Yuvavahini

ಕೂಳೂರು

ಬಡ ಕುಟುಂಬಗಳಿಗೆ ಸಹಾಯಹಸ್ತ

ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದಿನಾಂಕ‌15.10.2017 ರಂದು ಮೂರು ಬಡ ಕುಟುಂಬಗಳಿಗೆ ಒಂದು ತಿಂಗಳಿಗೆ ಬೇಕಾಗುವಷ್ಟು ದಿನಸಿ ಸಾಮಗ್ರಿಗಳನ್ನು ನೀಡಲಾಯಿತು ಈ ಸಂದರ್ಭದಲ್ಲಿ  ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ತುಕರಾಮ್ ಎನ್ ,ಕುಳೂರು ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಅಧ್ಯಕ್ಷರಾದ ಜಯನಂದ ಅಮೀನ್ ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಪುಷ್ಪ ರಾಜ್, ಸಂಚಾಲಕರಾದ ಪವಿತ್ರ ಕೆ ಹಾಗೂ ಯುವವಾಹಿನಿ ಕೂಳೂರು ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ವಿಶೇಷ ಚೇತನ ಮಕ್ಕಳ ಜೊತೆ ಗುರುಜಯಂತಿ

ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮದಿನಾಚರಣೆ ಪ್ರಯುಕ್ತ ಸಾನಿದ್ಯ ವಿಶೇಷ ಚೇತನ ಮಕ್ಜಳ ಜೊತೆ ಗುರುವರ್ಯರ ಜನ್ಮದಿನಾಚರಣೆ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.ಸಾನಿದ್ಯದಲ್ಲಿರುವ 160 ಮಕ್ಕಳ ಯೋಗಕ್ಷೇಮ ವಿಚಾರಿಸಿದ ಕೂಳೂರು ಯುವವಾಹಿನಿ ಸದಸ್ಯರು ಅವರೊಂದಿಗೆ ಮಕ್ಜಳಂತೆ ಬೆರೆತರು.ಮಕ್ಕಳಿಗೆ ಸಿಹಿತಿಂಡಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲಾಯಿತು.ಈ ಸಂದರ್ಭದಲ್ಲಿ ಕುಳೂರು ಯುವವಾಹಿನಿ ಅಧ್ಯಕ್ಷರಾದ ಪುಷ್ಪರಾಜ್, ಕಾರ್ಯದರ್ಶಿ ವಿನೀತ್, ನಿಕಟ ಪೂರ್ವ ಅಧ್ಯಕ್ಷರಾದ ಸುಜಿತ್ ರಾಜ್, ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು

Read More

ಕೌಟುಂಬಿಕ ಸಾಮರಸ್ಯ, ಸತತ ಪ್ರಯತ್ನ ,ಇಚ್ಛಾಶಕ್ತಿ, ಇವೇ ಯುವವಾಹಿನಿ ಸಾಧನೆಯ ಹಿಂದಿರುವ ಶಕ್ತಿ :- ಸಂಕಮಾರ್

ಕೌಟುಂಬಿಕ ಸಾಮರಸ್ಯ,ಇಚ್ಛಾಶಕ್ತಿ, ಆತ್ಮ ಶಕ್ತಿ, ಸತತ ಪ್ರಯತ್ನ, ಇವೇ ಯುವವಾಹಿನಿಯ ಸಾಧನೆಯ ಹಿಂದಿರುವ ಶಕ್ತಿ, ಕೇವಲ 9 ತಿಂಗಳಲ್ಲಿ ಮೌಲ್ಯಯುತ 24 ಕಾರ್ಯಕ್ರಮಗಳನ್ನು ನೀಡಿದ ಕೂಳೂರು ಯುವವಾಹಿನಿ ಘಟಕವು ಯುವ ಜನಾಂಗಕ್ಕೆ ಮಾದರಿಯಾಗಿದೆ, ಕ್ರಿಯಾಶೀಲ ಯೋಜನೆ ಯೋಚನೆಗಳಿಂದ ಕೂಡಿದ ಅಂತರಾಷ್ಟ್ರೀಯ ಸಂಸ್ಥೆ ಗೆ ಸರಿಸಮನಾಗಿರುವ ಪದಗ್ರಹಣ ಸಮಾರಂಭವು ಸರ್ವರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಉಪನ್ಯಾಸಕರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಅಭಿಪ್ರಾಯ ಪಟ್ಟರು. ಅವರು ದಿನಾಂಕ 25.06.2017ನೇ ಆದಿತ್ಯವಾರ ಕೂಳೂರು ಚರ್ಚ್ ಹಾಲ್ […]

