Yuvavahini

ನಾರಾಯಣ ಗುರು

ಯುವ ಜನತೆಗೆ ನಾರಾಯಣಗುರುಗಳ ಚಿಂತನೆ ಪ್ರೇರಣೆಯಾಗಲಿ : ಮಟ್ಟು

ದೇಶವನ್ನು ಕಾಡುತ್ತಿರುವ ನಿರುದ್ಯೋಗ, ಬಡತನ, ಕಂದಾಚಾರ, ಮೂಢನಂಬಿಕೆ, ಹಾಗೂ ದುಂದುವೆಚ್ಚದ ಸಮಾರಂಭ ಮುಂತಾದ ಸಮಸ್ಯೆಗಳಿಂದ ಮುಕ್ತವಾದ ಸಮಾಜವೊಂದರ ನಿರ್ಮಾಣದ ಗುರುತರ ಹೊಣೆಗಾರಿಕೆ ಯುವ ಸಮುದಾಯದ ಮೇಲಿದ್ದು ಈ ಕಾರ್ಯಕ್ಕೆ ಶ್ರೀ ನಾರಾಯಣಗುರುಗಳ ಚಿಂತನೆಗಳನ್ನು ಪ್ರೇರಣೆಯಾಗಿ ಸ್ವೀಕರಿಸಿಕೊಂಡು ಕಾರ್ಯೋನ್ಮುಖರಾಗಬೇಕು ಎಂದು ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ಅವರು ಹೇಳಿದರು ನಾರಾಯಣಗುರು ವಿಚಾರ ಕಮ್ಮಟ (ನಾವಿಕ) ಮಂಗಳೂರು ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನಾಚರಣೆ ಅಂಗವಾಗಿ ಯುವಜನರ ಗುರು ಮತ್ತು ಗುರಿ – ನಾರಾಯಣಗುರು ವಿಷಯದ ಕುರಿತು […]

Read More

ತುಳುನಾಡ : ಆರಾಧನೆ-ಆಶಯ-ಸ್ವರೂಪ

ಆಧುನೀಕರಣ ಪ್ರಭಾವದಿಂದ ತಂತ್ರಜ್ಞಾನದ ಒಳಿತುಗಳಂತೆ ಕೆಡುಕುಗಳು ಉಂಟಾಗಿ ಯುವ ಸಮುದಾಯದ ಮೇಲೆ ಅದರ ಪರಿಣಾಮ ಪ್ರಖರವಾಗಿದೆ. ಹೆತ್ತವರು ಉತ್ತಮವಾಗಿ ಶಿಶು ಆರೈಕೆಯೊಂದಿಗೆ ಮಕ್ಕಳ ಮೇಲೆ ಯಾವುದೇ ಕೆಟ್ಟ ಪ್ರಭಾವ ಆಗದಂತೆ ನೋಡಬೇಕಾಗಿದೆ. ಈ ನಿಟ್ಟಿನಲ್ಲಿ ನಾರಾಯಣಗುರುವರ್ಯರಂತ ಮಹನೀಯರ ತತ್ವಾದರ್ಶಗಳನ್ನು ತಿಳಿಸಬೇಕಾದ ಅನಿವಾರ್ಯತೆ ಇದೆ ಎಂದು ಕೇಂಜ, ಕುತ್ಯಾರು ಬ್ರಹ್ಮಬೈದರ್ಕಳ ಗರಡಿಯ ಗಡಿ ಪ್ರಧಾನರಾದ ಬಗ್ಗ ಪೂಜಾರಿ ಉಮೇಶ್ ಕೋಟ್ಯಾನ್ ತಿಳಿಸಿದರು. ಅವರು ಪಡುಬಿದ್ರಿ ನಾರಾಯಣಗುರು ಸಭಾಗೃಹದಲ್ಲಿ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಮತ್ತು ಯುವವಾಹಿನಿ ಪಡುಬಿದ್ರಿ […]

