Yuvavahini

ಸನ್ಮಾನ

ಯುವವಾಹಿನಿ ವತಿಯಿಂದ ಮೇಯರ್ ಕವಿತಾ ಸನಿಲ್ ಇವರಿಗೆ ಅಭಿನಂದನೆ

ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಮಂಗಳೂರು ಮಹಾನಗರ ಪಾಲಿಕೆಯ ಪ್ರಥಮ ಪ್ರಜೆ ಹಾಗೂ ನೂತನ ಮೇಯರ್ ಶ್ರೀಮತಿ ಕವಿತಾ ಸನಿಲ್ ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮುಂಬೈ ಹೈಕೋರ್ಟು ವಕೀಲರಾದ ಶ್ರೀಮತಿ ರೋಹಿಣಿ ಸಾಲ್ಯಾನ್,ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅದ್ಯಕ್ಷ ಎಚ್. ಎಸ್. ಸಾಯಿರಾಂ, […]

Read More

ಮಂಗಳೂರು ಯುವವಾಹಿನಿ : ಸಾಧಕರಿಗೆ ಸನ್ಮಾನ

ಮಂಗಳೂರು ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಮೆ. ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿತು. ಈ ಶುಭ ಸಂದರ್ಭದಲ್ಲಿ ಮಂಗಳೂರು ಯುವವಾಹಿನಿ ಸದಸ್ಯರಾದ ಸಮಾಜ ಸೇವಕ ಸಂಘಟಕರು ದೇವೇಂದ್ರ ಕೋಟ್ಯಾನ್, ಉದ್ಯಮಿ ಸಂಘಟಕರು ಸಾಧಕ ಉಮಾನಾಥ, ನಿಸ್ವಾರ್ಥ ಸೇವಕ ಶ್ರೀಕಾಂತ್ ಇವರುಗಳ ಸಾಧನೆಯನ್ನು ಗುರುತಿಸಿ ಗೌರವಿಸಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅದ್ಯಕ್ಷ ಪ್ರಭಾಕರ್ ಎಸ್. ಪೂಜಾರಿ, […]

Read More

ಮಂಗಳೂರು ಯುವವಾಹಿನಿ : ಪದಗ್ರಹಣ 2017-18

ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು. ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ […]

Read More

ಬೆಳ್ತಂಗಡಿ ಯುವವಾಹಿನಿ ವತಿಯಿಂದ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ ಯುವವಾಹಿನಿ ಆಶ್ರಯದಲ್ಲಿ ಮೂಡುಕೋಡಿಯಲ್ಲಿ ದಿನಾಂಕ 12.03.2017 ನೇ ಆದಿತ್ಯವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ. ಕೆ ವಸಂತ ಬಂಗೇರ ಮತ್ತು ಸುಜಿತಾ ವಿ ಬಂಗೇರ, ಗ್ರಾಮದ ಪ್ರಥಮ ಬಿಲ್ಲವ ಸಮಾಜದ ಪೊಲೀಸ್ ಕಾನ್ಸ್‌ಸ್ಟೇಬಲ್ ಶೈಲೇಂದ್ರ ಕೆ ಕೋಳಂಗಜೆಗುತ್ತು, ನ್ಯಾಯವಾದಿ ಹರೀಶ್ ಪಿ ಎನ್ ,ಝೀ ಟಿವಿ ಕಾಮಿಡಿ ಕಿಲಾಡಿ ಕಲಾವಿದ ಅನೀಶ್ ಅಮೀನ್, ಚರ್ಮವಾದ್ಯ ಪ್ರವೀಣ ಪ್ರಭಾಕರ್ ಪೂಜಾರಿ ಉರುಂಜಿಬೆಟ್ಟು, […]

Read More

ಬಂಟ್ವಾಳ ಯುವವಾಹಿನಿಯಿಂದ ಪ್ರಕಾಶ್ ಅಂಚನ್­ಗೆ ಅಭಿನಂದನೆ

ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣಾ ಅಭಿಯಾನ ನಡೆಸುತ್ತಿರುವ ಹಾಗೂ ಬಂಟ್ವಾಳ ದಡ್ಡಲಕಾಡು ಸರಕಾರಿ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ರೂಪಿಸಿದ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅದ್ಯಕ್ಷ ಶ್ರೀ ಪ್ರಕಾಶ್ ಅಂಚನ್ ಅವರ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಗಣನೀಯ ಸಾಧನೆಯನ್ನು ಗುರುತಿಸಿ ಕೇಲ್ದೋಡಿ ಶ್ರೀ ವೈದ್ಯನಾಥ ಕೊಡಮಣಿತ್ತಾಯ ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ದಿನಾಂಕ 03.03.2017 ನೇ ಶುಕ್ರವಾರದಂದು ಜರುಗಿದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಅಭಿನಂದಿಸಲಾಯಿತು. ಈ […]

