Yuvavahini

ಇತರೆ

ಯುವವಾಹಿನಿ ಡೆನ್ನಾನ ಡೆನ್ನನ 2026 – ಟೈಟಲ್ ಸಾಂಗ್ ಬಿಡುಗಡೆ

ಪೊಳಲಿ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19 ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿರುವ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ “ಡೆನ್ನಾನ ಡೆನ್ನನ 2026”ರ ಟೈಟಲ್ ಸಾಂಗ್‌ನ್ನು ಮಾರ್ಚ್ 27ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಈ ಟೈಟಲ್ ಸಾಂಗ್ ಬಿಡುಗಡೆಗೊಳಿಸಿ ಮಾತನಾಡಿ, “ಯುವವಾಹಿನಿಯ ಡೆನ್ನಾನ ಕಾರ್ಯಕ್ರಮ ಅದ್ಭುತ ಯಶಸ್ಸು ಸಾಧಿಸಲಿದೆ. […]

Read More

ಡೆನ್ನಾನ ಕವನ ಸ್ಪರ್ಧೆ

ಸ್ಪರ್ಧೆಯ ವಿವರಗಳು: ವಂದನೆಗಳೊಂದಿಗೆ: ಪ್ರಧಾನ ಕಾರ್ಯದರ್ಶಿ, ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

Read More

ಯುವವಾಹಿನಿ (ರಿ.) ಉಡುಪಿ ಘಟಕದ ಪದಗ್ರಹಣ ಸಮಾರಂಭ

ಉಡುಪಿ, ಮಾ.22: ಯುವವಾಹಿನಿ (ರಿ.) ಉಡುಪಿ ಘಟಕದ ಪದಗ್ರಹಣ ಸಮಾರಂಭವು ಮಾರ್ಚ್ 22, 2026ರಂದು ಉಡುಪಿ ಘಟಕದ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ನಮಸ್ಕರಿಸಿ ದೀಪ ಪ್ರಜ್ವಲಿಸುವ ಮೂಲಕ ಪ್ರಾರಂಭವಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ದಯಾನಂದ ಕರ್ಕೇರ ವಹಿಸಿದ್ದರು. ಕಾರ್ಯದರ್ಶಿ ಮಹೇಶ್ ಮಲ್ಪೆ ರಜತ ವರ್ಷದ ವರದಿಯನ್ನು ವಾಚಿಸಿದರು. ಆಯ್ಕೆ ಸಮಿತಿಯ ಸಂಚಾಲಕರು, ನಿಕಟಪೂರ್ವ ಅಧ್ಯಕ್ಷೆ ಅಮಿತಾಂಜಲಿ ಕಿರಣ್ ನೂತನ ಕಾರ್ಯಕಾರಿ ಸಮಿತಿಯನ್ನು ಪರಿಚಯವನ್ನು ಸಭೆಯ ಮುಂದೆ ಪ್ರಸ್ತುತಪಡಿಸಿದರು. ಕೇಂದ್ರ ಸಮಿತಿಯ […]

Read More

ಯುವವಾಹಿನಿ (ರಿ) ಮೂಲ್ಕಿ ಘಟಕದಿಂದ ಮಹಿಳಾ ದಿನಾಚರಣೆ ಆಚರಣೆ

ಮೂಲ್ಕಿ: ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 22/03/2026 ರಂದು ಸಂಜೆ 3:00 ಗಂಟೆಗೆ ಅತಿಕಾರಿ ಬೆಟ್ಟು ಗ್ರಾಮದ ಕಕ್ವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವು ಶಾಂಭವಿ ಮಹಿಳಾ ಮಂಡಳಿ ಮಟ್ಟು ಹಾಗೂ ಬ್ರಾಮರಿ ಮಹಿಳಾ ಮಂಡಳಿ ಕಕ್ವ ಸದಸ್ಯರ ಸಹಭಾಗಿತ್ವದಲ್ಲಿ ವಿನಯ ಕುಮಾರ್ ಮಟ್ಟು ಅವರ ಅಧ್ಯಕ್ಷತೆಯಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಕಕ್ವ ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ನಾರಾಯಣ ನಾಯ್ಕ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ […]

