Yuvavahini

ಸಮಾಜ ಸೇವೆ

ನೊಂದ ಎಳೆ ಮನಸ್ಸುಗಳಿಗೆ ಯುವವಾಹಿನಿ ಮಾತೆಯರ ಸಾಂತ್ವನ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 03.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಹಾಗೂ ರೂ.2500/- ಮಹಿಳಾ ಘಟಕದ ವತಿಯಿಂದ ನೀಡಲಾಯಿತು. ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ಸುಪ್ರೀತ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾದ್ಯಕ್ಷೆ ರಶ್ಮಿ ಚಂದ್ರಶೇಖರ್ , ವಸಂತಿ ಬಿ,ಶುಭ ರಾಜೇಂದ್ರ, ಸುರೇಖ,ಕುಶಲಾಕ್ಷಿ ಯಶವಂತ್, ಶರ್ಮಿಳ […]

Read More

ದಿ.ಚಂದ್ರಹಾಸ್ ಕುಟುಂಬಕ್ಕೆ ರೂ50,000/- ಸಹಾಯಹಸ್ತ

ಯುವವಾಹಿನಿ(ರಿ)ಬೆಳ್ತಂಗಡಿ ಘಟಕದ ವತಿಯಿಂದ ಇತ್ತೀಚಿಗೆ  ರಸ್ತೆ ಅಪಘಾತದಲ್ಲಿ ನಮ್ಮನಗಲಿದ ಯುವವಾಹಿನಿಯ ಸಕ್ರೀಯ ಸದಸ್ಯರಾದ ಚಂದ್ರಹಾಸ ಮೇಲಂತಬೆಟ್ಟು ಅವರಿಗೆ  ಸಾಂತ್ವನ ನಿಧಿ  50,000/-  ರೂಪಾಯಿಗಳ ಚೆಕ್ಕುನ್ನು  ಕೇಂದ್ರ ಸಮಿತಿಯ ಅದ್ಯಕ್ಪರಾದ ಪದ್ಮನಾಭ ಮರೋಳಿ ಯವರು ಚಂದ್ರಹಾಸರವರ ತಾಯಿಗೆ ನೀಡಿದರು ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ    ಹರೀಶ್ ಬೈಲಬರಿ, ರಾಕೇಶ್ ಮೂಡುಕೋಡಿ,ಘಟಕದ ಕಾರ್ಯದರ್ಶಿ ಪ್ರಶಾಂತ್ ಮಚ್ಚಿನ ಹಾಗೂ ಆತ್ಮೀಯ ಯವಕ ಮಂಡಲದ ಗೌರವ ಅದ್ಯಕ್ಪರಾದ ಸಚಿನ್ ಕುಮಾರ್ ನೂಜೋಡಿ ಹಾಗೂ ಘಟಕದ  ನಿರ್ದೇಶಕರದ ಯಶೋದರ ಚಾರ್ಮಾಡಿ ಸ್ಮೀತೆಶ್ ಎಸ್ […]

Read More

ಮೂಲ್ಕಿ ಯುವವಾಹಿನಿಯಿಂದ ಧಾರ್ಮಿಕ ಸೇವಾ ಕಾರ್ಯ

ದಿನಾಂಕ 30.04.2017 ರಿಂದ 05.05.2017 ರವರಗೆ ಮೂಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಲೋಕಕಲ್ಯಾಣರ್ಥವಾಗಿ ಜರುಗಿದ ಶ್ರೀ ಶತಚಂಡಿಕಾದ್ವರದಲ್ಲಿ ಹೊರೆ ಕಾಣಿಕೆಯನ್ನು ಮೂಲ್ಕಿ ಯುವವಾಹಿನಿ ವತಿಯಿಂದ ಸಮರ್ಪಿಸಲಾಯಿತು. ಹಾಗೂ ಆರು ದಿನಗಳ ಕಾಲ ಜರುಗಿದ ಧಾರ್ಮಿಕ ,ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮ ಯಶಸ್ವಿಯಾಗಲು ಯುವವಾಹಿನಿ ಸದಸ್ಯರು ಸಹಕಾರ ನೀಡಿದರು ಮೂಲ್ಕಿ ಯುವವಾಹಿನಿ ಅದ್ಯಕ್ಷ ಚೇತನ್ ಕುಮಾರ್, ಪದಾದಿಕಾರಿಗಳು,ಮಾಜಿ ಅಧ್ಯಕ್ಷರುಗಳು ಸದಸ್ಯರು ಉಪಸ್ಥಿತರಿದ್ದರು

