Yuvavahini

ಸಮಾಜ ಸೇವೆ

ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮ

ಮಾಣಿ : “ಮರದ ನೆರಳು ಬದುಕಿಗೆ ನೆರಳು” ಎಂಬ ಧ್ಯೇಯೋದ್ದೇಶದೊಂದಿಗೆ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಎರಡನೇ ಹಂತದ ಯುವ ವೃಕ್ಷೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಂಗವಾಗಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಕೆದಿಲ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬರಿಮಾರು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ಹಾಗೂ ಅಂಗನವಾಡಿ ಕೇಂದ್ರ ಪೆರಾಜೆಗಳಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರದ ಕುರಿತು ಜಾಗೃತಿ […]

Read More

ಕರುಣೆಯ ಹೃದಯಗಳಿಂದ ಮೂಡಿದ ಸೇವೆಯ ಸ್ಪರ್ಶ, ಸಂಕಷ್ಟದಲ್ಲಿರುವವರಿಗೆ ಬದುಕಿನ ಆಶಾಕಿರಣ

ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ಮಹತ್ವಾಕಾಂಕ್ಷಿ ಸಮಾಜಮುಖಿ ಯೋಜನೆಯಾದ “ಯುವ ಸೇವಾ ಸ್ಪರ್ಶ” ಕಾರ್ಯಕ್ರಮದಡಿ ಮೊದಲನೇ ಸೇವಾ ಹಸ್ತವನ್ನು ಅಗತ್ಯವಿರುವ ಕುಟುಂಬವೊಂದಕ್ಕೆ ವಿತರಿಸಲಾಯಿತು. ಮಾಣಿ ಗ್ರಾಮದ ದಿವಂಗತ ವೀರಪ್ಪ ಪೂಜಾರಿ ಅವರ ಕುಟುಂಬವು ಆರ್ಥಿಕ ಹಾಗೂ ಆರೋಗ್ಯ ಸಂಬಂಧಿತ ಸಂಕಷ್ಟಗಳನ್ನು ಎದುರಿಸುತ್ತಿದ್ದು, ನಾಲ್ಕು ಹೆಣ್ಣು ಮಕ್ಕಳ ಪೈಕಿ ಮೂವರು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕುಟುಂಬದ ಒಬ್ಬ ಸದಸ್ಯರು ಮಾತ್ರ ದುಡಿದು ಮನೆಯ ಸಂಪೂರ್ಣ ಜವಾಬ್ದಾರಿಯನ್ನು ನಿರ್ವಹಿಸುತ್ತಿರುವ ಈ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ಯುವವಾಹಿನಿ (ರಿ.) […]

Read More

ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕ ನೆರವು

ಮಂಗಳೂರು, ಮೇ 28: ಯುವವಾಹಿನಿ (ರಿ.) ಕಂಕನಾಡಿ ಘಟಕವು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳ ಅಂಗವಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಉಜ್ಜೋಡಿ ನಿವಾಸಿ ರಾಜೇಶ್ ಅವರಿಗೆ ಆರ್ಥಿಕ ನೆರವು ನೀಡಿದೆ. ರಾಜೇಶ್ ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರಿಯಾಗುವ ಉದ್ದೇಶದಿಂದ ಘಟಕದ ಸದಸ್ಯರು ಮತ್ತು ಹಿತೈಷಿಗಳ ಸಹಯೋಗದೊಂದಿಗೆ ಸಂಗ್ರಹಿಸಲಾದ Rs. 30,000/- ಮೊತ್ತದ ಧನಸಹಾಯವನ್ನು 28-05-2026 ರಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ರಾಜೇಶ್ ಅವರು ಶೀಘ್ರವಾಗಿ ಸಂಪೂರ್ಣ ಆರೋಗ್ಯವನ್ನು […]

