
08-03-2026, 1:00 PM
ಕುಳಾಯಿ : ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರವನ್ನು ದಿನಾಂಕ 08.03.2026 ರಂದು ಕುಳಾಯಿ ಮಹಿಳಾ ಮಂಡಲದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕ ಗಣೇಶೋತ್ಸವ ಸಮಿತಿ (ರಿ) ಕುಳಾಯಿ, ಮಹಿಳಾ ಮಂಡಲ (ರಿ) ಕುಳಾಯಿ, ತಿರಂಗ ಟ್ರಸ್ಟ್ (ರಿ) ಮಂಗಳೂರು, ಶ್ರೀನಿವಾಸ ಆಸ್ಪತ್ರೆ ಮುಕ್ಕ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ನಡೆಯಿತು. ಮಹಿಳಾ ದಿನಾಚರಣೆಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ರೋಗಿಗಳ ಪ್ರಾಣ ಉಳಿಸುವ ಉದಾತ್ತ ಉದ್ದೇಶದಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಶ್ರೀನಿವಾಸ […]
Read More

08-03-2026, 1:00 PM
ಯಡ್ತಾಡಿ: ಯುವವಾಹಿನಿ (ರಿ.) ಯಡ್ತಾಡಿ ಘಟಕದ ವತಿಯಿಂದ ಮಹಿಳಾ ದಿನಾಚರಣೆಯ ಅಂಗವಾಗಿ ಸಾಧಕ ಮಹಿಳೆಯರನ್ನು ಗೌರವಿಸುವ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷರಾದ ಅಣ್ಣಪ್ಪ ಪೂಜಾರಿ ಅವರ ನಿವಾಸದಲ್ಲಿ ಮಾಸಿಕ ಸಭೆಯೊಂದಿಗೆ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಘಟಕದ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಅವರು, ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಮಹಿಳೆಯರು ಕುಟುಂಬ ಮತ್ತು ಸಮಾಜದ ಶಕ್ತಿಯಾಗಿದ್ದು, ಅವರ ಸಾಧನೆಗಳು ಇತರರಿಗೆ ಪ್ರೇರಣೆಯಾಗಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಉಡುಪಿ ನೌಕರರ […]
Read More

08-03-2026, 11:00 AM
ಬೆಂಗಳೂರು: “ಇಂದಿನ ಯುವ ಪೀಳಿಗೆ ಮತ್ತು ಮಹಿಳೆಯರು ಸೋಶಿಯಲ್ ಮೀಡಿಯಾವನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಸಬೇಕು. ಸಾಮಾಜಿಕ ಜಾಲತಾಣಗಳು ಕೇವಲ ಮನೋರಂಜನೆಗೆ ಸೀಮಿತವಾಗದೆ, ಜ್ಞಾನಾರ್ಜನೆ ಮತ್ತು ಸಮಾಜದ ಏಳಿಗೆಗೆ ಪೂರಕವಾಗಿರಲಿ,” ಎಂದು ಬೆಂಗಳೂರು ನಗರದ ಸಹಾಯಕ ಪೊಲೀಸ್ ಆಯುಕ್ತರಾದ (ACP) ರೀನಾ ಸುವರ್ಣ ಅವರು ಕಿವಿಮಾತು ಹೇಳಿದರು. ಯುವವಾಹಿನಿ (ರಿ.) ಬೆಂಗಳೂರು ಘಟಕದ ವತಿಯಿಂದ ದಿನಾಂಕ 08.03.2026 ರಂದು ಇತ್ತೀಚೆಗೆ ನಗರದ ಕರ್ನಾಟಕ ಗವರ್ನ್ಮೆಂಟ್ ಸೆಕ್ರೆಟೇರಿಯಟ್ ಕ್ಲಬ್ನಲ್ಲಿ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ […]
Read More