Read More

ಸದೃಡ ಸಮಾಜ ನಿರ್ಮಿಸಿದ ನಾರಾಯಣಗುರುಗಳು

ಬ್ರಹ್ಮಶ್ರೀ ನಾರಾಯಣಗುರುಗಳು ತಾನು ಸಮಾಜಕ್ಕೆ ನೀಡಿದ್ದ ಪ್ರತಿ ಸಂದೇಶವನ್ನು ತನ್ನ ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಮಾನವತಾವಾದದ ಪ್ರತಿಪಾದಕರಾಗಿದ್ದರು, ಮನುಕುಲಕ್ಕೆ ಜ್ಞಾನದ ಬೆಳಕು ತೋರಿದ ಗುರುಗಳ ಸಂದೇಶದ ಅನುಷ್ಠಾನದ ಜತೆ ಅವರು ತೋರಿಸಿದ ದಾರಿಯಲ್ಲಿ ಸಂಘಟಿತ ಸಮಾಜ ನಿರ್ಮಾಣಕ್ಕೆ ಯತ್ನಿಸಬೇಕು ಎಂದು ಅಗತ್ತಾಡಿ ಗರೋಡಿಯ ಶೈಲು ಬಿರ್ವ ತಿಳಿಸಿದರು ಅವರು ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜಯಂತಿ ಪ್ರಯುಕ್ತ ಯುವವಾಹಿನಿ(ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 10.09.2017 ರಂದು ಇಡ್ಯಾ ಸುರತ್ಕಲ್ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ […]

Read More

ವಿದ್ಯಾರ್ಥಿಗಳಿಗೆ ಸ್ಪರ್ಧಾ ಕಾರ್ಯಕ್ರಮ

ಯವವಾಹಿನಿಯ (ರಿ) ಕಂಕನಾಡಿ ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163ನೇ ಜನ್ಮದಿನದ ಪ್ರಯುಕ್ತ ದಿನಾಂಕ 10.09.2017ರಂದು ಗೋರಿಗುಡ್ಡೆ ಕಿಟ್ಟೆಲ್ ಮೆಮೋರಿಯಲ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ರಾಜೀವ ಪೂಜಾರಿ, ಉದಯಶಂಕರ್ ಮತ್ತು ರೇವತಿ ಟೀಚರ್ ಇವರು ತೀರ್ಪುಗಾರರಾಗಿ ಭಾಗವಹಿಸಿದರು ಹಾಗೂ ಈ ಸ್ಪರ್ಧೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗವಹಿಸಿದ್ದರು. ಹಾಗೂ ಯುವವಾಹಿನಿ ಕಂಕನಾಡಿ ಘಟಕದ ಸದಸ್ಯರಿಗೆ ಅಟೋಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಯುವವಾಹಿನಿ ಕಂಕನಾಡಿ […]

Read More

ಶಿಕ್ಷಣದ ಮೂಲಕ ಸಮಾನತೆ ಸಾರಿದ ಗುರುವರ್ಯರು – ಮಾಂಬಾಡಿ

  ಶಿಕ್ಷಣದ ಮೂಲಕ ಸಮಾನತೆ ಸಾರಿದ ಗುರುವರ್ಯರ ಸಂದೇಶ ಇಂದು ಪ್ರಸ್ತುತವಾಗಿದೆ. ಅವರ ಸಂದೇಶವನ್ನು ನಮ್ಮ ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕಾಗಿದೆ ಎಂದು ಬಂಟ್ವಾಳ ನ್ಯೂಸ್ ಸಂಪಾದಕ ಹರೀಶ್ ಮಾಂಬಾಡಿ ತಿಳಿಸಿದರು.ಅವರು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ದಿನಾಂಕ 06.09.2017 ನೇ ಬುಧವಾರದಂದು ಬಿ.ಸಿ.ರೋಡಿನ ಸಮಾಜ ಕಲ್ಯಾಣ ಇಲಾಖಾ ವಸತಿ ಶಾಲೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮ ದಿನಾಚರಣೆಯನ್ನು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ […]

Read More

ಸುಳ್ಯದಲ್ಲಿ ಗುರುವರ್ಯರ 163 ನೇ ಜನ್ಮದಿನಾಚರಣೆ

ಕರ್ನಾಟಕ ಸರಕಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ , ಯುವವಾಹಿನಿ (ರಿ) ಸುಳ್ಯ ಘಟಕ,ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿ ಬಿಲ್ಲವ ಸಂಘ (ರಿ) ಸುಳ್ಯ ,ಬಿಲ್ಲವ ಮಹಿಳಾ ಘಟಕ ಸುಳ್ಯ ಇದರ ಜಂಟಿ ಸಾರಥ್ಯದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸ್ವಾಮಿಯವರ 163ನೇ ಜಯಂತಿಯನ್ನು 6-9-2017 ನೇ ಬುಧವಾರ ಬೆಳಿಗ್ಗೆ , ಸುಳ್ಯ ತಾಲೂಕು ಪಂಚಾಯತ್ ಸಂಭಾಗಣ ,ಜೂನಿಯರ್‌ ಕಾಲೇಜು ರಸ್ತೆ ಇಲ್ಲಿ ಆಚರಿಸಲಾಯಿತು . ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ದೀಪ […]