Read More

ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾಗಿ ಪುಷ್ಪರಾಜ್

  ನಾನು ನನ್ನದು,ನನ್ನಿಂದ ಎನ್ನುವ ಮಾತಿನಿಂದ ಸ್ವಲ್ಪ ಹೊರಗೆ ಬಂದು ನಾವು ನಮ್ಮದು, ನಮ್ಮೆಲ್ಲರ ಎನ್ನುವ ವಿಶಾಲ ಮನೋಭಾವ ಬೆಳೆಸಿಕೊಂಡರೆ ಆತ್ಮವಿಶ್ವಾಸ ಒಂದನ್ನುಳಿದು ಮಿಕ್ಕೆಲ್ಲವನ್ನೂ ಕಳೆದುಕೊಂಡರೂ ಚಿಂತೆ ಇಲ್ಲ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಮುಂದಿಟ್ಟುಕೊಂಡು ಮುನ್ನಡೆದರೆ ನಾವು ಖಂಡಿತಾ ಯಶಸ್ವಿಯಾಗುತ್ತೇವೆ.ಗುರುಗಳ ತತ್ವದಡಿಯಲ್ಲಿ ಹಿರಿಯ ಸದಸ್ಯರ ಮಾರ್ಗದರ್ಶನ ಪಡೆದು ಯುವವಾಹಿನಿ ಕೂಳೂರು ಘಟಕದಿಂದ ಇನ್ನೂ ಉತ್ತಮ ಕಾರ್ಯಕ್ರಮ ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದು ಯುವವಾಹಿನಿ (ರಿ) ಕೂಳೂರು ಘಟಕದ. 2017-18 ನೇ ಸಾಲಿನ ನೂತನ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ […]

Read More

100ಮೀ ಓಟದಲ್ಲಿ ಚಿನ್ನ ಗೆದ್ದ ಕೊಲ್ಯ ಯುವವಾಹಿನಿಯ ಸ್ವಸ್ತಿಕ್ ಪೂಜಾರಿ

ಯುವವಾಹಿನಿ (ರಿ)  ಕೊಲ್ಯಘಟಕದ ಸದಸ್ಯ ಸ್ವಸ್ತಿಕ್ ಅವರು ದಿನಾಂಕ 19.05.2017 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ  ಜರುಗಿದ ಅತ್ಲೆಟಿಕ್ ಸ್ಪರ್ಧೆಯಲ್ಲಿ 100 ಮೀ ಓಟವನ್ನು 10.83 ಸೆಕೆಂಡುಗಳಲ್ಲಿ ಕ್ರಮಿಸಿ ಚಿನ್ನದ ಪದಕ ತನ್ನ ಮುಡಿಗೇರಿಸಿಕೊಂಡಿದ್ದಾರೆ ಸ್ವಸ್ತಿಕ್ ಅವರು ಚಿನ್ನದ ಪದಕ ಗಳಿಸುವುದರ ಮೂಲಕ ಉತ್ತರಪ್ರದೇಶದ ಲಕ್ನೊದಲ್ಲಿ 2017 ಜೂನ್ 11 ರಿಂದ 15 ರವರಗೆ ಜರುಗುವ ಫೆಡರೇಶನ್ ಕಪ್ ನಾಷನಲ್ ಜೂನಿಯರ್ ಅತ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.ಕೊಲ್ಯ ಸೋಮೇಶ್ವರದ ಆನಂದಾಶ್ರಮ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಸಂದೀಪ್ ರಾಜ್ […]

