Yuvavahini

ವಿದ್ಯೆ

ಮಹಿಳೆಯರ ಸ್ವಾವಲಂಬಿ ಬದುಕಿಗೆ ಬ್ರೈಡಲ್ ಮೇಕಪ್ ತರಬೇತಿ ಪೂರಕ: ವಿದ್ಯಾ ರಾಕೇಶ್

ಮಂಗಳೂರು ಅ 28 : ಮಹಿಳೆಯರು ಕಲಿತ ಕೌಶಲ್ಯವನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಂಡು ಸ್ವಾವಲಂಬಿ ಜೀವನ ನಡೆಸುವುದರ ಜೊತೆಗೆ, ಭವಿಷ್ಯದಲ್ಲಿ ಇತರರಿಗೂ ಉದ್ಯೋಗಾವಕಾಶ ಕಲ್ಪಿಸುವ ಉದ್ಯಮಿಗಳಾಗಿ ಬೆಳೆಯಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷೆ ಹಾಗೂ ತರಬೇತಿಯ ಸಂಪನ್ಮೂಲ ವ್ಯಕ್ತಿ ವಿದ್ಯಾ ರಾಕೇಶ್ ಹೇಳಿದರು. ಯುವವಾಹಿನಿ (ರಿ.) ಕೊಲ್ಯ ಘಟಕ, ಸಿಡಾಕ್ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 30 ದಿನಗಳ ಬ್ರೈಡಲ್ ಮೇಕಪ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಅವರು […]

Read More

ವ್ಯಕ್ತಿತ್ವ ವಿಕಸನ ಶಿಬಿರಗಳು ಯಶಸ್ವಿ ನಾಯಕರನ್ನು ರೂಪಿಸುತ್ತವೆ – ಭುವನೇಶ್ ಪಚ್ಚಿನಡ್ಕ

ಬಂಟ್ವಾಳ ಅ 11 : ವ್ಯಕ್ತಿತ್ವ ವಿಕಸನ ಶಿಬಿರಗಳು ಯುವಜನರಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಶಿಸ್ತು ಹಾಗೂ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಇಂತಹ ಶಿಬಿರಗಳ ಮೂಲಕ ಯುವಜನರು ತಮ್ಮಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸಿಕೊಂಡು ಸಮಾಜಕ್ಕೆ ಮಾದರಿಯಾಗುವ ನಾಯಕರಾಗಿ ರೂಪುಗೊಳ್ಳಲು ಸಾಧ್ಯ ಎಂದು ಯುವವಾಹಿನಿ ರಜತ ವರ್ಷದ ಅಧ್ಯಕ್ಷರು ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಹೇಳಿದರು. ಯುವವಾಹಿನಿ (ರಿ.) ಬಂಟ್ವಾಳ ಘಟಕದ ವತಿಯಿಂದ […]

Read More

IBPS ಪರೀಕ್ಷಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ‘ಯುವ ದಿಕ್ಸೂಚಿ–2026’

ಮಂಗಳೂರು, ಸೆ. 29: ಯುವವಾಹಿನಿ (ರಿ.) ಕೇಂದ್ರ ಸಮಿತಿ ಆಶ್ರಯದಲ್ಲಿ ಹಾಗೂ ಪಣಂಬೂರ ಕುಳಾಯಿ ಘಟಕದ ಆತಿಥ್ಯದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಯೋಗದೊಂದಿಗೆ ‘ಯುವ ದಿಕ್ಸೂಚಿ–2026’ರ ಮುಂದುವರಿದ ಭಾಗವಾಗಿ IBPS ಪರೀಕ್ಷೆಯ ಇಂಗ್ಲಿಷ್ ವಿಷಯಕ್ಕೆ ಪೂರಕವಾದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಮಂಗಳೂರಿನ ಸ್ಕೌಟ್ ಭವನದ ಸಭಾಂಗಣದಲ್ಲಿ ಆಯೋಜಿಸಲಾಯಿತು. ಬ್ಯಾಂಕ್ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿರುವ 17 ಉದ್ಯೋಗಾಕಾಂಕ್ಷಿಗಳು ಕಾರ್ಯಾಗಾರದಲ್ಲಿ ಪಾಲ್ಗೊಂಡರು. ಕೆನರಾ ಬ್ಯಾಂಕ್‌ನ ಹಿರಿಯ ಪ್ರಬಂಧಕಿ ಶಾಂಭವಿ ಪ್ರಭು ಅವರು […]

Read More

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು; ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರ : ಲತಾಕಿಶೋರ್ ಕೆ. ಬಿಜೈ

