
11-10-2026, 9:00 PM
ಪುತ್ತೂರು, ಅ. 11: ಯುವವಾಹಿನಿ (ರಿ.) ಪುತ್ತೂರು ಘಟಕದ ವತಿಯಿಂದ ಆಯೋಜಿಸಲಾದ ‘ಕಿರು ಪ್ರವಾಸ–2026’ ಒಂದು ದಿನದ ಪ್ರವಾಸವು ಸದಸ್ಯರ ಸಂಭ್ರಮ, ಸಂತೋಷ ಹಾಗೂ ಸೌಹಾರ್ದತೆಯೊಂದಿಗೆ ಯಶಸ್ವಿಯಾಗಿ ನೆರವೇರಿತು. ಪ್ರವಾಸದ ಆರಂಭದಲ್ಲಿ ಘಟಕದ ಅಧ್ಯಕ್ಷ ಸಮಿತ್ ಪಿ. ಅವರು ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಬೆಳಿಗ್ಗೆ 6 ಗಂಟೆಗೆ ಪ್ರವಾಸಕ್ಕೆ ಚಾಲನೆ ನೀಡಲಾಯಿತು. ಸದಸ್ಯರು ಕೋಟೇಶ್ವರದ UVA Meridian Amusement Park ತಲುಪಿ ದಿನವಿಡೀ ವಿವಿಧ ಮನರಂಜನಾ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಈ ಕಿರು ಪ್ರವಾಸದಲ್ಲಿ ಒಟ್ಟು […]
Read More

20-09-2026, 9:00 PM
ಕೂಳೂರು ಸೆ 20 : “ಜೀವ ಜಡರೂಪ ಪ್ರಪಂಚವನದಾವುದೋ | ಆವರಿಸಿಕೊಂಡು ಮೊಳನೆರೆದುಮಿಹುದಂತೆ || ಭಾವಕೊಳಪಡದಂತೆ ಅಳತೆಗಳವಡದಂತೆ | ಆ ವಿಶೇಷಕೆ ನಮಿಸೊ – ಮಂಕುತಿಮ್ಮ ||” ಎಂಬ ಡಿ.ವಿ. ಗುಂಡಪ್ಪ (ಡಿ.ವಿ.ಜಿ.) ಅವರ ಮಂಕುತಿಮ್ಮನ ಕಗ್ಗದ ಸಾಲುಗಳು ಜೀವನದ ಅಗಾಧತೆಯತ್ತ ನಮ್ಮನ್ನು ಕರೆದೊಯ್ಯುತ್ತವೆ. ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸೆಪ್ಟೆಂಬರ್ 20ರಂದು ಕೇರಳ ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ “ಕ್ಷೇತ್ರ ದರ್ಶನ – 2026” ಆಧ್ಯಾತ್ಮಿಕ ಹಾಗೂ ಸ್ಮರಣೀಯ ಪ್ರವಾಸವನ್ನು ಆಯೋಜಿಸಲಾಯಿತು. ಬೆಳಗ್ಗೆ 5 […]
Read More

20-09-2026, 8:00 PM
ಕೊಲ್ಯ ಸೆ 20 : ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಈ ವರ್ಷದ ಮೊದಲ ದೇಗುಲ ದರ್ಶನ ಪ್ರವಾಸವನ್ನು ಆಯೋಜಿಸಲಾಗಿದ್ದು, ಸುಮಾರು 60 ಮಂದಿ ಸದಸ್ಯರು ಹಾಗೂ ಕುಟುಂಬ ಸದಸ್ಯರು ಭಾಗವಹಿಸಿದ್ದರು. ತಲಪಾಡಿಯಿಂದ ಆರಂಭಗೊಂಡ ಈ ಪವಿತ್ರ ಪಯಣವು ವಿವಿಧ ಪುಣ್ಯಕ್ಷೇತ್ರಗಳ ದರ್ಶನದೊಂದಿಗೆ ಭಕ್ತಿ, ಸ್ನೇಹ, ಒಗ್ಗಟ್ಟು ಹಾಗೂ ಸಂತಸದ ಅನುಭವವನ್ನು ನೀಡಿತು. ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ಶಶಿಕಾಂತ್ ಪರ್ಯತ್ತೂರು ಪ್ರಾರ್ಥನೆ ನೆರವೇರಿಸಿ ಪ್ರಯಾಣಕ್ಕೆ ಚಾಲನೆ ನೀಡಿದರು. ಘಟಕದ ಅಧ್ಯಕ್ಷ ಜೀವನ್ […]
Read More