Read More

ಕೂಳೂರು ಯುವವಾಹಿನಿ : ಅಭಿವ್ಯಕ್ತಿ ಅಭಿಪ್ರಾಯಗಳ ನಿರೂಪಣೆ

ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಅಭಿವ್ಯಕ್ತಿ – ಅಭಿಪ್ರಾಯಗಳ ನಿರೂಪಣೆ ಕಾರ್ಯಕ್ರಮವು ದಿನಾಂಕ 12.03.2017 ನೇ ಆದಿತ್ಯವಾರ ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದಲ್ಲಿ ಜರುಗಿತು. ಅಭಿಪ್ರಾಯಗಳ ನಿರೂಪಣೆ ಮಾಡಿದ ಸಹನಾ ಕುಂದರ್ – ಈ ಜಗತ್ತು ಗಂಡು ಹೆಣ್ಣು ಇಬ್ಬರನ್ನೂ ಅವಲಂಬಿಸಿದೆ. ಟಿವಿ ಸೀರಿಯಲ್­ಗಳ ಭ್ರಮೆಯಿಂದ ಮಹಿಳೆಯರು ಹೊರ ಬರಬೇಕು. ನಮ್ಮ ರಕ್ತದಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದೆ. ಪಾಶ್ಚಾತ್ಯ ಸಂಸ್ಕೃತಿಗೆ ನಾವು ಬಲಿಯಾಗಿದ್ದೇವೆ. ಮಹಿಳೆಯರು ಸಂಸ್ಕೃತಿ ಸಂಸ್ಕಾರದ ಬಗ್ಗೆ ಜಾಗೃತರಾದಾಗ […]

Read More

ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ

ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್‌ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ […]

Read More

ಕೂಳೂರು ಘಟಕದಿಂದ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 14-1-2017 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಸುವರ್ಣ ಆರೋಗ್ಯಕ್ಕೆ ಸುರಕ್ಷಾ ಯೋಜನೆಗಳು ಎಂಬ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕರಾದ ಜಗನ್ನಾಥ್ ಶಿರ್ಲಾಲ್‌ರವರು ಆರೋಗ್ಯ ಸುರಕ್ಷಾ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರದಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸುರಕ್ಷಾ ಯೋಜನೆಗಳಿದ್ದು, ಆಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಜನರು […]

Read More

’ಪ್ರಸ್ತುತ ದಿನದಲ್ಲಿ ಯವಜನತೆ’ ಕಾರ್ಯಾಗಾರ

ಕೂಳೂರು ಘಟಕದ ವತಿಯಿಂದ ದಿನಾಂಕ 14-12-2016 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಪ್ರಸ್ತುತ ದಿನದಲ್ಲಿ ಯವಜನತೆ’ ಎಂಬ ಕಾರ್ಯಾಗಾರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ನರೇಶ್‌ಕುಮಾರ್ ಸಸಿಹಿತ್ಲುರವರು ಪ್ರಸ್ತುತ ಸಮಾಜದಲ್ಲಿ ಬಿಲ್ಲವ ಯುವಜನತೆಗೆ ಆಗುವಂತಹ ತೊಂದರೆಗಳ ಬಗ್ಗೆ ತಿಳಿಸಿದರು. ಬಿಲ್ಲವ ಯುವಜನತೆಯು ಯಾವ ರೀತಿಯಲ್ಲಿ ಅನ್ಯ ಸಮುದಾಯದಿಂದ ದಾರಿ ತಪ್ಪುತ್ತಿದೆ ಎಂಬ ವಿಷಯವನ್ನು ಕೆಲವೊಂದು ಉದಾಹರಣೆಯ ಮೂಲಕ ತಿಳಿಸಿ ಯುವಜನತೆಗೆ ಎಚ್ಚರಿಕೆಯನ್ನು ನೀಡಿದರು ಹಾಗೂ ಆದಷ್ಟು ಯುವಜನತೆಯು ಯುವವಾಹಿನಿಗೆ ಸೇರಿ ಈ ಎಲ್ಲಾ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!