Yuvavahini

ಇತ್ತೀಚಿನ ಕಾರ್ಯಕ್ರಮಗಳು

ಕೋಟಿ ಚೆನ್ನಯ ಮೂಲಸ್ಥಾನ ಪುನರುತ್ಥಾನಕ್ಕೆ ಶಿಲಾನ್ಯಾಸ

ಫೆ. 19 ರಂದು ದೇಯಿ ಬೈದ್ಯೆತಿ-ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರವಾದ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಶ್ರೀಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್‌ನಲ್ಲಿ ಮೂಲಸ್ಥಾನ ಪುನರುತ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಜರಗಿತು. ಕ್ಷೇತ್ರದ ಆದಿ ದೈವ ಧೂಮಾವತಿ ದೈವಸ್ಥಾನ, ಕುಪ್ಪೆ ಪಂಜುರ್ಲಿ ದೈವಸ್ಥಾನ, ಬೆರ್ಮೆರ್ ಗುಂಡ, ಗುರು ಸಾಯನ ಬೈದ್ಯರು-ಮಾತೆ ದೇಯಿ ಬೈದ್ಯೆತಿ ಧರ್ಮ ಚಾವಡಿ, ಕೋಟಿ-ಚೆನ್ನಯ ಮೂಲಸ್ಥಾನ ಗರಡಿ, ಮಾತೆ ದೇಯಿ ಬೈದ್ಯೆತಿ ಮಹಾಸಮಾಧಿ, ಚಾರಿತ್ರಿಕ ಸರೋಳಿ ಸೈಮಂಜ ಕಟ್ಟೆ ಮೊದಲಾದ ಶ್ರದ್ಧಾ ಬಿಂದುಗಳ ಪುನರುತ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ […]

Read More

ಬೆಳ್ತಂಗಡಿ ಯುವವಾಹಿನಿ : ನಾರಾಯಣಗುರು ತತ್ವ ಪ್ರಚಾರ

ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ 15.02.2017 ರಂದು ಅಳದಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ತತ್ವ ಪ್ರಚಾರ ಕಾರ್ಯಕ್ರಮ ಜರುಗಿತು. ಅಸ್ಪೃಶ್ಯತೆ ತಾಂಡವವಾಡುತ್ತಿದ್ದ ಶತಮಾನಗಳ ಹಿಂದಿನ ಕಾಲಘಟ್ಟದಲ್ಲಿ ಮಾಹಾನ್ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರು ಜನ್ಮತಾಳದಿದ್ದರೆ ಇಂದಿಗೂ ಅಸ್ಪೃಶ್ಯತೆ ಇರುತಿತ್ತು, ಗುರುವರ್ಯರ ಮುಖ್ಯ ಉದ್ದೇಶ ವಿದ್ಯೆ, ಉದ್ಯೋಗ, ಸಂಪರ್ಕ ಸಮಾಜದಲ್ಲಿ ಪಸರಿಸುತ್ತಿರುವ ಯುವವಾಹಿನಿ ಸಂಸ್ಥೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬಿದೆ, ಯುವಕರು ದುಶ್ಚಟಗಳಿಂದ ದೂರವಾಗಿ ಗುರುಗಳ ಸಂದೇಶ ಅನುಸರಿಸಬೇಕು ಎಂದು ಕೇರಳದ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ […]