Read More

ಕ್ರಾಂತಿವೀರ ಮಂಜ ಬೈದ್ಯರ ಸಂಸ್ಮರಣಾ ಕಾರ್ಯಕ್ರಮ

​ಮಂಗಳೂರು, ಮೇ 27: ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ತುಳುನಾಡಿನ ಅಪ್ರತಿಮ ಕ್ರಾಂತಿವೀರ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಸಂಸ್ಮರಣಾ ಕಾರ್ಯಕ್ರಮವನ್ನು ಮೇ 27, 2026 ರಂದು ಕುಂಟಲ್ಪಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಆಯೋಜಿಸಲಾಯಿತು. ​ಬ್ರಿಟಿಷರ ದಾಸ್ಯದಿಂದ ಜನರನ್ನು ಮುಕ್ತಗೊಳಿಸುವ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮಂಜ ಬೈದ್ಯರು, ತಮ್ಮ ಧೈರ್ಯಶಾಲಿ ಹೋರಾಟದ ಪರಿಣಾಮವಾಗಿ 1837 ರ ಮೇ 27 ರಂದು ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟು ವೀರಮರಣವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಅವರ […]

Read More

ಬ್ರಿಟಿಷರ ಹುಟ್ಟಡಗಿಸಿದ ಇತಿಹಾಸ ಮರೆತ, ಇತಿಹಾಸ ಪುರುಷನ ಸಂಸ್ಮರಣೆ

ಕೊಲ್ಯ: ತುಳುನಾಡಿನ ಹೆಮ್ಮೆಯ ಕ್ರಾಂತಿಕಾರಿ ವೀರ, ಬ್ರಿಟಿಷರ ವಿರುದ್ಧ ರಣಕಹಳೆ ಊದಿದ ಇತಿಹಾಸ ಪುರುಷ ಮಂಜ ಬೈದ್ಯರ 190ನೇ ಪುಣ್ಯತಿಥಿ ಪ್ರಯುಕ್ತ ಸಂಸ್ಮರಣಾ ಕಾರ್ಯಕ್ರಮವು ಮೇ 27ರಂದು ಇಲ್ಲಿನ ಕೊಲ್ಯ ಬಿಲ್ಲವ ಸಂಘದ ಸಭಾಭವನದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ–ಸೋಮೇಶ್ವರ ಇದರ ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ್ ಸುವರ್ಣ ಕನೀರುತೋಟ ಅವರು ದೀಪ ಪ್ರಜ್ವಲಿಸಿ, ಮಂಜ ಬೈದ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ […]

Read More

ಸಂಕಷ್ಟದಲ್ಲಿದ್ದ ಯುವಕನಿಗೆ ಆರ್ಥಿಕ ನೆರವು

ಕೂಳೂರು : ಸಮಾಜಮುಖಿ ಮತ್ತು ಜನಪರ ಕಾರ್ಯಕ್ರಮಗಳ ಮೂಲಕ ಸದಾ ಮುಂಚೂಣಿಯಲ್ಲಿರುವ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಮತ್ತೊಂದು ಶ್ಲಾಘನೀಯ ಸೇವಾ ಕಾರ್ಯ ನಡೆದಿದೆ. ಘಟಕದ 26ನೇ ಸೇವಾನಿಧಿ ಯೋಜನೆಯಾದ ಸಹಾಯಹಸ್ತ ಕಾರ್ಯಕ್ರಮದಡಿ, ಇತ್ತೀಚೆಗೆ ಸಂಭವಿಸಿದ ಭೀಕರ ವಾಹನ ಅಪಘಾತದಿಂದ ತೀವ್ರ ತೊಂದರೆಗೆ ಒಳಗಾಗಿದ್ದ ಕಾರ್ಕಳದ ಈದು ನಿವಾಸಿ ದಯಾನಂದ ಪೂಜಾರಿ (26) ಅವರ ಕುಟುಂಬಕ್ಕೆ ತುರ್ತು ಚಿಕಿತ್ಸಾ ವೆಚ್ಚಕ್ಕಾಗಿ ರೂ.16,000/-ಧನಸಹಾಯವನ್ನು ನೀಡಲಾಯಿತು.ದಿನಾಂಕ 27-05-2026ರಂದು ನಡೆದ ಘಟಕದ ಸಾಪ್ತಾಹಿಕ ಸಭೆಯಲ್ಲಿ, ಘಟಕದ ಅಧ್ಯಕ್ಷೆ ಗೀತಾ ವಸಂತ್ […]

