01-04-2017, 1:10 PM
ಆಧುನಿಕ ವೈದ್ಯಕೀಯ ಕ್ಷೇತ್ರವು ತುಂಬಾ ಮುಂದುವರಿದಿದ್ದು ಆರಂಬಿಕ ಹಂತದಲ್ಲೇ ಗುರುತಿಸಿದರೆ ಕ್ಯಾನ್ಸರ್ ಸಂಪೂರ್ಣ ಗುಣಪಡಿಸಬಹುದು. ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ, ಹಾಗೂ ಆರೋಗ್ಯದ ಮೇಲೆ ಇರುವ ನಿರ್ಲಕ್ಷತನದಿಂದ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹಬ್ಬಿದೆ ಎಂದು ಡಾ.ವೆಂಕಟೇಶ ಸಂಜೀವ ಅಭಿಪ್ರಾಯ ಪಟ್ಟರು. ಅವರು ಮಂಗಳೂರು ರಥಬೀದಿಯ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಮಹಿಳಾ ವೇದಿಕೆ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 01.04.2017 ರಂದು ಜರುಗಿದ ಮಹಿಳಾ ಆರೋಗ್ಯ ಮತ್ತು ಸ್ತನ ರೋಗಗಳ […]
Read More
01-03-2017, 4:13 AM
ದಿನಾಂಕ 1-3-2017 ರಂದು ಶ್ರೀ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ (ರಿ) ಕೂಳೂರು ಘಟಕ ಮತ್ತು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಇವುಗಳ ಜಂಟಿ ಆಶ್ರಯದಲ್ಲಿ ಕಾನೂನು ಹಾಗೂ ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೂಳೂರು ಘಟಕದ ಉಪಾಧ್ಯಕ್ಷ ಪುಷ್ಪರಾಜ್ ಕುಮಾರ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕಾವೂರು ಪೊಲೀಸ್ ಠಾಣೆಯ ಪಿಎಸ್‌ಐ ಉಮೇಶ್ ಕುಮಾರ್ ಅವರು ಗಸ್ತು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ […]
Read More
12-02-2017, 12:01 PM
ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]
Read More
14-01-2017, 12:41 PM
ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ದಿನಾಂಕ 14-1-2017 ರಂದು ಕೂಳೂರಿನ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಸುವರ್ಣ ಆರೋಗ್ಯಕ್ಕೆ ಸುರಕ್ಷಾ ಯೋಜನೆಗಳು ಎಂಬ ಮಾಹಿತಿ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಸುವರ್ಣ ಆರೋಗ್ಯ ಸುರಕ್ಷಾ ಯೋಜನೆಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಸಂಯೋಜಕರಾದ ಜಗನ್ನಾಥ್ ಶಿರ್ಲಾಲ್‌ರವರು ಆರೋಗ್ಯ ಸುರಕ್ಷಾ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರದಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಅನೇಕ ಸುರಕ್ಷಾ ಯೋಜನೆಗಳಿದ್ದು, ಆಯೋಜನೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ಜನರು […]
Read More
19-12-2016, 11:37 AM
ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 19-12-2016 ರಂದು ಸರಕಾರಿ ಪ್ರೌಢಶಾಲೆ ಸದಾಶಿವ ನಗರ ಇಲ್ಲಿ ಹೆಣ್ಣು ಮಕ್ಕಳ ಆತ್ಮರಕ್ಷಣೆ ಮತ್ತು ತರಬೇತಿ ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಶಾಲಾ ಸಹಶಿಕ್ಷಕರಾದ ಅಶೋಕ್ ಜಂಬಗಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅಂತರಾಷ್ಟ್ರೀಯ ಕ್ರೀಡಾಪಟು ಕಾರ್ತಿಕ್ ಎಸ್. ಕಟೀಲ್‌ರವರು ಸುಮಾರು ಒಂದೂವರೆ ಗಂಟೆಗಳ ಕಾಲ ಶಾಲಾ ವಿದ್ಯಾರ್ಥಿನಿಯರಿಗೆ ಪ್ರಾತ್ಯಕ್ಷತೆಯ ಮೂಲಕ ಉತ್ತಮ ತರಬೇತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಚೇತನ್ ಕುಮಾರ್‌ರವರು ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ […]
Read More
05-10-2016, 5:48 AM
ದಿನಾಂಕ 5-10-2016 ರಂದು ಕೂಳೂರು ಘಟಕದ ವತಿಯಿಂದ ಕೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಸಭಾಂಗಣದಲ್ಲಿ ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಮೂತ್ರರೋಗ ತಜ್ಞರಾದ ಡಾ. ಸದಾನಂದ ಪೂಜಾರಿಯವರು ಭಾಗವಹಿಸಿ ಮೂತ್ರರೋಗಗಳ ಬಗ್ಗೆ, ಕಿಡ್ನಿ ವಿಫಲತೆಯ ಕಾರಣಗಳು ಹಾಗೂ ಮೂತ್ರರೋಗವನ್ನು ಯಾವ ರೀತಿಯಲ್ಲಿ ತಡೆಗಟ್ಟಬಹುದು ಎಂಬ ಸಂಪೂರ್ಣ ಅರಿವನ್ನು ಸಭೆಗೆ ನೀಡಿದರು. ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷ ಸಂಜೀವ ಪೂಜಾರಿಯವರನ್ನು ಸಭೆಯಲ್ಲಿ ವಂದಿಸಲಾಯಿತು. ಆರೋಗ್ಯ […]
Read More