Read More

ಪದಗ್ರಹಣ ಸಮಾರಂಭ

ಶಕ್ತಿನಗರ : ಯುವವಾಹಿನಿ (ರಿ) ಶಕ್ತಿನಗರ ಘಟಕದ 2026-27 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದಿನಾಂಕ 22/03/2026 ರಂದು ನಟ್ಟಿ ಸ್ಕ್ವೇರ್ ಸೊಲ್ಮೆ ಮಿನಿ ಹಾಲ್‌ನಲ್ಲಿ ನೆರವೇರಿತು. ಯುವವಾಹಿನಿ ಶಕ್ತನಗರ ಘಟಕದ ಘಟಕದ ಅಧ್ಯಕ್ಷರಾದ ಸುಜಾತ ನವೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಬಿಲ್ಲವ ಅಸೋಸಿಯೇಷನ್ ಬೆಂಗಳೂರು ಮಾಜಿ ಅಧ್ಯಕ್ಷರಾದ ಬಿ. ವಾಸುದೇವ ಕೋಟ್ಯಾನ್ ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ, ಶುಭ […]

Read More

ಪ್ರಕೃತಿಯ ಮಡಿಲಲ್ಲಿ ಆರೋಗ್ಯದ ರಹಸ್ಯ : ಡಾ ಎನ್ ಟಿ ಅಂಚನ್

ಮಂಗಳೂರು: ಪ್ರಕೃತಿಯೊಡನೆ ಮನುಷ್ಯನ ಬದುಕು ಆಳವಾಗಿ ಬೆಸೆದುಕೊಂಡಿರುವುದರಿಂದ, ಆರೋಗ್ಯದ ಮೂಲವೂ ಪ್ರಕೃತಿಯಲ್ಲೇ ಅಡಗಿದೆ ಎಂದು ಖ್ಯಾತ ಆಯುರ್ವೇದ ತಜ್ಞ ಡಾ. ಎನ್.ಟಿ. ಅಂಚನ್ ಅಭಿಪ್ರಾಯಪಟ್ಟರು. ಆಯುರ್ವೇದವು ಕೇವಲ ಚಿಕಿತ್ಸಾ ವಿಧಾನವಲ್ಲ, ಅದು ಸಮಗ್ರ ಜೀವನಶೈಲಿ ಎಂದು ಅವರು ವಿವರಿಸಿದರು.ಗಿಡಮೂಲಿಕೆಗಳ ಬಳಕೆಯ ಕುರಿತು ಮಾತನಾಡಿದ ಅವರು, ನಮ್ಮ ಸುತ್ತಮುತ್ತಲೇ ದೊರೆಯುವ ಅನೇಕ ಸಸ್ಯಗಳಲ್ಲಿ ಅಪಾರ ಔಷಧೀಯ ಗುಣಗಳಿವೆ. ತುಳಸಿ, ಅಶ್ವಗಂಧಾ, ನೀಮ್, ಅಲೋವೆರಾ ಮುಂತಾದ ಗಿಡಮೂಲಿಕೆಗಳು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಹಲವು ದೀರ್ಘಕಾಲದ ಕಾಯಿಲೆಗಳ ನಿಯಂತ್ರಣದಲ್ಲೂ […]

Read More

ಮಹಿಳಾ ದಿನಾಚರಣೆ ಸಂಭ್ರಮ: ಕಡಬ ಘಟಕದ ವತಿಯಿಂದ ವೈವಿಧ್ಯಮಯ ಕಾರ್ಯಕ್ರಮ

ಹಳೆನೇರೆಂಕಿ: ಯುವವಾಹಿನಿ (ರಿ.) ಕಡಬ ಘಟಕ ಮತ್ತು ಬಿಲ್ಲವ ಗ್ರಾಮ ಸಮಿತಿ ಹಳೆನೇರೆಂಕಿಯ ಮಹಿಳಾ ಘಟಕದ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 22 ರಂದು ಹಳೆನೇರೆಂಕಿಯ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ನಡೆಯಿತು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಮಹಿಳೆಯರು ಹಾಗೂ ಮಕ್ಕಳಿಗಾಗಿ ವಿವಿಧ ಆಟೋಟ ಸ್ಪರ್ಧೆಗಳು ಆಯೋಜಿಸಲಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಪುರುಷೋತ್ತಮ ಬರಂಬೆಟ್ಟು ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಘಟಕದ ಉಪಾಧ್ಯಕ್ಷೆ ಸರಿತಾ ಉಂಡಿಲ ಅವರು ಅತಿಥಿಗಳು ಹಾಗೂ ಸಭಿಕರನ್ನು ಸ್ವಾಗತಿಸಿದರು.ಜಿಲ್ಲಾ ಮಹಿಳಾ […]

