Yuvavahini

ಸಮಾಜ ಸೇವೆ

ತಲೆಗೊಂದು ಸೂರು’ ಯೋಜನೆಗೆ ಮತ್ತೊಂದು ಮೈಲುಗಲ್ಲು

ಬ್ರಹ್ಮಾವರ: ಯುವವಾಹಿನಿ (ರಿ.) ಉಡುಪಿ ಘಟಕದ ಮಹತ್ವಾಕಾಂಕ್ಷೆಯ ‘ತಲೆಗೊಂದು ಸೂರು’ ಯೋಜನೆಯಡಿ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದ ಅಂಜಾಲು ನಿವಾಸಿ ಸುಮಿತ್ರಾ ಪೂಜಾರಿ ಅವರಿಗೆ 19.10.2025ರಂದು ನೂತನವಾಗಿ ನಿರ್ಮಿಸಿದ ಮನೆ ‘ಶ್ರೀ ಗುರು ನಿಲಯ’ವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರವನ್ನು ನೀಡಿ, ಮನೆ ಹಸ್ತಾಂತರ ಕಾರ್ಯಕ್ರಮವನ್ನು ಗೌರವಪೂರ್ಣವಾಗಿ ನೆರವೇರಿಸಲಾಯಿತು. ಸಮಾಜಸೇವೆಯ ಪರಂಪರೆಯನ್ನು ಮುಂದುವರಿಸುತ್ತಿರುವ ಯುವವಾಹಿನಿ ಉಡುಪಿ ಘಟಕವು ಇದುವರೆಗೆ ಒಟ್ಟು 7 ಮನೆಗಳನ್ನು ನಿರ್ಮಿಸಿ, 3 ಮನೆಗಳನ್ನು ಸಂಪೂರ್ಣ ದುರಸ್ತಿ ಮಾಡಿ ಫಲಾನುಭವಿಗಳಿಗೆ ಹಸ್ತಾಂತರಿಸಿರುವುದು […]

Read More

ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ-ಯುವವಾಹಿನಿ( ರಿ.) ಮುಲ್ಕಿ ಘಟಕ

ತಾರೀಕು 27/08/2025 ರಿಂದ 31/08/2025ರ ವರೆಗೆ ಘಟಕದ ಸ್ಥಾಪಕ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಬಪ್ಪನಾಡು ಸಾರ್ವಜನಿಕ ಶ್ರೀ ಗಣೇಶೋತ್ಸವದ ಸುವರ್ಣ ಸಂಭ್ರಮ ವು ಯಶಸ್ವಿಯಾಗಿ ವಿಜೃಂಭಣೆಯಿಂದ ಜರಗಿತು. ಸಮಾರಂಭದ ಐದು ದಿವಸದ ಸಭಾ ವೇದಿಕೆಯ ನಿರ್ವಹಣೆ ಯನ್ನು ನಮ್ಮ ಘಟಕವು ಅಚ್ಚುಕಟ್ಟಾಗಿ  ನಿರ್ವಹಿಸಿತು.