Read More

ಪಡುಬಿದ್ರೆ: ಮಕ್ಕಳ ಹಬ್ಬ ಮತ್ತು ಕಲಾಭೂಷಣ ಪ್ರಶಸ್ತಿ ಪ್ರದಾನ

ವಿದ್ಯೆಯು ಮಗುವಿಗೆ ಜ್ಞಾನ ಸಂಪಾದನೆಯ ಜೊತೆಗೆ ಬದುಕುವ ಕಲೆಯನ್ನು ಕಲಿಸುವ ಕಲೆಯಾಗಬೇಕು. ಅದೇ ರೀತಿ ಇಂದು ಮಕ್ಕಳಿಗೆ ಮೌಲ್ಯ ಶಿಕ್ಷಣದ ಅನಿವಾರ್ಯವಿದೆ. ಇದರ ಜೊತೆಗೆ ಕಲಿತ ಶಾಲೆ, ಶಿಕ್ಷಕರು, ತಾಯಿನಾಡಿನ ಬಗೆಗೆ ಗೌರವಾದರಣೆಯನ್ನು ಹೊಂದಬೇಕಾಗಿದೆ ಎಂದು ಮುಖ್ಯ ಅತಿಥಿಯಾಗಿ ಆಗಮಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷ ಪದ್ಮನಾಭ ಮರೋಳಿ ಹೇಳಿದರು. ಅವರು ಯುವವಾಹಿನಿ ಪಡುಬಿದ್ರಿ ಘಟಕದ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಪಡುಬಿದ್ರಿ ಇಲ್ಲಿ ನಡೆದ ಮಕ್ಕಳ ಹಬ್ಬ-2016 […]

Read More

ಸೋಣ ಸಂಭ್ರಮ

ದಿನಾಂಕ 21-08-2016ರಂದು ಮಂಗಳೂರು ಮಹಿಳಾ ಘಟಕದ ವತಿಯಿಂದ ಮಂಗಳೂರಿನ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ‘ಕರಾವಳಿ ಸಭಾಭವನ’ದಲ್ಲಿ ‘ಸೋಣ ಸಂಭ್ರಮ’ಕಾರ್ಯಕ್ರಮ ಜರಗಿತು. ಕಾರ್ಯಕ್ರಮ ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯರಾದ ಡಾ| ಗಣೇಶ್ ಅಮೀನ್ ಸಂಕಮಾರ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಇದರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಚಿತಾ ನಂದಗೋಪಾಲ್, ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿ, ಘಟಕದ ಸಲಹೆಗಾರರಾದ ಅಶೋಕ್ ಕುಮಾರ್ ಮತ್ತು ಸಾಧು ಪೂಜಾರಿ ಮೊದಲಾದವರು ಭಾಗವಹಿಸಿದ್ದರು. ಘಟಕದ ಅಧ್ಯಕ್ಷೆ […]

Read More

ಮೂಲ್ಕಿ ಘಟಕದಿಂದ 14ನೇ ’ಆಟಿಡೊಂಜಿ ದಿನ’ ಕಾರ್ಯಕ್ರಮ

ಆಟಿ ತಿಂಗಳ ಆಚರಣೆಯು ಪರಿಪೂರ್ಣವಾದ ವೈಜ್ಞಾನಿಕ ವಿಷಯಗಳಿಂದ ಕೂಡಿದ್ದು, ಇದರ ಬಗ್ಗೆ ಜನರಲ್ಲಿರುವ ಮೌಢ್ಯವನ್ನು ಸೂಕ್ತ ತಿಳಿವಳಿಕೆ ನೀಡುವ ಮೂಲಕ ನಿವಾರಿಸ ಬೇಕು. ಅದರಲ್ಲಿರುವ ಉತ್ತಮ ಅಂಶಗಳನ್ನು ಬೆಳೆಸಿಕೊಂಡು ಬರುವುದು ಒಳಿತು ಎಂದು ಹಿರಿಯ ಶಿಕ್ಷಕ ಹಾಗೂ ಪತ್ರಕರ್ತ ವಾಮನ ಇಡ್ಯಾ ಹೇಳಿದರು. ಅವರು ಮೂಲ್ಕಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಜರಗಿದ 14 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಆಚರಣೆಯಲ್ಲಿ ಅಡಗಿರುವ ಮೌಢ್ಯಗಳ ಅಂಶಗಳನ್ನು ಸರಿಪಡಿಸಿಕೊಂಡು ಮುಖ್ಯವಾಗಿ ಯುವಜನರಲ್ಲಿ ತಿಳುವಳಿಕೆಯನ್ನು ಮೂಡಿಸಿ ತುಳು […]

