Yuvavahini

ಪದಗ್ರಹಣ

ಪದಪ್ರದಾನ ಸಮಾರಂಭ

ಮಂಗಳೂರು ದಿ.27.02.2022 ಯುವವಾಹಿನಿ (ರಿ.) ಕೆಂಜಾರು – ಕರಂಬಾರು ಘಟಕದ ಪದಗ್ರಹಣ ಸಮಾರಂಭವು ಶ್ರೀ ದೇವಿ ಭಜನಾ ಮಂದಿರ ಕೆಂಜಾರು ಕರಂಬಾರು ಇಲ್ಲಿ ಜರುಗಿತು. ಶ್ರೀ ರಾಮಾಂಜನೆಯ ಮಂದಿರ ಕೆಂಜಾರು ಇದರ‌ ಅಧ್ಯಕ್ಷರಾದ ಶ್ರೀ ಮಹಾಬಲ ಪೂಜಾರಿಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಆರತಿಗೈದು ದೀಪ ಪ್ರಜ್ವಲನೆ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಶೇಖರ್ ಬಂಗೇರ ಅವರು ಸಮಾರಂಭವನ್ನು ‌ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಜೀತೇಶ್ ಸಾಲ್ಯಾನ್ ವಹಿಸಿದ್ದರು. ಮಾಜಿ ಅಧ್ಯಕ್ಷರಾದ […]

Read More

ಯುವವಾಹಿನಿಯ ಸಮಾಜಮುಖಿ ಚಿಂತನೆಗಳು ಹೊಸ ಭವಿಷ್ಯಕ್ಕೆ ಮುನ್ನುಡಿ : ಕೋಟ ಶ್ರೀನಿವಾಸ ಪೂಜಾರಿ

ಕೋಟ: ಸಂಘಟನೆಗಳು ಸಮಾಜದ ಶ್ರೇಯಸ್ಸಿಗಾಗಿ ಸಮಾಜಮುಖಿ ಚಿಂತನೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ನೊಂದವರ, ಅಶಕ್ತರ ಬಾಳಿಗೆ ಬೆಳಕಾಗಿ ಹೊಸ ಮುನ್ನುಡಿ ಬರೆಯುತ್ತಿದೆ. ಈ ನಿಟ್ಟಿನಲ್ಲಿ ಯುವವಾಹಿನಿ(ರಿ) ಯಡ್ತಾಡಿ ಘಟಕ ಹಲವಾರು ಸಮಾಜ ಸೇವೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯ ಸ್ಥಾಪನೆಯ ಉದ್ದೇಶದಂತೆ ಹೆಜ್ಜೆ ಹಾಕುತ್ತಿರುವುದು ಶ್ಲಾಘನೀಯ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಯಡ್ತಾಡಿ ಶ್ರೀಕೃಷ್ಣ ನಿಲಯದ ವಠಾರದಲ್ಲಿ ಯುವವಾಹಿನಿ (ರಿ) ಯಡ್ತಾಡಿ […]

Read More

ಬೆಂಗಳೂರಿನಲ್ಲಿ ವಿಜೃಂಬಿಸಿದ ಯುವವಾಹಿನಿ

ಬೆಂಗಳೂರು : ಫೆಬ್ರವರಿ 13, 2022ರ ಭಾನುವಾರ ಬೆಂಗಳೂರಿನ ಜಯನಗರದ ಯುವಕ ಸಂಘದ ವಿವೇಕ ಸಭಾಂಗಣದಲ್ಲಿ ಸಂಭ್ರಮವೋ ಸಂಭ್ರಮ.ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮೂಲೆಗಳಿಂದ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಒಟ್ಟು ಸೇರಿರುವ ಬಿಲ್ಲವ ಸಮಾಜದ ಯುವಕ-ಯುವತಿಯರು ಯುವವಾಹಿನಿ (ರಿ) ಬೆಂಗಳೂರು ಘಟಕದ ನಾಲ್ಕನೆಯ ವಾರ್ಷಿಕ ಸಮಾವೇಶವನ್ನು ಅದ್ದೂರಿಯಾಗಿ ಆಚರಿಸಿಕೊಂಡರು. ಬೆಳಿಗ್ಗೆ ಗಂಟೆ ಹತ್ತರಿಂದ ಆರಂಭವಾದ ಕಾರ್ಯಕ್ರಮವನ್ನು ಸಕೇಶ್ ಬುನ್ನನ್ ನಡೆಸಿಕೊಟ್ಟರು. ವಿವಿಧ ನೃತ್ಯ-ಸಂಗೀತ ಗಳನ್ನೊಳಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಸೇರಿದ್ದ ಜನಸಾಗರವು ಮನರಂಜನೆಯ ರಸದೌತಣವನ್ನು ಸವಿಯುವಂತಾಯಿತು. ಸುಮಾರು […]