08-03-2026, 9:17 AM
ಬಜಪೆ: ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ವತಿಯಿಂದ ಮೇಘೆ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದಿನಾಂಕ 03-03-2026, ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 4 ಗಂಟೆಗೆ ಕೆಂಜಾರು ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ “ಓಂ ಗುರುಭ್ಯೋ ನಮಃ” ಎಂಬ ಗುರುಸ್ಮರಣೆಯೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಘಟಕದ ಸದಸ್ಯರು ಹಾಗೂ ಭಕ್ತಾದಿಗಳು ಸೇರಿ ಒಟ್ಟು 15 ಮಂದಿಯ ತಂಡವು ಪಾದಯಾತ್ರೆಯ ಮೂಲಕ ಕಟೀಲು ಕ್ಷೇತ್ರವನ್ನು ತಲುಪಿ, ಅಮ್ಮನವರ ದರ್ಶನ ಪಡೆದು […]
Read More

03-03-2026, 9:00 PM
ಕೆಂಜಾರು-ಕರಂಬಾರು, ಮಾರ್ಚ್ 03: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ 03-03-2026 ರಂದು ಮೆಘೆ ಹುಣ್ಣಿಮೆಯ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಭಕ್ತಿಪೂರ್ವಕ ಪಾದಯಾತ್ರೆಯನ್ನು ಆಯೋಜಿಸಲಾಯಿತು.ಬೆಳಿಗ್ಗೆ 4.00 ಗಂಟೆಗೆ ಕೆಂಜಾರು-ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ ಆರಂಭಗೊಂಡ ಪಾದಯಾತ್ರೆಯಲ್ಲಿ ಯುವವಾಹಿನಿ ಸದಸ್ಯರು ಹಾಗೂ ಭಕ್ತರು ಉತ್ಸಾಹದಿಂದ ಭಾಗವಹಿಸಿದರು. ಪಾದಯಾತ್ರೆಯ ಮೂಲಕ ಭಕ್ತರು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಪಾದಯಾತ್ರೆಯಲ್ಲಿ ಯುವವಾಹಿನಿಯ ಸದಸ್ಯರು ಮತ್ತು ಭಕ್ತರು ಸೇರಿದಂತೆ […]
Read More

02-03-2026, 9:00 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 02-03-2026, ಸೋಮವಾರದಂದು ನೆರವೇರಿತು. ಈ ವಾರದ ಭಜನಾ ಸೇವೆಯನ್ನು ಅಶೋಕ್ ನಗರ ದಂಬೇಲ್ನ ವೆಂಕಟೇಶ್ ರಾವ್ ಮತ್ತು ಬಳಗದವರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಭಕ್ತಿಪ್ರಧಾನವಾದ ಸಂಕೀರ್ತನೆಗಳ ಮೂಲಕ ನೆರೆದಿದ್ದ ಭಕ್ತಾದಿಗಳಲ್ಲಿ ಆಧ್ಯಾತ್ಮಿಕ ಚೈತನ್ಯವನ್ನು ಮೂಡಿಸಲಾಯಿತು.ಕಾರ್ಯಕ್ರಮದಲ್ಲಿ ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ದೇವರ […]
Read More

01-03-2026, 10:00 PM
ಕೊಣಾಜೆ: ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ವತಿಯಿಂದ ದಿನಾಂಕ 01-03-2026, ಭಾನುವಾರದಂದು ಕಣ್ಣೂರಿನತ್ತ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಪ್ರವಾಸವು ಅತ್ಯಂತ ಯಶಸ್ವಿಯಾಗಿ ಮತ್ತು ಸಂಭ್ರಮದಿಂದ ನೆರವೇರಿತು. ಬೆಳಿಗ್ಗೆ 5.45ಕ್ಕೆ ಗ್ರಾಮ ಚಾವಡಿ ಗುರುಮಂದಿರದಲ್ಲಿ ಗುರುಗಳಿಗೆ ನಮನ ಸಲ್ಲಿಸಿ ಪ್ರವಾಸಕ್ಕೆ ಚಾಲನೆ ನೀಡಲಾಯಿತು. ಘಟಕದ ಒಂದನೇ ಉಪಾಧ್ಯಕ್ಷರಾದ ಮುರಳೀಧರ ಕೊಣಾಜೆ ಅವರ ನೇತೃತ್ವದಲ್ಲಿ ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಒಟ್ಟು 52 ಮಂದಿ ಈ ಪ್ರವಾಸದಲ್ಲಿ ಪಾಲ್ಗೊಂಡಿದ್ದರು. ದಾರಿಯಲ್ಲಿ ಪರ್ಸಿನಕಡವು ದೇವಸ್ಥಾನಕ್ಕೆ […]
Read More

