ಕೂಳೂರು

ಯುವವಾಹಿನಿ ಕೂಳೂರು ಘಟಕದಿಂದ ವಿದ್ಯಾನಿಧಿ ಹಸ್ತಾಂತರ

ಕೂಳೂರು : ಬೋಂದೆಲ್ ನಿವಾಸಿ ಅನುಪಮ ಇವರ ಪುತ್ರ ಧನರಾಜ್ ಬಂಗೇರ ಇವರ ಶಾಲಾ ಫೀಸ್ ಪಾವತಿಸಲು ಅಸಾಧ್ಯವಾದ ಕಾರಣ ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ 13,500/- ರೂಪಾಯಿಯನ್ನು ಎಲ್ಲರ ಒಪ್ಪಿಗೆಯ ಮೇರೆಗೆ ಅವರಿಗೆ ದಿನಾಂಕ 20/03/2019 ರ ವಾರದ ಸಭೆಯಲ್ಲಿ ಸಲಹೆಗಾರರಾದ ನೇಮಿರಾಜ್ ಹಸ್ತಾಂತರಿಸಿದರು. ಈ ಸoದರ್ಭದಲ್ಲಿ ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಕಾರ್ಯದರ್ಶಿ ಪವಿತ್ರ ಅಚನ್, ನಿಕಟ ಪೂರ್ವ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಪಧಾದಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು .

Read More

ಯುವವಾಹಿನಿ ಪ್ರೀಮಿಯರ್ ಲೀಗ್ ಕ್ರಿಕೆಟ್

ಕೂಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಆತಿಥ್ಯದಲ್ಲಿ ಯುವ ವಾಹಿನಿ ವಿದ್ಯಾನಿಧಿಯ ಬಲವರ್ಧನೆಗಾಗಿ ಯುವವಾಹಿನಿ ಪ್ರೀಮಿಯರ್ ಲೀಗ್ (YPL-201) ಮಾರ್ಚ್ 9 ಹಾಗೂ 10 ರಂದು ಎನ್.ಎಂ.ಪಿ.ಟಿ ಮೈದಾನ ಪಣಂಬೂರು ಇಲ್ಲಿ ನಡೆಯಿತು .ಬೆಳಗ್ಗೆ 7 ಗಂಟೆಗೆ ಸರಿಯಾಗಿ ನಾರಾಯಣ ಗುರುಗಳ ಆಶೀರ್ವಾದ ಪಡೆದು ದೀಪ ಬೆಳಗಿಸಿ ಕ್ರಿಕೆಟ್ ಪಂದ್ಯಾಟವನ್ನು ಪ್ರಾರಂಭಿಸಲಾಯಿತು .ಎರಡು ಪಂದ್ಯಗಳ ನಂತರ ಬೆಳಗ್ಗೆ 9 ಗಂಟೆಗೆ ಸರಿಯಾಗಿ ಉದ್ಘಾಟನಾ ಸಮಾರಂಭ ಜರಗಿತು .ಉದ್ಘಾಟನಾ ಸಮಾರಂಭದ ಅಧ್ಯಕ್ಷ […]

Read More

ಬಾಂಧವ್ಯ ಬೆಸುಗೆ -2019

ಯುವವಾಹಿನಿ(ರಿ)ಕೂಳೂರು ಘಟಕದ ವತಿಯಿಂದ ಯುವವಾಹಿನಿ ಸದಸ್ಯರ ಬಾಂಧವ್ಯಗಳ ಕೊಂಡಿ ಮತ್ತಷ್ಟು ಭದ್ರವಾಗಲಿ ಎಂಬ ಆಶಯದೊಂದಿಗೆ  ಬಾಂಧವ್ಯ ಬೆಸುಗೆ-2019 ಯುವವಾಹಿನಿ ಕುಟುಂಬ ಸಮ್ಮಿಲನ ಕಾರ್ಯಕ್ರಮವು ದಿನಾಂಕ 20/01/2019 ರವಿವಾರದಂದು ಮುಂಜಾನೆಯಿಂದ ಮುಸ್ಸಂಜೆವರೆಗೆ ‘ಕೆರೆಬಿಯನ್ ರೆಸಾರ್ಟ್ ‘ಮೂಲ್ಕಿ ಇಲ್ಲಿ ನಡೆಯಿತು .ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು .ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ,ಸಂಚಾಲಕರಾದ ವಿಮಲಾ ರಾಜೇಶ್ , ಘಟಕದ ಮಾರ್ಗದರ್ಶಕರಾದ ಗಿರಿಧರ್ ಸನಿಲ್ ಉಪಸ್ಥಿತರಿದ್ದರು .ಅಧ್ಯಕ್ಷರು ಎಲ್ಲರನ್ನು ಸ್ವಾಗತಿಸಿದರು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ […]

