Yuvavahini

ಇತ್ತೀಚಿನ ಕಾರ್ಯಕ್ರಮಗಳು

ಯುವವಾಹಿನಿ ಸಾಧನಾ ಶ್ರೀ ಪ್ರಶಸ್ತಿ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ , ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ ಹಾಗೂ ಸಾಧನಾ ಶ್ರೇಷ್ಠ ಪ್ರದಾನ ಮಾಡಲಾಯಿತು. ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ […]

Read More

ಉಪ್ಪಿನಂಗಡಿ ಯುವವಾಹಿನಿ : ಸಂಘಟನೆ ಮತ್ತು ಪರಿಣಾಮಕಾರಿ ನಾಯಕತ್ವ ಕಾರ್ಯಾಗಾರ

ಉಪ್ಪಿನಂಗಡಿ ಯುವವಾಹಿನಿಯ ಮಾಸಿಕ ಸಭೆಯು ದಿನಾಂಕ 09-04-2017 ರಂದು ಉಪ್ಪಿನಂಗಡಿಯ ಸಹಸ್ರ ಕೋಚಿಂಗ್ ಸೆಂಟರ್‌ನಲ್ಲಿ ‌ನಡೆಯಿತು. ಸಭೆಯಲ್ಲಿ ಯುವವಾಹಿನಿಯ ‌ಧ್ಯೇಯೋದ್ದೇಶ ಮತ್ತು ‌‌ಸಂಘಟನೆ ‌ಹಾಗೂ ನಾಯಕತ್ವ ಈ ‌ವಿಚಾರಗಳ ‌ಕುರಿತು ಮಾಹಿತಿ ಕಾರ್ಯಾಗಾರ ಜರುಗಿತು . ಯುವವಾಹಿನಿಯ ದ್ಯೇಯ ಉದ್ದೇಶಗಳು ಹಾಗೂ ನೀತಿ ನಿಬಂಧನೆಗಳ ‌ಕುರಿತು ಯುವವಾಹಿನಿ ‌ಕೇಂದ್ರ ಸಮಿತಿ ‌ಮಾಜಿ ‌ಅಧ್ಯಕ್ಷರಾದ ಡಾ. ಸದಾನಂದ ‌ಕುಂದರ್ ಮಾಹಿತಿ ‌ನೀಡಿದರು. ಸಂಘಟನೆ‌ಯ ‌ಮತ್ತು ನಾಯಕತ್ವದ ‌ಬಗ್ಗೆ ಡಾ.‌ರಾಜರಾಮ್ ‌ತರಬೇತಿ ‌ನೀಡಿದರು. ಸಭೆಯ ‌ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಯುವವಾಹಿನಿಯ ಅಧ್ಯಕ್ಷರಾದ ಅಶೋಕ್ […]

Read More

ಬೆಳ್ತಂಗಡಿ ಯುವವಾಹಿನಿಯಿಂದ ಯುವವಾಹಿನಿ ಟ್ರೋಫಿ ಕ್ರೀಡಾಕೂಟ ಸಂಪನ್ನ

ಸಂಘಟನೆಯ ಮೂಲಕ ಸಮಾಜವನ್ನು ಕಟ್ಟಿ ಯುವಕರನ್ನು ಒಗ್ಗೂಡಿಸುವ ಶ್ರೇಷ್ಠ ಕಾರ್ಯ ಯುವವಾಹಿನಿ ಮಾಡುತ್ತಿದೆ. ಕ್ರೀಡಾಕೂಟದ ಮೂಲಕ ಯುವ ಮನಸ್ಸುಗಳನ್ನು ಬೆಸೆದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕಾರ್ಯವನ್ನು ಯುವವಾಹಿನಿಯಂತಹ ಯುವಕರ ಸಂಘಟನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಮೂಲ್ಕಿ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ ಹೇಳಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ. 09.04.2017 ನೇ ಆದಿತ್ಯವಾರ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಲ್ಲವ ಸಮಾಜ ಭಾಂದವರಿಗಾಗಿ ಜರುಗಿದ ಕ್ರಿಕೆಟ್ ಪಂದ್ಯ ಯುವವಾಹಿನಿ […]

