Yuvavahini

ನಾರಾಯಣ ಗುರು

ಯುವವಾಹಿನಿ ಕೊಲ್ಯ ಘಟಕದ ವತಿಯಿಂದ ಶ್ರದ್ಧಾಭಕ್ತಿಯ ‘ಗುರು ಪೂಜೆ’

ಕೊಲ್ಯ : ಬ್ರಹ್ಮಶ್ರೀ ನಾರಾಯಣಗುರು ಧ್ಯಾನ ಮಂದಿರದಲ್ಲಿ, ಯುವವಾಹಿನಿ (ರಿ.) ಕೊಲ್ಯ ಘಟಕದ ವತಿಯಿಂದ ವಿಶೇಷ ‘ಗುರು ಪೂಜೆ’ ಹಾಗೂ ಭಜನಾ ಕಾರ್ಯಕ್ರಮವು ಅತ್ಯಂತ ಶ್ರದ್ಧಾಭಕ್ತಿ ಮತ್ತು ಸಂಭ್ರಮದೊಂದಿಗೆ 17.05.2026ರಂದು ಜರುಗಿತು. ಘಟಕದ ನೇತೃತ್ವದಲ್ಲಿ ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡ ಸತತ ಎರಡನೇ ವರ್ಷದ “ಶಿವಗಿರಿ ಯಾತ್ರೆ” ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ, ಕೊಲ್ಯ ಘಟಕದ ಆತಿಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ಮೂಡಿಬಂದ ಮಹಿಳಾ ಸಬಲೀಕರಣದ ಮಹತ್ವಾಕಾಂಕ್ಷಿ “ಸಖೀ ಸಂವಾದ – 2026” ಕಾರ್ಯಕ್ರಮಗಳ ಯಶಸ್ಸಿನ ಕೃತಜ್ಞತಾ ರೂಪವಾಗಿ […]

Read More

ಶ್ರದ್ಧಾ-ಭಕ್ತಿಯ ‘ಮನೆ ಮನೆ ಭಜನಾ ಸಂಕೀರ್ತನೆ’

ಬಜಪೆ: ಯುವವಾಹಿನಿ ಬಜಪೆ ಘಟಕದ ವತಿಯಿಂದ ಮೇ ತಿಂಗಳ ‘ಮನೆ ಮನೆ ಭಜನಾ ಸಂಕೀರ್ತನೆ’ ಕಾರ್ಯಕ್ರಮವು ದಿನಾಂಕ 17.05.2026 ರಂದು ಸಂಜೆ 6.00 ರಿಂದ 7.30 ರವರೆಗೆ ಅತ್ಯಂತ ಶ್ರದ್ಧಾ-ಭಕ್ತಿಭಾವದಿಂದ ಜರಗಿತು. ಘಟಕದ ಮಾಜಿ ಅಧ್ಯಕ್ಷರಾದ ದೇವರಾಜ್ ಅಮೀನ್ ಹಾಗೂ ಕಾರ್ಯದರ್ಶಿ ಸುಚಿತ ದೇವರಾಜ್ ದಂಪತಿಗಳ ನಿವಾಸವಾದ ಬಜಪೆ-ಕಟೀಲ್ ರಸ್ತೆಯ “ಶಿವಗಿರಿ” ಯಲ್ಲಿ ಈ ಭಕ್ತಿಪೂರ್ವಕ ಭಜನಾ ಸೇವೆ ನೆರವೇರಿತು. ದೇವರಾಜ್ ಅಮೀನ್ ಅವರ ತಂದೆ-ತಾಯಿಯವರ 45ನೇ ವಿವಾಹ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ ಈ ವಿಶೇಷ ಭಜನಾ […]

Read More

‘ಶಿವಗಿರಿ ಕ್ಷೇತ್ರ ದರ್ಶನ’

ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ: 14-05-2026 ರಿಂದ 16-05-2026 ರವರೆಗೆ ಆಯೋಜಿಸಲಾಗಿದ್ದ ಮೂರು ದಿನಗಳ ‘ಶಿವಗಿರಿ ಯಾತ್ರೆ’ಯು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಆಧ್ಯಾತ್ಮಿಕ ಅನುಭೂತಿ ನೀಡಿದ ಯಾತ್ರೆ : ಘಟಕದ ಪ್ರವಾಸ ಸಂಚಾಲಕರಾದ ಸದಾನಂದ ಪೂಜಾರಿ ಕುಳಾಯಿ ಅವರು ಯಾತ್ರಾರ್ಥಿಗಳಿಗೆ ಶಿವಗಿರಿ ಕ್ಷೇತ್ರದ ಇತಿಹಾಸ, ಮಹಿಮೆ ಮತ್ತು ಮಹತ್ವವನ್ನು ಮನವರಿಕೆ ಮಾಡಿಕೊಡುತ್ತಾ ಸುಸೂತ್ರವಾಗಿ ಕ್ಷೇತ್ರ ದರ್ಶನ ಮಾಡಿಸಿದರು. ಈ ಆಧ್ಯಾತ್ಮಿಕ ಪ್ರವಾಸದಲ್ಲಿ ಒಟ್ಟು 53 ಹಿರಿಯರು ಹಾಗೂ 7 ಮಕ್ಕಳು ಸೇರಿದಂತೆ […]

Read More

ಗುರು ಸತ್ಸಂಗ ಹಾಗೂ ಬನ್ನಂಜೆ ಬಾಬು ಅಮೀನ್ ಪ್ರಶಸ್ತಿ ಪ್ರದಾನ ಆಮಂತ್ರಣ ಬಿಡುಗಡೆ

ಉಡುಪಿ: ಯುವವಾಹಿನಿ (ರಿ.) ಉಡುಪಿ ಘಟಕದ ವತಿಯಿಂದ ‘ಗುರು ಸತ್ಸಂಗ’ ಕಾರ್ಯಕ್ರಮವು ಬಲಯಿಪಾದೆಯ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ.) ಯಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರಾದ ಸುಪ್ರೀತ್ ಅವರ ನೇತೃತ್ವದಲ್ಲಿ ಅತ್ಯಂತ ಶ್ರದ್ಧಾಭಕ್ತಿಗಳಿಂದ ಜರುಗಿತು. ದೀಪ ಪ್ರಜ್ವಲನೆ ಮತ್ತು ಗುರು ಸಂದೇಶ:ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ವಿನೋದ್ ಮಂಚಿ ಅವರು ಜಂಟಿಯಾಗಿ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಭಕ್ತಿಪೂರ್ವಕ ‘ಗುರು ಸತ್ಸಂಗ […]

Read More

ಶಿವಗಿರಿ ಕ್ಷೇತ್ರ ದರ್ಶನ ಯಾತ್ರೆ

ಮಂಗಳೂರು : ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 04-05-2026 ರಿಂದ 07-05-2026 ರವರೆಗೆ ಆಯೋಜಿಸಲಾದ “ಶಿವಗಿರಿ ಕ್ಷೇತ್ರ ದರ್ಶನ ಯಾತ್ರೆ” ಭಕ್ತಿಭಾವದಿಂದ ಯಶಸ್ವಿಯಾಗಿ ನಡೆಯಿತು. ಈ ಯಾತ್ರೆಯಲ್ಲಿ ಒಟ್ಟು 35 ಮಂದಿ ಸದಸ್ಯರು ಭಾಗವಹಿಸಿದ್ದರು. ದಿನಾಂಕ 04-05-2026 ರಂದು ಸಂಜೆ 5:40ಕ್ಕೆ ಮಂಗಳೂರು ರೈಲ್ವೆ ನಿಲ್ದಾಣದಿಂದ ಭಕ್ತಾದಿಗಳು ರೈಲಿನಲ್ಲಿ ಪ್ರಯಾಣ ಆರಂಭಿಸಿದರು. ಮಹಿಳಾ ಘಟಕದ ಅಧ್ಯಕ್ಷೆ ಕಸ್ತೂರಿ ಮಹೇಶ್, ಕಾರ್ಯದರ್ಶಿ ಸೋನಿಯಾ ರಾಜ್, ಉಪಾಧ್ಯಕ್ಷೆ ದೀಪಿಕಾ ಮನೋಜ್ ಹಾಗೂ ಕೋಶಾಧಿಕಾರಿ ಜಯಲಕ್ಷ್ಮಿ ಉಪಸ್ಥಿತರಿದ್ದರು. ಕೇಂದ್ರ […]