Read More

ಅಂಚೆ ಜನಸಂಪರ್ಕ ಅಭಿಯಾನ ಹಾಗೂ ಆಧಾರ್ ನೋಂದಣಿ–ತಿದ್ದುಪಡಿ ಶಿಬಿರ

ಬಜಪೆ, ಮೇ 26: ಯುವವಾಹಿನಿ (ರಿ.) ಬಜಪೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಬಜಪೆ–ಕರಂಬಾರು ಹಾಗೂ ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಇವರ ಸಹಯೋಗದಲ್ಲಿ ಅಂಚೆ ಜನಸಂಪರ್ಕ ಅಭಿಯಾನ, ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವನ್ನು 26-05-2026 ರಂದು ನಾರಾಯಣ ಗುರು ಸಮುದಾಯ ಭವನ, ಬಜಪೆಯಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಳಿಗ್ಗೆ 9.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ನಡೆದ ಶಿಬಿರದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಸೇವೆಗಳೊಂದಿಗೆ ಅಂಚೆ ಕಚೇರಿಯ […]

Read More

ಅನಾರೋಗ್ಯ ಪೀಡಿತರಿಗೆ ಧನಸಹಾಯ

ಕೊಲ್ಯ : ಮಾನವ ಸೇವೆಯೇ ಮಾಧವ ಸೇವೆ ಎಂಬ ಧ್ಯೇಯದೊಂದಿಗೆ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ಯುವವಾಹಿನಿ (ರಿ.) ಕೊಲ್ಯ ಘಟಕದ ಜಂಟಿ ಆಶ್ರಯದಲ್ಲಿ ಅನಾರೋಗ್ಯದಿಂದ ಬಳಲುತ್ತಿರುವ ಎರಡು ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ “ಸಹಾಯ ಹಸ್ತ” ಚಟುವಟಿಕೆಯನ್ನು ಹಮ್ಮಿಕೊಳ್ಳಲಾಯಿತು. ದಿನಾಂಕ 17-05-2026 ರಂದು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ತಾಯಂದಿರ ವೈದ್ಯಕೀಯ ಚಿಕಿತ್ಸಾ ವೆಚ್ಚಕ್ಕಾಗಿ ಧನಸಹಾಯ ಹಸ್ತಾಂತರಿಸಲಾಯಿತು: ಸೋಮೇಶ್ವರ ನಿವಾಸಿ ದಾಮೋದರ ಪೂಜಾರಿ ಇವರ ಧರ್ಮಪತ್ನಿಯವರ ಚಿಕಿತ್ಸಾ ವೆಚ್ಚಕ್ಕಾಗಿ. […]

Read More

ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

ಸುರತ್ಕಲ್ : ದಿನಾಂಕ 10-05-2026 ರಂದು ಇಡ್ಯಾ ಕ್ಷೇತ್ರದಲ್ಲಿ ನಡೆದ ಶ್ರೀ ವಿಠೋಭ ರುಕುಮಾಯಿ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪುನಃಪ್ರತಿಷ್ಠೆ ಮತ್ತು ಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ ಯುವವಾಹಿನಿ ಸುರತ್ಕಲ್ ಘಟಕದ ವತಿಯಿಂದ ರೂ.15,000 ಮೊತ್ತದ ಚೆಕ್ ಅನ್ನು ಕ್ಷೇತ್ರದ ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದು, ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರು ಮತ್ತು ಕ್ಷೇತ್ರದ ಶಾಂತಿಯವರು ಘಟಕದ ಅಧ್ಯಕ್ಷರನ್ನು ಸ್ಮರಣಿಕೆ ಹಾಗೂ ಶಾಲು […]

Read More

ಬ್ರಹ್ಮಕಲಶೋತ್ಸವದಲ್ಲಿ ಸ್ವಯಂಸೇವೆ

ಪಡುಬಿದ್ರಿ : ದಿನಾಂಕ 03/05/2026 ರಂದು ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ದ ಸಂದರ್ಭದಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಸದಸ್ಯರು ಬೆಳಿಗ್ಗೆ ಇಂದ ಸಂಜೆಯ ವರೆಗೆ ಸ್ವಯಂಸೇವೆಯಲ್ಲಿ ಪಾಲ್ಗೊಂಡು, ನೆರೆದಿದ್ದ ಭಕ್ತ ಜನರಿಗೆ ಅನ್ನ ಬಡಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ಪೂರ್ಣ ಗೊಳಿಸಲಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!