24-08-2026, 2:00 PM
ಧರ್ಮಸ್ಥಳ ಅಗಸ್ಟ್ 24: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಮಹಿಳಾ ನಿರ್ದೇಶಕರಾದ ಶ್ರೀಮತಿ ವೇದ ಪ್ರಭಾಕರ್ ಅವರ ಪತಿಯವರು ಇತ್ತೀಚೆಗೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ದಿನಾಂಕ 24.08.2026ರಂದು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆರ್ಥಿಕ ನೆರವು ಹಾಗೂ ನೈತಿಕ ಸ್ಥೈರ್ಯ ನೀಡುವ ಉದ್ದೇಶದಿಂದ, ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ₹10,000/- (ಹತ್ತು ಸಾವಿರ ರೂಪಾಯಿ) ಸಾಂತ್ವನ […]
Read More
21-08-2026, 8:00 PM
ಮಂಗಳೂರು ಅಗಸ್ಟ್ 21: “ಕ್ಯಾನ್ಸರ್ ರೋಗಕ್ಕೆ ಭಯಪಡುವ ಅಗತ್ಯವಿಲ್ಲ. ಆರಂಭದ ಹಂತದಲ್ಲಿಯೇ ರೋಗವನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಗುಣಪಡಿಸಲು ಸಾಧ್ಯ. ದೇಹದಲ್ಲಿ ಯಾವುದೇ ಅಸಹಜ ಬದಲಾವಣೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಕ್ಯಾನ್ಸರ್ ವಿಭಾಗದ ಸಲಹೆಗಾರ್ತಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಮಮತಾ ಸುವರ್ಣ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆ.21ರಂದು ಆಯೋಜಿಸಲಾದ ಕ್ಯಾನ್ಸರ್ ರೋಗದ ಮಾಹಿತಿ ಹಾಗೂ ಜಾಗೃತಿ […]
Read More
16-08-2026, 6:00 PM
ಮಂಗಳೂರು, ಆಗಸ್ಟ್ 16: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸೇವಾನಿಧಿ ಯೋಜನೆಯಡಿ ಅನಾರೋಗ್ಯದಿಂದ ಸಂಕಷ್ಟದಲ್ಲಿರುವ ಎರಡು ಕುಟುಂಬಗಳಿಗೆ ಒಟ್ಟು ₹20,000 ಧನಸಹಾಯ ನೀಡಲಾಯಿತು. 29ನೇ ಸೇವಾನಿಧಿ ಯೋಜನೆಯ ಅಂಗವಾಗಿ ಸಜಿಪ ನಿವಾಸಿ, ಅನಾರೋಗ್ಯದಿಂದ ತೀವ್ರ ತೊಂದರೆಗೀಡಾದ 8 ವರ್ಷದ ತಾಶ್ವಿ ಅವರ ಕುಟುಂಬಕ್ಕೆ ₹10,000 ಹಾಗೂ 30ನೇ ಸೇವಾನಿಧಿ ಯೋಜನೆಯ ಅಂಗವಾಗಿ ಕಾಸರಗೋಡು ಜೋಡುಕಲ್ಲು ನಿವಾಸಿ ದುರ್ಗಾ ಪ್ರಸಾದ್ ಅವರ ಕುಟುಂಬಕ್ಕೆ ₹10,000 ಧನಸಹಾಯ ನೀಡಲಾಯಿತು. ಯುವವಾಹಿನಿ (ರಿ.) ಕೂಳೂರು ಘಟಕದ ಅಧ್ಯಕ್ಷೆ ಗೀತಾ ವಸಂತ್ […]
Read More
02-08-2026, 1:00 PM
ಬಂಟ್ವಾಳ, ಆ. 3: ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಆದ್ಯತೆ ನೀಡುತ್ತಿರುವ ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿರುವ ರಾಮಚಂದ್ರ ಸಾಲ್ಯಾನ್ ಅವರಿಗೆ ಸೇವಾ ಯೋಜನೆಯಡಿ ₹25,000 ಮೊತ್ತದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು. ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಈ ಸೇವಾ ಯೋಜನೆಯನ್ನು ರೂಪಿಸಲಾಗಿದ್ದು, ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರ ಸಮ್ಮುಖದಲ್ಲಿ ನೆರವಿನ ಮೊತ್ತವನ್ನು ಫಲಾನುಭವಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಮಾರ್ಗದರ್ಶಕರಾದ ಭುವನೇಶ್ ಪಚ್ಚಿನಡ್ಕ ಚಕ್ ಹಸ್ತಾಂತರ ಮಾಡಿದರು ಯುವವಾಹಿನಿ ಬಂಟ್ವಾಳ […]
Read More
26-07-2026, 2:00 PM
ಮೂಡುಬಿದಿರೆ, ಜುಲೈ 26: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಶಿರ್ತಾಡಿ ಇವರ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸಭಾಂಗಣ, ಶಿರ್ತಾಡಿಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಶಿಬಿರದಲ್ಲಿ ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಮಂಗಳೂರು–ಮೂಡುಬಿದಿರೆ ವತಿಯಿಂದ ಉಚಿತ ನೇತ್ರ ತಪಾಸಣೆ, ಆಳ್ವಾಸ್ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಶೋಭಾವನ, […]
Read More
