Yuvavahini

ವಿದ್ಯೆ

ಹೊಂಬೆಳಕು 2025 -ನಾಯಕತ್ವ ತರಬೇತಿ ಶಿಬಿರ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ )ಮೂಡುಬಿದಿರೆ ಘಟಕ ವ್ಯಕ್ತಿತ್ವ ವಿಕಸನ ಶಿಬಿರ ಹೊಂಬೆಳಕು- 2025,16/02/2025 ನೇ ಆದಿತ್ಯವಾರ ಸ್ಥಳ.. ಸಮಾಜ ಮಂದಿರ ಮೂಡುಬಿದಿರೆ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ಘಟಕದ ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.ಯುವ ಉದ್ಯಮಿ ಪುತ್ತಿಗೆ ಭಾಸ್ಕರ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾದ ಇರುವೈಲ್ ಬಿಲ್ಲವ ಸಂಘದ ಅಧ್ಯಕ್ಷರಾದ *ಕುಮಾರ್ ಪೂಜಾರಿಯವರು ಮತ್ತು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಶಂಕರ್ ಏ ಕೋಟ್ಯಾನ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು 🔶ವೇದಿಕೆಯಲ್ಲಿ ವ್ಯಕ್ತಿತ್ವ ವಿಕಸನ […]

Read More

ಯುವವಾಹಿನಿ (ರಿ.) ಕಂಕನಾಡಿ ಘಟಕ…

ವ್ಯಕ್ತಿತ್ವ ವಿಕಸನ *ಮಕ್ಕಳು ಮೊಬೈಲ್ ಹಾಗೂ ಕಾನೂನುಬಾಹಿರ ಚಟಕ್ಕೆ ಬೀಳದೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಗುರಿಯನ್ನಿಟ್ಟು ತಮ್ಮ ಜೀವನವನ್ನೇ ಮಕ್ಕಳಿಗಾಗಿ ತ್ಯಾಗ ಮಾಡುತ್ತಿರುವ ಪೋಷಕರು ಹಾಗೂ ನಿಮ್ಮ ಬಗ್ಗೆ ಇತರರು ಹೆಮ್ಮೆ ಪಡುವಂತಹ ಆಕರ್ಷಕ ವ್ಯಕ್ತಿತ್ವ ನಿಮ್ಮದಾಗಬೇಕು .ಮಕ್ಕಳು ಈ ದೇಶದ ಅತ್ಯಮೂಲ್ಯ ಸಂಪತ್ತು. ಮಕ್ಕಳಿಗೆ ಯಾರಿಂದಲಾದರೂ ದೈಹಿಕವಾಗಿ ಅಥವಾ ಮಾನಸಿಕವಾಗಿ ತೊಂದರೆಯಾದಲ್ಲಿ ನಮ್ಮ ಕಾನೂನು ಖಂಡಿತಾ ಸಹಿಸುವುದಿಲ್ಲ. ತಕ್ಷಣವೇ ಮಕ್ಕಳು ತಮ್ಮ ಹೆತ್ತವರ, ಶಿಕ್ಷಕರ ಗಮನಕ್ಕೆ ತರಬೇಕು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ […]

Read More

ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ದಿನಾಂಕ 10-06-2025: ಆಸ್ತಿ ಅಂತಸ್ತನ್ನ ಬೇಕಾದರೆ ನಾವು ಕಳೆದುಕೊಳ್ಳಬಹುದು ಆದರೆ ಪಡೆದಂತಹ ವಿದ್ಯಾಭ್ಯಾಸವನ್ನು ನಮ್ಮಿಂದ ಯಾರು ಕಸಿಯಲು ಸಾಧ್ಯವಿಲ್ಲ ಎಂದು ಶಾರದಾ ವಿದ್ಯಾಲಯ ಮಂಗಳೂರು ಇದರ ಪ್ರಾಂಶುಪಾಲರಾದ ದಯಾನಂದ ಕಟೀಲು ಹೇಳಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ನಡೆದಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆತ್ತವರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಬೇಕಾಗಿರುವುದು ಪ್ರೀತಿ ವಾತ್ಸಲ್ಯ. ಸೋತಾಗ […]

Read More

ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು : ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಧಿಕಾರಿ

ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. […]

Read More

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]

Read More

ವಿದ್ಯಾನಿಧಿಯ ಸದ್ಬಳಕೆಯೊಂದಿಗೆ ಸಮಾಜದ ಸತ್ಪ್ರಜೆಗಳಾಗಿ :- ಉದಯ ಅಮೀನ್ ಮಟ್ಟು ಆಶಯ

ಕೂಳೂರು :- ಸಮಾಜದಲ್ಲಿರುವ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಯುವವಾಹಿನಿ (ರಿ.) ಕೂಳೂರು ಘಟಕ ಕಳೆದ 7 ವರುಷಗಳಿಂದ ವಿದ್ಯಾನಿಧಿ ನೀಡುತ್ತಾ ಬಂದಿದೆ . ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ಉನ್ನತ ಅಂಕ ಗಳಿಸಿ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯಬೇಕು ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷ ಉದಯ ಅಮೀನ್ ಮಟ್ಟು ಕೂಳೂರಿನ ಪಂಪ್ ಹೌಸ್ ಬಳಿ ದಿನಾಂಕ 03 ಡಿಸೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ವಿದ್ಯಾನಿಧಿ […]