ಮಂಗಳೂರು ಸೆ 08 : ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು, ಭವಿಷ್ಯದ ಭಾರತವನ್ನು ನಿರ್ಮಿಸುವ ಜವಾಬ್ದಾರಿ ಅವರ ಮೇಲಿದೆ. ಮಕ್ಕಳಲ್ಲಿ ಉತ್ತಮ ಗುಣ, ಮೌಲ್ಯ ಹಾಗೂ ಜವಾಬ್ದಾರಿಯುತ ನಾಗರಿಕ ಪ್ರಜ್ಞೆಯನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಹಾಗೂ ಶಿಕ್ಷಕಿ ಲತಾಕಿಶೋರ್ ಕೆ. ಬಿಜೈ ಹೇಳಿದರು.ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸೆಪ್ಟೆಂಬರ್ 8ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಾಹಿತಿ ನೀಡಿದ ಅವರು, ಶಿಕ್ಷಕರ […]

Read More

ಯುವಕರ ಭವಿಷ್ಯಕ್ಕೆ ದಿಕ್ಕು ತೋರಿದ ‘ಯುವ ದಿಕ್ಸೂಚಿ–2026’

ಮಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರುಇದರ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಾಣಿ ಘಟಕದ ಆತಿಥ್ಯದಲ್ಲಿ, B.E.W.S. (R.), ಮಂಗಳೂರು ಹಾಗೂ ಭಾರತ್ ಸ್ಕೌಟ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ “ಯುವ ದಿಕ್ಸೂಚಿ–2026 – ಕನಸುಗಳಿಗೆ ರೆಕ್ಕೆ, ಭವಿಷ್ಯಕ್ಕೆ ದಿಕ್ಕು” ಎಂಬ ಮೂರು ದಿನಗಳ IBPS ಬ್ಯಾಂಕಿಂಗ್ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಕಾರ್ಯಾಗಾರವು ಯಶಸ್ವಿಯಾಗಿ ಸಂಪನ್ನಗೊಂಡಿತು. ಆಗಸ್ಟ್ 24ರಿಂದ […]

Read More

ಉದ್ಯಮಶೀಲತೆಯ ಮೂಲಕ ಸ್ವಾವಲಂಬನೆ ಸಾಧ್ಯ: ಚಂದ್ರಿಕಾ ಎಸ್. ನಾಯಕ್

ಮಂಗಳೂರು: ಸಮಾಜದಲ್ಲಿ ವ್ಯವಸ್ಥಿತವಾಗಿ ಬದುಕಲು ಉದ್ಯೋಗದ ಅಗತ್ಯವಿದೆ. ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಲು ಉತ್ತಮ ಅವಕಾಶಗಳು ದೊರೆತಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಉದ್ಘಾಟಕಿ ಚಂದ್ರಿಕಾ ಎಸ್. ನಾಯಕ್ ಹೇಳಿದರು. ಅವರು ಆ. 24ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಉರ್ವ ಸ್ಟೋರ್‌ನ ರಘು ಬಿಲ್ಡಿಂಗ್‌ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (CEDOK), ಮಂಗಳೂರು […]

Read More

ಮೌಲ್ಯಗಳನ್ನು ಕೇವಲ ಹೇಳಿಕೊಡುವುದಕ್ಕಿಂತ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ

ಮಂಗಳೂರು ಅಗಸ್ಟ್ 20 : ಬಾಲ್ಯದಲ್ಲಿಯೇ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದು ಹಾಗೂ ಭವಿಷ್ಯವನ್ನು ಯಶಸ್ವಿಯಾಗಿ ರೂಪಿಸಿಕೊಳ್ಳಲು ಅಗತ್ಯವಾದ ಉತ್ತಮ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಮುಖ್ಯ ಎಂದು ಕರ್ನಾಟಕ ಸರ್ಕಾರದ ದಕ್ಷಿಣ ಕನ್ನಡ ಜಿಲ್ಲಾ ಬಾಲನ್ಯಾಯ ಮಂಡಳಿ (Juvenile Justice Board) ಸದಸ್ಯೆ ಸಚಿತ ನಂದಗೋಪಾಲ್ ಹೇಳಿದರು. ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಕುಂಪಲದ DKZP ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ವ್ಯಕ್ತಿತ್ವ ವಿಕಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಮೌಲ್ಯಗಳನ್ನು ಕೇವಲ ಹೇಳಿಕೊಡುವುದಕ್ಕಿಂತ […]