25-07-2026, 1:00 PM
ಬಂಟ್ವಾಳ, ಜು. 25 : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಐ.ಎಂ.ಎ. ಮಂಗಳೂರು ಶಾಖೆಯ ಸಹಕಾರದೊಂದಿಗೆ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರ ಹಾಗೂ ಸ್ವಯಂಪ್ರೇರಿತ ರಕ್ತದಾನ ಶಿಬಿರವು ಶನಿವಾರ ಯಶಸ್ವಿಯಾಗಿ ನಡೆಯಿತು. ಆರೋಗ್ಯ ಜಾಗೃತಿ ಹಾಗೂ ಸಮಾಜಸೇವೆಯ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ಯುವವಾಹಿನಿಯ ಸುಮಾರು 70 ಮಂದಿ ಸದಸ್ಯರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ […]
Read More
16-07-2026, 6:00 PM
ಕುಪ್ಪೆಪದವು, ಜುಲೈ 16: ಯುವವಾಹಿನಿ (ರಿ.) ಕುಪ್ಪೆಪದವು–ಎಡಪದವು ಘಟಕದ ಸಕ್ರಿಯ ಸದಸ್ಯೆ ಹರೀನಾಕ್ಷಿ ಅವರು ಆಕಸ್ಮಿಕವಾಗಿ ಬಿದ್ದು ಕಾಲಿನ ಮೂಳೆ ಮುರಿತಕ್ಕೊಳಗಾದ ಹಿನ್ನೆಲೆಯಲ್ಲಿ, ಘಟಕದ ವತಿಯಿಂದ ಆರೋಗ್ಯ ನಿಧಿಯಡಿ ಧನಸಹಾಯವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಪದಾಧಿಕಾರಿಗಳು, ಸದಸ್ಯರ ಸಂಕಷ್ಟದ ಸಂದರ್ಭದಲ್ಲಿ ಯುವವಾಹಿನಿ ಸದಾ ಅವರೊಂದಿಗೆ ನಿಲ್ಲುವ ಬದ್ಧತೆಯನ್ನು ಹೊಂದಿದ್ದು, ಆರೋಗ್ಯ ನಿಧಿಯಂತಹ ಯೋಜನೆಗಳು ಸದಸ್ಯರಿಗೆ ನೆರವಾಗುವ ಮಹತ್ವದ ಉಪಕ್ರಮಗಳಾಗಿವೆ ಎಂದು ತಿಳಿಸಿದರು. ಹರೀನಾಕ್ಷಿ ಅವರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ಹಾರೈಸಿದರು. ಧನಸಹಾಯ ವಿತರಣೆಯ […]
Read More
16-07-2026, 1:00 PM
ಉಪ್ಪಿನಂಗಡಿ, ಜುಲೈ 16: ವಿಶ್ವ ವೈದ್ಯರ ದಿನಾಚರಣೆ-2026ರ ಅಂಗವಾಗಿ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ವತಿಯಿಂದ ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳಿಗೆ ಭೇಟಿ ನೀಡಿ ಸಮಾಜದ ಆರೋಗ್ಯ ರಕ್ಷಣೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಡಾ. ರಾಜಾರಾಮ್ ಕೆ.ಬಿ., ಡಾ. ರಮ್ಯಾ ರಾಜಾರಾಮ್, ಡಾ. ಎಂ.ಆರ್. ಶೆಣೈ, ಡಾ. ಕೆ.ಜಿ. ಭಟ್, ಡಾ. ಎಂ.ಎನ್. ಭಟ್, ಡಾ. ರಘು, ಡಾ. ಸದಾನಂದ ಕುಂದರ್, ಡಾ. ಆಶಿತ್ ಎಂ.ವಿ., ಡಾ. ಶ್ವೇತಾ ಆಶಿತ್, […]
Read More
15-07-2026, 6:00 PM
ಮಾಣಿ, ಜುಲೈ 15: ಇತ್ತೀಚೆಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವವಾಹಿನಿ (ರಿ.) ಮಾಣಿ ಘಟಕದ 2026–27ನೇ ಸಾಲಿನ ಪ್ರಚಾರ ನಿರ್ದೇಶಕರಾದ ಚರಣ್ ಜೆ. ಅನಂತಾಡಿ ಅವರಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ₹75,000 ಧನಸಹಾಯ ಹಸ್ತಾಂತರಿಸಲಾಯಿತು. ಘಟಕದ ಸದಸ್ಯರ ಸ್ವಯಂಪ್ರೇರಿತ ಸಹಕಾರದಿಂದ ಈ ಧನಸಹಾಯವನ್ನು ಸಂಗ್ರಹಿಸಿ, ಅವರ ಚಿಕಿತ್ಸೆಗೆ ನೆರವಾಗುವ ಉದ್ದೇಶದಿಂದ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಘಟಕದ ಅಧ್ಯಕ್ಷರಾದ ಗಣೇಶ್ ಸಾಯಿ, ಸಂಕಷ್ಟದ […]
Read More
15-07-2026, 6:00 PM
ಅಜೆಕಾರು, ಜು. 15: ಯುವವಾಹಿನಿ (ರಿ.) ಕಾರ್ಕಳ ಘಟಕವು ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಅಜೆಕಾರು ಶ್ರೀರಾಮ ಮಂದಿರದ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಪೊರೆ (ಕಣ್ಣಿನ ಮುತ್ತು) ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿತು. ಶಿಬಿರದಲ್ಲಿ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈದ್ಯಾಧಿಕಾರಿಗಳ ತಂಡ ಸಾರ್ವಜನಿಕರಿಗೆ ಸಮಗ್ರ ನೇತ್ರ ತಪಾಸಣೆ ನಡೆಸಿ, ಅಗತ್ಯ ಸಲಹೆ ಹಾಗೂ ಚಿಕಿತ್ಸಾ ಮಾರ್ಗದರ್ಶನ ನೀಡಿತು. ಕಣ್ಣಿನ ಆರೋಗ್ಯದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ […]
Read More