28-12-2018, 4:06 PM
ಕೊಲ್ಯ : ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ನಿರ್ಮಾಣಕ್ಕೆ ಕಲಿಕೆಯ ಸಮಯದಲ್ಲೆ ಬುನಾದಿ ಹಾಕುವುದು ಸೂಕ್ತ ,ಐ.ಎ.ಎಸ್ ,ಐ.ಪಿ.ಎಸ್ ನಂತಹ ಪರೀಕ್ಷೆಗಳಿಗೆ ಇಂದಿನಿಂದಲೇ ಕಠಿಣ ಪರಿಶ್ರಮ ಪಟ್ಟು ಓದಿ ಅಭ್ಯಾಸ ಮಾಡಿಕೊಂಡು ಸರಕಾರಿ ಅಧಿಕಾರಿಯಾಗಿ ಮುಂದಿನ ಜೀವನವನ್ನು ಸಂತೋಷದಿಂದ ಕಳೆಯಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಸರ್ವಜ್ಞ ಐ.ಎ.ಎಸ್.ಅಕಾಡೆಮಿ ಇದರ ನಿರ್ದೇಶಕರು, ಯುವವಾಹಿನಿ (ರಿ) ಕಂಕನಾಡಿ ಘಟಕದ ಉಪಾಧ್ಯಕ್ಷರಾಗಿರುವ ಸುರೇಶ್ ಎಂ.ಎಸ್ ರವರು ಮಾತನಾಡಿ ತಿಳಿಸಿದರು. ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟೀಯ […]
Read More
25-12-2018, 4:05 AM
ಬಂಟ್ವಾಳ : ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ, ರಾಜನಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ದಾನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು ಶಿಕ್ಷಣವು ಆನಂದದ ಕಲಿಕೆಯಾಗಬೇಕು. ಜ್ಞಾನಾರ್ಜನೆಯೊಂದಿಗೆ ಅನ್ವೇಷಣಾದಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ತಿಳಿಸಿದರು. ಅವರು ದಿನಾಂಕ 25.12.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಮೆಲ್ಕಾರ್ ಬಿರ್ವ […]
Read More
26-11-2018, 4:23 PM
ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 26.11.2018ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಜೀವನೋತ್ಸಾಹ ವ್ಯಕ್ತಿತ್ವ ವಿಕಸನ ಹಾಗೂ ಉದ್ಯೋಗ ಮಾಹಿತಿ ತರಬೇತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಧಾಕರ್ ಕಾರ್ಕಳ ಕಾರ್ಯಾಗಾರ ನಡೆಸಿಕೊಟ್ಟರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಗೌ| ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ(ರಿ) ಕಟಪಾಡಿ ಘಟಕದ ಅಧ್ಯಕ್ಷ ರಿತೇಶ್ ಬಿ.ಕೋಟ್ಯಾನ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ […]
Read More
04-11-2018, 3:19 PM