Read More

ಆರ್ಥಿಕ ಸಂಕಷ್ಟದಲ್ಲಿದ್ದ ಏಳು ವಿದ್ಯಾರ್ಥಿಗಳಿಗೆ ಯುವವಾಹಿನಿಯಿಂದ ಶೈಕ್ಷಣಿಕ ನೆರವು

ಮಾಣಿ, ಆಗಸ್ಟ್ 15: ಆರ್ಥಿಕವಾಗಿ ಹಿಂದುಳಿದ ಹಾಗೂ ಶಾಲಾ ಶುಲ್ಕ ಪಾವತಿಸಲು ಅಸಾಧ್ಯವಾಗಿದ್ದ ಏಳು ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಪಾವತಿಸುವ ಮೂಲಕ ಯುವವಾಹಿನಿ (ರಿ.) ಮಾಣಿ ಘಟಕವು ಮಾನವೀಯ ಸೇವೆಗೆ ಮುಂದಾಗಿದೆ. ಶ್ರೀರಾಮಚಂದ್ರ ಹೈಸ್ಕೂಲ್, ಅಯೋಧ್ಯಾನಗರ, ಪೆರ್ನೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ನೆರವು ನೀಡಲಾಯಿತು. ಯುವವಾಹಿನಿಯ ಪ್ರಮುಖ ಧ್ಯೇಯಗಳಾದ ‘ವಿದ್ಯೆ, ಉದ್ಯೋಗ ಮತ್ತು ಸಂಪರ್ಕ’ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ “ಯಾರೂ ಶಿಕ್ಷಣದಿಂದ ವಂಚಿತರಾಗಬಾರದು” ಎಂಬ ತತ್ತ್ವಸಂದೇಶವನ್ನು ಪಾಲಿಸುವ ನಿಟ್ಟಿನಲ್ಲಿ ಈ ಸೇವಾ ಕಾರ್ಯವನ್ನು […]

Read More

ವಿದ್ಯಾರ್ಥಿವೇತನ, ಯುವಸಿರಿ–ಶ್ರೀ ಹರಿ ಪ್ರಶಸ್ತಿ ಪ್ರದಾನ; ಗುರು ಸಂದೇಶ ಗೋಷ್ಠಿ

ಮೂಡುಬಿದಿರೆ, ಆ. 2: ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ವತಿಯಿಂದ ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಮಹತ್ವ, ಸಾಮಾಜಿಕ ಜವಾಬ್ದಾರಿ ಹಾಗೂ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಿದ್ದ ‘ಅರಿವು–2026’ ಕಾರ್ಯಕ್ರಮವು ಮೂಡುಬಿದಿರೆಯ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಮೃತ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಘಟಕದ ಅಧ್ಯಕ್ಷ ಗಿರೀಶ್ ಕೋಟ್ಯಾನ್ ಮಾರೂರು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಅಧಿಕಾರಿ ಜಿನೇಂದ್ರ […]

Read More

ಮಹಿಳೆಯರು ಆತ್ಮವಿಶ್ವಾಸದಿಂದ ಉದ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು: ರೇಖಾ ಗೋಪಾಲ್

ಮಂಗಳೂರು, ಜು. 30: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸೀಡಾಕ್), ಧಾರವಾಡ, ಸೀಡಾಕ್ ಮಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ, ಮಂಗಳೂರು, ಜಿಲ್ಲಾ ಕೌಶಲ್ಯ ಮಿಷನ್, ಮಂಗಳೂರು, ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ ಚೌಕಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಜುಲೈ 30ರಂದು ಭಾರತಿ ಟ್ರೈನಿಂಗ್ ಸೆಂಟರ್, ಕೊಟ್ಟಾರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ : 01 ನವೆಂಬರ್ 2026
ಸ್ಥಳ : ಯಕ್ಷಗಾನ ಕಲಾರಂಗ ಉಡುಪಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಉಡುಪಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ

ಯುವವಾಹಿನಿ ಕ್ರೀಡೋತ್ಸವ–2026 : ಪಣಂಬೂರು ಕುಳಾಯಿ ಘಟಕಕ್ಕೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಅಕ್ಟೋಬರ್ 4ರಂದು ಮೂಡುಬಿದಿರೆಯ ಆಳ್ವಾಸ್ ಕೃಷಿಸಿರಿ ಕ್ರೀಡಾಂಗಣದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರಲ್ಲಿ ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಈ ಸಂದರ್ಭದಲ್ಲಿ...

Sunday, 11-10-2026
ಕ್ರೀಡಾ ಸ್ಫೂರ್ತಿ, ಶಿಸ್ತು ಹಾಗೂ ಸಂಘಟನಾ ಶಕ್ತಿಯ ಅನಾವರಣ

ಯುವವಾಹಿನಿ ಕ್ರೀಡೋತ್ಸವ–2026ಕ್ಕೆ ಸಂಭ್ರಮದ ತೆರೆ

ಮೂಡುಬಿದಿರೆ, ಅ. 4: ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿ ಕ್ರೀಡೋತ್ಸವ–2026ರ ಸಮಾರೋಪ ಸಮಾರಂಭವು ಅಕ್ಟೋಬರ್ 4ರಂದು ಭಾನುವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು. ಯುವವಾಹಿನಿ ಕೇಂದ್ರ ಸಮಿತಿಯ...

Sunday, 04-10-2026
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
error: Content is protected !!