Read More

ಪಾದರಸದ ಓಟದ ಸರದಾರ ಮನೀಷ್ ಪೂಜಾರಿ

ಕ್ರೀಡಾ ಪಟುಗಳ ವಿಶ್ವದ ಅತ್ಯುನ್ನತ ವೇದಿಕೆ- ಒಲಿಂಪಿಕ್ಸ್ ಇದರಲ್ಲಿ ಭಾಗವಹಿಸಲು ಬೇಕಾದ ಅರ್ಹತೆಯನ್ನು ಗಳಿಸುವುದೇ ಅತ್ಯಂತ ಕಷ್ಟಕರ ಪ್ರಯಾಸಕರ ಸವಾಲು. ಕ್ರೀಡೆಯ ತನ್ನ ಆಸಕ್ತಿಗಳನ್ನು ಮಾರ್ಗದರ್ಶಕರಾದ ಶ್ರೀಯುತ ಅಬ್ಬಾಸ್ ಹಾಗೂ ಲಚ್ಚೇಂದ್ರ ರಿಂದ ಪೋಷಿಸಿಕೊಂಡು ನಂಬಲಸಾಧ್ಯ ಸಾಧನೆ- ಒಲಿಂಪಿಕ್‌ಗೆ ಆಯ್ಕೆಯ ಕನಸನ್ನು ನೆನಸಾಗಿಸಿದ ಕರ್ನಾಟಕದ ಹೆಮ್ಮೆಯ ಶ್ರೀ ಮನೀಷ್ ಪೂಜಾರಿ ಒಬ್ಬ ಧ್ರುವತಾರೆ. ಕರ್ನಾಟಕದ ಉಸೈನ್ ಬೋಲ್ಟ್ ಎಂದು ಕರೆಯಲ್ಪಡಲು ಅರ್ಹ ರಾಷ್ಟ್ರೀಯ ದಾಖಲೆಯುತ್ತ ಸಾಗುವ ಪ್ರಥಮಹಂತ, ರಾಜ್ಯ ದಾಖಲೆಯ 100ಮೀ. ಓಟದಲ್ಲಿ 10.5 ಸೆಕೆಂಡುಗಳಲ್ಲಿ ಹಾಗೂ 21.5  ಸೆ.ನಲ್ಲಿ […]

Read More

SSLC ಯಲ್ಲಿ ಶ್ರೇಷ್ಠ ಸಾಧನೆಯ ಕು| ರಕ್ಷಾ ಡಿ. ಅಂಚನ್

ವಿದ್ಯಾರ್ಥಿಯೊಬ್ಬರ ಸತತ ಪರಿಶ್ರಮದ ಸಾಧನೆಯ ಮಾನದಂಡ ಆತ/ ಆಕೆ ಗಳಿಸುವ ಶೇಕಡಾವಾರು ಅಂಕ. ಈ ನಿಟ್ಟಿನಲ್ಲಿ ಈ ಬಾರಿ SSLC ಪರೀಕ್ಷೆಯಲ್ಲಿ 625 ಕ್ಕೆ 622 ಅಂಕಗಳಸಿ ಶೇ. 99.52 % ಸಾಧನೆ ಮಾಡಿದ ಕು| ರಕ್ಷಾ ಡಿ ಅಂಚನ್ ನೋಡುವವರು ನಿಬ್ಬೆರಗಾಗುವಂತೆ ಮಾಡಿದ್ದಾರೆ. ಶ್ರೀ ದೇವಿಪ್ರಸಾದ್ ಹಾಗೂ ಶ್ರೀಮತಿ ವಿನೋದಾ ದಂಪತಿಗಳ ಈ ಹೆಮ್ಮೆಯ ಕುವರಿ. ಉಚ್ಚಿಲದ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿತಿದ್ದಾಳೆ. ಕನ್ನಡದಲ್ಲಿ 125 ಕ್ಕೆ 125, ಹಿಂದಿ, ಗಣಿತ ಹಾಗೂ ವಿಜ್ಞಾನದಲ್ಲಿ 100 ಕ್ಕೆ 100 […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!