25-02-2026, 7:00 PM
ಕೊಲ್ಯ: ದಿನಾಂಕ 25-02-2026ರಂದು TMG ಸುನಿಧಿ ಫೌಂಡೇಶನ್ ಟ್ರಸ್ಟ್, ಭಾರತೀಯ ವಿಕಾಸ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸಹಕಾರದಲ್ಲಿ ಆರ್ಥಿಕ ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು ಹಾಗೂ ಸೌರ ಶಕ್ತಿ ಆಧಾರಿತ ಜೀವನೋಪಾಯ ಯಂತ್ರಗಳ ಕುರಿತು ಮಾಹಿತಿ ಕಾರ್ಯಕ್ರಮವು ಬಿಲ್ಲವ ಸೇವಾ ಸಮಾಜ, ಕೊಲ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ಪ್ರಥಮ ಉಪಾಧ್ಯಕ್ಷರಾದ ಜೀವನ್ ಕೊಲ್ಯ ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ಹಣಕಾಸು ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು, ಕೌಶಲ್ಯ […]
Read More
21-02-2026, 12:50 PM
ಕೊಲ್ಯ : ಬ್ರಹ್ಮಶ್ರೀ ನಾರಾಯಣಗುರುಗಳು ಮಂಗಳೂರಿನ ಕುದ್ರೋಳಿಯಲ್ಲಿ 1912 ಫೆಬ್ರವರಿ 21 ರಂದು ಶಿವಲಿಂಗ ಪ್ರತಿಷ್ಠಾಪಿಸಿದ ಐತಿಹಾಸಿಕ ದಿನದ ಪವಿತ್ರ ಸ್ಮರಣೆಗಾಗಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ನಡಿಗೆ ಶ್ರೀ ಗುರುವಿನೆಡೆಗೆ” ಎಂಬ ಸಂಕಲ್ಪದ ಕುದ್ರೋಳಿ ತೀರ್ಥಾಟನೆ ಮೆರವಣಿಗೆಯಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಭಾಗವಹಿಸಿದರು. ಶ್ರೀ ಗುರುಗಳ ತತ್ವ ಮತ್ತು ಆದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ನಡೆದ ಈ ಮೆರವಣಿಗೆಯಲ್ಲಿ ಕೊಲ್ಯ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ […]
Read More
17-02-2026, 9:11 PM
ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಐಎಎಸ್ . ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಾಜು ಕೆ KAS ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ […]
Read More
13-02-2026, 8:24 PM
ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಕೈಗೊಳ್ಳಲಾಗುತ್ತಿರುವ ಚಟುವಟಿಕೆಗಳ ಕುರಿತು ಕಮಿಷನರ್ ಅವರಿಗೆ ವಿವರಿಸಲಾಯಿತು. […]
Read More
06-02-2026, 9:00 PM
ಕೊಲ್ಯ : ದಿನಾಂಕ 03-02-2026ರಿಂದ 06-02-2026ರವರೆಗೆ ಉಮಾಪುರಿ ಕಾಪಿಕಾಡಿನ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಜರಗಿದ ಅಷ್ಟಬಂಧ ಬ್ರಹ್ಮಕಲಶೋತ್ಸವ ಮಹೋತ್ಸವದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಶ್ರದ್ಧಾ–ಭಕ್ತಿಯಿಂದ ಸ್ವಯಂಸೇವೆಯಲ್ಲಿ ತೊಡಗಿ ಭಕ್ತರ ಸೇವೆಯಲ್ಲಿ ನಿರತರಾದರು. ಧಾರ್ಮಿಕ ಭಾವನೆ ಮತ್ತು ಸೇವಾ ಮನೋಭಾವದಿಂದ ದೇವಸ್ಥಾನದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಶ್ರೀದೇವಿಯ ಸಾನಿಧ್ಯದಲ್ಲಿ ಕೃತಾರ್ಥರಾದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ನಿತಿನ್ ಕರ್ಕೇರ ಅವರು ಸ್ವಯಂಸೇವೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ, ಅವರ ಸಹಕಾರ ಮತ್ತು ಸಮರ್ಪಣಾ ಮನೋಭಾವಕ್ಕೆ […]
Read More
01-02-2026, 11:30 AM
ಕೊಲ್ಯ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಆಯೋಜಿಸಲಾದ ಬಿಲ್ಲವಾಸ್ ವುಮೆನ್ಸ್ ಪ್ರೀಮಿಯರ್ ಲೀಗ್ – 2026 ಕ್ರಿಕೆಟ್ ಪಂದ್ಯಾಟದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ತಂಡವು ಭಾಗವಹಿಸಿ, ಅತ್ಯುತ್ತಮ ಪ್ರದರ್ಶನ ನೀಡಿತು. ಪಂದ್ಯಾಟದ ಅವಧಿಯಲ್ಲಿ ಕೊಲ್ಯ ಘಟಕದ ಮಹಿಳಾ ಆಟಗಾರ್ತಿಯರು ತಮ್ಮ ಆಟದ ಮೂಲಕ ಕೌಶಲ್ಯ, ಆತ್ಮವಿಶ್ವಾಸ ಮತ್ತು ತಂಡಾತ್ಮಕ ಮನೋಭಾವವನ್ನು ಪ್ರದರ್ಶಿಸಿ, ಪ್ರೇಕ್ಷಕರ ಹಾಗೂ ಸಂಘಟಕರ ಮೆಚ್ಚುಗೆಗೆ ಪಾತ್ರರಾದರು.
