24-12-2023, 5:25 PM
ಬಂಟ್ವಾಳ : ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದಲ್ಲಿ ಸಂಘಟನಾ ಕ್ಷೇತ್ರದ ಸಾಧಕ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಧಾರ್ಮಿಕ ಕ್ಷೇತ್ರದ ಸಾಧಕ ಮನೋಜ್ ಕಟ್ಟೆಮಾರ್, ಸಾಂಸ್ಕೃತಿಕ ಕ್ಷೇತ್ರದ ಸಾಧಕಿ ಅಕ್ಷತಾ ಇವರಿಗೆ ಯುವವಾಹಿನಿ ಯುವಸಾಧನಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಂಘಟನಾ ಕ್ಷೇತ್ರದ ಸಾಧಕರು ಶ್ರೀನಿವಾಸ ಪೂಜಾರಿ ಮೆಲ್ಕಾರ್ ಗುರುಜ್ಯೋತಿ ಶಾಮಿಯಾನ ಸಂಸ್ಥೆಯನ್ನು ಹುಟ್ಟಿ ಹಾಕಿ ಸತತ 25 ವರ್ಷಗಳಿಂದ ಮುನ್ನಡೆಸಿಕೊಂಡು ಬರುವುದರ ಜೊತೆಗೆ ಬಂಟ್ವಾಳ ಯುವಸಂಗಮದ ಸ್ಥಾಪಕ ಅಧ್ಯಕ್ಷರಾಗಿ, ಲಯನ್ಸ್ ಕ್ಲಬ್ ವಿವಿಧ ಹುದ್ದೆ ಅಲಂಕರಿಸಿ ಸರ್ಕಾರಿ ಶಾಲಾಮಕ್ಕಳಿಗೆ […]
Read More
25-12-2022, 10:06 AM
ಮುಲ್ಕಿ:- ದಿನಾಂಕ 25 ಡಿಸೆಂಬರ್ 2022 ರಂದು ಮುಲ್ಕಿಯ ವಿಜಯಾ ಕಾಲೇಜಿನ, ಅರ್ಪಣ ತೆರೆದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶದಲ್ಲಿ ಯುವ ಸಾಧನಾ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು. ಈ ಸಾಲಿನ ಯುವ ಸಾಧನಾ ಪುರಸ್ಕಾರವನ್ನು ಏಕಲವ್ಯ ಪ್ರಶಸ್ತಿ ಪುರಸ್ಕೃತರು, ಅಂತರಾಷ್ಟ್ರೀಯ ಕ್ರೀಡಾಪಟು ನಿತಿನ್ ಪೂಜಾರಿ ವಿಟ್ಲ , ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಪದಕ ವಿಜೇತರಾದ ಕು| ರಶ್ಮಿ ಜಿ. ಅಂಚನ್ ಕುಳಾಯಿ ಮತ್ತು ಚರ್ಮ ಶಾಸ್ತ್ರ […]
Read More
11-08-2019, 3:20 PM
ಪುತ್ತೂರು : ದಿನಾಂಕ 11.08.2019 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ವಿಶಾಲ ಗದ್ದೆಯಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಯುವವಾಹಿನಿ ಸಂಸ್ಥೆಯ 32ನೇ ವಾರ್ಷಿಕ ಸಮಾವೇಶದಲ್ಲಿ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಟ ಪ್ರಶಸ್ತಿ, ಜೀವಮಾನ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಯಿತು. ಔದ್ಯೋಗಿಕ ಸಾಧಕರಾದ ಮಣಿಪಾಲ ಉದಯ ಸಮೂಹ ಸಂಸ್ಥೆಗಳ ರಮೇಶ್ ಎ.ಬಂಗೇರರವರಿಗೆ ಯುವವಾಹಿನಿ ಸಾಧನಾಶ್ರೀ ಪ್ರಶಸ್ತಿಯನ್ನು, ಬೆಳ್ತಂಗಡಿ ಶ್ರೀ ಗುರುದೇವಾ ವಿವಿಧೋದ್ಧೇಶ ಸಹಕಾರಿ ಸಂಘಕ್ಕೆ ಯುವವಾಹಿನಿ ಸಾಧನಾ […]
Read More
05-08-2018, 3:26 PM
ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಂಸ್ಕೃತಿಕ ರಂಗದ ರಾಯಭಾರಿಯಾಗಿ, ಸಾಹಿತ್ಯ ಸೇತುವಾಗಿ, […]
