Yuvavahini

ನಾರಾಯಣ ಗುರು

ಗುರು ಸಂದೇಶ ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಹೊನ್ನಪ್ಪ ಕೈಂದಾಡಿ

ಸುಳ್ಯ, ಜುಲೈ 19 : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಜೂನ್ ತಿಂಗಳ ‘ಗುರುಸ್ಪೂರ್ತಿ’ ಕಾರ್ಯಕ್ರಮವು ಘಟಕದ ಪೂರ್ವಾಧ್ಯಕ್ಷ ಸುನಿಲ್ ಪೂಜಾರಿ ಕಳಂಜಪಟ್ಟೆ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಹೊನ್ನಪ್ಪ ಕೈಂದಾಡಿ ಅವರು ನಾರಾಯಣಗುರುಗಳ ಸಂದೇಶವನ್ನು ನೀಡುತ್ತಾ, ಗುರುಗಳ ತತ್ವ-ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸೌಹಾರ್ದತೆ, ಸಮಾನತೆ ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸಬೇಕೆಂದು ಕರೆ ನೀಡಿದರು. ಯುವವಾಹಿನಿ (ರಿ.) ಸುಳ್ಯ ಘಟಕದ ಅಧ್ಯಕ್ಷ ಮಹೇಶ್ ಕಲ್ಪಣೆ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ […]

Read More

ಪ್ರಸ್ತುತ ಜೀವನದಲ್ಲೂ ನಾರಾಯಣಗುರು ಸಂದೇಶ ಪ್ರಸ್ತುತವಾಗಿದೆ: ಶಿಕ್ಷಕಿ ತ್ರಿವೇಣಿ ರಮೇಶ್

ಬಂಟ್ವಾಳ, ಜುಲೈ 16: “ಶ್ರೀ ನಾರಾಯಣಗುರುಗಳ ಸಂದೇಶಗಳು ಇಂದಿನ ಸಮಾಜ ಮತ್ತು ಜೀವನ ಮೌಲ್ಯಗಳಿಗೆ ಅತ್ಯಂತ ಪ್ರಸ್ತುತವಾಗಿವೆ. ಸಮಾನತೆ, ಮಾನವೀಯತೆ, ಶಿಕ್ಷಣ ಹಾಗೂ ಸೌಹಾರ್ದತೆಯ ಕುರಿತು ಗುರುದೇವರು ನೀಡಿದ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ,” ಎಂದು ಶಿಕ್ಷಕಿ ತ್ರಿವೇಣಿ ರಮೇಶ್ ಹೇಳಿದರು. ಅವರು ದಿನಾಂಕ 16-07-2026 ರಂದು ನರಹರಿನಗರ, ಕಲ್ಲಡ್ಕದ ಶೇಖರ ಪೂಜಾರಿ ಅವರ ನಿವಾಸದಲ್ಲಿ ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಲಾದ ಗುರುತತ್ವವಾಹಿನಿ ಮಾಲಿಕೆ–71ರ ಭಜನಾ […]

Read More

ಗುರು ಸತ್ಸಂಗ ಕಾರ್ಯಕ್ರಮ

ಉಡುಪಿ, ಜು. 16: ಯುವ ವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ಗುರು ಸತ್ಸಂಗ ಕಾರ್ಯಕ್ರಮವು ಜುಲೈ 16ರಂದು ಗುರುವಾರ ಸಂಜೆ ಬಿಂದಿಯವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಮನೆಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗುರು ಸತ್ಸಂಗ ಹಾಗೂ ಭಜನಾ ಕಾರ್ಯಕ್ರಮ ಭಕ್ತಿಪೂರ್ವಕವಾಗಿ ನೆರವೇರಿತು. ಮುಖ್ಯೋಪಾಧ್ಯಾಯರು ಹಾಗೂ ಕಾರ್ಯಕ್ರಮದ ನಿರೂಪಕರಾದ ರಘುರಾಮ್ ಕೋಟ್ಯಾನ್ ಅವರು ಗುರು ಸಂದೇಶ ನೀಡಿ, ಯುವ ವಾಹಿನಿಯು ಯುವಜನತೆಗೆ ಪ್ರೇರಣೆಯಾಗುವ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯವಾಗಿದ್ದು, ಸಮಾಜಕ್ಕೆ […]