ಬಂಟ್ವಾಳ : ದಿನನಿತ್ಯದ ವೈಯಕ್ತಿಕ ಮತ್ತು ವೃತ್ತಿ ಬದುಕಿನಲ್ಲಿ ವ್ಯವಹರಿಸುವಾಗ ಇತರರನ್ನು ಪ್ರೇರೇಪಿಸುವ ಮನವೊಪ್ಪಿಸುವ ಅಥವಾ ಒತ್ತಾಯಿಸುವ ಸಂದರ್ಭಗಳು ಸಹಜ, ಇಂತಹ ಸಂದರ್ಭಗಳಲ್ಲಿ ಸಂವಹನ ಅತ್ಯಂತ ಪರಿಣಾಮಕಾರಿಯಾಗಿದ್ದು , ಉದ್ದೇಶವನ್ನು ಸಾಧಿಸುವಂತೆ ಇರಬೇಕು. ಆದರೆ ಈ ಕೌಶಲ ಎಲ್ಲರಲ್ಲೂ ಒಂದೇ ಮಟ್ಟದಲ್ಲಿ ಇರುವುದಿಲ್ಲ ಉದಾಹರಣೆಗೆ ಜೀವನದಲ್ಲಿ ಯಾವ ಕೊರತೆ ಇಲ್ಲದಿದ್ದರೂ ಚೈತನ್ಯ ರಹಿತವಾದ ನಿರಾಶವಾದಿಗಳನ್ನು ನೋಡುತ್ತಿರುತ್ತೇವೆ. ಕೆಲವರು ಮಾತನಾಡುವ ಶೈಲಿಯಿಂದ ನಕಾರಾತ್ಮಕ ಅನಿಸಿಕೆ, ಅನುಭವಗಳು ಆಗುತ್ತವೆ. ನಾವು ಅಭಿಪ್ರಾಯವನ್ನು, ಭಾವನೆಗಳನ್ನು ವ್ಯಕ್ತಪಡಿಸುವ ರೀತಿಯಿಂದ ಇತರರಿಗೆ ಬೇಸರ ಕಿರಿಕಿರಿ […]
Read More
21-09-2018, 3:46 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕ ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ಇದರ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಉದ್ಯಮಶೀಲತೆ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಅರ್ಹತಾ ಪರೀಕ್ಷೆಗಳ ಬಗ್ಗೆ ಕಾರ್ಯಗಾರವು ದಿನಾಂಕ ೨೧. ೦೯. ೨೦೧೮ ರಂದು ಇತ್ತೀಚೆಗೆ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಉಧ್ಘಾಟಿಸಿದ ಲಕ್ಷ್ಮಣ ಕೋಟ್ಯಾನ್ ಪೂಜಾ ಕನ್ಸ್ಟ್ರಕ್ಷನ್ ಮೇರಿಹಿಲ್ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಲಯನ್ ಯಶವಂತ್ ಪೂಜಾರಿ ಕಾರ್ಯಾಗಾರಕ್ಕೆ ಶುಭಹಾರೈಸಿದರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ್ ನಡುಬೈಲು ಮಾತನಾಡಿ […]
Read More
16-09-2018, 3:37 PM
ಕಡಬ : ಯುವವಾಹಿನಿ (ರಿ) ಕಡಬ ಘಟಕ ರಾಷ್ಟ್ರೀಯ ಬಿಲ್ಲವ ಮಹಾಮಂಡಲ (ರಿ) ಮುಲ್ಕಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಆಲಂಕಾರು, ಕಡಬ ಮತ್ತು ಮರ್ಧಾಳ ವಲಯ ಇದರ ಆಯೋಜನೆಯಲ್ಲಿ ದಿನಾಂಕ 16/09/2018 ನೇ ಆದಿತ್ಯವಾರ ದಂದು ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸಭಾಭವನ ಕಡಬದಲ್ಲಿ ” ಜೀವನೋತ್ಸಹ-2018″ ಎಂಬ ಬಿಲ್ಲವ ಯುವ ಜನತೆಗೆ ತರಬೇತಿ ನೀಡುವ ವಿನೂತನ ಕಾರ್ಯಕ್ರಮ ನಡೆಯಿತು. ಎನ್ ಮುತ್ತಪ್ಪ ಪೂಜಾರಿ ನೈಯಲ್ಗ ನಿವೃತ್ತ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಸಿ.ಎ ಬ್ಯಾಂಕ್ ಆಲಂಕಾರು […]
Read More
08-04-2018, 3:38 PM
ಬೆಳ್ತಂಗಡಿ : ತರಬೇತಿಯಿಂದ ಮಾತ್ರ ಪರಿಪೂರ್ಣತೆ ಹೊಂದಲು ಸಾಧ್ಯ, ವಿದ್ಯಾರ್ಥಿಗಳು ಕಠಿಣ ತರಬೇತಿಯಿಂದ ನಿಶ್ಚಿತವಾದ ಗುರಿ ತಲುಪಲು ಸಾಧ್ಯ ಎಂದು ಶಾಸಕ ಕೆ.ವಸಂತ ಬಂಗೇರ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ವಿದ್ಯಾರ್ಥಿಗಳಿಗಾಗಿ ಜರುಗಿದ ಬೆಳಕು : ಎಸ್.ಎಸ್.ಎಲ್.ಸಿ ನಂತರ ಮುಂದೇನು ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಜನೆಗೆ ಯಾವುದನ್ನು ಆಯ್ಕೆ ಮಾಡಿಕೊಂಡಾಗ ಯಾವ ಹಂತಕ್ಕೆ ತಲುಪಲು ಸಾಧ್ಯ ಎಂಬುವುದಕ್ಕೆ ತರಬೇತಿ ಅಗತ್ಯ ಎಂದು […]