Read More

ತಲೆಗೊಂದು ಸೂರು

ಉಡುಪಿ: ಯುವವಾಹಿನಿ (ರಿ) ಉಡುಪಿ ಘಟಕದ ಅತ್ಯಂತ ಪ್ರಶಂಸನೀಯ ಯೋಜನೆಗಳಲ್ಲಿ ಒಂದಾದ ತಲೆಗೊಂದು ಸೂರು ಯೋಜನೆಯಡಿ ನಿರ್ಮಾಣಗೊಂಡ ಅಂದಾಜು ಹತ್ತು ಲಕ್ಷ ವೆಚ್ಚದ ಮನೆಯನ್ನು ದಿನಾಂಕ 23-11-2024 ರಂದು ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಹರೀಶ್.ಕೆ.ಪೂಜಾರಿಯವರ ಗೌರವ ಉಪಸ್ಥಿತಿಯಲ್ಲಿ ಫಲಾಕಾಂಕ್ಷಿಗೆ ಹಸ್ತಾಂತರಿಸಲಾಯಿತು. ಉದ್ಯಾವರ ಸಂಪಿಗೆ ನಗರದ ನಿವಾಸಿ, ಇಬ್ಬರು ಹೆಣ್ಣು ಮಕ್ಕಳ ತಾಯಿ ಶ್ರೀಮತಿ ಲತಾ ಸುರೇಶ್ ಈ ಬಾರಿಯ ಫಲಾಕಾಂಕ್ಷಿ. ಬಿಲ್ಲವ ಯುವ ವೇದಿಕೆಯ ಅಧ್ಯಕ್ಷರಾದ ಶ್ರೀ ಪ್ರವೀಣ್.ಎಂ.ಪೂಜಾರಿಯವರು ಗಣ್ಯಾತಿ ಗಣ್ಯರ, ದಾನಿಗಳ, ಯುವವಾಹಿನಿ ಕೇಂದ್ರ […]

Read More

ಖುಷಿಯಲ್ಲಿರುವಾಗ ಚಪ್ಪಾಳೆ ತಟ್ಟುವ ಹತ್ತು ಕೈಗಳಿಗಿಂತ ಕಷ್ಟದಲ್ಲಿರುವಾಗ ಕಣ್ಣೀರು ಒರೆಸುವ ಹತ್ತು ಕೈಗಳು ಮಹತ್ವವಾದದ್ದು

ಕೂಳೂರು : ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವು ಎಲ್ಲರ ಮನ ಮನೆ ಬೆಳಗಿದಂತೆ ಬಡವರ ಬಾಳಿನಲ್ಲೂ ಬೆಳಕನ್ನು ತರಲಿ ಎಂಬ ಉದ್ದೇಶದಿಂದ ಯುವವಾಹಿನಿ (ರಿ) ಕೂಳೂರು ಘಟಕ ಕಳೆದ 9 ವರುಷಗಳಿಂದ ಅಶಕ್ತ ಕುಟುಂಬಗಳಿಗೆ ನೆರವಿನ ಆಶಾ ದೀಪ ಎಂಬ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರುತ್ತಿದ್ದು ಪ್ರತಿ ವರ್ಷವೂ ಕಡು ಬಡ ಕುಟುಂಬಗಳನ್ನು ಗುರುತಿಸಿ ಅವರಿಗೆ ಹಬ್ಬವನ್ನು ಆಚರಿಸಲು ಬೇಕಾದ ಎಲ್ಲ ದಿನಸಿ ಸಾಮಾಗ್ರಿಗಳನ್ನು ನೀಡುತ್ತಾ ಬಂದಿದೆ. ಅದೇ ರೀತಿ ಈ ವರ್ಷವೂ ಕುಟುಂಬ ಸಂಪರ್ಕ ನಿರ್ದೇಶಕರಾದ […]

Read More

ಬೇಬಿ ಪೂಜಾರಿ ಬದುಕಿಗೆ ಆಸರೆಯ ಬೆಳಕಾದ ಯುವವಾಹಿನಿ

ಮಂಗಳೂರು : ಮಂಗಳೂರು ತಾಲೂಕು ಬೊಂಡಂತಿಲ ಗ್ರಾಮದ ತಾರಿಗುಡ್ಡೆ ನಿವಾಸಿ ಬೇಬಿ ಪೂಜಾರಿ ಕುಟುಂಬಕ್ಕೆ ದಿನಾಂಕ 20-10-2024 ರಂದು ಯುವವಾಹಿನಿ ಸಂಸ್ಥೆಯು ಸುಮಾರು ರೂ 6.40 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆಯ ಹಸ್ತಾಂತರ ಸಮಾರಂಭದಲ್ಲಿ ಉದ್ಯಮಿ ದಯಾನಂದ ಬಂಗೇರ ದೀಪ ಬೆಳಗಿ ಉದ್ಘಾಟಿಸಿದರು. ಮಾನವತಾವಾದಿ ನಾರಾಯಣ ಗುರುಗಳ‌ ಸಂದೇಶದಂತೆ ಯುವವಾಹಿನಿ ಮಾಡುತ್ತಿರುವ ಸಮಾಜಮುಖಿ ಕಾರ್ಯ ಶ್ಲಾಘನೀಯ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಡಾ.ಎನ್.ಟಿ.ಅಂಚನ್ ಅಶಕ್ತ ಕುಟುಂಬಕ್ಕೆ ಮನೆ ಹಸ್ತಾಂತರ ಮಾಡಿ ಮಾತನಾಡಿದರು. ಯುವವಾಹಿನಿಯ ಮನೆ […]