01-03-2026, 9:00 PM
ವಿಟ್ಲ: ಇಲ್ಲಿನ ಪ್ರಸಿದ್ಧ ಪುಣಚ ನೀರುಮಜಲು ವಾರ್ಷಿಕ ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವದ ಅಂಗವಾಗಿ, ಯುವವಾಹಿನಿ (ರಿ.) ವಿಟ್ಲ ಘಟಕದ ಸದಸ್ಯರು ದಿನಾಂಕ 01-03-2026, ಭಾನುವಾರದಂದು ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಿದರು.ನೇಮೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಣೆಯ ಜವಾಬ್ದಾರಿಯನ್ನು ಹೊತ್ತಿದ್ದ ಘಟಕದ ಸದಸ್ಯರು, ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಭಕ್ತಿಪೂರ್ವಕವಾಗಿ ಶ್ರಮದಾನ ಮಾಡಿದರು. ಯುವವಾಹಿನಿ ಸದಸ್ಯರ ಈ ನಿಸ್ವಾರ್ಥ ಸೇವೆಯನ್ನು ಗುರುತಿಸಿದ ಗರಡಿಯ ಆಡಳಿತ ಮಂಡಳಿಯು, ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದೆ. ಈ ಸೇವಾ ಕಾರ್ಯಕ್ರಮದಲ್ಲಿ ವಿಟ್ಲ ಘಟಕದ […]
Read More

01-03-2026, 9:00 PM
ಮಂಗಳೂರು: ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಗೆಜ್ಜೆಗಿರಿ ನಂದನ ಬಿತ್ತಿಲ್ ಇಲ್ಲಿ ಜರುಗಿದ ವಾರ್ಷಿಕ ಮಹೋತ್ಸವ ಹಾಗೂ ನೇಮೋತ್ಸವ ಪುಣ್ಯ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಸಮಾಜದ ಸಾಂಸ್ಕೃತಿಕ ಅಸ್ಮಿತೆಯ ತಾಣವಾಗಿರುವ ಗೆಜ್ಜೆಗಿರಿಗೆ ಸಂಘಟಿತವಾಗಿ ಭೇಟಿ ನೀಡಿದ ಘಟಕದ ತಂಡವು, ಕ್ಷೇತ್ರದ ದೈವಿಕ ವಿಧಿವಿಧಾನಗಳಲ್ಲಿ ಭಾಗಿಯಾಗಿ ಭಕ್ತಿ ಸಮರ್ಪಣೆ ಮಾಡಿತು.
Read More

01-03-2026, 8:00 PM
ಸುರತ್ಕಲ್: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಕುಟುಂಬ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ–2026” ಕಾರ್ಯಕ್ರಮವನ್ನು ದಿನಾಂಕ 01-03-2026 ರಂದು ಸದಾಶಿವನಗರ 1ನೇ ಅಡ್ಡರಸ್ತೆ, ಸುರತ್ಕಲ್ನಲ್ಲಿರುವ ಘಟಕದ ಸದಸ್ಯೆಯಾದ ನೇಹಾ ಅವರ ಮನೆಯಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೇವತಿ ನವೀನ್, ಮೊದಲ ಉಪಾಧ್ಯಕ್ಷರಾದ ಸುಲತಾ ಪೂಜಾರಿ ಹಾಗೂ ಕಾರ್ಯದರ್ಶಿ ಸನೀಶ್ ಎಸ್. ಅಂಚನ್ ಉಪಸ್ಥಿತರಿದ್ದರು. ಅಧ್ಯಕ್ಷರಾದ ರೇವತಿ ನವೀನ್ ಅವರು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು, ಸದಸ್ಯರು ಹಾಗೂ ಅವರ ಕುಟುಂಬಸ್ಥರನ್ನು ಸ್ವಾಗತಿಸಿದರು.ಕಾರ್ಯಕ್ರಮದ ಸಂಚಾಲಕರಾದ ಸ್ವಾತಿ […]
Read More