Read More

ಪ್ರಕೃತಿ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ: ದಿನೇಶ್ ಸುವರ್ಣ ರಾಯಿ

ಕಲ್ಲಡ್ಕ, ಜುಲೈ 9: “ಪ್ರಕೃತಿಯ ನಾಶ ಜಗತ್ತಿನ ಸರ್ವನಾಶ” ಎಂಬುದು ಬ್ರಹ್ಮಶ್ರೀ ನಾರಾಯಣ ಗುರುಗಳ ಪರಿಸರ ಸಂರಕ್ಷಣೆಯ ಸಂದೇಶದ ಸಾರವಾಗಿದ್ದು, ಪ್ರಕೃತಿಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಹೇಳಿದರು. ಅವರು ಜುಲೈ 9ರಂದು ಯುವವಾಹಿನಿ (ರಿ.) ಬಂಟ್ವಾಳ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ‘ಗುರುತತ್ವವಾಹಿನಿ’ 70ನೇ ಮಾಲಿಕೆ ಕಾರ್ಯಕ್ರಮದಲ್ಲಿ, ವೀರಕಂಭ ಗ್ರಾಮದ ಗೋಳಿಮಾರು ಜನಾರ್ದನ ಪೂಜಾರಿಯವರ ನೂತನ ಗೃಹ “ಬ್ರಹ್ಮಶ್ರೀ” ನಿವಾಸದಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು. […]

Read More

ಗುರು ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಮೋಹನ್ ಮಾಡೂರು

ಕೊಲ್ಯ, ಜುಲೈ 9: ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಶ್ರೀ ದುರ್ಗಾಪರಮೇಶ್ವರ ದೇವಸ್ಥಾನ, ಕುಂಪಲದಲ್ಲಿ ಗುರುವಾರ ಸಂಜೆ ನಡೆದ “ಗುರು ಆರಾಧನೆ – ಗುರು ಸಂದೇಶ” ಕಾರ್ಯಕ್ರಮವು ಭಕ್ತಿಭಾವದಿಂದ ಹಾಗೂ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಭವಾನಿ ಶಂಕರ್ ದೀಪ ಪ್ರಜ್ವಲನೆಗೈದು ಉದ್ಘಾಟಿಸಿದರು. ಬಳಿಕ ಯುವವಾಹಿನಿ ಘಟಕದ ಸದಸ್ಯರು ಹಾಗೂ ಕ್ಷೇತ್ರದ ಭಕ್ತರಿಂದ ಸುಮಧುರ ಗುರು ಭಜನಾ ಸಂಕೀರ್ತನೆ ನಡೆಯಿತು. ಭಜನೆಯ ನಂತರ ಕ್ಷೇತ್ರದ ಪ್ರಧಾನ ದೇವರಿಗೆ ಮಹಾಪೂಜೆ ನೆರವೇರಿಸಿ, ಶ್ರೀ ನಾರಾಯಣ […]

Read More

ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಕುಟುಂಬ ಸಮ್ಮಿಲನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಘಟಕದ ಕೋಶಾಧಿಕಾರಿ ಹರೀಶ್ ದೋಳ ಅವರ ನಿವಾಸದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಘಟಕದ ಸದಸ್ಯರು ಹಾಗೂ ಅವರ ಕುಟುಂಬದವರಿಗಾಗಿ ವಿವಿಧ ಮೋಜಿನ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಟುಂಬ ಸದಸ್ಯರ ಪರಸ್ಪರ ಒಡನಾಟ ಮತ್ತು ಸೌಹಾರ್ದತೆಯನ್ನು ವೃದ್ಧಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ […]

Read More

ಶಿವಗಿರಿ ಅಧ್ಯಯನ ಪ್ರವಾಸ

ಮಂಗಳೂರು : ಗುರುಗಳ ಆದರ್ಶಗಳನ್ನು ಅರಿಯಲು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೇತೃತ್ವದಲ್ಲಿ ಮೇ 26ರಿಂದ 29ರವರೆಗೆ ಕೇರಳದ ಶಿವಗಿರಿ, ಮರತ್ವಮಲೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ವಿವಿಧ ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು. ಈ ಅಧ್ಯಯನ ಪ್ರವಾಸದ ಮುಖ್ಯ ಉದ್ದೇಶ ಬ್ರಹ್ಮಶ್ರೀ ನಾರಾಯಣ ಗುರುಗಳ ದಿವ್ಯ ಜೀವನ, ಶ್ರೇಷ್ಠ ತತ್ವದರ್ಶನಗಳು, ಸಾಮಾಜಿಕ ಸುಧಾರಣಾ ಕ್ರಾಂತಿ ಹಾಗೂ ಅವರು ವಿಶ್ವಕ್ಕೆ ನೀಡಿದ ಮಾನವತಾವಾದಿ ಸಂದೇಶಗಳ ಕುರಿತು ಆಳವಾದ ಅಧ್ಯಯನ ನಡೆಸುವುದಾಗಿತ್ತು. […]