07-06-2026, 7:00 PM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಜೂನ್ 7ರಂದು 51 ಸದಸ್ಯರೊಂದಿಗೆ ಕುಂದಾಪುರದ UVA ಮೆರಿಡಿಯನ್ ವಾಟರ್ ಪಾರ್ಕ್ಗೆ ಒಂದು ದಿನದ ಸೌಹಾರ್ದಯುತ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಪ್ರವಾಸವು ಗುರುಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸದಸ್ಯರೆಲ್ಲರೂ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನದಲ್ಲಿ ಭಾಗವಹಿಸಿದರು. ಪ್ರವಾಸದ ಮಧ್ಯೆ ಸದಸ್ಯರಿಗಾಗಿ ಉಪಹಾರದ ವ್ಯವಸ್ಥೆ […]
Read More

30-05-2026, 4:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ದಿನಾಂಕ 30.05.2026ರಂದುಕಕ್ವ ಕೊಕ್ರಾಣಿ ಡಾನ್ ಬಾಸ್ಕೋ ರೆಸಾರ್ಟ್ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಘಟಕದ 35 ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಜಯಕುಮಾರ್ ಕುಬೆವೂರು ಅವರು ವಿವಿಧ ಮನರಂಜನಾ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಘಟಕದ ಅಧ್ಯಕ್ಷರಾದ ವಿನಯಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ರೆಸಾರ್ಟ್ನ ಮಾಲಕರಾದ ಕ್ಯಾನಿ ಡಿ’ಸೋಜಾ […]
Read More

28-05-2026, 6:00 PM
ಸುರತ್ಕಲ್, ಮೇ 28: ಯುವವಾಹಿನಿ (ರಿ.) ಸುರತ್ಕಲ್ ಘಟಕದ ವತಿಯಿಂದ ಸದಸ್ಯರ ನಡುವಿನ ಒಡನಾಟ ಹಾಗೂ ಸಂಘಟನಾ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ 2026ರ ಮೇ 28ರಂದು ಒಂದು ದಿನದ ಕಿರು ಪ್ರವಾಸವನ್ನು ಮುರುಡೇಶ್ವರ ದೇವಸ್ಥಾನ, ಇಡಗುಂಜಿ ಮಹಾಗಣಪತಿ ದೇವಸ್ಥಾನ ಹಾಗೂ ಹೊನ್ನಾವರದ ಜೋಯ್ ಎಂಜಾಯ್ ವಾಟರ್ ಪಾರ್ಕ್ಗೆ ಆಯೋಜಿಸಲಾಗಿತ್ತು. ಈ ಪ್ರವಾಸದಲ್ಲಿ ಸುರತ್ಕಲ್ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಸದಸ್ಯರು ಹಾಗೂ ಸದಸ್ಯರ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 50 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 6.00 […]
Read More

24-05-2026, 9:00 PM
ಬಜಪೆ, ಮೇ 24: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ಸದಸ್ಯರ ನಡುವಿನ ಬಾಂಧವ್ಯ ವೃದ್ಧಿ ಹಾಗೂ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ಚೈತನ್ಯ ತುಂಬುವ ಉದ್ದೇಶದಿಂದ 24-05-2026 ರಂದು ಒಂದು ದಿನದ ಸ್ನೇಹ ಪ್ರವಾಸವನ್ನು “ಕಿಂಗ್ ಆಫ್ ಕಿಂಗ್ಸ್” ವಾಟರ್ ಪಾರ್ಕ್ಗೆ ಆಯೋಜಿಸಲಾಯಿತು. ಪ್ರವಾಸದಲ್ಲಿ ಯುವವಾಹಿನಿ ಬಜಪೆ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಕುಟುಂಬ ಸದಸ್ಯರು ಸೇರಿದಂತೆ ಒಟ್ಟು 33 ಮಂದಿ ಭಾಗವಹಿಸಿದ್ದರು. ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ವಿವಿಧ ಮನರಂಜನಾ ಚಟುವಟಿಕೆಗಳು […]
Read More