Read More
06-08-2017, 1:19 PM
ಯಕ್ಷಲೋಕದಲ್ಲಿ ಗಾನ ಸುರಭಿ ಎಂದೇ ಕರೆಸಿಕೊಂಡು ತನ್ನ ಕಂಠ ಮಾಧುರ್ಯಕ್ಕೆ ಅಸಂಖ್ಯಾತ ಅಭಿಮಾನಿ ಬಳಗವನ್ನು ಹುಟ್ಟು ಹಾಕಿಕೊಂಡಿರುವ ರವಿಚಂದ್ರ ಕನ್ನಡಿಕಟ್ಟೆ ಈ ನಾಡುಕಂಡ ಅಪ್ರತಿಮ ಭಾಗವತ.ತೆಂಕು ತಿಟ್ಟಿನ ಯಕ್ಷಲೋಕದಲ್ಲಿ ನಕ್ಷತ್ರಪುಂಜದಂತೆ ಮಿನುಗುವ ರವಿಚಂದ್ರ ಕನ್ನಡಿಕಟ್ಟೆ ಮೂಲತಃ ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಪಜೆಮಾರು ನಿವಾಸಿ ಧರ್ಮಣ್ಣ ಪೂಜಾರಿ ಮತ್ತು ಸುಶೀಲಾ ದಂಪತಿಗಳ ಪುತ್ರ. 1980ನೇ ಇಸವಿಯ ಅಕ್ಟೋಬರ್ 10ರಂದು ಜನಿಸಿದ ಕನ್ನಡಿಕಟ್ಟೆ ಎಸ್‍ಎಸ್‍ಎಲ್‍ಸಿಗೆ ತನ್ನ ಶಿಕ್ಷಣ ಮೊಟಕುಗೊಳಿಸಿ ಬಳಿಕ ಯಕ್ಷರಂಗದತ್ತ ಮುಖ ಮಾಡಿ ಹೊರಟವರು. ಧರ್ಮಸ್ಥಳ ಮಂಜುನಾಥೇಶ್ವರ […]
Read More
06-08-2017, 1:05 PM
ಸಾಮಾಜಿಕ ಕ್ಷೇತ್ರದ ಸಾಧಕ ಶ್ರೀ ಧರಣೇಂದ್ರ ಕುಮಾರ್ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಬಜೆ ಮನೆತನದ ದಿ. ಬಾಬು ಪೂಜಾರಿ ಮತ್ತು ಶ್ರೀಮತಿ ಸಿರಿಯಮ್ಮ ದಂಪತಿಯರ ಸುಪುತ್ರನಾಗಿ ಜನನ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆಯಲ್ಲಿ ಹಾಗೂ ಪ್ರೌಢಶಿಕ್ಷಣ ಹಾಗೂ ಪದವಿ ಶಿಕ್ಷಣವನ್ನು ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಕಾಲೇಜು ಸಿದ್ಧಕಟ್ಟೆಯಲ್ಲಿ ಮುಗಿಸಿ ವೃತ್ತಿ ಜೀವನವನ್ನು ಕೃಷಿಯಲ್ಲಿ ತೊಡಗಿಸಿಕೊಂಡು ವಿದ್ಯಾರ್ಥಿ ಜೀವನದಲ್ಲಿಯೇ ಸಮಾಜಸೇವೆಯನ್ನು ಮೈಗೂಡಿಸಿಕೊಂಡು ಫ್ರೆಂಡ್ಸ್ ಕ್ಲಬ್ (ರಿ.) ಹೊಸಂಗಡಿ […]
Read More
31-07-2016, 6:00 AM
ಮಾನವ ಸಂಪನ್ಮೂಲ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರೂ ಕೂಡಾ ತನ್ನ ಆಸಕ್ತಿಯ ಕ್ಷೇತ್ರ ಛಾಯಾಗ್ರಹಣದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸತತ 4 ಚಿನ್ನದ ಪದಕ ಸಹಿತ 7 ಪ್ರಶಸ್ತಿಗಳನ್ನು ಗಳಿಸಿ ಸಾಧನೆಗೆ ಇದಿರಿಲ್ಲ ಎಂಬಂತಹ ವಿಶೇಷ ಸ್ಥಾನಮಾನ ಗಳಿಸಿದ ಖ್ಯಾತ ಸಾಮಾಜಿಕ ಧುರೀಣ ಶ್ರೀ ಹರಿಕೃಷ್ಣ ಬಂಟ್ವಾಳ್, ಶಶಿಕಲಾ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ನಿತ್ಯಪ್ರಕಾಶ್ ಎಚ್. ಎಸ್. ಬಂಟ್ವಾಳ್‌ರವರನ್ನು ಯುವ ಸಾಧನಾ ಪುರಸ್ಕಾರಕ್ಕೆ ಆಯ್ಕೆ ಮಾಡಲು ಯುವವಾಹಿನಿ ಸಂಸ್ಥೆ ಅತ್ಯಂತ ಹೆಮ್ಮೆ ಪಡುತ್ತದೆ. ಓರ್ವ ಹವ್ಯಾಸಿ ವಿಶೇಷ ಛಾಯಾಗ್ರಹಣ ಕ್ಷೇತ್ರದಲ್ಲಿ […]
Read More
31-07-2016, 5:56 AM