Read More

ಅಗ್ನಿ ಅವಘಡ : ಯುವವಾಹಿನಿಯಿಂದ ಸಹಾಯಹಸ್ತ

ಸಸಿಹಿತ್ಲು: ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ನಾಮನಿರ್ದೇಶಿತ ಸದಸ್ಯರಾದ ಚಂದ್ರಶೇಖರ್ ಸಸಿಹಿತ್ಲು ಇವರ ಮನೆ ಆಕಸ್ಮಿಕ ಅಗ್ನಿ ಅವಘಡಕ್ಕಿಡಾಗಿ, ಚಂದ್ರಶೇಖರ್ ಕುಟುಂಬ ತೀವ್ರ ಸಂಕಷ್ಟಕ್ಕೆ ಒಳಗಾಗಿತ್ತು. ಸಂಕಷ್ಟಕ್ಕೆ ಒಳಗಾದ ಚಂದ್ರಶೇಖರ ಕುಟುಂಬಕ್ಕೆ ಯುವವಾಹಿನಿ ಕೇಂದ್ರ ಸಮಿತಿಯ ಸದಸ್ಯರಿಂದ ಸಂಗ್ರಹವಾದ ರೂ 50,000/- ಆರ್ಥಿಕ ಸಹಾಯ ಮಾಡಲಾಗಿದೆ. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಇವರು ₹50,000/ ಮೊತ್ತದ ಚೆಕ್‌ನ್ನು ಚಂದ್ರಶೇಖರ್ ಅವರ ಸಹೋದರಿ ಶ್ಯಾಮಲ ಅವರಿಗೆ ಹಸ್ತಾಂತರ ಮಾಡಿ, ಆರ್ಥಿಕ ಕ್ರೋಡೀಕರಣಕ್ಕಾಗಿ […]

Read More

ಸ್ವಚ್ಚತಾ ಕಾರ್ಯಕ್ರಮ

ಪಣಂಬೂರು ಕುಳಾಯಿ :- ಯುವವಾಹಿನಿ (ರಿ.) ಪಣಂಬೂರು – ಕುಳಾಯಿ ಘಟಕ ಹಾಗು ನಾಗರಿಕ ಸಲಹಾ ಸಮಿತಿ ಸುರತ್ಕಲ್ ಇವರ ಜಂಟಿ ಆಶ್ರಯದಲ್ಲಿ ಎಂ ಆರ್ ಪಿ ಎಲ್ ಪ್ರಾಯೋಜಕತ್ವದಲ್ಲಿ ಕುಳಾಯಿ ಪರಿಸರದಲ್ಲಿ, ಇತ್ತೀಚಿಗೆ ನಮ್ಮನ್ನಗಲಿದ ಘಟಕದ ಗೌರವ ಸದಸ್ಯರಾದ ದಿl ಮಹಾಬಲ ಟಿ. ಸಾಲ್ಯಾನ್ ರವರ ಸ್ಮರಣಾರ್ಥವಾಗಿ ದಿನಾಂಕ 04 ಡಿಸೆಂಬರ್ 2022 ರಂದುಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಘಟಕದ ಸಮಾಜ ಸೇವಾ ನಿರ್ದೇಶಕರಾದ ಸುಧೀರ್ ರವರ ನಾಯಕತ್ವದಲ್ಲಿ, ಆರಂಭವಾದ ಸ್ವಚ್ಛತಾ ಕಾರ್ಯದಲ್ಲಿ ಅಧ್ಯಕ್ಷರಾದ ರಂಜನ್ ಕೆ.ಕೋಟ್ಯಾನ್, […]