Read More

ಸಂಪಾದಕರ ಮಾತು

ಪ್ರೀತಿಯ ವಾಚಕರೇ, ಅನುಭವ ಮತ್ತು ಛಲ ಮನುಷ್ಯನ ಭವಿಷ್ಯವನ್ನು ರೂಪಿಸುತ್ತದೆ. ಇದು ಕೇವಲ ಒಬ್ಬ ಮನುಷ್ಯನಿಗೆ ಮಾತ್ರವಲ್ಲ. ಸಿಬ್ಬಂದಿ ಇರುವ ಎಲ್ಲಾ ಸಂಸ್ಥೆಗಳಿಗೂ ಕೂಡ ಅನ್ವಯಿಸುತ್ತದೆ. ಯಾವ ಸಂಸ್ಥೆಯಲ್ಲಿ ಸಕಾರಾತ್ಮಕವಾಗಿ ಯೋಚಿಸುವ ಸಿಬ್ಬಂದಿ ಇರುತ್ತದೋ ಅಂತಹ ಸಂಸ್ಥೆ ಯಶಸ್ವಿಯಾಗುತ್ತದೆ. ಯಾವ ಸಂಸ್ಥೆಯ ಸಿಬ್ಬಂದಿಗಳಲ್ಲಿ ಪ್ರಾಮಾಣಿಕತೆ ಮತ್ತು ಸಕಾರಾತ್ಮಕ ದುಡಿಮೆ ಇರುವುದಿಲ್ಲವೋ, ಕೇವಲ ಸಂಬಳಕ್ಕಾಗಿ ಮಾತ್ರ ಕಾದು ನೋಡುತ್ತಾರೋ ಅಂತಹ ಸಂಸ್ಥೆ ಹೇಳ ಹೆಸರಿಲ್ಲದೆ ನಿರ್ಣಾಮವಾಗಿ ಹೋಗುತ್ತದೆ. ಇದಕ್ಕೆ ಕಾರಣ ದುಡಿತದ ಹಿಂದಿರುವ ಜವಾಬ್ದಾರಿಯ ಕೊರತೆ. ನಮ್ಮ ಜನರಲ್ಲಿ […]

Read More

ಅಸಂಘಟಿತ ಕಾರ್ಮಿಕರ ಕಾರ್ಯಾಗಾರ

ತಾ. 12-2-2017 ರಿಂದ 15-2-2017 ರವರೆಗೆ ಯುವವಾಹಿನಿ ಕೇಂದ್ರ ಸಮಿತಿಯ ಕಛೇರಿಯಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ವತಿಯಿಂದ ಭಾರತ ಸರಕಾರ ದತ್ತೋಪಂತ್ ಥೇಂಗಡಿ ರಾಷ್ಟ್ರೀಯ ಕಾರ್ಮಿಕರ ಶಿಕ್ಷಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಪ್ರಾದೇಶಿಕ ನಿರ್ದೇಶನಾಲಯ ಮಂಗಳೂರು ಇದರ ಸಹಯೋಗದೊಂದಿಗೆ 4 ದಿನಗಳ ಅಸಂಘಟಿತ ಕಾರ್ಮಿಕರ ಕಾರ್ಯಾಗಾರ ಜರಗಿತು. ಕಾರ್ಯಕ್ರಮವನ್ನು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್ ಕುಮಾರ್ ಹಾಗೂ ಕೇರ್ಸ್ ಮಂಗಳೂರು ಇದರ ನಿರ್ದೇಶಕರಾಗಿರುವ ಸತೀಶ್ ಮಾಬೆನ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ […]

Read More

ಮಂಗಳೂರು ಮಹಿಳಾ ಘಟಕದ ಶಿವಗಿರಿ ಯಾತ್ರೆ

ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ದಿನಾಂಕ 04.02.2017 ರಂದು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮಸ್ಥಾನ ಕೇರಳದ ಶಿವಗಿರಿಗೆ  ಪ್ರವಾಸ ಕೈಗೊಂಡರು.