Read More
25-02-2018, 3:12 PM
ಪುತ್ತೂರು: ವಿಜಯ ಕರ್ನಾಟಕ ದಿನ ಪತ್ರಿಕೆ ಮತ್ತು ಪುತ್ತೂರು ಯುವವಾಹಿನಿ (ರಿ.) ಇವರ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ – ಸಂವಾದ ಕಾರ್ಯಕ್ರಮ ಪುತ್ತೂರು ಸಂತ ಫಿಲೋಮಿನಾ ಪ್ರೌಢಶಾಲೆಯ ಸಭಾಂಗಣದಲ್ಲಿ ನಡೆಯಿತು. ವಿಜಯೀಭವ ಹೆಸರಿನಲ್ಲಿ ವಿಜಯ ಕರ್ನಾಟಕ ಪತ್ರಿಕೆ ರಾಜ್ಯದಾದ್ಯಂತ ಇಂಥ ಕಾರ್ಯಕ್ರಮ ನಡೆಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕ್ರಮವನ್ನು ಪುತ್ತೂರಿನಲ್ಲಿ ಆಯೋಜಿಸಲಾಗಿತ್ತು. ಯುವವಾಹಿನಿ ಪುತ್ತೂರು ಘಟಕವು ಪೂರ್ಣ ಸಹಯೋಗ ನೀಡುವ ಮೂಲಕ ಕಾರ್ಯುಕ್ರಮದಲ್ಲಿ ಸಂಪೂರ್ಣ ಪಾಲು ಪಡೆಯಿತು. ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ಯುವವಾಹಿನಿಯ […]
Read More
18-02-2018, 2:17 PM
ಉಡುಪಿ: ಪ್ರಸ್ತುತ ಇರುವ ಸ್ಥಿತಿಯಿಂದ ಉತ್ತಮ ಸ್ಥಿತಿಯತ್ತ ಕೊಂಡೋಯ್ಯುವುದೇ ಸಂಸ್ಕಾರ, ಮಾನವ ಅರಿಷಡ್ವರ್ಗಗಳನ್ನು ತ್ಯಜಿಸಿದಾಗ ಮಾಧವನಾಗುತ್ತಾನೆ, ಇದಕ್ಕೆ ಮಾನವೀಯ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಯುವವಾಹಿನಿ ಇಂತಹ ಕಾರ್ಯಾಗಾರವನ್ನು ನಿರಂತರ ನಡೆಸುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 18.02.2018 ನೇ ಆದಿತ್ಯವಾರ ಉಡುಪಿ ಬಲೈಪಾದೆ ನಿತ್ಯಾನಂದ ಆರ್ಕೆಡ್ ನಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಜರುಗಿದ ಬಹು […]
Read More
25-12-2017, 10:09 AM
ಬಂಟ್ವಾಳ : ಮನುಷ್ಯ ಪರಿಸರದ ಕೂಸು. ಪ್ರತಿಭೆಗೆ ಯಾವುದೇ ಜಾತಿಯ ಹಂಗಿಲ್ಲ. ನಮ್ಮೊಳಗಿನ ಕೀಳರಿಮೆಯನ್ನು ಮೊದಲು ಕಸದ ಬುಟ್ಟಿಗೆ ಹಾಕಿ ನಮ್ಮ ದೃಷ್ಟಿ ಗುರಿಯ ಸಾಧನೆಯ ಕಡೆಗೆ ಇರಬೇಕು. ಆತ್ಮ ವಿಶ್ವಾಸಕ್ಕಿಂತ ದೊಡ್ಡ ಶಕ್ತಿ ಇನ್ನೊಂದು ಇಲ್ಲ. ಚರಿತ್ರೆಯನ್ನು ಅಧ್ಯಯನ ಮಾಡಿದರೆ ನಮಗೆ ಗೊತ್ತಾಗುತ್ತೆ, ಯಾರು ಕೂಡ ಒಮ್ಮೆಲೆ ನಾಯಕರಾಗಿ ರೂಪುಗೊಳ್ಳೊದಿಲ್ಲ. ಯಾವುದಾದರೊಂದು ಹೋರಾಟದ ಕಾರಣವಾಗಿ ನಾಯಕರುಗಳು ರೂಪುಗೊಳ್ಳುತ್ತಾರೆ. ನಾರಾಯಣ ಗುರುಗಳು ಸಮಾಜಕ್ಕಾಗಿ ಬದುಕಿದವರು. ಸಮಾಜದ ಎಲ್ಲಾ ಬಗೆಯ ಸಮಸ್ಯೆಗಳಿಗೆ ಶಿಕ್ಷಣವು ಚಿಕಿತ್ಸೆ ಯಾಗುತ್ತೆ ಎಂಬ ನಂಬಿಕೆ […]
Read More