
ಯುವವಾಹಿನಿ ಸಿನಿದನಿ : ಯುವವಾಹಿನಿ ಕೊಲ್ಯ ಘಟಕದ ಕಿರುಚಿತ್ರ
01-11-2026, 2:25 PM


28-10-2026, 6:00 PM
ಮಂಗಳೂರು ಅ 28 : ಮಹಿಳೆಯರು ಕಲಿತ ಕೌಶಲ್ಯವನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವುದರ ಜೊತೆಗೆ, ಭವಿಷ್ಯದಲ್ಲಿ ಇತರರಿಗೂ ಉದ್ಯೋಗಾವಕಾಶ ಕಲ್ಪಿಸುವ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ಹಾಗೂ ತರಬೇತಿಯ ಸಂಪನ್ಮೂಲ ವ್ಯಕ್ತಿ ವಿದ್ಯಾ ರಾಕೇಶ್ ಹೇಳಿದರು. ಯುವವಾಹಿನಿ (ರಿ.) ಕೊಲ್ಯ ಘಟಕ, ಸಿಡಾಕ್ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 30 ದಿನಗಳ ಬ್ರೈಡಲ್ ಮೇಕಪ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು […]

18-10-2026, 9:00 PM
ಕೊಲ್ಯ, ಅ. 18: ಶಕ್ತಿ ಸ್ವರೂಪಿಣಿ ದೇವಿಯ ಆರಾಧನೆಯ ನವರಾತ್ರಿ ಮಹೋತ್ಸವದ ಅಂಗವಾಗಿ ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಭಾನುವಾರ ಕೊಲ್ಯ ಸುತ್ತಮುತ್ತಲಿನ ವಿವಿಧ ದೇವಸ್ಥಾನ ಹಾಗೂ ದೈವಸ್ಥಾನಗಳಲ್ಲಿ ನವರಾತ್ರಿ ಪೂಜೆ ಮತ್ತು ಅನ್ನದಾನ ಸೇವೆ ಸಲ್ಲಿಸಲಾಯಿತು. ಮೊದಲಿಗೆ ಕೊಲ ಮುನಿಗಳ ತಪಸ್ಸಿನಿಂದ ಪುಣ್ಯಪ್ರಸಿದ್ಧಿ ಪಡೆದ ಹಾಗೂ ಶ್ರೀ ರಮಾನಂದ ಸ್ವಾಮೀಜಿಯವರ ಆರಾಧನೆಗೆ ಪಾತ್ರವಾದ ಮೂಕಾಂಬಿಕೆ ದೇವಿಯ ಸನ್ನಿಧಿಯಿರುವ ಶ್ರೀ ಕ್ಷೇತ್ರ ಕೊಲ್ಯಕ್ಕೆ ಭೇಟಿ ನೀಡಿ ಪೂಜೆ ಹಾಗೂ ಅನ್ನದಾನ ಸೇವೆ ಸಲ್ಲಿಸಲಾಯಿತು. ಬಳಿಕ ದೇವರ […]

16-10-2026, 9:00 PM
ಕೊಲ್ಯ, ಅ. 16: ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ನವರಾತ್ರಿ ಮಹೋತ್ಸವದ ಪ್ರಯುಕ್ತ ಶುಕ್ರವಾರ ನೆತ್ತಿಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ ಹಾಗೂ ಅನ್ನದಾನ ಸೇವೆ ಭಕ್ತಿಭಾವದಿಂದ ನೆರವೇರಿತು. ಸಂಜೆ ನಡೆದ ಭಜನಾ ಸೇವೆಯಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಂಡು ಶ್ರೀ ದೇವಿಯ ಕೀರ್ತನೆಗಳನ್ನು ಹಾಡಿದರು. ಬಳಿಕ ನಡೆದ ಮಹಾಪೂಜೆ ಹಾಗೂ ಮಹಾಮಂಗಳಾರತಿಯಲ್ಲಿ ಸರ್ವರೂ ಭಕ್ತಿಯಿಂದ ಪ್ರಾರ್ಥಿಸಿದರು. ದೇವಸ್ಥಾನದ ಅರ್ಚಕರು ಯುವವಾಹಿನಿ ಘಟಕದ ಸರ್ವ ಸದಸ್ಯರ ಪರವಾಗಿ ಪ್ರಾರ್ಥಿಸಿ ಘಟಕದ […]