Read More

ಬೃಹತ್ ಗುರುಸಂದೇಶ ಜಾಥಾ

ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮದಿನಾಚರಣೆ ಪ್ರಯುಕ್ತ ಮಂಗಳೂರು ಯುವವಾಹಿನಿ ಸಭಾಂಗಣದಿಂದ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಬೃಹತ್ ಗುರುಸಂದೇಶ ಜಾಥಾ ಮೆರವಣಿಗೆ ಜರುಗಿತು.ಮಂಗಳೂರು ನಗರದಲ್ಲಿ ಆಕರ್ಷಕವಾಗಿ ಸಾಗಿದ ಮೆರವಣಿಗೆ ಹಬ್ಬದ ವಾತಾವರಣ ಸೃಷ್ಟಿಸಿತು.ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎ.ಸಿ‌.ಭಂಡಾರಿ ಜಾಥಾ ಉದ್ಘಾಟಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಯುವವಾಹಿನಿ ಮಂಗಳೂರು ಘಟಕದ ಅಧ್ಯಕ್ಷರಾದ ರವೀಶ್ ಕುಮಾರ್, ಉಪಮೇಯರ್ ರಜನೀಶ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಎಚ್.ಎಸ್.ಸಾಯಿರಾಂ, […]

Read More

ವಿಶೇಷ ಚೇತನ ಮಕ್ಕಳ ಜೊತೆ ಗುರುಜಯಂತಿ

ಬ್ರಹ್ಮಶ್ರೀ ನಾರಾಯಣಗುರುವರ್ಯರ 163 ನೇ ಜನ್ಮದಿನಾಚರಣೆ ಪ್ರಯುಕ್ತ ಸಾನಿದ್ಯ ವಿಶೇಷ ಚೇತನ ಮಕ್ಜಳ ಜೊತೆ ಗುರುವರ್ಯರ ಜನ್ಮದಿನಾಚರಣೆ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.ಸಾನಿದ್ಯದಲ್ಲಿರುವ 160 ಮಕ್ಕಳ ಯೋಗಕ್ಷೇಮ ವಿಚಾರಿಸಿದ ಕೂಳೂರು ಯುವವಾಹಿನಿ ಸದಸ್ಯರು ಅವರೊಂದಿಗೆ ಮಕ್ಜಳಂತೆ ಬೆರೆತರು.ಮಕ್ಕಳಿಗೆ ಸಿಹಿತಿಂಡಿ ಹಾಗೂ ಊಟೋಪಚಾರದ ವ್ಯವಸ್ಥೆ ಮಾಡಲಾಯಿತು.ಈ ಸಂದರ್ಭದಲ್ಲಿ ಕುಳೂರು ಯುವವಾಹಿನಿ ಅಧ್ಯಕ್ಷರಾದ ಪುಷ್ಪರಾಜ್, ಕಾರ್ಯದರ್ಶಿ ವಿನೀತ್, ನಿಕಟ ಪೂರ್ವ ಅಧ್ಯಕ್ಷರಾದ ಸುಜಿತ್ ರಾಜ್, ಯುವವಾಹಿನಿ ಕೇಂದ್ರ ಸಮಿತಿಯ ಸ್ಥಾಪಕ ಅಧ್ಯಕ್ಷರಾದ ಸಂಜೀವ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು

Read More

ಗುರುವಂದನೆ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರುಗಳ 163 ನೇ ಜನ್ಮದಿನಾಚರಣೆ ಪ್ರಯುಕ್ತ ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ದಿನಾಂಕ 06.09.2017ರಂದು ಗುರುವಂದನೆ ಕಾರ್ಯಕ್ರಮ ಜರಗಿತು. ಮಂಗಳೂರಿನ ಬೆಸೆಂಟ್ ಮಹಿಳಾ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪುಪ್ಪಲತಾ ಹಾಗೂ ಸಿ.ಇ.ಒ ಪ್ರಭಾ ಇವರಿಗೆ ಗುರುವಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾಧ್ಯಕ್ಷರಾದ ರಶ್ಮಿ ಚಂದ್ರಶೇಖರ್, ನಿಕಟ ಪೂರ್ವ ಅಧ್ಯಕ್ಷರಾದ ವಿದ್ಯಾ ರಾಕೇಶ್ ಮತ್ತಿತರರು ಉಪಸ್ಥಿತರಿದ್ದರು ಅಂದು ಬೆಳಗ್ಗೆ […]

Read More

ಪಣಂಬೂರು ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಪಣಂಬೂರು ಘಟಕದ ಸದಸ್ಯರು ದಿನಾಂಕ 22.04.2017 ರಿಂದ. 24.04.2017 ರ ವರಗೆ  ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು 50 ಸದಸ್ಯರು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು  

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!