Read More

ಪಣಂಬೂರು ಯುವವಾಹಿನಿಯಿಂದ ಆರೋಗ್ಯ ಮಾಹಿತಿ ಶಿಬಿರ

ಯುವವಾಹಿನಿ (ರಿ) ಪಣಂಬೂರು ಘಟಕದ ವತಿಯಿಂದ ಕಿಡ್ನಿ ವೈಫಲ್ಯ, ಕಿಡ್ನಿ ಸಂಬಂಧಿ ರೋಗಗಳು ಹಾಗೂ ತಡೆಗಟ್ಟುವರೇ ಮುಂಜಾಗ್ರತಾ ಕ್ರಮಗಳು – ಇದರ ಬಗ್ಗೆ ಆರೋಗ್ಯ ಮಾಹಿತಿ ಶಿಬಿರವು ದಿನಾಂಕ 03/04/2017 ಸೋಮವಾರ ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಕುಳಾಯಿಯಲ್ಲಿ ಜರುಗಿತು. ನಿರಂತರ. ಒತ್ತಡದಿಂದ ಕೂಡಿದ ಕೆಲಸ ಕಾರ್ಯಗಳು, ಆಧುನಿಕ ಜೀವನ ಕ್ರಮದಿಂದ ಶರೀರಕ್ಕೆ ಸಿಗದ ಸರಿಯಾದ ವ್ಯಾಯಾಮ ಹಾಗೂ ಆಹಾರ ಸೇವನಾ ಕ್ರಮ, ಇಂತಹ ಕಾರಣಗಳಿಂದ ಕಿಡ್ನಿ ವೈಫಲ್ಯ, ಕಿಡ್ನಿಯಲ್ಲಿ ಕಲ್ಲು ಇಂತಹ ಸಮಸ್ಯೆಗಳು […]

Read More

ಮಂಗಳೂರು ಮಹಿಳಾ ಯುವವಾಹಿನಿಯಿಂದ ಮಹಿಳಾ ಆರೋಗ್ಯ ಹಾಗೂ ಸ್ತನ ರೋಗಗಳ ಮಾಹಿತಿ

ಆಧುನಿಕ ವೈದ್ಯಕೀಯ ಕ್ಷೇತ್ರವು ತುಂಬಾ ಮುಂದುವರಿದಿದ್ದು ಆರಂಬಿಕ ಹಂತದಲ್ಲೇ ಗುರುತಿಸಿದರೆ ಕ್ಯಾನ್ಸರ್ ಸಂಪೂರ್ಣ ಗುಣಪಡಿಸಬಹುದು. ಆಧುನಿಕ ಜೀವನ ಶೈಲಿ, ಆಹಾರ ಪದ್ಧತಿ, ಹಾಗೂ ಆರೋಗ್ಯದ ಮೇಲೆ ಇರುವ ನಿರ್ಲಕ್ಷತನದಿಂದ ಸ್ತನ ಕ್ಯಾನ್ಸರ್ ವ್ಯಾಪಕವಾಗಿ ಹಬ್ಬಿದೆ ಎಂದು ಡಾ.ವೆಂಕಟೇಶ ಸಂಜೀವ ಅಭಿಪ್ರಾಯ ಪಟ್ಟರು. ಅವರು ಮಂಗಳೂರು ರಥಬೀದಿಯ ಮಹಿಳಾ ಪ್ರಥಮ ದರ್ಜೆ ಕಾಲೇಜು ಇಲ್ಲಿನ ಮಹಿಳಾ ವೇದಿಕೆ ಹಾಗೂ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 01.04.2017 ರಂದು ಜರುಗಿದ ಮಹಿಳಾ ಆರೋಗ್ಯ ಮತ್ತು ಸ್ತನ ರೋಗಗಳ […]

Read More

ಮೂಲ್ಕಿ ಯುವವಾಹಿನಿಯಿಂದ ಸ್ವಚ್ಛತಾ ಅಭಿಯಾನ

ಮೂಲ್ಕಿ ಬಪ್ಪನಾಡು ದೇವಸ್ಥಾನದಿಂದ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದವರೆಗೆ ವಿವಿಧ ಸಂಘ ಸಂಸ್ಥೆಗಳ ಜೊತೆ ಸೇರಿ ಯುವವಾಹಿನಿ ಮೂಲ್ಕಿ ಘಟಕವು ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಭಾಗವಹಿಸಿತು. ದಿನಾಂಕ 26.03.2017 ರಂದು ಜರುಗಿದ ಈ ಸ್ವಚ್ಚತಾ ಅಭಿಯಾನದಲ್ಲಿ ಮೂಲ್ಕಿ ಯುವವಾಹಿನಿ ಅದ್ಯಕ್ಷರಾದ ಚೇತನ್ ಕುಮಾರ್, ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು,ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Read More

ಕಂಕನಾಡಿ ಯುವವಾಹಿನಿಯ 2017-18ನೇ ಸಾಲಿನ ಪದಗ್ರಹಣ

ಯುವವಾಹಿನಿ(ರಿ) ಕಂಕನಾಡಿ ಘಟಕದ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 26.03.2017 ನೇ ಆದಿತ್ಯವಾರ ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿತು. ಗೋಪಾಲ ಪೂಜಾರಿ ನೇತೃತ್ವದ 21 ಸದಸ್ಯರ ತಂಡವು ಸಂಘಟನೆಯನ್ನು ಸಮರ್ಥವಾಗಿ ಮುನ್ನಡೆಸುವ ಬಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. 2017-18 ನೇ ಸಾಲಿನ ಕಾರ್ಯಕಾರಿ ಸಮಿತಿ : ಅಧ್ಯಕ್ಷರು : ಗೋಪಾಲ ಪೂಜಾರಿ ಉಪಾಧ್ಯಕ್ಷರು : ಭವಿತ್ ರಾಜ್ ಕಾರ್ಯದರ್ಶಿ : ಮೋಹನ್ ಜಿ.ಅಮೀನ್ ಜತೆ ಕಾರ್ಯದರ್ಶಿ : ಶ್ರೀಮತಿ ನಯನಾ ಕೋಶಾಧಿಕಾರಿ […]

