Yuvavahini

ಸಂಸ್ಕೃತಿ

ಭಜನಾ ಕಾರ್ಯಕ್ರಮ ಹಾಗೂ ಸನ್ಮಾನ

ಯುವವಾಹಿನಿ (ರಿ) ಅಡ್ವೆ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 163ನೇ ಜಯಂತಿ ಪ್ರಯುಕ್ತ ದಿನಾಂಕ 06.09.2017 ರಂದು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ತದನಂತರ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಹಿರಿಯ ಕೃಷಿಕರು ಹಾಗೂ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಬಹಳ ಹಿಂದಿನಿಂದಲೂ ಸೇವೆ ಮಾಡಿಕೊಂಡು ಬಂದಿರುವ ಶ್ರೀ ಸಂಕಪ್ಪ ಪೂಜಾರಿಯವರನ್ನು ಗೌರವಿಸಲಾಯಿತು.

Read More

ಕೃಷಿ ಚಟುವಟಿಕೆಗಳಿಂದ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ : ರವೀಂದ್ರ ಪೂಜಾರಿ

ತುಳುನಾಡಿನಾದ್ಯಂತ ನಡೆಯುತ್ತಿರುವ ಆಟಿಡೊಂಜಿ ದಿನ,ಕೆಸರ್ ಡ್ ಒಂಜಿ ದಿನ ಮುಂತಾದ ಕಾರ್ಯಕ್ರಮಗಳನ್ನು ಸಡಗರ, ಸಂಭ್ರಮದಿಂದ ಮಾಡುತ್ತಿದ್ದೇವೆ.. ಈ ಸಂಭ್ರಮ ಒಂದು ದಿನಕ್ಕೆ ಸೀಮಿತವಾಗಿರದೆ, ನಮ್ಮ ವಿರಾಮದ ವೇಳೆಯಲ್ಲಿ ನಿತ್ಯ ನಿರಂತರವಾಗಿ ನಡೆಯಬೇಕಾಗಿದೆ. ಕೃಷಿ ಚಟುವಟಿಕೆಗಳಿಗೆ ನಾವು ಮೈಯೊಡ್ಡಿದರೆ, ನಮ್ಮ ಆರೋಗ್ಯವೃದ್ಧಿಯಾಗುವುದು.ಕೃಷಿಕರಾಗಿ ಬದುಕಿದ ನಮ್ಮ ಗುರುಹಿರಿಯರ ಆರೋಗ್ಯದ ಗುಟ್ಟು ಇದೇ ಎಂದು ಅಡ್ವೆ ರವೀಂದ್ರ ಪೂಜಾರಿಯವರು ತಿಳಿಸಿದರು. ಅವರು ದಿನಾಂಕ 13-08-2017 ಆದಿತ್ಯವಾರದಂದು ಅಡ್ವೆ ಆನಂದಿ ಸಭಾಭವನದಲ್ಲಿ ಯುವವಾಹಿನಿ(ರಿ.) ಅಡ್ವೆ ಘಟಕದ ವತಿಯಿಂದ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ […]

Read More

ರಕ್ಷಾ ಬಂಧನ

ಸಹೋದರ ಸಹೋದರಿಯ ಪವಿತ್ರ ಸಂಬಂಧ ಬೆಸೆಯುವ ರಕ್ಷಾ ಬಂಧನದ ಮಹತ್ವ ಹಾಗೂ ದೇಶದ ರಕ್ಷಣೆಯಲ್ಲಿ ಪ್ರತಿ ಪ್ರಜೆಗಳ ಪಾತ್ರ ಬಗ್ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಕಾರ್ಯವಹ ರಾಜೇಶ್ ಉಪನ್ಯಾಸ ನೀಡಿದರು.ಅವರು ದಿನಾಂಕ 10.08.2017ರಂದು ಯುವವಾಹಿನಿ ಕಂಕನಾಡಿ ಘಟಕದ ವತಿಯಿಂದ ಉಜ್ಜೋಡಿ ಮಹಾಂಕಾಳಿ ದೈವಸ್ಥಾನದ ವಠಾರದಲ್ಲಿ ಜರುಗಿದ ರಕ್ಷಾಬಂಧನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು ಯುವವಾಹಿನಿ ಕಂಕನಾಡಿ ಘಟಕದ ಅಧ್ಯಕ್ಷರಾದ ಗೋಪಾಲ ಪೂಜಾರಿ ಸಭೆಯ ಅದ್ಯಕ್ಷತೆಯನ್ನು ವಹಿಸಿದ್ದರು.ವೇದಿಕೆಯಲ್ಲಿ ಘಟಕದ ಸಲಹೆಗಾರರಾದ ಪರಮೇಶ್ವರ ಪೂಜಾರಿ, ನಿಕಟಪೂರ್ವ […]