Read More

ಯುವವಾಹಿನಿ ಉಪ್ಪಿನಂಗಡಿ ಘಟಕದಿಂದ ರಕ್ತದಾನ ಶಿಬಿರ

ಉಪ್ಪಿನಂಗಡಿ : ಸೂರ್ಯ ಆಸ್ಪತ್ರೆ ಉಪ್ಪಿನಂಗಡಿ ಇದರ ಪ್ರಥಮ ವರ್ಷಾಚರಣೆಯ ಅಂಗವಾಗಿ, ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಜೆಸಿಐ ಉಪ್ಪಿನಂಗಡಿ, ರೋಟರಿ ಕ್ಲಬ್ ಉಪ್ಪಿನಂಗಡಿ, ಹವ್ಯಕ ವಲಯ ಉಪ್ಪಿನಂಗಡಿ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೆಂಬರ್ಸ್ (ICYM), ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 22/03/2026 ರಂದು ರಕ್ತದಾನ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಡಾ. ಕೆ.ಜಿ. ಭಟ್ ಹಾಗೂ ಖ್ಯಾತ ದಂತ ವೈದ್ಯರಾದ […]

Read More

ಹಿರಿಯ ಮಹಿಳೆಯ ಗೌರವಿಸಿ ಮಹಿಳಾ ದಿನಾಚರಣೆ

ಬಜಪೆ: ಸಂಸ್ಕೃತಿಗಳು ನಿಧಾನವಾಗಿ ನಶಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ, ಯುವಜನತೆಗೆ ಮಾದರಿಯಾಗುವ ಕಾರ್ಯವನ್ನು ಯುವವಾಹಿನಿ (ರಿ) ಬಜಪೆ ಘಟಕ ಕೈಗೊಂಡಿದೆ. ಪ್ರತಿ ವರ್ಷ ಹಿರಿಯರನ್ನು ಗೌರವಿಸುವ ಮೂಲಕ ಸಂಸ್ಕೃತಿ ಮತ್ತು ಸಂಸ್ಕಾರಗಳ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸುತ್ತಾ ಬಂದಿರುವ ಘಟಕವು, ಈ ವರ್ಷವೂ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿತು. ದಿನಾಂಕ 18-03-2026 ರಂದು ಬಜಪೆಯ ಅಂಬಿಕಾ ನಗರದಲ್ಲಿರುವ “ಶ್ರೀ ವೈಭವ ಲಕ್ಷ್ಮಿ” ನಿವಾಸಕ್ಕೆ ಭೇಟಿ ನೀಡಿದ ಘಟಕದ ಸದಸ್ಯರು, 82 ವರ್ಷ ಪ್ರಾಯದ ಹಿರಿಯರಾದ ಸುಮತಿ […]

Read More

ಶಿಕ್ಷಣ, ವಿಜ್ಞಾನ, ಕ್ರೀಡೆ, ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆ -ಅಗಣ್ಯ

ಕುಳೂರು : ಮಹಿಳೆಯರು ಕೇವಲ ಸಾಂಸಾರಿಕ ಜೀವನದಲ್ಲಿ ಮಾತ್ರ ಸೀಮಿತವಾಗದೆ ಅಸೀಮಿತ ವಲಯದಲ್ಲಿ ಸಾಧನೆಗೆ ಹುಮ್ಮಸ್ಸು ತೋರಬೇಕು ,ಕನಸು ಕಟ್ಟಿ ಧೈರ್ಯದಿಂದ ನಿಮ್ಮ ಕ್ಷೇತ್ರದಲ್ಲಿ ಮುನ್ನುಗ್ಗಿದ್ದರೆ ಸಮಾಜ ತಾನಾಗೇ ಗುರುತಿಸಲಿದೆ ಎಂದು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಉಪ ಪರಿಶೋಧಕರಾದ ಶ್ರೀಕಲಾ ಕೆ.ಟಿ ತಿಳಿಸಿದರು. ಅವರು ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ಮಾರ್ಚ್ 18 ರಂದು ಕೂಳೂರಿನ ಫಲ್ಗುಣಿ ಸಭಾಂಗಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಹೆಣ್ಣು ಮಕ್ಕಳನ್ನು ಬಹಳ ಸೂಕ್ಷ್ಮವಾಗಿ ನೋಡಿಕೊಳ್ಳಬೇಕು. […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!