04-05-2026, 9:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 04-05-2026 ರಂದು ಸಂಜೆ 5.30 ಗಂಟೆಗೆ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಕುತ್ತಾರು ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಿತು. ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
28-04-2026, 8:00 PM
ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಸುಂಕದಕಟ್ಟೆ, ಬಜಪೆ ಇಲ್ಲಿ ನಡೆಯುತ್ತಿರುವ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಭಜನಾ ಸಂಕೀರ್ತನೆ ಕಾರ್ಯಕ್ರಮವು ಭಕ್ತಿ ಭಾವದಿಂದ ನೆರವೇರಿತು. ದಿನಾಂಕ 28-04-2026, ಮಂಗಳವಾರ ಸಂಜೆ 5.00ರಿಂದ 8.00 ಗಂಟೆಯವರೆಗೆ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ರೋಹಿತ್ ಪೂಜಾರಿ, ಭಜನಾ ಸಂಚಾಲಕರಾದ ದಿವ್ಯ ಸುನಿಲ್, ಸಹ ಸಂಚಾಲಕರಾದ ವಿನೋದ ಪೂಜಾರಿ, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು […]
Read More
27-04-2026, 9:00 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 27-04-2026 ರಂದು ಸಂಜೆ 5.30 ಗಂಟೆಗೆ ಯುವವಾಹಿನಿ (ರಿ.) ಸುರತ್ಕಲ್ ಘಟಕ ಇವರ ಸಹಯೋಗದೊಂದಿಗೆ ನಡೆಯಿತು. ಮಂಗಳೂರು ಹಾಗೂ ಸುರತ್ಕಲ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Read More
26-04-2026, 1:00 PM
ಬಜಪೆ: ಯುವವಾಹಿನಿ ಬಜಪೆ ಘಟಕವು ಹತ್ತು ಹಲವು ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುವುದರ ಜೊತೆಗೆ ಪ್ರತಿ ವರ್ಷವೂ ಹಿಂದೂ ಸಂಪ್ರದಾಯದ ಬಿಸು ಹಬ್ಬವನ್ನು ಆಚರಿಸುತ್ತ ಬರುತ್ತಿರುವುದು ಮುಂದಿನ ಪೀಳಿಗೆಗೆ ಸಂಸ್ಕೃತಿಯನ್ನು ತಿಳಿಸುವಲ್ಲಿ ಉತ್ತೇಜನ ನೀಡುವಂತಾಗಿದೆ. ಬಿಸು ಪರ್ಬದಂತಹ ಹಬ್ಬಗಳು ನಮ್ಮ ಪರಂಪರೆಯನ್ನು ಜೀವಂತವಾಗಿರಿಸುತ್ತವೆ ಎಂದು ಬಜಪೆ ಶನೀಶ್ವರ ದೇವಸ್ಥಾನದ ಅರ್ಚಕರಾದ ಅಭಿಜಿತ್ ಆನಂದ್ ಅವರು ಹೇಳಿದರು. ಅವರು ಏಪ್ರಿಲ್ 26, 2026 ರಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ, ಬಜಪೆ ಇಲ್ಲಿ ಯುವವಾಹಿನಿ ಬಜಪೆ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ […]
Read More
20-04-2026, 9:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 20-04-2026 ರಂದು ಸಂಜೆ 5.30 ಗಂಟೆಗೆ ಶ್ರೀ ವಿಶ್ವಂಭರ ಭಜನಾ ಮಂಡಳಿ ಉರ್ವ ಸ್ಟೋರ್ ಇವರ ಸಹಯೋಗದೊಂದಿಗೆ ನಡೆಯಿತು. ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Read More