Read More
26-01-2026, 8:00 AM
ಕೊಲ್ಯ : ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಆಯೋಜಿಸಲಾದ ಬ್ರಹ್ಮಶ್ರೀ ನಾರಾಯಣ ಗುರುಗಳ ತಪೋಭೂಮಿ ಶಿವಗಿರಿ ಕ್ಷೇತ್ರ ದರ್ಶನ ಯಾತ್ರೆ ಭಕ್ತಿಭಾವ, ಶಿಸ್ತು ಹಾಗೂ ಆತ್ಮೀಯತೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.ಒಟ್ಟು 54 ಯಾತ್ರಾರ್ಥಿಗಳನ್ನು ಒಳಗೊಂಡ ತಂಡವು ದಿನಾಂಕ 23-01-2026 ಶುಕ್ರವಾರ ಸಂಜೆ 5.20ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಶಿವಗಿರಿ ಕ್ಷೇತ್ರದತ್ತ ಪ್ರಯಾಣ ಆರಂಭಿಸಿತು. ದಿನಾಂಕ 24-01-2026 ಶನಿವಾರ ಬೆಳಿಗ್ಗೆ ನಿತ್ಯಕರ್ಮಗಳನ್ನು ಪೂರೈಸಿ ಶಿವಗಿರಿ ಮಠದಲ್ಲಿ ಗುರುಪೂಜೆ ಸಲ್ಲಿಸಿ, ಗುರುಗಳು ಹಾಗೂ ಶಾರದಾ ಮಾತೆಯ ಅನುಗ್ರಹ ಪಡೆದು […]
Read More
04-01-2026, 1:47 PM
ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಮಂಗಳೂರು ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ದೈವದಶಕಂ ಕನ್ನಡ ಗಾಯನ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವು ನಡೆಯಿತು. ಈ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವದ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೊಲ್ಯ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿದರು ಕಾರ್ಯಕ್ರಮವು ಭಕ್ತಿಭಾವ ಹಾಗೂ ನೆರವೇರಿತು.
Read More
04-01-2026, 12:10 PM
ಮಂಗಳೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವರ್ಷಾವಧಿ ಉತ್ಸವದ ಪ್ರಯುಕ್ತ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಸ್ವಯಂಸೇವಾ ಕಾರ್ಯದಲ್ಲಿ ತೊಡಗಿ ಸೇವೆ ಸಲ್ಲಿಸಿದರು. ಉತ್ಸವದ ವೇಳೆ ಭಕ್ತಾದಿಗಳಿಗೆ ಸಹಾಯ, ಶಿಸ್ತು ಹಾಗೂ ಸ್ವಚ್ಛತೆ ಕಾಪಾಡುವ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಸಮಾಜಮುಖಿ ಸೇವೆಯ ಮೂಲಕ ಯುವವಾಹಿನಿ ಕೊಲ್ಯ ಘಟಕವು ಸಂಘಟನೆಯ ಸೇವಾ ಧ್ಯೇಯವನ್ನು ಮತ್ತೊಮ್ಮೆ ಸಾರಿತು.
Read More
12-12-2025, 6:19 AM
ಧರ್ಮ ಶಿಕ್ಷಣ ತರಗತಿಯ ಗುರುಗಳಾದ ಡಾ.ಅರುಣ್ ಉಳ್ಳಾಲ್ ರವರ ನಿರ್ದೇಶನದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯದಲ್ಲಿ”‘ಧರ್ಮ ಶಿಕ್ಷಣ ತರಗತಿ ಮತ್ತು ಮಕ್ಕಳ ದಿನಾಚರಣೆ”” ಕಾರ್ಯಕ್ರಮವು ಓಂಕಾರದೊಂದಿಗೆ ಆರಂಭಗೊಂಡು ಗಣಪತಿ ಸ್ತುತಿ, ಮುಖೇನ ತರಗತಿಯನ್ನು ಪ್ರಾರಂಭಿಸಲಾಯಿತು.ನಂತರ ಮಕ್ಕಳ ದಿನಾಚರಣೆ”” ಅಂಗವಾಗಿ ಧರ್ಮ ಶಿಕ್ಷಣ ತರಗತಿಯಲ್ಲಿ ಹಾಜರಿದ್ದ ಮಕ್ಕಳಿಗೆ, ವಿವಿಧ ಮನೋರಂಜನಾ ಆಟ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು, ಘಟಕದ ಅಧ್ಯಕ್ಷರು ಶ್ರೀ ನಿತಿನ್ ಕರ್ಕೇರ ಸರ್ವರನ್ನು ಸ್ವಾಗತಿಸಿದರು, ಧರ್ಮ ಶಿಕ್ಷಣ ತರಗತಿಯ […]
Read More