Read More

ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆ

ಕೂಳೂರು : ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ದೀಕ್ಷಿತ್ ಸಿ. ಎಸ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಸುಮಾಶಿವು ಕೋಡಿಕಲ್ ಒಂದನೇ ಉಪಾಧ್ಯಕ್ಷರು : ನಿಶಿತ್ ಪೂಜಾರಿ ಎರಡನೇ ಉಪಾಧ್ಯಕ್ಷರು : ಯಶವಂತ್ ಪೂಜಾರಿ ಕೋಶಾಧಿಕಾರಿ : ರಕ್ಷಾ ಜೆ ಜತೆ ಕಾರ್ಯದರ್ಶಿ : ತುಳಸಿ ಸುಜೀರ್ ಜತೆ ಕೋಶಾಧಿಕಾರಿ : ನೈನಾ ಕೋಟ್ಯಾನ್ ಸಂಘಟನಾ ಕಾರ್ಯದರ್ಶಿ : ಸಚಿನ್ ಪೂಜಾರಿ ವ್ಯಕ್ತಿತ್ವ ವಿಕಸನ ನಿರ್ದೇಶಕರು ಲೋಕೇಶ್ ಪೂಜಾರಿ ಕ್ರೀಡಾ ನಿರ್ದೇಶಕರು […]

Read More

ಪದಗ್ರಹಣ ಸಮಾರಂಭ

ಯುವವಾಹಿನಿ (ರಿ.) ಕೂಳೂರು ಘಟಕದ 2022-23 ನೇ ಸಾಲಿನ 7 ನೇ ಪದಗ್ರಹಣ ಕಾರ್ಯಕ್ರಮಕ್ಕೆ ದಿನಾಂಕ 06-02-2022 ರ ಭಾನುವಾರದಂದು ಕೂಳೂರು ಮಿನಿ ಚರ್ಚ್ ಹಾಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಸಭಾ ಕಾರ್ಯಕ್ರಮವನ್ನು ಶ್ರೀ ಗೋಕರ್ಣಾಥ ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಎಚ್.ಎಸ್ ಸಾಯಿರಾಮ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಸಮಾಜಮುಖಿ ಕಾರ್ಯಗಳೊಂದಿಗೆ ಯುವಕರ ಯುವವಾಹಿನಿ ತಂಡವು ಇನ್ನಷ್ಟು ಬಲಿಷ್ಠ ಗೊಳ್ಳಲಿ ಎಂದು ಶುಭ […]

Read More

ಪದಗ್ರಹಣ ಸಮಾರಂಭ

ಮಂಗಳೂರು:- ದಿನಾಂಕ 01.02 2022 ರಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಪದಗ್ರಹಣ ಸಮಾರಂಭವು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಸಮಾರಂಭಕ್ಕೆ ಭಜನೆ ಹಾಗೂ ಗುರುಪೂಜೆಯೊಂದಿಗೆ ಚಾಲನೆ ನೀಡಲಾಯಿತು. ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ಎಸ್ಪಿನ್ ವಾಲ್ ಮತ್ತು ಕಂಪನಿ ಲಿಮಿಟೆಡ್ ಮಂಗಳೂರು ಇದರ ಜನರಲ್ ಮನೇಜರ್ ಆಗಿರುವ ಎಮ್.ಶೇಖರ ಪೂಜಾರಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯಅತಿಥಿಗಳಾಗಿ ಡಾ. ಕಿರಣ್ ಕುಮಾರ್ ಪಿ ಕೆ. ರಾಜ್ಯಾಧ್ಯಕ್ಷರು, ಭಾರತೀಯ ಮನೋವೈದ್ಯಕೀಯ ಸಂಘ, ಕರ್ನಾಟಕ ತುಳು […]

Read More

ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು, ಮುಲ್ಕಿ

ಮಂಗಳೂರು : ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಸಭಾಂಗಣದಲ್ಲಿ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ ಪದಗ್ರಹಣ ಸಮಾರಂಭವು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಡಾ.ರಾಜಾರಾಮ್ ಕೆ.ಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ 2021-22 ನೇ ಸಾಲಿನ ಅಧ್ಯಕ್ಷರಾಗಿ ಉದಯ ಅಮೀನ್ ಮಟ್ಟು ಮುಲ್ಕಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಸತೀಶ್ ಕಿಲ್ಪಾಡಿ, ಮುಲ್ಕಿ ಇವರುಗಳು ಆಯ್ಕೆಯಾಗಿದ್ದಾರೆ. 2021-22 ನೇ ಸಾಲಿನ ನೂತನ […]