ಬಿಲ್ಲವ ಸಮಾಜದ ಶೈಕ್ಷಣಿಕ ಪ್ರಗತಿಗೆ ಯುವವಾಹಿನಿಯು ಶ್ರಮಿಸುತ್ತಿರುವ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿದ್ದ ಪ್ರತಿಭೆಯೊಂದು ಕಿರಿ ವಯಸ್ಸಿನಲ್ಲಿ ಹಿರಿಯರು ಮಾಡಲಾಗದ ಸಾಧನೆಗೈದಿದ್ದಾರೆ. ಸಮಾಜ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಅವರು ಬೇರಾರೂ ಅಲ್ಲ. ಪಿ.ಬಾಲಕೃಷ್ಣ ಪೂಜಾರಿ-ಮಲ್ಲಿಕಾ ಬಿ. ಪೂಜಾರಿ ದಂಪತಿಗಳ ಸುಪುತ್ರಿ ಮನಿಷಾ ಬಿ. ಪೂಜಾರಿ. ಕಾಲೇಜು ವಿದ್ಯಾಭ್ಯಾಸ ಹಂತದಿಂದ ಕಲಿಕೆಯ ಮುಂಚೂಣಿಯಲ್ಲಿದ್ದು ಪಿ.ಯು.ಸಿ ಪರೀಕ್ಷೆಯಲ್ಲಿ ಕಾಲೇಜಿಗೆ ದ್ವಿತೀಯ ಶ್ರೇಷ್ಠರಾಗಿ ಸಾಧನೆಗೈದ ಇವರು ತನ್ನ ಕಲಿಕೆಯಾದ್ಯಂತ ಅತ್ಯುನ್ನತ ಶ್ರೇಣಿಯ ಗಳಿಕೆ ಸಾಧಿಸಿರುವುದು ಉಲ್ಲೇಖನೀಯ. ಬಿ.ಕಾಂ ಪದವಿಯಲ್ಲಿ MGM College ಉಡುಪಿಯ […]
Read More
31-07-2016, 5:52 AM
ಕಟಪಾಡಿ ಶ್ರೀ ರಮೇಶ್ ಕೋಟ್ಯಾನ್ ಹಾಗೂ ಇಂದಿರಾ ಆರ್. ಕೋಟ್ಯಾನ್ ದಂಪತಿಗಳ ಹೆಮ್ಮೆಯ ಸುಪುತ್ರ ಶ್ರೀ ರಕ್ಷಿತ್ ಆರ್. ಕೋಟ್ಯಾನ್ ಓರ್ವ ಸತತ ಪರಿಶ್ರಮದ ಮೂಲಕ ದೇಹದಾರ್ಡ್ಯತೆಯ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದ ಯುವಕ. ಶಿರ್ವದ ಸೈಂಟ್ ಮೇರಿಸ್ ಶಾಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಮುಗಿಸಿ ಪ್ರಸ್ತುತ ಜಿಲ್ಲೆಯ ಪ್ರತಿಷ್ಠಿತ ಆಳ್ವಾಸ್ ಕಾಲೇಜು, ಮೂಡಬಿದ್ರಿಯಲ್ಲಿ ತಮ್ಮ ಪದವಿ ಶಿಕ್ಷಣವನ್ನು ಮುಂದುವರಿಸುತ್ತಿರುವ ರಕ್ಷಿತ್ ಶಿಕ್ಷಣದೊಂದಿಗೆ ಕ್ರೀಡಾ ಸಾಧನೆಯ ಮೇರು ಶಿಖರದತ್ತ ಧಾವಿಸುತ್ತಿರುವುದು ನಮ್ಮೆಲ್ಲರಿಗೆ ಹೆಮ್ಮೆಯ ವಿಚಾರ. […]
Read More
31-07-2016, 5:47 AM
ಪ್ರತಿಭೆಗೆ ಸರಹದ್ದುಗಳಿಲ್ಲ-ಕಾರ್ಯಕ್ಷೇತ್ರಗಳೆಂಬ ಇತಿಮಿತಿ ಇರುವುದಿಲ್ಲ ಎಂಬ ಮಾತಿಗೆ ಸ್ಪಷ್ಟ ನಿದರ್ಶನ-ಬಜಪೆಯ ಶ್ರೀ ಪಿ.ಮೋಹನ್ ಕುಮಾರ್ ಹಾಗೂ ಕನಕಾ ಎಂ ದಂಪತಿಗಳ ಸುಪುತ್ರಿ ಕು| ಅಕ್ಷತಾ. ಪ್ರಾಥಮಿಕ, ಪ್ರೌಢ ಶಿಕ್ಷಣದ ನಂತರ ವಾಣಿಜ್ಯ ಕ್ಷೇತ್ರದತ್ತ ಮುಖ ಮಾಡಿದ ಈಕೆ ಬಿ.ಕಾಂ ಪದವಿಯನ್ನು ಮುಗಿಸಿ, ಮಂಗಳೂರು ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ (ಮಾನವ ಸಂಪನ್ಮೂಲ) ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಕಲೆಯಲ್ಲಿ ದಿ| ವಿ.ಪಿ.ಕಾರಂತ, ಶ್ರೀ ಪಿ. ಮೋಹನ್ ಕುಮಾರ್ ಇವರ ಮಾರ್ಗದರ್ಶನದಲ್ಲಿ ವೈವಿಧ್ಯಮಯ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಕರ್ನಾಟಕ ಸಂಗೀತದತ್ತ ಒಲವು […]
Read More