Read More

ಜನ ಮನ ಗೆದ್ದ ಉಚಿತ ಶರಬತ್ತು ವಿತರಣೆ

ಮಂಗಳೂರು :- ವಿಶ್ವ ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವದ ಶಾರದಾ ಶೋಭಾ ಯಾತ್ರೆಯಲ್ಲಿ ಪಾಲ್ಗೊಂಡ ಸಾವಿರಾರು ಭಕ್ತರಿಗೆ ಯುವವಾಹಿನಿ (ರಿ.) ಮಂಗಳೂರು ಘಟಕವು ಉಚಿತ ಶರಬತ್ತು ಸೇವೆಯನ್ನು ನೀಡುವುದರೊಂದಿಗೆ ಜನಮನ ಗೆದ್ದಿತು. ಮಂಗಳೂರು ದಸರಾ ಮಹೋತ್ಸವದ ಶೋಭಾ ಯಾತ್ರೆಯ ದಿನವಾದ 05 ಅಕ್ಟೋಬರ್ 2022ರ ಬೆಳಿಗ್ಗೆಯಿಂದಲೇ ಶರಬತ್ತು ಸೇವೆಗೆ ಪೂರ್ವ ತಯಾರಿ ಕಾರ್ಯಕ್ರಮಗಳು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿಯಿರುವ ಎಸ್. ಎಲ್. ಡೈಮಂಡ್ ಮಳಿಗೆಯ ಅಂಗಣದಲ್ಲಿ ಘಟಕದ ಅಜೀವ ಸದಸ್ಯರಾದ ಬಾಲಕೃಷ್ಣ […]

Read More

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 25ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02 ಅಕ್ಟೋಬರ್ 2022 ಭಾನುವಾರದಂದು ನಡೆಯಿತು. ಸದಸ್ಯರಾದ ಜಯ ಬಂಗೇರರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ , ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಸಂಘಟನಾ ಕಾರ್ಯದರ್ಶಿ ಸಚಿನ್ ಪೂಜಾರಿ , ಮಹಿಮೂನಾ S.D.M.C.ಅಧ್ಯಕ್ಷರು, […]

Read More

ಉಚಿತ ಹುಚ್ಚು ನಾಯಿ ನಿಯಂತ್ರಣಾ ಲಸಿಕಾ ಶಿಬಿರ

ಕೊಲ್ಯ :- ಯುವವಾಹಿನಿ(ರಿ.) ಕೊಲ್ಯ ಘಟಕ ಮತ್ತು ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ,ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಆಶ್ರಯದಲ್ಲಿ ಮತ್ತು ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇದರ ಸಹಕಾರದಲ್ಲಿ ಉಚಿತ ಹುಚ್ಚು ನಾಯಿ ನಿಯಂತ್ರಣಾ ಲಸಿಕಾ ಶಿಬಿರ ಮತ್ತು ದೇಸೀ ಬೆಕ್ಕು ಮತ್ತು ನಾಯಿ ಮರಿಗಳ ದತ್ತು ಕೊಡುವ ಕಾರ್ಯಕ್ರಮವು ದಿನಾಂಕ 25 ಸೆಪ್ಟೆಂಬರ್ 2022ರಂದು ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇದರ ವಠಾರದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜುಲೈ 21 ಬೆಳಗ್ಗೆ ಗಂಟೆ 10.30ರಿಂದ
ಸ್ಥಳ : ಬ್ರಹ್ಮಶ್ರೀ ನಾರಾಯಣಗುರು ಸಭಾಭವನ, ಗಾಣದಪಡ್ಪು, ಬಿ.ಸಿ.ರೋಡ್

ಯುವವಾಹಿನಿ (ರಿ) ಬಂಟ್ವಾಳ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!