Read More

ಅಸ್ಪೃಶ್ಯತೆ, ಅಂಧಶ್ರದ್ಧೆಯ ವಿರುದ್ಧದ ತ್ರಿವಿಧ ಕ್ರಾಂತಿ ಇಂದಿಗೂ ಪ್ರಸ್ತುತ: ದಿನೇಶ್ ಸುವರ್ಣ ರಾಯಿ

ಕಲ್ಲಡ್ಕ: “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಸಂದೇಶದ ಮೂಲಕ ಸಂಸ್ಕಾರಯುತ ಶಿಕ್ಷಣ ಹಾಗೂ ಸಂಘಟಿತ ಸಮಾಜ ನಿರ್ಮಾಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಗಳು ಇಂದಿಗೂ ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿವೆ ಎಂದು ಯುವವಾಹಿನಿ ಮಾಜಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಅಭಿಪ್ರಾಯಪಟ್ಟರು. ಅವರು ಕಲ್ಲಡ್ಕ ಪೂರ್ಲಿಪಾಡಿಯ ಚಂದ್ರಶೇಖರ್ ಸಾಲಿಯಾನ್ ಅವರ ನಿವಾಸದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ–69’ ಕಾರ್ಯಕ್ರಮದಲ್ಲಿ ಗುರುಸಂದೇಶ ನೀಡುತ್ತಾ ಮಾತನಾಡಿದರು.ಬ್ರಹ್ಮಶ್ರೀ ನಾರಾಯಣ ಗುರುಗಳು ಆಧ್ಯಾತ್ಮಿಕ […]

Read More

ಗುರು ಸತ್ಸಂಗ ಕಾರ್ಯಕ್ರಮ

ಉಡುಪಿ : ಯುವವಾಹಿನಿ (ರಿ ) ಉಡುಪಿ ಘಟಕದ ಗುರು ಸತ್ಸಂಗ ಕಾರ್ಯ ಕ್ರಮವು ಘಟಕದ ಜೊತೆಕಾರ್ಯದರ್ಶಿ ಸಚೇಂದ್ರ ಅಂಬಾಗಿಲುರವರ ಅಥಿತ್ಯದಲ್ಲಿ ಅವರ ಮನೆಯಲ್ಲಿ ಅವರ ಮನೆಯವರು ಸೇರಿ ದೀಪ ಬೆಳಗಿಸಿ ಪ್ರಾರಂಭಗೊಂಡಿತು. ಘಟಕದ ಸದಸ್ಯರು ಸೇರಿ ಭಜನಾ ಕಾರ್ಯಕ್ರಮ ನೆರವೇರಿಸಿದರು. ಮಾಜಿ ಅಧ್ಯಕ್ಷರಾದ ಭಾಸ್ಕರ್ ಸುವರ್ಣರವರು ಗುರುಗಳಿಗೆ ಮಹಾಪೂಜೆ ನೆರವೇರಿಸಿ. ಆಗಮಿಸಿದ ಎಲ್ಲರಿಗೂ ಹಾಗೂ ಮನೆಯವರಿಗೂ ಗುರುಗಳು ಒಳಿತು ಮಾಡುವಂತೆ ಪ್ರಾರ್ಥಿಸಿ ಮಹಾ ಪ್ರಸಾದವನ್ನು ನೀಡಿದರು.ಗುರು ಸಂದೇಶವನ್ನು ಖ್ಯಾತ ನಿರೂಪಕರಾದ ರಾಜೇಂದ್ರ ಪ್ರಸಾದ್ ಎಕ್ಕರ್ ರವರು […]

Read More

ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿ

ಮಂಗಳೂರು: ಯುವವಾಹಿನಿ ಮಂಗಳೂರು ಘಟಕದ ಸಂಯೋಜನೆಯಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 18-05-2026 ರಂದು ಸಂಜೆ 5.30 ಗಂಟೆಗೆ ಭಕ್ತಿಭಾವದಿಂದ ನೆರವೇರಿತು. ಈ ಭಜನಾ ಕಾರ್ಯಕ್ರಮವು ಬಿಲ್ಲವ ಮಹಿಳಾ ಸಂಘ SNDP ಕೋಡಿಕಲ್ ಇವರ ಸಹಯೋಗದೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಘಟಕದ ಅಧ್ಯಕ್ಷರು ಹಾಗೂ ಮಹಿಳಾ ಸಂಘಟನಾ ನಿರ್ದೇಶಕಿ ಜಯಂತಿ ಕೋಟ್ಯಾನ್ ಉಪಸ್ಥಿತರಿದ್ದು, ಭಜನಾ ಸೇವೆಗೆ ವಿಶೇಷ ಮೆರುಗು ನೀಡಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!