Read More

ಶಿವಗಿರಿ ಕ್ಷೇತ್ರ ದರ್ಶನ

ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ ಅಧ್ಯಕ್ಷರಾದ ನಿತಿನ್ ಕರ್ಕೇರ ಇವರ ನೇತೃತ್ವದಲ್ಲಿ , ಕೇಂದ್ರ ಸಮಿತಿಯ ಮಾಜಿ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರು ಹಾಗೂ ಘಟಕದ ಮಾಜಿ ಅಧ್ಯಕ್ಷರೂ ಆಗಿರುವ ಮೋಹನ್ ಮಾಡೂರ್ ಇವರ ಮಾರ್ಗದರ್ಶನದಡಿಯಲ್ಲಿ ಘಟಕದ ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕಿ ಅಶ್ವಿತಾ ಹರೀಶ್ ಕುಂಪಲ ಅವರ ಸಂಘಟನೆಯೊಂದಿಗೆ ಒಟ್ಟು 54 ಯಾತ್ರಾರ್ಥಿಗಳ ತಂಡ ದಿನಾಂಕ 30.04.2026ನೇ ಗುರುವಾರ ಸಂಜೆ 5.20ಕ್ಕೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ಶಿವಗಿರಿ ಕ್ಷೇತ್ರಕ್ಕೆ ಪ್ರಯಾಣ ಆರಂಭಿಸಿತು. […]

Read More

ಶಿವಗಿರಿ ಯಾತ್ರೆ

ಸುಳ್ಯ : ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಶಿವಗಿರಿ ಹಾಗೂ ಇತರ ಪುಣ್ಯಕ್ಷೇತ್ರಗಳಿಗೆ ಎರಡು ದಿನಗಳ ಯಾತ್ರೆ ಆಯೋಜಿಸಲಾಯಿತು. ಯಾತ್ರೆಯ ಮೊದಲ ದಿನ ಬ್ರಹ್ಮಶ್ರೀ ನಾರಾಯಣ ಗುರುಗಳು ಸ್ಥಾಪಿಸಿದ ಶಾರದಾ ಪೀಠ, ತಪೋಭೂಮಿ ಸಮಾಧಿ ಸ್ಥಳ, ಗುರುಗಳು ಜನಿಸಿದ ಚೆಂಬಳಂತಿ, ಕುನ್ನುಂಪಾರೆ ಬಾಲಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಗುರುಗಳು ಪ್ರಥಮವಾಗಿ ಪ್ರತಿಷ್ಠಾಪಿಸಿದ ಅರಿವಿಪುರ ಶಿವ ದೇವಸ್ಥಾನಗಳಿಗೆ ಭೇಟಿ ನೀಡಲಾಯಿತು. ಬಳಿಕ ಕನ್ಯಾಕುಮಾರಿ ದೇವಸ್ಥಾನಕ್ಕೂ ಭೇಟಿ ನೀಡಲಾಯಿತು. ಮುಂದುವರಿದಂತೆ, ಗುರುಗಳು ಸುಮಾರು ಆರು ವರ್ಷ ತಪಸ್ಸು ಮಾಡಿ ಸಿದ್ಧಿ […]