Read More

ನಮ್ಮ ಮನೆ :- ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ತೀರಾ ಬಡ ಕುಟುಂಬ ಪೋಂಕ್ರ ಪೂಜಾರಿ  ಇವರಿಗೆ ಸುಮಾರು ರೂಪಾಯಿ ಮೂರುವರೆ ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು. ಹೆಜಮಾಡಿ ಯುವವಾಹಿನಿಯ ಯಶಸ್ವೀ ಸಮಾಜಮುಖಿ ಕಾರ್ಯ ಮನೆ ನಿರ್ಮಾಣ ಯೋಜನೆ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಕೇವಲ ಮೂರು ತಿಂಗಳ ಅವಧಿಯಲ್ಲಿ ದಾನಿಗಳ ಸಹಾಯ ಹಾಗೂ ಹೆಜಮಾಡಿ ಯುವವಾಹಿನಿ ಸದಸ್ಯರ ಶ್ರಮದ ಫಲವಾಗಿ ನಮ್ಮ ಮನೆ ನಿರ್ಮಾಣ ಯೋಜನೆ ಯಶಸ್ವಿಯಾಗಿದೆ ಎಂದು ಹೆಜಮಾಡಿ ಯುವವಾಹಿನಿ ಅಧ್ಯಕ್ಷರಾದ ಲೋಕೇಶ್ ಅಮೀನ್ ತಿಳಿಸಿದರು. […]

Read More

ಉಡುಪಿ ಯುವವಾಹಿನಿಯಿಂದ ಬಡ ಕುಟುಂಬಕ್ಕೆ ಮನೆ ಹಸ್ತಾಂತರ

ತಲೆಗೊಂದು ಸೂರು – ಇದು ಯುವವಾಹಿನಿ (ರಿ) ಉಡುಪಿ ಘಟಕದ ಶಾಶ್ವತ ಯಶಸ್ವೀ ಯೋಜನೆ – ವರುಷಕ್ಕೊಂದು ತೀರಾ ಬಡ ಕುಟುಂಬವನ್ನು ಆಯ್ಕೆ ಮಾಡಿ ಅವರಿಗೆ ಮನೆ ನಿರ್ಮಾಣ ಮಾಡಿ ಕೊಡುವುದು ಉಡುಪಿ ಯುವವಾಹಿನಿಯ ಜನಪ್ರಿಯ ಸಮಾಜಮುಖಿ ಕಾರ್ಯಕ್ರಮ. ಈ ವರ್ಷದ ತಲೆಗೊಂದು ಸೂರು ಕಾರ್ಯಕ್ರಮದಲ್ಲಿ ದಿನಾಂಕ 23.04.2017ನೇ ಆದಿತ್ಯವಾರ ಶ್ರೀಮತಿ ಇಂದಿರಾ ಎಂಬ ಬಡ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಗಿದೆ. ರಾಜ್ಯ ಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್ ಸಾಂಕೇತಿಕವಾಗಿ  ಶ್ರೀಮತಿ ಇಂದಿರಾ ಕುಟುಂಬಕ್ಕೆ ಮನೆ ಹಸ್ತಾಂತರಿಸಿದರು. ಮಾಜಿ ಸಚಿವ […]

Read More

ಪುತ್ತೂರು ಯುವವಾಹಿನಿ ಆಶ್ರಯದಲ್ಲಿ ರಕ್ತದಾನ ಶಿಬಿರ

ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಇದರ ಸಹಯೋಗದೊಂದಿಗೆ ದಿನಾಂಕ 22.04.2017 ನೇ ಶನಿವಾರ ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಸಭಾಭವನದಲ್ಲಿ ರಕ್ತದಾನ ಶಿಬಿರ ಜರುಗಿತು. ಪುತ್ತೂರು ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಬಿಲ್ಲವ ಸಂಘದ ಅದ್ಯಕ್ಷರಾದ ಜಯಂತ ನಡುಬೈಲು ಶಿಬಿರ ಉದ್ಘಾಟಿಸಿ ಮಾತನಾಡಿ ಮನುಷ್ಯನ ಶರೀರದಲ್ಲಿ ಹರಿಯುವ ರಕ್ತ ಒಂದೇ, ಜಾತಿ, ಮತ, ಧರ್ಮಗಳ ವ್ಯತ್ಯಾಸವಿಲ್ಲದೆ ಎಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಸಂದೇಶ ಸಾರುತ್ತದೆ ಎಂದು ತಿಳಿಸಿದರು. ಯುವವಾಹಿನಿ […]