24-05-2026, 8:00 PM
ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಮೇ 24, 2026ರಂದು ಆಯೋಜಿಸಲಾದ “ಯುವ ಸ್ನೇಹ ಸಂಭ್ರಮ – 2026” ಎಂಬ ಒಂದು ದಿನದ ಸ್ನೇಹ ಪ್ರವಾಸವು ಅತ್ಯಂತ ಸಂತೋಷ, ಸೌಹಾರ್ದತೆ ಹಾಗೂ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ಪ್ರವಾಸ ಆರಂಭಕ್ಕೂ ಮುನ್ನ ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಗಣೇಶ್ ಕೊಡಾಜೆ ಅವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಬೆಳಿಗ್ಗೆ 6.00 ಗಂಟೆಗೆ ಸದಸ್ಯರು ಪ್ರವಾಸಕ್ಕೆ ಚಾಲನೆ ನೀಡಿದರು. ಮೊದಲಿಗೆ ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರ ಹಾಗೂ ಬಳಿಕ […]
Read More

17-05-2026, 7:00 PM
ಬಂಟ್ವಾಳ: ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ ಮೇ 17, 2026ರಂದು ಮಂಗಳೂರಿನ ತಣ್ಣೀರುಬಾವಿ ಟ್ರೀ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವವಾಹಿನಿ ಕುಟುಂಬದ ‘ಸ್ನೇಹ ಮಿಲನ’ ಕಾರ್ಯಕ್ರಮವು ಅತ್ಯಂತ ಸಡಗರ-ಸಂಭ್ರಮದಿಂದ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬಂಟ್ವಾಳ ಘಟಕದ ಅಧ್ಯಕ್ಷರಾದ ನಾಗೇಶ್ ಪೂಜಾರಿ ನೈಬೆಲು ಅವರು ಆಗಮಿಸಿದ ಸರ್ವರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಬಂಟ್ವಾಳ ಘಟಕದ ಯುವವಾಹಿನಿ ಕುಟುಂಬದ ಒಟ್ಟು 94 ಸದಸ್ಯರು ಈ ಪ್ರಕೃತಿಯ ಮಡಿಲಲ್ಲಿ ನಡೆದ ಸ್ನೇಹಕೂಟದಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಸಂಭ್ರಮದ ಆಟೋಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳುಬೆಳಗಿನ […]
Read More

12-05-2026, 9:00 PM
ವಿಟ್ಲ : ದಿನಾಂಕ 12/05/2026 ಮಂಗಳವಾರದಂದು ಯುವವಾಹಿನಿ ಘಟಕದ ವತಿಯಿಂದ ಹೊನ್ನಾವರದಲ್ಲಿರುವ ಜಾಲಿ ಆಂಡ್ ಜಾಲಿ ವಾಟರ್ ಪಾರ್ಕ್ಗೆ ಮನರಂಜನಾ ಪ್ರವಾಸವನ್ನು ಆಯೋಜಿಸಲಾಯಿತು. ಈ ಪ್ರವಾಸದಲ್ಲಿ ಘಟಕದ ಅಧ್ಯಕ್ಷರು, ಕಾರ್ಯಕಾರಿಣಿ ಸದಸ್ಯರು ಸೇರಿದಂತೆ ಒಟ್ಟು 41 ಮಂದಿ ಭಾಗವಹಿಸಿದ್ದರು. ಬೆಳಗ್ಗಿನಿಂದಲೇ ಉತ್ಸಾಹಭರಿತವಾಗಿ ಆರಂಭವಾದ ಈ ಪ್ರವಾಸದಲ್ಲಿ ಸದಸ್ಯರು ವಿವಿಧ ಜಲಕ್ರೀಡೆಗಳು ಹಾಗೂ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷವನ್ನು ಹಂಚಿಕೊಂಡರು. ಪ್ರವಾಸದ ಅವಧಿಯು ಸ್ನೇಹ, ಸಹಕಾರ ಮತ್ತು ಸಂಘಟನಾ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವಂತಾಗಿತ್ತು. ಎಲ್ಲಾ ಸದಸ್ಯರು ಸಂತೋಷ ಹಾಗೂ […]
Read More