Read More

ನಾಳಿನ ಸದೃಢ ಸಮಾಜಕ್ಕೆ, ಇಂದು ಸನ್ನದ್ಧರಾಗೋಣ : ಕವಿತಾ ಸನಿಲ್

ನಾಳಿನ ಸದೃಢ ಸಮಾಜಕ್ಕೆ ಇಂದು ಸನ್ನದ್ಧರಾದಲ್ಲಿ ಮಾತ್ರ ಯುವ ಸಮುದಾಯವನ್ನು ಸಂಸ್ಕøತಿ ಸಂಸ್ಕಾರಗಳ ಮೂಲಕ ಅದರ ಬಗ್ಗೆ ತಿಳುವಳಿಕೆ ನೀಡುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದು ಮಂಗಳೂರು ಮೇಯರ್ ಕವಿತಾ ಸನಿಲ್ ಹೇಳಿದರು. ಹಳೆಯಂಗಡಿಯ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಆಟಿ ಆನಿ-ಇನಿ-ಎಲ್ಲೆ ಕಾರ್ಯಕ್ರಮವನ್ನು ಬತ್ತ ಕುಟ್ಟುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ನಾನಿಲ್ ಅಧ್ಯಕ್ಷತೆಯನ್ನು […]

Read More

ತುಳುನಾಡಿನ ಆಚರಣೆ ಪವಿತ್ರವಾದ ಸಂಸ್ಕ್ರತಿ : ಡಾ|| ಸದಾನಂದ ಪೆರ್ಲ

ತುಳುನಾಡಿನ ಜನರ ಎಲ್ಲ ಆಚರಣೆ ಮತ್ತು ಆಹಾರ ಪದ್ಧತಿಗಳು ಕೇವಲ ಒಂದು ಸಮುದಾಯಕ್ಕೆ ಮೀಸಲಾಗಿರುವ ವಿಷಯವಲ್ಲ. ಅದು ಸರ್ವಕಾಲಿಕ ಸತ್ಯವನ್ನು ಒಳಗೊಂಡ ಒಂದು ಪವಿತ್ರ ಸಂಸ್ಕøತಿ ಎಂದು ಮಂಗಳೂರು ಆಕಾಶವಾಣಿಯ ಹಿರಿಯ ಕಾರ್ಯಕ್ರಮ ನಿರ್ವಾಹಕರಾದ ಡಾ| ಸದಾನಂದ ಪೆರ್ಲ ಹೇಳಿದರು. ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಬಿಲ್ಲವ ಸಮಾಜ ಸೇವಾಸಂಘದಲ್ಲಿ ಜರಗಿದ 15ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆಟಿ ಕೆಟ್ಟ ದಿನಗಳ ಒಂದು ಮಾಸ ಎಂದು ಪ್ರತಿಬಿಂಬಿಸಲಾಗುತ್ತಿದೆ. ಆಟಿ ತಿಂಗಳು ಅತ್ಯಂತ ಶ್ರೇಷ್ಠ ತಿಂಗಳು […]

Read More

ಕಷ್ಟದ ದಿನಗಳ ನೆನಪು ನಮಗಿರಬೇಕು : ರೋಹಿಣಿ

ತುಳು ಸಂಸ್ಕೃತಿಯಲ್ಲಿ ಆಟಿ ತಿಂಗಳಿಗೆ ವಿಶೇಷವಾದ ಸ್ಥಾನಮಾನವಿದೆ. ಈ ತಿಂಗಳಿನಲ್ಲಿ ನಡೆಯುವ ಯಾವೆಲ್ಲ ಆಚರಣೆಗಳಿವೆಯೋ ಅವೆಲ್ಲದರ ಹಿಂದೆ ಪೂರ್ವಜರು ವೈಜ್ಞಾನಿಕತೆಯನ್ನು ಪರಿಚಯಿಸಿದ್ದನ್ನು ಈಗಲೂ ಕಾಣಬಹುದಾಗಿದೆ. ಬದಲಾವಣೆಯ ಗಾಳಿ ಬಲವಾಗಿ ಬೀಸಿದೆ. ಕೃಷಿ ಸಂಸ್ಕೃತಿಯಿಂದ ಹಿಮ್ಮುಖವಾದ ಕಾರಣ ನಾವೆಲ್ಲ ಆರೋಗ್ಯಪೂರ್ಣ ವಾತಾವರಣದಿಂದ ದೂರ ಸರಿಯುತ್ತಿದ್ದೇವೆ” ಎಂದು ಹಿರಿಯ ಸಾಹಿತಿ ಶ್ರೀಮತಿ ಕೆ.ಎ.ರೋಹಿಣಿ ತಿಳಿಸಿದರು. ಅವರು ದಿನಾಂಕ 23.07.2017ನೇ ಆದಿತ್ಯವಾರದಂದು ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ಯುವವಾಹಿನಿ (ರಿ) ಬಜ್ಪೆ ಘಟಕದ ಆಶ್ರಯದಲ್ಲಿ ಬಜ್ಪೆ ಬ್ರಹ್ಮಶ್ರೀ ನಾರಾಯಣಗುರು ಸಂಘದ ಸಹಯೋಗದೊಂದಿಗೆ […]