Read More

ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆ

ಸುರತ್ಕಲ್ : ಯುವವಾಹಿನಿ ಸುರತ್ಕಲ್ ಘಟಕದ 2022-23 ನೇ ಸಾಲಿನ ನೂತನ ಅಧ್ಯಕ್ಷರಾಗಿ ವಿವೇಕ್ ಬಿ.ಕೋಟ್ಯಾನ್ ಆಯ್ಕೆಯಾಗಿದ್ದಾರೆ ಕಾರ್ಯದರ್ಶಿ : ಮೃದುಲಾ ಪವನ್ ಉಪಾಧ್ಯಕ್ಷ :  ತಾರಾ ಅಶೋಕ್ ಹಾಗೂ ಅಶೋಕ್ ಕುಮಾರ್ ಕೋಶಾಧಿಕಾರಿ : ವಾಣಿ ಗಣೇಶ್ ಜತೆ ಕಾರ್ಯದರ್ಶಿ :  ಶೈಲೇಶ್ ಕೋಟ್ಯಾನ್ ಸಂಘಟಕನಾ ಕಾರ್ಯದರ್ಶಿ : ರೇವತಿ ನವೀನ್ ವ್ಯಕ್ತಿತ್ವ ವಿಕಸನ ನಿರ್ದೇಶಕರು   ವಿದ್ಯಾ ಕೇಶವ್ ಕ್ರೀಡೆ, ಆರೋಗ್ಯ ಮತ್ತು ಸಮಾಜಸೇವಾ  ನಿರ್ದೇಶಕರು : ಶ್ರೀನಿವಾಸ್ ಸುವರ್ಣ ಕಲೆ ಮತ್ತು ಸಾಹಿತ್ಯ  ನಿರ್ದೇಶಕರು […]

Read More

ಯುವವಾಹಿನಿಯ 34ನೇ ವಾರ್ಷಿಕ ಸಮಾವೇಶ ಸಂಪನ್ನ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 34ನೇ ವಾರ್ಷಿಕ ಸಮಾವೇಶ ಹಾಗೂ ಪದಗ್ರಹಣ ಸಮಾರಂಭವು ದಿನಾಂಕ 30.01.2022 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್ ಎಸ್ ಸಾಯಿರಾಂ ವಾರ್ಷಿಕ ಸಮಾವೇಶ ಉದ್ಘಾಟಿಸಿದರು. “ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದೇ “ಯುವ” : ವಿಖ್ಯಾತಾನಂದ ಸ್ವಾಮೀಜಿ ‘ಯುವ’ ಎಂದರೆ ಒಳ್ಳೆಯ ವಿಚಾರಗಳನ್ನು ತೆಗೆದುಕೊಂಡು ಕೆಟ್ಟ ವಿಚಾರಗಳನ್ನು ಬಿಸಾಡುವುದಾಗಿದೆ. ನೀವು ಯಾರ […]

Read More

ನಿರಂತರ ಅಧ್ಯಯನ ಶೀಲರಾಗಿದ್ದಾಗ ಪ್ರಬುದ್ಧರಾಗಲು ಸಾಧ್ಯ: ಡಾ. ರಾಜಾರಾಮ್ ಕೆ.ಬಿ.

ವಿಟ್ಲ :- ಇಂದು ಬಿಲ್ಲವ ಸಮಾಜವು ಹಿರಿಯರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತಿದೆ ಹೀಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮುಂದುವರೆದಾಗ ಲಭಿಸುವ ಆರ್ಥಿಕ ಶಕ್ತಿ, ಸಾಮರ್ಥ್ಯವನ್ನು ನಮಗಿಂತ ದುರ್ಬಲರಾಗಿರುವ, ಆಸಕ್ತರ ಕೈಹಿಡಿದೆತ್ತಲು ಬಳಸಿದಾಗ ಬಿಲ್ಲವರು ಬಲ್ಲವರಾಗುತ್ತಾರೆ, ನಿರಂತರ ಅಧ್ಯಯನ ಶೀಲರಾಗಿದ್ದಾಗ ಮಾತ್ರ ಸಮಾಜದಲ್ಲಿ ಪ್ರಬುದ್ಧರಾಗಲು ಸಾಧ್ಯ, ಇಂದು ನಮ್ಮ ಯುವಶಕ್ತಿಯನ್ನು ದೇಶದ ಅತ್ಯುತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸಬೇಕೆಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ ಹೇಳಿದರು. ಅವರು ವಿಟ್ಲ ಶಿವಗಿರಿಯ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ದೇಯಿ ಬೈದೆತಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!