Read More

ಯುವವಾಹಿನಿಯ ವಿದ್ಯಾನಿಧಿ ಯೋಜನೆ ಶ್ಲಾಘನೀಯ : ಅನಿಲ್ ಕುಮಾರ್

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 13-01-2019 ರಂದು ವಿದ್ಯಾನಿಧಿಯ ಬಲವರ್ಧನೆಗಾಗಿ ಶಾರದಾ ಕಲಾ ಆರ್ಟ್ಸ್ ಕಲಾವಿದೆರ್(ರಿ) ಮಂಜೇಶ್ವರ ಇವರ ಬತ್ತಿಯಿಂದ ‘ ನಿತ್ಯೆ ಬನ್ನಗ ‘ ಎಂಬ ನಾಟಕವನ್ನು ಆಯೋಜಿಸಲಾಗಿತ್ತು .ಯುವವಾಹಿನಿ ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಅನಿಲ್ ಕುಮಾರ್ -ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ,ನವೀನ್ ಚಂದ್ರ ಬಿ ಪೂಜಾರಿ – ಬಿಜೆಪಿ ಉತ್ತರ ವಿಧಾನಸಭಾ ಕ್ಷೇತ್ರ ಹಿಂದುಳಿದ […]

Read More

ನದಿ ಮಡಿಲಿನ ಕಡೆಗೆ ಯುವವಾಹಿನಿಯ ಸ್ವಚ್ಛತೆಯ ನಡಿಗೆ

ಮಂಗಳೂರು : ನಿರಂತರವಾಗಿ ಸ್ವಚ್ಚತಾ ಕಾರ್ಯ ನಡೆಸುವ ಯುವವಾಹಿನಿ ಕೂಳೂರು ಘಟಕವು ಈ ಬಾರಿ ಜೀವಜಲ‌ ನೀಡುವ ನದಿಯನ್ನು ಸ್ವಚ್ಚ ಗೊಳಿಸುವ ಮೂಲಕ ಮಾದರಿಯಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಶಾಸಕರಾದ ಭರತ್ ಶೆಟ್ಟಿ ತಿಳಿಸಿದರು. ಅವರು ದಿನಾಂಕ 06.01.2019 ರಂದು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಜರುಗಿದ ಮಂಗಳೂರಿನ ಫಲ್ಗುಣಿ ನದಿಯ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ ಕೋಟ್ಯಾನ್ ,ಕಾರ್ಯದರ್ಶಿ […]

Read More

ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ

ಕೂಳೂರು: ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಶಿರಡಿ ಪ್ರವಾಸ ದಿನಾಂಕ 18/11/2018 ರಿಂದ ದಿನಾಂಕ 22/11/2018ರ ತನಕ ಏರ್ಪಡಿಸಲಾಗಿದ್ದು 45 ಮಂದಿ ಸದಸ್ಯರನ್ನೊಳಗೊಂಡ ತಂಡಕ್ಕೆ ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ಚಾಲನೆ ನೀಡಿದರು. ದಿನಾಂಕ 18/11/2018 ರವಿವಾರ ರಾತ್ರಿ 9.45 ಕ್ಕೆ ಮಂಗಳೂರಿನಿಂದ ಹೊರಟು 19/11/18 ಸೋಮವಾರ ಸಂಜೆ 6 ಗಂಟೆಗೆ ಸರಿಯಾಗಿ ನಾಸಿಕ್ ತಲುಪಿದೆವು. ಅದೇ ದಿನ ರಾತ್ರಿ ಮೊದಲನೆಯದಾಗಿ ಬಿಲ್ಲವರ ಗುರುವಾದ ಗಿರ್ನಾರ್‍ದಲ್ಲಿರುವ ನಾರಾಯಣಗುರು ಸ್ವಾಮಿಯವರ ಮಂದಿರಕ್ಕೆ ಭೇಟಿ ನೀಡಿದೆವು. […]