Read More

ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕು ಅಗತ್ಯ :- ಅಮೃತರಾಜ್

ಉಡುಪಿ :- ವಿದ್ಯಾರ್ಥಿಗಳು ಶೈಕ್ಷಣಿಕ ಉನ್ನತಿಯ ಜೊತೆಗೆ ಸಂಸ್ಕಾರಯುತ ಬದುಕನ್ನು ರೂಢಿಸಿಕೊಳ್ಳಬೇಕು. ಗುರು ಹಿರಿಯರ ಆದರ್ಶದಲ್ಲಿ ಸಮಾಜಮುಖಿಯಾಗಿ ಬೆಳೆಯಬೇಕು. ವಿಶೇಷವಾಗಿ ನಮ್ಮ ಸಮಾಜದ ಹೆಮ್ಮೆಯ ಸಂಸ್ಥೆಯಾದ ಯುವವಾಹಿನಿಯ ವಿದ್ಯೆ, ಉದ್ಯೋಗ, ಸಂಪರ್ಕ ತತ್ವಗಳಿಗೆ ಬದ್ದವಾಗಿದ್ದರೆ ಖಂಡಿತಾ ಒಳಿತು ಸಾಧ್ಯ ಎಂದು ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಪ್ರೌಢ ಶಾಲೆಯ ಸಹಶಿಕ್ಷಕರಾದ ಅಮೃತ್‌ರಾಜ್ ತಿಳಿಸಿದರು. ಅವರು ದಿನಾಂಕ 13 ನವೆಂಬರ್ 2022ರಂದು ಯುವವಾಹಿನಿ ಉಡುಪಿ ಘಟಕದ ವತಿಯಿಂದ ಜರಗಿದ ವಿದ್ಯಾನಿಧಿ ವಿತರಣಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಪ್ರಾರಂಭದಲ್ಲಿ ಬ್ರಹ್ಮಶ್ರೀ […]

Read More

ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ

ಮಂಗಳೂರು:- ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿರಿ, ದುಶ್ಚಟಗಳಿಂದ ವಿಮುಖರಾಗಿ ಸತ್ಪ್ರಜೆಗಳಾಗಿ ಎಂದು ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಆದರ್ಶಗಳನ್ನು ತಿಳಿಯ ಪಡಿಸಿದ ಅಸೋಸಿಯೇಟ್ ಪ್ರೊಫೆಸರ್ ವಿನೀತ ರೈ ಅವರು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ನಾರಾಯಣ ಗುರುಗಳ ತತ್ವದೇಶಗಳನ್ನು ಘೋಷಿಸುವುದರ ಮೂಲಕ ನಾವೆಲ್ಲರೂ ಒಂದೇ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ನಡೆದ ಗುರು ಜಯಂತಿ, ಶಿಕ್ಷಕರ ದಿನಾಚರಣೆ ಮತ್ತು ಸಾಹಿತ್ಯ ಸೌರಭ ಬಹುಮಾನ ವಿತರಣಾ ಕಾರ್ಯಕ್ರಮವನ್ನು […]

Read More

ಗುರುವಂದನೆ -2022

ಮಾಣಿ :- ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ದಿನಾಂಕ 05 ಸೆಪ್ಟೆಂಬರ್ 2022 ರ ಸೋಮವಾರದಂದು ಬರಿಮಾರು ಗ್ರಾಮದ ಕಲ್ಲೆಟ್ಟಿ ಶಾರದಾ ರತ್ನಾಕರ ಇವರ ಮನೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ನಡೆಸಲಾಯಿತು. ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದು ದ.ಕ.ಜಿ.ಪಂ.ಕಿ. ಪ್ರಾಥಮಿಕ ಶಾಲೆ ಬಂಟ್ರಿಂಜ ಅನಂತಾಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಶಾರದಾ ರತ್ನಾಕರ ಇವರಿಗೆ ಘಟಕದ ವತಿಯಿಂದ ಗುರುವಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಜಯಂತ ಬರಿಮಾರು ಮಾತನಾಡಿ ” ಗುರು ತತ್ವಾದರ್ಶದ ನೆಲೆಯಲ್ಲಿ ಬೆಳೆದು […]

Read More

ಶಿಕ್ಷಕರ ದಿನಾಚರಣೆ

ಮುಲ್ಕಿ :- ಯುವವಾಹಿನಿ (ರಿ.) ಮುಲ್ಕಿ ಘಟಕದ ವತಿಯಿಂದ ಹಾಗೂ ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಇವರ ಜಂಟಿ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆಯನ್ನು ದಿನಾಂಕ 05 ಸೆಪ್ಟೆಂಬರ್ 2022ನೇ ಸೋಮವಾರದಂದು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮುಲ್ಕಿ ಯಲ್ಲಿ ಜರುಗಿತು. ಘಟಕದ ಅಧ್ಯಕ್ಷರಾದ ಭಾಸ್ಕರ್ ಭಾರತಿ ಕೋಟ್ಯಾನ್ ಇವರು ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ನಾರಾಯಣ ಗುರು ವಿದ್ಯಾಸಂಸ್ಥೆ ಮೂಲ್ಕಿ ಇದರ ಸಂಚಾಲಕರಾದ ಎಚ್ .ವಿ .ಕೋಟ್ಯಾನ್ ದೀಪ ಬೆಳಗಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!