Read More

ಹೃದಯಂಗಮ ಸನ್ನಿವೇಶ – ಶಿವಗಿರಿ ತೀರ್ಥಾಟನೆ

“ಓಂ ನಮೋಃ ನಾರಾಯಣ ಪರಮ ಗುರುವೇ ನಮಃ”. ಬ್ರಹ್ಮಶ್ರೀ ನಾರಾಯಣ ಗುರುಗಳ ಈ ನಾಮ ಸ್ಮರಣೆ ಮುಗಿಲು ಮುಟ್ಟುವಂತಿದ್ದುದು ಶಿವಗಿರಿಯ ಮಹಾತೀರ್ಥಾಟನಾ ಉತ್ಸವದಲ್ಲಿ. ಬ್ರಹ್ಮಶ್ರೀ ನಾರಾಯಣ ಗುರುಗಳ ಮಹಾಸಮಾಧಿಯ ಪವಿತ್ರ ಭೂಮಿ ವರ್ಕಳದ ಶಿವಗಿರಿಯ ವೈಭವದ ದೃಶ್ಯ ಕಣ್ಮನ ಸೆಳೆಯುವುದು, ಭಕ್ತಸಾಗರವೇ ಹರಿದುಬರುವ ಶಿವಗಿರಿಯ ತಿರ್ಥಾಟನಾ ಸಂದರ್ಭದಲ್ಲಿ. ಇದಕ್ಕೆ ಸಾಕ್ಷೀಭೂತವಾಗಿದ್ದು ಇತ್ತೀಚೆಗೆ ನಡೆದ 84 ನೇ ಶಿವಗಿರಿ ತಿರ್ಥಾಟನೆಯಲ್ಲಿ ಪಾಲ್ಗೊಂಡ ಮಂಗಳೂರು ಯುವವಾಹಿನಿ ಘಟಕದ ತಂಡ. ಹೌದು, ಸೇವಾ ಮನೋಭಾವನೆಯ ಮನಸಂಕಲ್ಪದಿಂದ ಹಾಗೂ ಶಿವಗಿರಿಯ ತೀರ್ಥಾಟನಾ ಉತ್ಸವವನ್ನು ನೋಡಿ […]

Read More

ಶಿವಗಿರಿ ಯಾತ್ರೆ

ಯುವವಾಹಿನಿ (ರಿ.) ಪಡುಬಿದ್ರಿ ಮತ್ತು ಯುವವಾಹಿನಿ (ರಿ.) ಅಡ್ವೆ ಘಟಕದ ಕುಟುಂಬ ಸದಸ್ಯರು ಜಂಟಿಯಾಗಿ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮಸ್ಥಳ ಶಿವಗಿರಿಗೆ ಭೇಟಿ ನೀಡಿದರು.

Read More

ಅಧ್ಯಕ್ಷರ ಮಾತು

ಆತ್ಮೀಯರೇ, ಸ್ವರ್ಗದ ಸುಖವನ್ನಾಗಲೀ ನರಕದ ಯಾತನೆಯನ್ನಾಗಲೀ ಅನುಭವಿಸಿ ಬಂದು ಹೇಳಿದವರಿಲ್ಲ, ಕೆಲವು ವಿಚಾರವಾದಿಗಳು ಸ್ವರ್ಗ ಮತ್ತು ನರಕಗಳು ನಾವು ಬದುಕಿರುವಾಗಲೇ ಸಿಗುತ್ತದೆ ಎನ್ನುತ್ತಾರೆ. ಆದರೂ ಪ್ರಪಂಚದ ಎಲ್ಲಾ ಧರ್ಮೀಯರು ಅವರವರ ಭಾಷೆ ಸಂಸ್ಕೃತಿಗಳಿಗೆ ಅನುಗುಣವಾಗಿ ನಂಬಿಕೊಂಡು ಬಂದಿದ್ದಾರೆ. ಏನೇ ಆಗಲಿ ಇದೆಲ್ಲವನ್ನು ಮೌನವಾಗಿ ಅನುಕರಿಸುವ ನಾವುಗಳು ಜಗತ್ತಿನಲ್ಲಿಯೇ ಶ್ರೇಷ್ಠ ಸಂದೇಶಗಳನ್ನು ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಗಳನ್ನು ಆದಷ್ಟು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇವೆ ಎನ್ನುವುದನ್ನು ಆತ್ಮಾವಲೋಕನ ಮಾಡಬೇಕಾಗಿದೆ. ಗುರುಗಳು ಅದೆಷ್ಟು ಉತ್ತಮವಾದ ಭೋದನೆ ಹಾಗೂ ತತ್ವಾದರ್ಶಗಳನ್ನು ನೀಡಿದ್ದಾರೆ. ಎಲ್ಲವನ್ನು […]