14-10-2026, 9:00 PM
ಕೊಲ್ಯ, ಅ. 14: ರಾಸಾಯನಿಕ ಪದಾರ್ಥಗಳ ಬಳಕೆಯ ಆತಂಕದ ನಡುವೆ ಆರೋಗ್ಯಕರ ಆಹಾರ ಸೇವನೆ ಹಾಗೂ ಪರಿಸರ ಸಂರಕ್ಷಣೆಯ ಉದ್ದೇಶದಿಂದ ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಸದಸ್ಯರಿಗಾಗಿ ‘ನಮ್ಮ ಕೈತೋಟ, ನಮ್ಮ ಆಹಾರ’ ಎಂಬ ವಿನೂತನ ಕಾರ್ಯಕ್ರಮವನ್ನು ಅಕ್ಟೋಬರ್ 14ರಂದು ಕೊಲ್ಯದಲ್ಲಿ ಆಯೋಜಿಸಲಾಯಿತು. ಮನೆಯ ಕೈತೋಟದಲ್ಲಿ ಸಾವಯವ ಪದ್ಧತಿಯಲ್ಲಿ ತರಕಾರಿಗಳನ್ನು ಬೆಳೆಸಿ, ಅವುಗಳನ್ನು ಆಹಾರವಾಗಿ ಬಳಸುವ ಮೂಲಕ ಆರೋಗ್ಯ ಕಾಪಾಡುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು. ಉಳ್ಳಾಲ ವಲಯದ […]

11-10-2026, 2:00 PM
ಕೊಲ್ಯ ಅ 11: ಯುವವಾಹಿನಿ (ರಿ.) ಕೊಲ್ಯ ಘಟಕ, ರೋಟರಿ ಸಮುದಾಯ ದಳ ಸೋಮೇಶ್ವರ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಕೊಲ್ಯ ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿಯ ವಠಾರದಲ್ಲಿ ಉಚಿತ ಹುಚ್ಚುನಾಯಿ ನಿಯಂತ್ರಣಾ ಲಸಿಕಾ ಶಿಬಿರ ನಡೆಯಿತು. ಸಾಕುಪ್ರಾಣಿಗಳಿಗೆ ಲಸಿಕೆ ಹಾಕಿಸುವುದು ಅತ್ಯಗತ್ಯ: ಡಾ. ರಚನಾ : ಪಶುವೈದ್ಯಕೀಯ ಇಲಾಖೆ, ಉಳ್ಳಾಲ ಇದರ ವೈದ್ಯಾಧಿಕಾರಿ ಡಾ. ರಚನಾ ಅವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಾಕುಪ್ರಾಣಿಗಳಿಗೆ ರೇಬಿಸ್ ರೋಗ ಬಾರದಂತೆ ತಡೆಯಲು ಮುನ್ನೆಚ್ಚರಿಕೆಯಾಗಿ ಲಸಿಕೆ ಹಾಕಿಸುವುದು ಅತ್ಯಗತ್ಯ. ರೋಟರಿ […]

27-09-2026, 3:00 PM
ಮಂಗಳೂರು, ಸೆ. 27 : ಯುವವಾಹಿನಿ (ರಿ.) ಸಂಸ್ಥೆಯ ಮುಖವಾಣಿ ‘ಯುವಸಿಂಚನ’ ಪತ್ರಿಕೆಯ ಸೆಪ್ಟೆಂಬರ್ ತಿಂಗಳ ಸಂಚಿಕೆಯ 4,250 ಪ್ರತಿಗಳ ಪೋಸ್ಟಿಂಗ್ ಕಾರ್ಯವು ಯುವವಾಹಿನಿ ಶಕ್ತಿನಗರ, ಪಣಂಬೂರು–ಕುಳಾಯಿ ಹಾಗೂ ಕೊಲ್ಯ ಘಟಕಗಳ ಸದಸ್ಯರ ಸಹಕಾರದೊಂದಿಗೆ ನಡೆಯಿತು. ‘ಯುವಸಿಂಚನ’ ಪತ್ರಿಕೆಯ ಪ್ರತಿಗಳನ್ನು ರಾಜ್ಯದ ವಿವಿಧ ಭಾಗಗಳಲ್ಲಿರುವ ಸದಸ್ಯರು ಹಾಗೂ ಹಿತೈಷಿಗಳಿಗೆ ತಲುಪಿಸುವ ಉದ್ದೇಶದಿಂದ ನಡೆದ ಪೋಸ್ಟಿಂಗ್ ಕಾರ್ಯದಲ್ಲಿ ಮೂರು ಘಟಕಗಳ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಪತ್ರಿಕೆಯ ಪ್ರತಿಗಳ ವಿಂಗಡಣೆ, ವಿಳಾಸ ಪರಿಶೀಲನೆ, ಪ್ಯಾಕಿಂಗ್ ಹಾಗೂ ಪೋಸ್ಟಿಂಗ್ ಸೇರಿದಂತೆ ವಿವಿಧ […]