Read More

ಬಜಪೆ ಯುವವಾಹಿನಿಯಿಂದ ಬಿಸು ಪರ್ಬ ಆಚರಣೆ

ಜಾಗತೀಕರಣದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯ ನಶಿಸಿಹೋಗುತ್ತಿರುವ ಈ ಕಾಲಘಟ್ಟದಲ್ಲಿ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮೂಲಕ ಯುವ ಜನಾಂಗದಲ್ಲಿ ಹೊಸ ಹುರುಪು ಮೂಡಿಸುವ ಕಾರ್ಯ ಮಾಡುತ್ತಿರುವ ಬಜಪೆ ಯುವವಾಹಿನಿಯು ಉತ್ತಮ ದಾರಿಯಲ್ಲಿ ಮುನ್ನಡೆಯುತ್ತಿದೆ ಎಂದು ರೋಟರಿ ವಲಯ 1ರ ಸಹಾಯಕ ಗವರ್ನರ್ ಜಿನರಾಜ್ ಸಾಲ್ಯಾನ್ ತಿಳಿಸಿದರು. ಅವರು ಯುವವಾಹಿನಿ(ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 16.04.2017 ನೇ ಆದಿತ್ಯವಾರ ಬೆಳಗ್ಗೆ ಬಜಪೆ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ಹೊಸ ವರ್ಷಾಚರಣೆಯ ಪ್ರಯುಕ್ತ ಜರುಗಿದ ಬಿಸು […]

Read More

ಪುತ್ತೂರು ಯುವವಾಹಿನಿ :- ಶಿವಭಕ್ತ ವೀರಮಣಿ – ಯಕ್ಷಗಾನ ತಾಳಮದ್ದಳೆ

ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಪ್ರತಿಷ್ಠಾ ವರ್ದತ್ಯುತ್ಸವದ ಪ್ರಯುಕ್ತ  ದಿನಾಂಕ 26.03.2017 ಬೆಳಗ್ಗೆ 10.00 ರಿಂದ ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ  ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ಶಿವಭಕ್ತ ವೀರಮಣಿ – ಯಕ್ಷಗಾನ ತಾಳಮದ್ದಳೆ  ಜರುಗಿತು. ಪುತ್ತೂರು ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಸಮಾರಂಭ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಯುವವಾಹಿನಿ ಅದ್ಯಕ್ಷ ಜಯಂತ ಪೂಜಾರಿ, ಕಾರ್ಯದರ್ಶಿ ಉದಯ ಕೊಲಾಡಿ, ಶಶಿಧರ ಕಿನ್ನಿಮಜಲು,ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Read More

ಕಂಕನಾಡಿ ಯುವವಾಹಿನಿ : ಪ್ರಥಮ ಬಹುಮಾನ

ಯುವವಾಹಿನಿ ಕಂಕನಾಡಿ ಘಟಕ ಆಶ್ರಯದಲ್ಲಿ ಘಟಕದ ಕ್ರಿಯಾಶೀಲ ಸದಸ್ಯರ ತಂಡವು ವೈವಿಧ್ಯಮಯವಾಗಿ ರಚಿಸಿದ ಗೂಡುದೀಪವು ನೀರುಮಾರ್ಗದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಆಯೋಜಿಸಿದ್ದ ಗೂಡು ದೀಪ ಸ್ಪರ್ಧೆಯಲ್ಲಿ  ಪ್ರಥಮಸ್ಥಾನ ಪಡೆದಿರುತ್ತದೆ ಹಾಗೂ ನಮ್ಮ ಕುಡ್ಲ ವಾರ್ತಾ ವಾಹಿನಿಯು ಆಯೋಜಿಸಿದ್ದ ಗೂಡುದೀಪ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿರುತ್ತದೆ.

Read More

ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ

ದಿನಾಂಕ 30-10-2016 ರಂದು ಮೂಲ್ಕಿ ಘಟಕದ ವತಿಯಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ 14 ನೇ ವರ್ಷದ ತುಳುವೆರೆ ತುಡರ್ ಪರ್ಬ ಕಾರ್ಯಕ್ರಮ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ ಯವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಸಂಘ ಮುಲ್ಕಿ ಇದರ ಅಧ್ಯಕ್ಷ ಗೋಪಿನಾಥ ಪಡಂಗ, ಶ್ರೀ ಹೊಳೆ ಬದಿ ಮಸೀದಿ ಇದರ ಅಧ್ಯಕ್ಷ ಅಬ್ಬಾಸ್ ಹಾಜಿ, ರೋಟರಿ ವಿದ್ಯಾಸಂಸ್ಥೆ ಮೂಡಬಿದ್ರೆ ಇದರ ಪ್ರಾಂಶುಪಾಲರಾದ ವಿನ್ಸೆಂಟ್ ಡಿ’ ಕೋಸ್ತಾ ಭಾಗವಹಿಸಿದ್ದರು. ಅತಿಥಿ ಗಣ್ಯರೆಲ್ಲ ಸೇರಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!