Read More

ಆತ್ವವಿಶ್ವಾಸ, ಇಂದ್ರಿಯ ನಿಗ್ರಹ ಶಕ್ತಿ ಮತ್ತು ನಮ್ಮ ಸಮಾಜ

ಈ ಜಗತ್ತೆಂಬ ಮಾಯಲೋಕವು ಶತಕೋಟಿ ಜೀವರಾಶಿಗಳಿಂದ ತುಂಬಿ ತುಳುಕುತ್ತಿದ್ದರೂ, ಈ ಎಲ್ಲಾ ಜೀವರಾಶಿಗಳಿಗಿಂತ ಶ್ರೇಷ್ಠವಾದ ಹಾಗೂ ಭಿನ್ನವಾದ ಜೀವಿ ಮಾನವ. ಆಲೋಚನಾ ಶಕ್ತಿ ಮನುಷ್ಯ ಪ್ರಾಣಿಗೆ ಬಿಟ್ಟು ಇನ್ನಾವುದೇ ಪ್ರಾಣಿಗಳಿಗಿಲ್ಲ ಎಂಬ ಸತ್ಯ ನಮಗೆಲ್ಲಾ ತಿಳಿದಿದೆ. ಉಳಿದ ಪ್ರಾಣಿಗಳಿಗಿಂತ ತನ್ನ ಭಾವನೆಗಳನ್ನು ಇತರರೊಂದಿಗೆ ಭಾಷೆಯ ಮೂಲಕ, ಮಾತಿನಿಂದ ಸಂವಹನ ರೂಪದಲ್ಲಿ ವ್ಯಕ್ತಪಡಿಸುವ ವಿಶೇಷ ಸಾಮರ್ಥ್ಯ ಗಳಿಸಿದಂತ ಮಾನವ ವರ್ಗದಲ್ಲಿ ಜನಿಸಿದ ನಾವೇ ಧನ್ಯರು. ಪರಶುರಾಮ ಸೃಷ್ಠಿಯ ಈ ತುಳುನಾಡಿನಲ್ಲಿ ಬೈದ್ಯ ಅಂದರೆ ವೈದ್ಯ, ಬಿರುವ ಅಂದರೆ ವೀರ […]

Read More

ಮೂಲ್ಕಿ: ಪರೀಕ್ಷಾ ಪೂರ್ವ ತರಬೇತಿ ಶಿಬಿರ

ಯುವವಾಹಿನಿ (ರಿ) ಮೂಲ್ಕಿ ಘಟಕದ ವತಿಯಿಂದ ದಿನಾಂಕ 31-01-2017 ರಂದು ಶ್ರೀ ನಾರಾಯಣಗುರು ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ನಡೆಸಲಾಯಿತು. ಶಾಲಾ ಮಂಡಳಿಯ ಕಾರ್ಯದರ್ಶಿ ಬಾಲಚಂದ್ರ ಸನಿಲ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಜೇಸಿಐ. ರಾಷ್ಟ್ರೀಯ ತರಬೇತುದಾರರಾದ ಜೇಸಿ. ರಾಜೇಂದ್ರ ಭಟ್ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಸುಮಾರು 3 ಗಂಟೆಗಳ ಕಾಲ ತರಬೇತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಶಾಲಾ ಆಡಳಿತಾಧಿಕಾರಿ ಅಡ್ವೆ ರವೀಂದ್ರ ಪೂಜಾರಿ, ಪ್ರಾಂಶುಪಾಲರಾದ ಯತೀಶ್ ಅಮೀನ್, ಘಟಕದ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!