Read More

ಮುಗ್ಧ ಮನಸ್ಸಿನ ಸಮ್ಮಿಲನ

ಕೂಳೂರು : ಯುವವಾಹಿನಿ(ರಿ) ಕೂಳೂರು ಘಟಕದ ಮಕ್ಕಳ ದಿನಾಚರಣೆ -ಮುಗ್ಧ ಮನಸ್ಸಿನ ಸಮ್ಮಿಲನ ಕಾರ್ಯಕ್ರಮವನ್ನು ದಿನಾಂಕ 14/11/2018 ಬುಧವಾರ 4 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ ಏರ್ಪಡಿಸಲಾಯಿತು.ಮೂರು ಅಂಗನವಾಡಿ ಕೇಂದ್ರದ ಸುಮಾರು 60 ಮಂದಿ ಪುಟ್ಟ ಮಕ್ಕಳು ಹಾಗೂ ಅವರ ಪೋಷಕರು ಇಲ್ಲಿ ಭಾಗಿಯಾಗಿದ್ದು ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯ ನಂತರ ಮನರಂಜನೆಗಾಗಿ ಮಕ್ಕಳಿಂದ ಅಭಿನಯ ಗೀತೆ, ನೃತ್ಯ ಹಾಗೂ ಮಕ್ಕಳ ಪೋಷಕರಿಗೂ ಕೂಡ ಮಕ್ಕಳ ಜತೆ ನೃತ್ಯ […]

Read More

ಕತ್ತಲಿನಿಂದ ಬೆಳಕಿನೆಡೆಗೆ- ನಮ್ಮ ಮನೆ ಹಬ್ಬ ದೀಪಾವಳಿ

ಕೂಳೂರು : ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ‘ಕತ್ತಲಿನಿಂದ ಬೆಳಕಿನೆಡೆಗೆ- ನಮ್ಮ ಮನೆ ಹಬ್ಬ ದೀಪಾವಳಿ’ ಯನ್ನು ದಿನಾಂಕ 06/11/2018 ರಂದು ಯುವವಾಹಿನಿ(ರಿ) ಕೂಳೂರು ಘಟಕದ ವತಿಯಿಂದ ಆಚರಿಸಲಾಯಿತು. ಈ ಕಾರ್ಯಕ್ರಮವು ಘಟಕದ ಕುಟುಂಬ ಸಂಪರ್ಕ ನಿರ್ದೇಶಕರಾದ ರೇಣುಕಾ ತಾರನಾಥ್ ಅವರ ಸಂಚಾಲಕತ್ವದಲ್ಲಿ ಅವರ ಮನೆಯಲ್ಲಿ 90 ಮಂದಿ ಸದಸ್ಯರ ಉಪಸ್ಥಿತಿಯೊಂದಿಗೆ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ವಹಿಸಿದ್ದರು .ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ) ಕೇಂದ್ರ […]

Read More

ಬಡವರ ಮನೆಗೆ ಬೆಳಕು ಮೂಡಿಸಿದ ಕೂಳೂರು ಘಟಕ

ಕೂಳೂರು : ಬೆಳಕಿನ ಒಂದು ಸೆಲೆ ಸಾಕು ಬದುಕಿನಲ್ಲಿ ಜೀವನೋತ್ಸಾಹ ತುಂಬಲು .ಹಣತೆಯ ಬೆಳಕಿನಲ್ಲಿ ಒಬ್ಬರ ಕಷ್ಟ, ನೋವು,ನಲಿವನ್ನು ಕ್ಷಣಕಾಲ ಕಂಡು ಅರ್ಥೈಸಿಕೊಳ್ಳಲು ಇದೊಂದು ಸದಾವಕಾಶ ಎನ್ನುವಂತೆ ಶ್ರೀ ಗುರುವರ್ಯರ ಆಶೀರ್ವಾದದೊಂದಿಗೆ, ಕೂಳೂರು ಘಟಕದ ಆಶಯದಂತೆ ದೀಪಾವಳಿ ಹಬ್ಬದಂದು ಇಡೀ ಜಗತ್ತೇ ಬೆಳಕಿನಲ್ಲಿ ಜಗಮಗಿಸುವಾಗ ಕೆಲವೊಂದು ಮನೆಯಲ್ಲಿ ಹಣತೆ ಹಚ್ಚಲು ಸಾಧ್ಯವೇ ಇಲ್ಲ ಎನ್ನುವ ದಯನೀಯ ಕುಟುಂಬಗಳು ನಮ್ಮ ಸಮಾಜದಲ್ಲಿ ಇರುವುದನ್ನು ಗುರುತಿಸಿ ಅವರಿಗೆ ಒಂದು ತಿಂಗಳ ದಿನಬಳಕೆಯ ಎಲ್ಲ ಸಾಮಗ್ರಿಗಳನ್ನು ಒದಗಿಸಿಕೊಟ್ಟು ದೀಪಾವಳಿಯ ಅರ್ಥಪೂರ್ಣ ಆಚರಣೆಯಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 17-11-2024
ಸ್ಥಳ : ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ, ಹೆಜಮಾಡಿ

ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
error: Content is protected !!