Yuvavahini

ಅಧ್ಯಕ್ಷರು

ಕೆ. ರಾಜೀವ ಪೂಜಾರಿ – ಅಧ್ಯಕ್ಷರು -1999-2000

ಕೆ. ರಾಜೀವ ಪೂಜಾರಿ ಇವರು ಯುವವಾಹಿನಿ (ರಿ) ಕೇಂದ್ರ ಸಮಿತಿಯಲ್ಲಿ 1999-2000 ನೇ ಸಾಲಿನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವರು. ಇವರು ಅಧ್ಯಕ್ಷರಾಗಿದ್ದ ವರ್ಷದಲ್ಲಿ ಯುವವಾಹಿನಿಯ ನೂತನ ಘಟಕವು ಉಡುಪಿಯಲ್ಲಿ ಆರಂಭವಾಯಿತು. 1999 ರ ಆಗಸ್ಟ್ ತಿಂಗಳಲ್ಲಿ ಶ್ರೀ ಗುರು ಜಯಂತಿಯ ಪ್ರಯುಕ್ತ ಶ್ರೀ ಗುರು ಸಂದೇಶ ಯಾತ್ರೆಯನ್ನು ನಡೆಸಲಾಗಿತ್ತು. ಅವಿಭಜಿತ ದ.ಕ. ಜಿಲ್ಲೆಯಾದ್ಯಂತ 8 ಕಡೆಗಳಿಂದ ಹೊರಟು ಬಂದ ಗುರು ಸಂದೇಶ ಯಾತ್ರೆಯು ಬ್ರಹ್ಮಶ್ರೀ ನಾರಾಯಣ ಗುರುವರ್ಯರು ಪ್ರದಿಪಾದಿಸಿದ ತತ್ವಾದರ್ಶಗಳನ್ನು ಸಮಾಜದಲ್ಲಿ ಬಿತ್ತರಿಸುತ್ತಾ ಬಂಟ್ವಾಳ-ಬಿ.ಸಿ.ರೋಡಿನಲ್ಲಿ ಒಟ್ಟು ಸೇರಿ ಬೃಹತ್ ಯಾತ್ರೆ ನಡೆಸಿ […]

Read More

ಚೆನ್ನಕೇಶವ – ಅಧ್ಯಕ್ಷರು -1998-99

ಶ್ರೀಯುತರ ಅಧ್ಯಕ್ಷ ಅವಧಿಯಲ್ಲಿ ಕಾಸರಗೋಡಿನ ಚಿಪ್ಪಾರು ಘಟಕದಿಂದ ಶೀರೂರಿನ ಘಟಕದವರೆಗೆ ಘಟಕ ಭೇಟಿಯನ್ನು ಮಾಡಿದ ಸಾಧನೆ ಅವಿಸ್ಮರಣೀಯ. ಇವರ ಅಧಿಕಾರ ಅವಧಿಯಲ್ಲಿ ವಿದ್ಯಾನಿಧಿಯಿಂದ ಬಡ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಹಾಯ ನೀಡಲಾಗಿತ್ತು. ಪುತ್ತೂರಿನ ಓರ್ವ ವಿದ್ಯಾರ್ಥಿ ಶ್ರೀ ಪ್ರವೀಣ್ ಕುಮಾರ್ ಇವರ ಆಥ್ಲೆಟಿಕ್ಸ್‌ನ ತರಬೇತಿ ಸಮಯದಲ್ಲಿ ಪೌಷ್ಠಿಕ ಆಹಾರ ಅವಶ್ಯಕತೆಗೆ ಮಾಸಿಕ 150/-ರಂತೆ ಧನ ಸಹಾಯ ನೀಡಲಾಗಿತ್ತು. ಕು. ಪ್ರಮೀಳಾರ ಪಿಯುಸಿ ವ್ಯಾಸಂಗದ ಸಂಪೂರ್ಣ ಖರ್ಚಿನ ಜವಾಬ್ದಾರಿಯನ್ನು ತಮ್ಮ ಸಮಾಜದ ದಾನಿಯಾದ ಕೆ.ಎ. ಜಯಚಂದ್ರರವರಿಂದ ಭರಿಸುವಂತೆ ಸಹಕರಿಸಲಾಗಿತ್ತು. 11-10-98 ರಂದು […]

Read More

ಕೆ. ವಿಶ್ವನಾಥ್ – ಅಧ್ಯಕ್ಷರು -1994-95

ಬಿ.ಎ. ಪದವೀಧರ, ನವ ಮಂಗಳೂರು ಬಂದರು ಮಂಡಳಿಯಲ್ಲಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಸಹಾಯಕ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದವರು. ಲಯನ್ಸ್, ಜೇಸೀ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ. ನವ ಮಂಗಳೂರು ಬಂದರು ಸಾರ್ವಜನಿಕ ಗಣೇಶೋತ್ಸವ ಮತ್ತು ನಾಗಬನ ಜೀರ್ಣೋದ್ಧಾರ ಸಮಿತಿಗಳಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಅಪಾರ ಅನುಭವ ಗಳಿಸಿರುವರು. 1994-95 ರ ಸಾಲಿನ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. 1994 ರ ಆಗಸ್ಟ್ ತಿಂಗಳಲ್ಲಿ ಮಂಗಳೂರು ಶ್ರೀ ಕ್ಷೇತ್ರ ಕುದ್ರೋಳಿಯಿಂದ ಉಡುಪಿ ಬನ್ನಂಜೆಯವರೆಗೆ […]

Read More

ಲೋಕನಾಥ್ ಆರ್. ಸನಿಲ್ – ಅಧ್ಯಕ್ಷರು -1992-93

1992-93 ರ ಸಾಲಿನ ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕನಾಥ ಆರ್. ಸನಿಲ್‌ರವರ ಅಧಿಕಾರವಧಿಯಲ್ಲಿ BSRB ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್ ತರಬೇತಿ ಶಿಬಿರ ಉಚಿತವಾಗಿ ನಡೆಸಲಾಗಿದೆ. ಸಮಾಜದ ಬಂಧುಗಳಿಗೆ ಕನ್ನಡ ಹಾಗೂ ತುಳುವಿನಲ್ಲಿ ಪ್ರಬಂಧ ಮತ್ತು ಆಶುಕವನ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಕಾರ್ಕಳದಲ್ಲಿ ಯುವವಾಹಿನಿಯ ನೂತನ ಘಟಕವನ್ನು ಪ್ರಾರಂಭಿಸಲಾಯಿತು. ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ಸಲುವಾಗಿ ವಿದ್ಯಾನಿಧಿಯನ್ನು ಸ್ಥಾಪಿಸಲಾಯಿತು. ಹಳೆಯಂಗಡಿಯಲ್ಲಿ ಸನಿಲ್ಸ್ ಇನ್ಸ್ಟಿಟ್ಯೂಟ್ ಆಫ್ ಕಾಮರ್ಸ್ (ಬಳಿಕ ಸನಿಲ್ಸ್ ಇನ್‌ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್) ಎಂಬ ಟೈಪ್‌ರೈಟಿಂಗ್ ಇನ್ಸಿಟ್ಯೂಟನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಅಗಸ್ಟ್ 23
ಸ್ಥಳ : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ

ದಿನಾಂಕ :
ಸ್ಥಳ :

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!