Read More

ಯುವವಾಹಿನಿ ಕ್ರಾಂತಿಕಾರಿ ಬದಲಾವಣೆಯ ರೂವಾರಿ – ನವನೀತ ಡಿ.ಹಿಂಗಾಣಿ

ಆಧುನಿಕ ಸಮಾಜದಲ್ಲಿ ಬದಲಾಗುತ್ತಿರುವ ಜೀವನ ಕ್ರಮದಲ್ಲಿ ಯುವವಾಹಿನಿ ಸಮಾಜಕ್ಕೆ ಅನಿವಾರ್ಯವಾಗಿದೆ. ಕಳೆದ 30 ವರ್ಷಗಳಿಂದ ಯುವವಾಹಿನಿ ಬಿಲ್ಲವ ಸಮಾಜದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿದೆ ಎಂದು ಬೆಂಗಳೂರಿನ ಖ್ಯಾತ ವಕೀಲರಾದ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ಉಜ್ಜೋಡಿ ಶ್ರೀ ಮಹಾಕಾಳಿ ದೈವಸ್ಥಾನದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ(ರಿ) ಕಂಕನಾಡಿ ಘಟಕ 2017-18 ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ವ್ಯಕ್ತಿತ್ವ ವಿಕಸನ, ಸಾಮಾಜಿಕ ಸ್ಥಾನಮಾನ, ನಾಯಕತ್ವದ ಬೆಳವಣಿಗೆ ಹಾಗೂ ಸಹಸ್ರಾರು ಜನರ ವ್ಯಕ್ತಿತ್ವವನ್ನು ರೂಪಿಸುವಂತಹ ಕಾರ್ಯವನ್ನು ಯುವವಾಹಿನಿ […]

Read More

ಬಜಪೆ ಯುವವಾಹಿನಿಯ ಸ್ವಚ್ಛತಾ ಕಾರ್ಯ

ಯುವವಾಹಿನಿ (ರಿ) ಬಜಪೆ ಘಟಕದ ಆಶ್ರಯದಲ್ಲಿ ದಿನಾಂಕ 26-03-2017 ನೇ ಆದಿತ್ಯವಾರದಂದು ಬಜಪೆಯ ಸಮೀಪವಿರುವ ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಬಜಪೆ‌ ಘಟಕದ ಸುಮಾರು 20 ಕ್ಕೂ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಪೊರ್ಕೋಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ|| ಜಯರಾಮ ಶೆಟ್ಟಿ, ಇವರು ಬಜಪೆ ಯುವವಾಹಿನಿಯ ಸಮಾಜಮುಖಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಜಪೆ ಯುವವಾಹಿನಿ ಪದಾಧಿಕಾರಿಗಳಾದ ಚಂದ್ರಶೇಖರ ಎಸ್ ಪೂಜಾರಿ ದೇವರಾಜ್‌ […]

Read More

ಮೂಲ್ಕಿ ಯುವವಾಹಿನಿ : ಸ್ನೇಹ ಮಿಲನ

ಯುವವಾಹಿನಿ ಮುಲ್ಕಿ ಘಟಕದ ಕುಟುಂಬ ಸದಸ್ಯರ ಸ್ನೇಹ ಮಿಲನವು ದಿನಾಂಕ 19-03-2017 ರಂದು ಪ್ರಕೃತಿಯ ರಮಣೀಯ ಸ್ಥಳ ಮೂಲ್ಕಿ ಸಮೀಪದ ಮಟ್ಟು ನದಿ ತೀರದಲ್ಲಿ ಯಶಸ್ವಿಯಾಗಿ ಜರುಗಿತು. ತೆಂಗಿನಕಾಯಿ ಒಡೆಯುವ ಮೂಲಕ ಸ್ನೇಹ ಮಿಲನದ ಉದ್ಘಾಟನೆ ವಿಶಿಷ್ಟವಾಗಿ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ವಿವಿದ ಮನೋರಂಜನಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ಆಯೇೂಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಿ ಔತಣಕೂಟದೊಂದಿಗೆ ಸ್ನೇಹ ಮಿಲನ ಸಮಾಪ್ತಿಯಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!