Read More

ಗುರುತತ್ವ ಸಾರಿದ ಗುರುಸ್ಪೂರ್ತಿ

ಸುಳ್ಯ: ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ಮೂರನೇ ಗುರುಸ್ಫೂರ್ತಿ ಕಾರ್ಯಕ್ರಮವನ್ನು ಯುವವಾಹಿನಿ ಸುಳ್ಯ ಘಟಕದ ಕೋಶಾಧಿಕಾರಿಯಾದ ಹರೀಶ್ ದೋಳ ಅವರ ಮನೆಯಲ್ಲಿ ದಿನಾಂಕ 22.03.2026 ಭಕ್ತಿಭಾವದಿಂದ ನೆರವೇರಿಸಲಾಯಿತು. ಕಾರ್ಯಕ್ರಮವನ್ನು ಮನೆಯ ಯಜಮಾನರಾದ ಹೊನ್ನಪ್ಪ ಪೂಜಾರಿ ದಂಪತಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಘಟಕದ ಅಧ್ಯಕ್ಷ ಮಹೇಶ್ ಕಲ್ಲಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜೇಶ್ ರೆಂಜಾಳ ಅವರು ಗುರುಸ್ಫೂರ್ತಿ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು. ಕೇಂದ್ರ ಸಮಿತಿಯ ನಾರಾಯಣ ಗುರು ತತ್ವ ಪ್ರಚಾರ ಅನುಷ್ಟಾನ […]

Read More

ಬಳ್ಪದಲ್ಲಿ ‘ಗುರುಸ್ಫೂರ್ತಿ’ ಸಂಪನ್ನ

ಕಡಬ: ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಆದರ್ಶಗಳನ್ನು ಮನೆಮನಕ್ಕೆ ತಲುಪಿಸುವ ನಿಟ್ಟಿನಲ್ಲಿ ಯುವವಾಹಿನಿ (ರಿ.) ಕಡಬ ಘಟಕದ ಆಶ್ರಯದಲ್ಲಿ ಎರಡನೇ ಹಂತದ ‘ಗುರುಸ್ಫೂರ್ತಿ’ ಕಾರ್ಯಕ್ರಮವು ದಿನಾಂಕ 28-02-2026ರ ಶನಿವಾರದಂದು ಬಳ್ಪದ ತುಳಸಿ ನಾಗೇಶ್ ಪಡ್ಕಿಲಾಯ ಅವರ ನಿವಾಸದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ​ಬಳ್ಪ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷರಾದ ಚಿನ್ನಪ್ಪ ಪೂಜಾರಿ ಕೊರಪ್ಪಣೆ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶಿಕ್ಷಕಿ ರೇಣುಕಾ ಕಣಿಯೂರು ಅವರು […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದರ್ಶನ ಸಮಾನತೆಯ ಸಮಾಜಕ್ಕೆ ಮುನ್ನುಡಿ: ಮಧುಸೂದನ್ ಸುವರ್ಣ

ವಿವೇಕಪುರ (ನರಿಕೊಂಬು): “ವಿದ್ಯೆಯಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಿಷ್ಠರಾಗಿ” ಎಂಬ ಮಂತ್ರದೊಂದಿಗೆ ಸಂಸ್ಕಾರಯುತ ಶಿಕ್ಷಣಕ್ಕೆ ಒತ್ತು ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳು, ಮಾನವ ಕುಲದ ಸಂಘಟನೆಯೇ ಬಲಿಷ್ಠ ಸಮಾಜದ ಅಡಿಪಾಯವೆಂದು ಸಾರಿದರು ಎಂದು ಶಿಕ್ಷಕ ಮಧುಸೂದನ್ ಸುವರ್ಣ ತಿಳಿಸಿದರು. ​ಫೆಬ್ರವರಿ 26ರಂದು ನರಿಕೊಂಬು ಮೊಗರ್ನಾಡು ವಿವೇಕಪುರದ ರಂಜಿತ್ ಪೂಜಾರಿ ಅವರ ‘ಬೃಂದಾವನ’ ನಿವಾಸದಲ್ಲಿ ನಡೆದ ‘ಗುರುತತ್ವವಾಹಿನಿ ಭಜನಾ ಸಂಕೀರ್ತನೆ-68’ ಕಾರ್ಯಕ್ರಮದಲ್ಲಿ ಅವರು ಗುರುಸಂದೇಶ ನೀಡಿದರು. ಆಧ್ಯಾತ್ಮಿಕ ಚಿಂತನೆ, ಸಾಮಾಜಿಕ ಸಮಾನತೆ ಮತ್ತು ಶೈಕ್ಷಣಿಕ ಪ್ರಗತಿಯ ಮೂಲಕ ಸಮಾಜದಲ್ಲಿ ಮಹತ್ತರ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!