23-09-2026, 11:00 PM
ಕೊಲ್ಯ, ಸೆ. 23: ಯುವವಾಹಿನಿ (ರಿ.) ಕೊಲ್ಯ ಘಟಕ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ KSTA ಮಂಗಳೂರು ಇವರ ಸಹಭಾಗಿತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಮಂಗಳೂರು ಪ್ರಾಯೋಜಕತ್ವದಲ್ಲಿ ಆಯೋಜಿಸಲಾದ 30 ದಿನಗಳ ಉಚಿತ ಬ್ರೈಡಲ್ ಮೇಕಪ್ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಸೆ. 23ರಂದು ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ (KSTA) ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಅಧಿಕಾರಿ ಶೈಲಾ ಕಾರ್ಗಿ, ತರಬೇತಿಯ ಸದುಪಯೋಗ ಪಡೆದುಕೊಂಡು ಪ್ರತಿಯೊಬ್ಬ […]

20-09-2026, 8:00 PM
ಕೊಲ್ಯ ಸೆ 20 : ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಈ ವರ್ಷದ ಮೊದಲ ದೇಗುಲ ದರ್ಶನ ಪ್ರವಾಸವನ್ನು ಆಯೋಜಿಸಲಾಗಿದ್ದು, ಸುಮಾರು 60 ಮಂದಿ ಸದಸ್ಯರು ಹಾಗೂ ಕುಟುಂಬ ಸದಸ್ಯರು ಭಾಗವಹಿಸಿದ್ದರು. ತಲಪಾಡಿಯಿಂದ ಆರಂಭಗೊಂಡ ಈ ಪವಿತ್ರ ಪಯಣವು ವಿವಿಧ ಪುಣ್ಯಕ್ಷೇತ್ರಗಳ ದರ್ಶನದೊಂದಿಗೆ ಭಕ್ತಿ, ಸ್ನೇಹ, ಒಗ್ಗಟ್ಟು ಹಾಗೂ ಸಂತಸದ ಅನುಭವವನ್ನು ನೀಡಿತು. ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಶಶಿಕಾಂತ್ ಪರ್ಯತ್ತೂರು ಪ್ರಾರ್ಥನೆ ನೆರವೇರಿಸಿ ಪ್ರಯಾಣಕ್ಕೆ ಚಾಲನೆ ನೀಡಿದರು. ಘಟಕದ ಅಧ್ಯಕ್ಷ ಜೀವನ್ […]

16-09-2026, 8:00 PM
ಕೊಲ್ಯ, ಸೆ. 16: ಯುವವಾಹಿನಿ (ರಿ.) ಕೊಲ್ಯ ಘಟಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಸಹಯೋಗದಲ್ಲಿ ಪಿಎಂ ಶ್ರೀ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಒಂಬತ್ತುಕೆರೆ, ಉಳ್ಳಾಲ ಇಲ್ಲಿನ ವಿದ್ಯಾರ್ಥಿಗಳಿಗೆ ಮೊಬೈಲ್ ಅಡಿಕ್ಷನ್ ಹಾಗೂ ಡ್ರಗ್ಸ್ ಅಡಿಕ್ಷನ್ ಕುರಿತು ಮಾಹಿತಿ ಶಿಬಿರವು ಸೆ. 16ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಕೊಲ್ಯ ಘಟಕದ ಅಧ್ಯಕ್ಷ ಜೀವನ್ ಕೊಲ್ಯ ಮಾತನಾಡಿ, ಇಂದಿನ ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ಹಿನ್ನೆಲೆಯಲ್ಲಿ ಮೊಬೈಲ್ ಅಡಿಕ್ಷನ್ […]