Read More

ಮೂಲ್ಕಿ ಯುವವಾಹಿನಿಯಿಂದ ಸ್ವಚ್ಛತಾ ಅಭಿಯಾನ

ಮೂಲ್ಕಿ ಬಪ್ಪನಾಡು ದೇವಸ್ಥಾನದಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದವರೆಗೆ ವಿವಿಧ ಸಂಘ ಸಂಸ್ಥೆಗಳ ಜೊತೆ ಸೇರಿ ಯುವವಾಹಿನಿ ಮೂಲ್ಕಿ ಘಟಕವು ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿತು. ದಿನಾಂಕ 26.03.2017 ರಂದು ಜರುಗಿದ ಈ ಸ್ವಚ್ಚತಾ ಅಭಿಯಾನದಲ್ಲಿ ಮೂಲ್ಕಿ ಯುವವಾಹಿನಿ ಅದ್ಯಕ್ಷರಾದ ಚೇತನ್ ಕುಮಾರ್, ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು,ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Read More

ಬಜಪೆ ಯುವವಾಹಿನಿಯ ಸ್ವಚ್ಛತಾ ಕಾರ್ಯ

ಯುವವಾಹಿನಿ (ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 26-03-2017 ನೇ ಆದಿತ್ಯವಾರದಂದು ಬಜಪೆಯ ಸಮೀಪವಿರುವ ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಜಪೆ‌ ಘಟಕದ ಸುಮಾರು 20 ಕ್ಕೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ|| ಜಯರಾಮ ಶೆಟ್ಟಿ, ಇವರು ಬಜಪೆ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಜಪೆ ಯುವವಾಹಿನಿ ಪದಾಧಿಕಾರಿಗಳಾದ ಚಂದ್ರಶೇಖರ ಎಸ್ ಪೂಜಾರಿ ದೇವರಾಜ್‌ […]

Read More

ಮೂಲ್ಕಿ ಯುವವಾಹಿನಿಯ ಹೊರೆಕಾಣಿಕೆ ಸೇವೆ

ಕಾಂತಬಾರೆ ಬೂದಬಾರೆ ಜನ್ಮಕ್ಷೇತ್ರ ಕೊಲ್ಲೂರು ಇದರ ಚತುಷ್ಪವಿತ್ರ  ನಾಗಬ್ರಹ್ಮಮಂಡಲ ಸೇವೆಯ ಪ್ರಯುಕ್ತ  ಒಂಬತ್ತು ಮಾಗಣೆಯ ಭಕ್ತಾಧಿಗಳಿಂದ ದಿನಾಂಕ 15-03-2017ರಂದು ಹೊರೆಕಾಣಿಕೆ ಸಮರ್ಪಿಸಲಾಯಿತು. ಈ ಸಂಧರ್ಭದಲ್ಲಿ ಮೂಲ್ಕಿ ಯುವವಾಹಿನಿಯ ವತಿಯಿಂದ ಹೊರೆಕಾಣಿಕೆಯನ್ನು ಸಮರ್ಪಿಸಿ ಶ್ರೀ ಕ್ಷೇತ್ರದಲ್ಲಿ ಮೂಲ್ಕಿ ಯುವವಾಹಿನಿ ಸದಸ್ಯರು   ಸ್ವಯಂಸೇವಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Read More

ಮನೆ ನಿರ್ಮಾಣಕ್ಕಾಗಿ ಆರ್ಥಿಕ ನೆರವು

ಉಪ್ಪಿನಂಗಡಿ ಗ್ರಾಮದ ಬಡ ಕುಟುಂಬದ ನಾರಾಯಣ ಪೂಜಾರಿಯವರ ಮನೆ ನಿರ್ಮಾಣದ ಉದ್ದೇಶಕ್ಕಾಗಿ ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ರೂ 10,000/- ಆರ್ಥಿಕ ನೆರವು ನೀಡಲಾಯಿತು. ನೆಕ್ಕಿಲಾಡಿ ಮಾಂಡೊವಿ ಮೋಟಾರ್ಸ್ ಇದರ ಸರ್ವಿಸ್ ಮೇನೇಜರ್ ಚಂದ್ರಶೇಖರ್ ಧನ ಸಹಾಯ ವಿತರಿಸಿದರು ಮತ್ತು ಉಪ್ಪಿನಂಗಡಿ ಯುವವಾಹಿನಿಯ ಸಮಾಜಮುಖಿ ಕಾರ್ಯ ಶ್ಲಾಘನೀಯ ಹಾಗೂ ಮನೆ ನಿರ್ಮಾಣವು ಶೀಘ್ರವಾಗಿ ನೆರವೇರುವಂತಾಗಲಿ ಎಂದು ಶುಭ ಹಾರೈಸಿದರು ಈ ಸಂದರ್ಭದಲ್ಲಿ ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಕಾರ್ಯದರ್ಶಿ ಮನೋಜ್ ಸಾಲ್ಯಾನ್ ಸುಣ್ಣಾಜೆ, ಗೌರವ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!