್ನೇಹ ಭಾರತಿ ವಿದ್ಯಾ ಸಂಸ್ಥೆ ನಮ್ಮ ಹಿರಿಯರ ಮನೆ ಜೋಕಟ್ಟೆ ಪೊರ್ಕೋಡಿಯಲ್ಲಿ ಸೇವಾ ಕಾರ್ಯಕ್ರಮವು ದಿನಾಂಕ 10 ಸೆಪ್ಟೆಂಬರ್ 2022 ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ವಹಿಸಿದ್ದರು. ಗುರುಗಳ ಭಾವಚಿತ್ರಕ್ಕೆ ಹಿರಿಯರಾದ ಸುನಂದರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ ಮಾಜಿ ಅಧ್ಯಕ್ಷರಾದ […]

Read More

ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!