19-04-2026, 8:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ದಿನಾಂಕ 19-04-2026 ರ ಭಾನುವಾರ ಸಂಜೆ 7.15 ರಿಂದ 9.30 ಗಂಟೆಯವರೆಗೆ ಕಡಬದ ಏನೆಕಲ್ಲಿನಲ್ಲಿ ಮನೆ ಮನ ಭಜನೆ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕಡಬ ಘಟಕದ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಭಜನಾ ಸೇವೆಯಲ್ಲಿ ತೊಡಗಿಸಿಕೊಂಡರು. ಪರಮಪೂಜ್ಯ ನಾರಾಯಣ ಗುರು ಅವರ ಭಜನೆಗಳ ಮೂಲಕ ಧಾರ್ಮಿಕ ಜಾಗೃತಿ ಹಾಗೂ ಸಾಮಾಜಿಕ ಐಕ್ಯತೆಗೆ ಯುವವಾಹಿನಿ ಸದಾ ಬದ್ಧವಾಗಿರುವುದನ್ನು ಈ ಕಾರ್ಯಕ್ರಮ ಮತ್ತೊಮ್ಮೆ ಪ್ರತಿಪಾದಿಸಿತು.ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ […]
Read More
06-04-2026, 9:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಿರಂತರವಾಗಿ ನಡೆಯುತ್ತಾ ಬಂದಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 06-04-2026 ರಂದು ಸೋಮವಾರ ಸಂಜೆ ಕ್ಷೇತ್ರದಲ್ಲಿ ಭಕ್ತಿಪೂರ್ವಕವಾಗಿ ಜರುಗಿತು. ಈ ವಾರದ ಭಜನಾ ಸೇವೆಯನ್ನು ಶ್ರೀ ರಾಘವೇಂದ್ರ ಮಾತೃ ಭಜನಾ ಮಂಡಳಿ, ಕನ್ಯಾನ ಇವರ ಸಹಯೋಗದೊಂದಿಗೆ ನಡೆಸಿಕೊಡಲಾಯಿತು. ಸಂಜೆ 5.30ಕ್ಕೆ ಆರಂಭಗೊಂಡ ಭಜನಾ ಕಾರ್ಯಕ್ರಮದಲ್ಲಿ ಮಂಡಳಿಯ ಸದಸ್ಯರು ವಿವಿಧ ಭಕ್ತಿಗೀತೆ ಹಾಗೂ ನಾಮ ಸಂಕೀರ್ತನೆಗಳ ಮೂಲಕ ಭಕ್ತಾದಿಗಳನ್ನು […]
Read More
05-04-2026, 9:00 PM
ಮಂಗಳೂರು: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಆಯೋಜಿಸಲಾಗುತ್ತಿರುವ ನಿರಂತರ ‘ಮನೆ ಮನೆ ಭಜನೆ’ ಸರಣಿಯ 64ನೇ ಕಾರ್ಯಕ್ರಮವು ಇತ್ತೀಚೆಗೆ ಘಟಕದ ಪ್ರಥಮ ಉಪಾಧ್ಯಕ್ಷರಾದ ಮುಖೇಶ್ ಕುಮಾರ್ ಅವರ ನಿವಾಸದಲ್ಲಿ ಅತ್ಯಂತ ಭಕ್ತಿ-ಶ್ರದ್ಧೆಗಳಿಂದ ನೆರವೇರಿತು. ಕಾರ್ಯಕ್ರಮದಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಕಸ್ತೂರಿ ಮತ್ತು ಮಹೇಶ್ ದಂಪತಿಗಳನ್ನು ಕೂಳೂರು ಘಟಕದ ಅಧ್ಯಕ್ಷರಾದ ಗೀತಾ ವಸಂತ್ […]
Read More
09-03-2026, 8:00 PM
ಮಂಗಳೂರು: ದಿನಾಂಕ 09-03-2026 ನೇ ಸೋಮವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯನ್ನು ಯುವವಾಹಿನಿ (ರಿ.) ಕಂಕನಾಡಿ ಘಟಕದ ಸಹಯೋಗದೊಂದಿಗೆ ಭಕ್ತಿಭಾವದಿಂದ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Read More
08-03-2026, 9:17 AM
ಬಜಪೆ: ಯುವವಾಹಿನಿ (ರಿ.) ಕೆಂಜಾರು ಕರಂಬಾರು ಘಟಕದ ವತಿಯಿಂದ ಮೇಘೆ ಹುಣ್ಣಿಮೆಯ ಶುಭ ಸಂದರ್ಭದಲ್ಲಿ ದಿನಾಂಕ 03-03-2026, ಮಂಗಳವಾರದಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ 4 ಗಂಟೆಗೆ ಕೆಂಜಾರು ಕರಂಬಾರಿನ ಶ್ರೀ ದೇವಿ ಭಜನಾ ಮಂದಿರದಿಂದ “ಓಂ ಗುರುಭ್ಯೋ ನಮಃ” ಎಂಬ ಗುರುಸ್ಮರಣೆಯೊಂದಿಗೆ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಘಟಕದ ಸದಸ್ಯರು ಹಾಗೂ ಭಕ್ತಾದಿಗಳು ಸೇರಿ ಒಟ್ಟು 15 ಮಂದಿಯ ತಂಡವು ಪಾದಯಾತ್ರೆಯ ಮೂಲಕ ಕಟೀಲು ಕ್ಷೇತ್ರವನ್ನು ತಲುಪಿ, ಅಮ್ಮನವರ ದರ್ಶನ ಪಡೆದು […]
Read More